Man Of The Match.Movie News

Wednesday, July 28, 2021

176

 

"ಮ್ಯಾನ್ ಆಫ್ ದಿ ಮ್ಯಾಚ್" ಗೆ ಹಾಡಿ ಕುಣಿದ ವಾಸುಕಿ ವೈಭವ್

 

ಪುನೀತ್ ರಾಜಕುಮಾರ್ ಅವರ ಪಿ ಆರ್ ಕೆ ನಿರ್ಮಾಣ ಸಂಸ್ಥೆಯ ಬ್ಯಾನರಿನ ಅಡಿಯಲ್ಲಿ ಹಾಗೂ ಸತ್ಯ & ಮಯೂರ ಪಿಕ್ಚರ್ಸ್ ಜತೆಗೂಡಿ ತಯಾರಿಸುತ್ತಿರುವ "ಮ್ಯಾನ್ ಆಫ್ ದಿ ಮ್ಯಾಚ್" ಚಲನಚಿತ್ರ ಶೂಟಿಂಗ್ ಮತ್ತು ಡಬ್ಬಿಂಗ್ ಮುಗಿಸಿದೆ.

ಡಿ ಸತ್ಯ ಪ್ರಕಾಶ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರದ ಕುತೂಹಲಕಾರಿ ಅಂಶವೊಂದು ಹೊರಬಿದ್ದಿದೆ. ಈ ಚಿತ್ರದಲ್ಲಿ ವಾಸುಕಿ ವೈಭವ್ ಅವರು ಸಂಗೀತ ನೀಡುವುದರ ಜೊತೆಗೆ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡು ಹಾಡಿ, ಕುಣಿದಿದ್ದಾರೆ. ನೃತ್ಯ ನಿರ್ದೇಶನವನ್ನು ಸ್ವತಃ ಡಿ ಸತ್ಯ ಪ್ರಕಾಶ್ ಅವರೇ ಮಾhಡಿದ್ದಾರೆ. ಚಿತ್ರದ ವಸ್ತು ವಿಷಯವನ್ನು ತಿಳಿಸುವ ಈ ಹಾಡಿಗೆ, ಚುರುಕಾದ ಸಾಹಿತ್ಯವನ್ನು ಯೋಗರಾಜ್ ಭಟ್ ಮತ್ತು ಡಿ ಸತ್ಯ ಪ್ರಕಾಶ್ ಜಂಟಿಯಾಗಿ ಬರೆದಿದ್ದಾರೆ.

 

Copyright@2018 Chitralahari | All Rights Reserved. Photo Journalist K.S. Mokshendra,