Grey Games.Film Pooja

Thursday, October 07, 2021

 

ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ - ಗಾಳಿಪಟದ ಹುಡುಗಿ ಭಾವನಾರಾವ್ ಅಭಿನಯದ "ಗ್ರೇ ಗೇಮ್ಸ್" ಗೆ ಚಾಲನೆ ನೀಡಿದ ಶ್ರೀ ಮುರಳಿ.

 

ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಲಿದ್ದಾರೆ ವಿಜಯ ರಾಘವೇಂದ್ರ - ಶ್ರೀಮುರಳಿ ಅವರ ಸೋದರಳಿಯ ಜೈ.

 

ಚಿಕ್ಕವಯಸ್ಸಿನಿಂದಲ್ಲೂ ತಮ್ಮ ಅಮೋಘ ಅಭಿನಯದಿಂದ ಮನೆ ಮಾತಾಗಿರುವ ವಿಜಯ ರಾಘವೇಂದ್ರ ಅಭಿನಯದ "ಗ್ರೇ ಗೇಮ್ಸ್" ಚಿತ್ರದ ಮುಹೂರ್ತ ಸಮಾರಂಭ  ಧರ್ಮಗಿರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ನೆರವೇರಿತು. ಮೊದಲ ಸನ್ನಿವೇಶಕ್ಕೆ ನಟ ಶ್ರೀ ಮುರಳಿ ಆರಂಭ ಫಲಕ ತೋರಿ ಚಾಲನೆ ನೀಡಿದರು. ಎಸ್.ಎ.ಚಿನ್ನೇಗೌಡ, ಬಿ.ಕೆ.ಶಿವರಾಂ ಮುಂತಾದ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

 

ಮುಹೂರ್ತ ಸಮಾರಂಭದ ನಂತರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮೊದಲಿಗೆ ನಿರ್ದೇಶಕ ಗಂಗಾಧರ್ ಸಾಲಿಮಠ್ ಮಾತನಾಡಿದರು. ಸೈಬರ್ ಕ್ರೈಮ್ ಸುತ್ತ ನಡೆಯುವ ಕಥೆ. ಸೈಕಲಾಜಿಸ್ಟ್ ಪಾತ್ರದಲ್ಲಿ ವಿಜಯ ರಾಘವೇಂದ್ರ ಅಭಿನಯಿಸುತ್ತಿದ್ದಾರೆ. ಗ್ರೇ ಗೇಮ್ ಆಡುವ ಇಪ್ಪತ್ತು ವರ್ಷದ ಹುಡುಗನ ಪಾತ್ರದಲ್ಲಿ ವಿಜಯ ರಾಘವೇಂದ್ರ ಅವರ ಅಕ್ಕನ ಮಗ ಜೈ ನಟಿಸುತ್ತಿದ್ದಾರೆ. ವರ್ಕ್ ಶಾಪ್ ಮೂಲಕ ಜೈ ಅವರಿಗೆ ಅಭಿನಯದ ತರಭೇತಿ ನೀಡಲಾಗಿದೆ.‌ ಜೈ ಅವರ ತಾಯಿಯ ಪಾತ್ರದಲ್ಲಿ ಅಪರ್ಣ ಕಾಣಿಸಿಕೊಳ್ಳಲಿದ್ದಾರೆ.‌ ಸೈಬರ್ ಕೈಮ್ ನ ವಿಶೇಷ ಅಧಿಕಾರಿ ಪಾತ್ರವನ್ನು ಭಾವನಾ ರಾವ್ ಮಾಡಲಿದ್ದಾರೆ ಎಂದು ನಿರ್ದೇಶಕರು ಎಲ್ಲರ ಪಾತ್ರ ಪರಿಚಯ ಮಾಡಿದರು.

ಚಿತ್ರಕ್ಕೆ ಇದೇ ಎಂಟರಿಂದ ಬೆಂಗಳೂರಿನಲ್ಲಿ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ .

 

ಚಿತ್ರಕ್ಕೆ ಕಥೆ ಬರೆದಿರುವ, ನಿರ್ಮಾಪಕ ಆನಂದ್ ಹೆಚ್ ಮಗದ್ ಅವರು ಚಿತ್ರದ ಬಗ್ಗೆ ಅಭಿಪ್ರಾಯ ಹಂಚಿಕೊಂಡರು.

 

ನನಗೆ ಈ ಅವಕಾಶ ಸಿಗಲು ಪ್ರಮುಖ ಕಾರಣ ರಾಘು ಮಾವ. ಅವರಿಗೆ ಹಾಗೂ ನಿರ್ದೇಶಕ, ನಿರ್ಮಾಪಕರಿಗೆ ತುಂಬಾ ಧನ್ಯವಾದ. ವರ್ಕ್ ಶಾಪ್ ಮೂಲಕ ನಿರ್ದೇಶಕರು ಅಭಿನಯದ ತರಭೇತಿ ನೀಡಿದ್ದಾರೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ಜೈ.

 

ಎಲ್ಲರನ್ನೂ ಭೇಟಿಯಾಗಿ ಬಹಳ ದಿನಗಳಾಗಿತ್ತು. ಈಗ ಎಲ್ಲರನ್ನೂ ನೋಡಿ ಸಂತೋಷವಾಗಿದೆ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಸೈಬರ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ ಎಂದರು ಭಾವನಾರಾವ್.

 

ಸಾಮಾನ್ಯವಾಗಿ ನಾನು ಎಲ್ಲಾ ಪಾತ್ರಗಳನ್ನು ಒಪ್ಪಿಕೊಳ್ಳುವುದಿಲ್ಲ. ಈ

ನಿರ್ದೇಶಕರು ಹೇಳಿದ ಕೂಡಲೆ ಒಪ್ಪಿಕೊಳ್ಳೋಣ ಅನಿಸಿತು. ಇತ್ತೀಚೆಗೆ ನಾನು‌, ಜೈ ಜೊತೆ ವರ್ಕ್ ಶಾಪ್ ನಲ್ಲಿ ಪಾಲ್ಗೊಂಡಿದೆ. ಉತ್ತಮವಾಗಿ ನಟಿಸುತ್ತಾನೆ. ನಾನು ಚಿನ್ನೇಗೌಡರ ಕುಟುಂಬವನ್ನು ಚಿಕ್ಕಂದಿನಿಂದಲೂ ಬಲ್ಲೆ. ಈಗ ಅವರ ಕುಟುಂಬದವರ ಜೊತೆ ನಟಿಸುವ ಅವಕಾಶ ದೊರಕಿದ್ದು ಖುಷಿಯಾಗಿದೆ ಎಂದರು ಅಪರ್ಣ.

 

ಚಿತ್ರದ ಶೀರ್ಷಿಕೆ ಅನಾವರಣ ಮಾಡಿದ ಚಿನ್ನೇಗೌಡ ಅವರು ಮತ್ತು ಬಿ.ಕೆ.ಶಿವರಾಂ ಅವರು ತಮ್ಮ ಪ್ರೋತ್ಸಾಹಭರಿತ ಮಾತುಗಳ ಮೂಲಕ ಚಿತ್ರತಂಡಕ್ಕೆ ಶುಭ ಕೋರಿದರು.

 

 "ಗ್ರೇ ಗೇಮ್ಸ್" ಗೆ ವರುಣ್ ಅವರ ಛಾಯಾಗ್ರಹಣವಿದ್ದು, ಶ್ರೀಯನ್ಶ್ ಶ್ರೀರಾಮ್ ಹಾಗೂ ಡೋಲೇಶ್ವರ ರಾಜ್ ಸಂಕು ಸಂಗೀತ ನೀಡುತ್ತಿದ್ದಾರೆ. ದತ್ತಣ್ಣ ನಿರ್ಮಾಣ ನಿರ್ವಹಣೆ ಹಾಗೂ ರಂಜಿತ್ ಅವರ ಸಂಕಲನ ಈ ಚಿತ್ರಕ್ಕಿದೆ.

ಡೋಲೇಶ್ವರ ರಾಜ್ ಸಂಕು, ಅರವಿಂದ್ ಜೋಷಿ, ಸತೀಶ್ ಗ್ರಾಮ್ ಪುರೋಹಿತ್ ಈ ಚಿತ್ರದ ಸಹ ನಿರ್ಮಾಪಕರು. ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಆಗಿ ಬಸವರಾಜ್ ಕೆಡದ್ ಕಾರ್ಯ ನಿರ್ವಹಿಸುತ್ತಿದ್ದಾರೆ.

Copyright@2018 Chitralahari | All Rights Reserved. Photo Journalist K.S. Mokshendra,