Blank.Film News

Tuesday, October 20, 2020

359

 

ಸೆನ್ಸಾರ್ ಮುಂದೆ ’ಬ್ಲಾಂಕ್’

 

ಫೆಲಿಸಿಟಿ ಫಿಲಂಸ್ ಲಾಂಛನದಲ್ಲಿ ಎನ್ ಪಿ  ಮಂಜುನಾಥ್ ಪ್ರಸನ್ನ

 ಅವರು ನಿರ್ಮಿಸಿರುವ ’ಬ್ಲಾಂಕ್’ ಚಿತ್ರದ ಚಿತ್ರೀಕರಣ ಹಾಗೂ ನಂತರದ ಚಟುವಟಿಕೆಗಳು ಪೂರ್ಣವಾಗಿದ್ದು, ಪ್ರಥಮಪ್ರತಿ ಸಿದ್ದವಾಗಿದೆ. ಸದ್ಯದಲ್ಲೇ ಸೆನ್ಸಾರ್ ಮಂಡಳಿ ಚಿತ್ರ ವೀಕ್ಷಿಸಲಿದೆ.

ಮೈಸೂರು, ಚಿಕ್ಕಮಗಳೂರು, ಬೆಂಗಳೂರು, ತುಮಕೂರು, ಸಕಲೇಶಪುರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.

ಎಸ್ ಜಯ್ ಈ ಚಿತ್ರದ ನಿರ್ದೇಶಕರು. ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಟೀಸರ್ ಗೆ ಮೆಚ್ಚುಗೆ ವ್ಯಕ್ತವಾಗಿದೆ. ಶೀಘ್ರದಲ್ಲೇ ಆಡಿಯೋ ರಿಲೀಸ್ ಅಗಲಿದೆ.

ಎಸ್ ಜಯ್, ಅಂಬರೀಶ್ ಪತ್ತಾರ್ ಹಾಗೂ ಶ್ರೀಕಾಂತ್ ಆಂಜಲ್ ಸಂಭಾಷಣೆ ಬರೆದಿದ್ದಾರೆ.

ಜೆ.ಪಿ.ಮ್ಯಾನ್ ಛಾಯಾಗ್ರಹಣ, ಶ್ರೀಶಾಸ್ತ ಸಂಗೀತ ನಿರ್ದೇಶನ, ಅಶೋಕ್ ಸಾಹಸ ನಿರ್ದೇಶನ ಹಾಗೂ ವಿಜಯ್ ಅವರ ನೃತ್ಯ ನಿರ್ದೇಶನ ’ಬ್ಲಾಂಕ್’ ಚಿತ್ರಕ್ಕಿದೆ.

ಪೂರ್ಣಚಂದ್ರ ಮೈಸೂರು, ಕೃಷಿ ತಾಪಂಡ, ಪ್ರಶಾಂತ್ ಸಿದ್ದಿ, ಸುಚೇಂದ್ರ ಪ್ರಸಾದ್, ಭರತ್ ಹಾಸನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.‌

Copyright@2018 Chitralahari | All Rights Reserved. Photo Journalist K.S. Mokshendra,