ನಾಳೆ ಬೆಳಗ್ಗೆ 6 ಗಂಟೆಗೆ ಬಿಡುಗಡೆಯಾಗಲಿದೆ ಪ್ಯಾನ್ ಇಂಡಿಯಾ ಸಿನಿಮಾ ’ಕಬ್ಜ’ ದ ವಿಶೇಷ ಪೋಸ್ಟರ್ .
ಕುತೂಹಲ ಕೆರಳಿಸಿದೆ ಹಾಲಿವುಡ್ ಶೈಲಿಯ ವಿಭಿನ್ನ ಪೋಸ್ಟರ್.
ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ಪ್ಯಾನ್ ಇಂಡಿಯಾ ಸಿನಿಮಾ ’ಕಬ್ಜ’.
ಈ ಚಿತ್ರದ ವಿನೂತನ ಹಾಲಿವುಡ್ ಶೈಲಿಯ ಪೋಸ್ಟರ್ ನಾಳೆ ಬೆಳಗ್ಗೆ 6 ಗಂಟೆಗೆ ಬಿಡುಗಡೆಯಾಗಲಿದೆ.
ತ್ರಿಬಲ್ ಆರ್, ಕೆ.ಜಿ.ಎಫ್ 2, ವಿಕ್ರಾಂತ್ ರೋಣ ಚಿತ್ರಗಳ ಪೋಸ್ಟರ್ ನೋಡುಗರ ಗಮನ ಸೆಳೆದಿದೆ.
ನಾಳೆ ಬಿಡುಗಡೆಯಾಗಲಿರುವ ಕಬ್ಜ ಚಿತ್ರದ ಪೋಸ್ಟರ್ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲವಿದೆ.
ಈ ವಿಭಿನ್ನ ಪೋಸ್ಟರ್ ಬಗ್ಗೆ ಮುಂಬೈ ಟೈಮ್ಸ್ ವರದಿ ಮಾಡಿದೆ. ಯಶ್ ಅವರ ಕೆ.ಜಿ.ಎಫ್ ಚಿತ್ರದ ನಂತರ ಮುಂಬೈ ಟೈಮ್ಸ್ ನಲ್ಲಿ ವರದಿಯಾಗುತ್ತಿರುವ ಕನ್ನಡ ಚಿತ್ರ ಕಬ್ಜ.
ಕರ್ನಾಟಕದಲ್ಲಷ್ಟೇ ಅಲ್ಲದೇ ಇಡೀ ದೇಶಾದ್ಯಂತ ಕಬ್ಬ ಚಿತ್ರ ಸದ್ದು ಮಾಡುತ್ತಿದೆ. ಚಿತ್ರದ ಬಗ್ಗೆ ತಿಳಿದುಕೊಂಡಿರುವ ಸಾಕಷ್ಟು ದೊಡ್ಡ ಸಂಸ್ಥೆಗಳು ಕಬ್ಜ ಚಿತ್ರದ ವ್ಯಾಪಾರಕ್ಕೆ ಮುಂದಾಗಿದ್ದಾರೆ ಎಂಬ ಮಾಹಿತಿ ಚಿತ್ರತಂಡದಿಂದ ಬಂದಿದೆ.
ಸೂಪರ್ ಸ್ಟಾರ್ ಉಪೇಂದ್ರ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ವಿಶೇಷಪಾತ್ರದಲ್ಲಿ ಕಿಚ್ಚ ಸುದೀಪ್ ನಟಿಸುತ್ತಿದ್ದಾರೆ. ಮುಕುಂದ ಮುರಾರಿ ಚಿತ್ರದ ನಂತರ ಈ ಜೋಡಿ ಕಬ್ಜ ಚಿತ್ರದಲ್ಲಿ ಒಂದಾಗಿದೆ.
ಖ್ಯಾತ ನಿರ್ದೇಶಕ ಆರ್ ಚಂದ್ರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.
ಆರ್.ಚಂದ್ರು ಅವರ ನಿರ್ದೇಶನ ಅಂದ ಮೇಲೆ ಅದ್ದೂರಿತನಕ್ಕೆ ಯಾವುದೇ ಕೊರತೆ ಇಲ್ಲ .
ಈಗಾಗಲೇ ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾಗಳಾದ ಕೆ.ಜಿ.ಎಫ್ 2 ಹಾಗೂ ಕಬ್ಜ ಚಿತ್ರಗಳ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಬೆಂಗಳೂರು, ಹೈದರಾಬಾದ್ ಮುಂತಾದ ಕಡೆ ನಿರ್ಮಿಸಲಾಗಿರುವ ಅದ್ದೂರಿ ಸೆಟ್ ಗಳಲ್ಲಿ ಈ ಚಿತ್ರದ ಚಿತ್ರೀಕರಣ ನಡೆದಿದೆ.
ಎಂ.ಟಿ.ಬಿ ನಾಗರಾಜ್ ಅರ್ಪಿಸುವ, ಶ್ರೀ ಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆರ್ ಚಂದ್ರು ಅವರೆ ನಿರ್ಮಿಸುತ್ತಿರುವ ಕಬ್ಜ ಚಿತ್ರಕ್ಕೆ ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರು ಸಂಗೀತ ನಿರ್ದೇಶನವಿದೆ.. ಕಾರ್ಯಕಾರಿ ನಿರ್ಮಾಪಕರಾಗಿ ಮುನೀಂದ್ರ ಹಾಗೂ ಲೈನ್ ಪ್ರೊಡ್ಯೂಸರ್ ಆಗಿ ರಾಜಶೇಖರ್ ಕಾರ್ಯನಿರ್ವಹಿಸುತ್ತಿದ್ದಾರೆ.. ಎ.ಜೆ.ಶೆಟ್ಟಿ ಛಾಯಾಗ್ರಹಣ, ಮಹೇಶ್ ಸಂಕಲನ, ರಾಜು ಸುಂದರಂ, ಗಣೇಶ್, ಶೇಖರ್ ನೃತ್ಯ ನಿರ್ದೇಶನ ಹಾಗೂ ರವಿವರ್ಮ, ವಿಕ್ರಂಮೋರ್,ವಿಜಯ್ ಸಾಹಸ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಉಪೇಂದ್ರ, ಕಿಚ್ಚ ಸುದೀಪ್, ಕಾಮರಾಜನ್(ಐ ಮೂವಿ ಖ್ಯಾತಿ), ಜಗಪತಿ ಬಾಬು, ರಾಹುಲ್ ಜಗತಪ್,ಅನೂಪ್ ರೇವಣ್ಣ, ಜಾನ್ ಕೊಕ್ಕಿನ್, ರಾಹುಲ್ ದೇವ್, ನವೀನ್, ಕೋಟ ಶ್ರೀನಿವಾಸ್, ಜಯಪ್ರಕಾಶ್, ಕಾಟ್ ರಾಜು, ಸುಬ್ಬರಾಜು ಮುಂತಾದ ವರಿದ್ದಾರೆ.
(ವಿ.ಸೂ. ಕ್ಷಮಿಸಿ. ಮೊದಲು ಕಳುಹಿಸಿದ ಸುದ್ದಿಯಲ್ಲಿ ಕಬ್ಜ ಚಿತ್ರದ ಪೋಸ್ಟರ್ ಸಂಜೆ 6 ಗಂಟೆಗೆ ಬಿಡುಗಡೆಯಾಗುವುದಾಗಿ ತಿಳಿಸಲಾಗಿತ್ತು. ಪೋಸ್ಟರ್ ಬಿಡುಗಡೆಯಾಗುತ್ತಿರುವುದು ಬೆ.6ಗಂಟೆಗೆ..ದಯವಿಟ್ಟು ಈಗ ಕಳುಹಿಸಿರುವ ಸುದ್ದಿ ಪ್ರಕಟಿಸಬೇಕಾಗಿ ವಿನಂತಿ)