Cheddidost.Film News

Tuesday, July 28, 2020

151

ಮುಕ್ಕಾಲು ಭಾಗ ಚಿತ್ರೀಕರಣ ಮುಗಿಸಿದ ಚಡ್ಡಿದೋಸ್ತ್ಗಳು

ಸೆವೆನ್ ರಾಜ್ ನಿರ್ಮಾಣದಲ್ಲಿ ಆಸ್ಕರ್ ಕೃμ ಮೊದಲ ಬಾರಿಗೆ ನಾಯಕರಾಗಿ ನಟಿಸಿ, ನಿರ್ದೇಶಿಸಿರುವ "ಚಡ್ಡಿದೋಸ್ತ್ ಕಡ್ಡಿ ಅಲ್ಲಾಡ್ಸ್ ಬಿಟ್ಟ" ಚಿತ್ರವು ಸುಮಾರು ಮುಕ್ಕಾಲು ಭಾಗದμ ಚಿತ್ರೀಕರಣವನ್ನು ಮುಗಿಸಿಕೊಂಡಿದೆ. ಲಾಕ್ಡೌನ್ ನಂತರದ ಮೊದಲ ಚಿತ್ರವಾಗಿ ಮುಹೂರ್ತ ಆಚರಿಸಿಕೊಂಡ ಈ ಚಿತ್ರವು ಈಗ ಅಂತಿಮ ಹಂತದ ಚಿತ್ರೀಕರಣಕ್ಕೆ ಬಂದು ನಿಂತಿದೆ.  ಖ್ಯಾತ ಕಾದಂಬರಿಕಾರ ಕೌಂಡಿನ್ಯ ರವರ "ಮೈ ಡಿಯರ್ ಫ್ರೆಂಡ್"  ಕಾದಂಬರಿಗೆ ಚಿತ್ರಕತೆ ಹಾಗೂ ಸಂಭಾμಣೆ ಬರೆದು ಚಿತ್ರದಲ್ಲಿ ಒಂದು ವಿಶೇμ ಪಾತ್ರವನ್ನು ನಿಭಾಯಿಸಿದ್ದಾರೆ ನಟ ಲೋಕೇಂದ್ರ ಸೂರ್ಯ. ಮಲಯಾಳಿ ನಟಿ ಗೌರಿ ನಾಯರ್ ಚಿತ್ರದ ನಾಯಕಿಯಾಗಿ ಪಾತ್ರ ನಿರ್ವಹಿಸಿದ್ದು, ನಿರ್ಮಾಪಕ ಸೆವೆನ್ ರಾಜ್ ರವರೂ ಕೂಡ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಬೆಂಗಳೂರು, ಕುಣಿಗಲ್ ಹಾಗೂ ಇನ್ನಿತರ ಸ್ಥಳಗಳಲ್ಲಿ ಚಿತ್ರೀಕರಣ ಮುಗಿಸಿಕೊಂಡು ಬಂದಿರುವ ಚಿತ್ರತಂಡ ಮುಂದಿನ ಭಾಗದ ಚಿತ್ರೀಕರಣಕ್ಕೆ ಸಿದ್ಧತೆ ನಡೆಸಿದೆ. ಚಿತ್ರಕ್ಕೆ ಗಗನ ಕುಮಾರ್ ಛಾಯಾಗ್ರಹಣ, ಅನಂತ್ ಆರ್ಯನ್ ಸಂಗೀತ ನಿರ್ದೇಶನ, ಮರಿಸ್ವಾಮಿ ಸಂಕಲನ, ವೈಲೆಂಟ್ ವೇಲು ಸಾಹಸ ನಿರ್ದೇಶನ, ಅಕುಲ್ ರವರು ನೃತ್ಯ ನಿರ್ದೇಶನ,  ಶ್ರೀಧರ್ ಸಿಯಾ ಹಾಗೂ ಕೃμಕುಮಾರ್ ಸಹ ನಿರ್ದೇಶನ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

 

Copyright@2018 Chitralahari | All Rights Reserved. Photo Journalist K.S. Mokshendra,