Berklee.Film News

Wednesday, April 28, 2021

215

 

ಏಪ್ರಿಲ್ 30 ರಂದು *ಬರ್ಕ್ಲಿ* ಚಿತ್ರದ ಅದ್ದೂರಿ ಟೀಸರ್ ಬಿಡುಗಡೆ.

 

ವಿಭಿನ್ನ ಕಥಾಹಂದರ ಹೊಂದಿರುವ

"ಬರ್ಕ್ಲಿ" ಚಿತ್ರದ ಅದ್ದೂರಿ ಟೀಸರ್ ಏಪ್ರಿಲ್ 30 ರ ಸಂಜೆ 5 ಗಂಟೆಗೆ ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗುತ್ತಿದೆ.

 ಸಂತೋಷ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆನೇಕಲ್ ಬಾಲರಾಜ್ ಅವರು ನಿರ್ಮಿಸುತ್ತಿರುವ ಬರ್ಕ್ಲಿ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಪ್ರಥಮಪ್ರತಿ‌ ಸಿದ್ದವಾಗಲಿದೆ.  ಕರಿಯ, ಗಣಪ, ಕರಿಯ ೨  ಚಿತ್ರಗಳನ್ನು ನಿರ್ಮಿಸಿರುವ ಆನೇಕಲ್ ಬಾಲರಾಜ್ ಅವರ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಮತ್ತೊಂದು ಅದ್ದೂರಿ ಚಿತ್ರ "ಬರ್ಕ್ಲಿ‌".

ಉತ್ತಮ‌ ಮನೋರಂಜನೆಯ ಈ ಚಿತ್ರಕ್ಕೆ ಸುಮಂತ್ ಕ್ರಾಂತಿ ಅವರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

" ಬರ್ಕ್ಲಿ" ಎಂದ ಕೂಡಲೇ ಎಲ್ಲರೂ ಸಿಗರೇಟ್ ಒಂದರ ಹೆಸರು ಎಂದುಕೊಳ್ಳುತ್ತಾರೆ. ಆದರೆ ನಮ್ಮ "ಬರ್ಕ್ಲಿ"  ಚಿತ್ರಕ್ಕೂ ಸಿಗರೇಟ್ ಗೂ ಯಾವುದೇ ಸಂಬಂಧವಿಲ್ಲ. ನಮ್ಮ ಚಿತ್ರದ ಶೀರ್ಷಿಕೆಯ ಅರ್ಥವೇ ಬೇರೆ ಎನ್ನುತ್ತಾರೆ ನಿರ್ದೇಶಕ ಸುಮಂತ್ ಕ್ರಾಂತಿ.

ಗಣಪ, ಕರಿಯ ೨ ಚಿತ್ರಗಳಲ್ಲಿ ನಟಿಸಿ

 ಖ್ಯಾತಿಗಳಿಸಿರುವ ಸಂತೋಷ್ ಬಾಲರಾಜ್ ಈ ಚಿತ್ರದ ನಾಯಕರಾಗಿ ಅಭಿನಯಿಸಿದ್ದಾರೆ.

ಬಾಲ್ಯದಲ್ಲಿ ಕೇಂದ್ರ ಸರ್ಕಾರದ ನೋ ಸ್ಮೋಕಿಂಗ್ ಜಾಹೀರಾತಿನ ಮೂಲಕ ಬಾಲನಟಿಯಾಗಿ ಖ್ಯಾತರಾಗಿದ್ದ, ಸಿಮ್ರಾನ್ ನಾಟೇಕರ್ ಈ ಚಿತ್ರದ ನಾಯಕಿ.

ಬಹುಭಾಷ ನಟ ಚರಣರಾಜ್, ಖ್ಯಾತ ನಟಿ ಶೃತಿ, ಬಲ ರಾಜವಾಡಿ , ಬುಲೆಟ್ ಪ್ರಕಾಶ್ ಮುಂತಾದವರ ತಾರಾಬಳಗ ಈ ಚಿತ್ರದಲ್ಲಿದೆ.

 ಬಹದ್ದೂರ್ ಚೇತನ್ ಕುಮಾರ್, ಅಭಿ ಕನಸಿನ ಕವನ‌ ಈ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಹೆಸರಾಂತ ಸಂಗೀತ ನಿರ್ದೇಶಕ ಜ್ಯೂಡ ಸ್ಯಾಂಡಿ ಸಂಗೀತ ನೀಡಿದ್ದಾರೆ.  ಕೃಷ್ಣಕುಮಾರ್, ಎನ್.ಎಂ.ಸೂರಿ ಛಾಯಾಗ್ರಹಣ, ಅಮಿತ್ ಸಂಕಲನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

 

Copyright@2018 Chitralahari | All Rights Reserved. Photo Journalist K.S. Mokshendra,