Kshatriya.Film News

Wednesday, October 14, 2020

ಚಿರು ಹುಟ್ಟುಹಬ್ಬಕ್ಕೆ ಕ್ಷತ್ರಿಯ ಚಿತ್ರದ ಟೀಸರ್ ಬಿಡುಗಡೆ

ಶ್ರೀಮೂಕಾಂಬಿಕಾ ಕಂಬೈನ್ಸ್ ಲಾಂಛನದಲ್ಲಿ ಎ. ವೆಂಕಟೇಶ್ ಅವರ ನಿರ್ಮಾಣದ, ಅನಿಲ್ ಮಂಡ್ಯ ಅವರ ನಿರ್ದೇಶನದ ಕ್ಷತ್ರಿಯ ಚಿತ್ರದ ಟೀಸರ್ ಇದೇ ತಿಂಗಳ ೧೭ರಂದು ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾಗುತ್ತಿದೆ.  ಚಿರು ಸರ್ಜಾ ಅವರು ನಾಯಕನಾಗಿ ಅಭಿನಯಿಸಿರುವ ಈ  ಚಿತ್ರಕ್ಕೆ ಈಗಾಗಲೇ ಶೇ.೯೦ರμ ಭಾಗದ ಚಿತ್ರೀಕರಣ ಮುಗಿದಿದ್ದು, ಈ ತಿಂಗಳ ಅಂತ್ಯದಲ್ಲಿ ಕೊನೆಯ ಹಂತದ ಚಿತ್ರೀಕರಣ ಸಹ ಪ್ರಾರಂಭವಾಗಲಿದೆ. ಸಮಾಜದ ಒಳಿತಿಗಾಗಿ ಹೋರಾಡುವ ಒಬ್ಬ ಆಧುನಿಕ ಕ್ಷತ್ರಿಯನ ಪಾತ್ರದಲ್ಲಿ ನಟ ಚಿರು ಸರ್ಜಾ ಅವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಚಿತ್ರದ ಮೊದಲಾರ್ಧದಲ್ಲಿ ಸೆಂಟಿಮೆಂಟ್ ಕಥಾವಸ್ತುವಿದ್ದರೆ, ದ್ವಿತೀಯಾರ್ಧ ಪಕ್ಕಾ ಕಮರ್ಷಿಯಲ್ ಅಂಶಗಳನ್ನೊಳಗೊಂಡಿದೆ.  ಕನ್ನಡ ಚಿತ್ರರಂಗದ ಸಾಕμ  ನಿರ್ದೇಶಕರ ಜೊತೆ ಸಹಾಯಕ ಹಾಗೂ ಸಹ ನಿರ್ದೇಶಕರಾಗಿ ಕೆಲಸ ಮಾಡಿರುವ ಅನಿಲ್ ಮಂಡ್ಯ ಕ್ಷತ್ರಿಯ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಪಿ.ವಾಸು, ದಿನಕರ ತೂಗುದೀಪ, ತರುಣ್ ಸುಧೀರ್, ಮುಂಗಾರು ಮಳೆ ಕೃμ ಮತ್ತು ಸಂತೋμ ಅನಂದರಾಮ್ ಅವರ ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ ಮತ್ತು ರಾಜಕುಮಾರ ಸಿನಿಮಾಗಳಿಗೆ ಕೋ ಡೈರೆಕ್ಟರ್ ಆಗಿದ್ದ ಅನಿಲ್ ಮಂಡ್ಯ ಕಳೆದ ಎರಡು ದಶಕಗಳಲ್ಲಿ ಸಾಕμ  ನಟರ ಸಿನಿಮಾಗಳಲ್ಲಿ ಕೆಲಸ ಮಾಡಿ ಅನುಭವ ಹೊಂದಿರುವರು.

   ಈ ಚಿತ್ರದ ಪ್ರಮುಖ ತಾರಾಬಳಗದಲ್ಲಿ ಚಿರಂಜೀವಿ ಸರ್ಜಾ, ಸಂಜನಾ ಆನಂದ್, ಸುಧಾರಾಣಿ, ದೇವರಾಜ್, ಅಬ್ರಾರ್ ಜಾಹೂರ್ಧಾರ್, ಶ್ರೀನಾಥ್, ಸಾಧು ಕೋಕಿಲ, ಅಚ್ಯುತ್ಕುಮಾರ್, ವಿಶಾಲ್ ಹೆಗ್ಡೆ, ಮೋಹನ್, ಅಶ್ವಿನಿಗೌಡ, ಭಜರಂಗಿ ಚೇತನ್, ಹೊನ್ನವಳ್ಳಿ ಕೃμ, ಗಿರೀಶ್, ಶಾಲಿನಿ, ಸ್ವಪ್ನರಾಜಾ, ಆರತಿ ಕುಲಕರ್ಣಿ,  ವಾಣಿಶ್ರೀ, ಸುಂದರ್, ನದಾಫ್, ಶ್ರೀಕಾಂತ್, ಆನಂದ್, ಮೈಸೂರು ಬಾಲ, ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಭರ್ಜರಿ ಚೇತನ್ ಕುಮಾರ್ ಅವರು ಸಂಭಾμಣೆ ರಚಿಸುತ್ತಿದ್ದಾರೆ. ರವಿ ವಿ. ಅವರ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಅವರ ಸಂಕಲನ ಈ ಚಿತ್ರಕ್ಕಿದೆ. ಧರ್ಮವಿಶ್ ಅವರ ಸಂಗೀತ ಸಂಯೋಜನೆಯ ೫ ಹಾಡುಗಳಿ ಚಿತ್ರದಲ್ಲಿವೆ. ಕೆ.ರವಿವರ್ಮ ಅವರ ಸಾಹಸ  ವಿ.ನಾಗೇಂದ್ರಪ್ರಸಾದ್ ಅವರ ಸಾಹಿತ್ಯ, ರಾಜನ್ ಅವರ ಎಫೆಕ್ಟ್ ಈ ಚಿತ್ರಕ್ಕಿದೆ.

 

Copyright@2018 Chitralahari | All Rights Reserved. Photo Journalist K.S. Mokshendra,