ಎರಡೇ ಪಾತ್ರಗಳ ಅಭಿನಯದಲ್ಲಿ, ಎರಡು ಭಾಷೆಗಳಲ್ಲಿ ಸಿದ್ದವಾಗಿದೆ “ಅನಿರೀಕ್ಷಿತ”.
ಚಿತ್ರದ ಟ್ರೇಲರ್ ಗೆ ಚಂದನವನದ ತಾರೆಯರ ಮೆಚ್ಚುಗೆ.
ಕನ್ನಡದಲ್ಲಿ ಪ್ರಯೋಗಾತ್ಮಕ ಚಿತ್ರಗಳಿಗೆ ಸಿನಿರಸಿಕರು ಮೆಚ್ಚುಗೆ ಸೂಚಿಸಿದ್ದಾರೆ.
ಅಂತಹದೊಂದು ವಿಭಿನ್ನ ಕಥಾಹಂದರ ಹೊಂದಿರುವ "ಅನಿರೀಕ್ಷಿತ" ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ.
ಕೇವಲ ಎರಡೇ ಪಾತ್ರಗಳು ಈ ಚಿತ್ರದಲ್ಲಿದ್ದು, ಕನ್ನಡ ಹಾಗೂ ಮಲೆಯಾಳಂ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ.
ಈ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.
ಲಾಕ್ ಡೌನ್ ನಂತರ ಸುಮಾರು ಎರಡುವರೆ ತಿಂಗಳ ಬಳಿಕ ಆಯೋಜಿಸಿದ್ದ ಮೊದಲ ಪತ್ರಿಕಾಗೋಷ್ಠಿ ಇದು.
ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿ, ನಿರ್ದೇಶನವನ್ನು ಮಾಡಿರುವ ಮಿಮಿಕ್ರಿ ದಯಾನಂದ್ ಮೊದಲಿಗೆ ತಮ್ಮ ಅನುಭವ ಹಂಚಿಕೊಂಡರು.
ಮಿಮಿಕ್ರಿ ಕಲಾವಿದನಾದ ನಾನು ನಿರ್ದೇಶನಕ್ಕೆ ಬಂದದ್ದು "ಅನಿರೀಕ್ಷಿತ".
ಲಾಕ್ ಡೌನ್ ಸಮಯದಲ್ಲಿ ನಾವೊಂದಿಷ್ಟು ಜನ ಸಿನಿಮಾ ಮಾಡಬೇಕೆಂದು ಅಂದುಕೊಂಡೆವು.
ಹದಿಮೂರು ಜನ ಪ್ರತಿಭಾವಂತರ ಪರಿಶ್ರಮದ ಫಲದಿಂದ ಈ ಚಿತ್ರ ನಿರ್ಮಾಣವಾಗಿದೆ.
ಮಂಗಳೂರು ಹಾಗೂ ಕೇರಳದ ಸುಂದರ ಪರಿಸರದಲ್ಲಿ ಚಿತ್ರೀಕರಣ ನಡೆದಿದೆ.
ಸಮುದ್ರ ತೀರದ ಮನೆಯೊಂದರಲ್ಲಿ ಹೆಚ್ಚು ದಿನದ ಚಿತ್ರೀಕರಣ ನಡೆದಿದ್ದು, ಲಾಕ್ ಡೌನ್ ಸಮಯವಾದುದ್ದರಿಂದ ಯಾರು ಆಚೆ ಹೋಗುವಂತರಲಿಲ್ಲ. ಅಡುಗೆ ಕೆಲಸದಿಂದ ಎಲ್ಲಾ ನಾವೇ ಮಾಡಿಕೊಂಡೆವು. ಎಲ್ಲಾ ಕಾರ್ಯಗಳು ಸುಲಲಿತವಾಗಿ ನಡೆಯಲು ಸಹಕರಿಸಿದ ಇಡೀ ತಂಡಕ್ಕೆ ಧನ್ಯವಾದ ತಿಳಿಸಿದರು
ನನ್ನನ್ನು ಬಿಟ್ಟು ಕೇರಳದವರೇ ಆದ ಭಾಮ ಅರುಣ್ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಇಂದು ಟ್ರೇಲರ್ ಬಿಡುಗಡೆ ಮಾಡಿದ್ದೇವೆ. ಸರ್ಕಾರ ಬಿಡುಗಡೆಗೆ ಸೂಚಿಸಿದ ಮೇಲೆ ಚಿತ್ರವನ್ನು ತೆರೆಗೆ ತರುತ್ತೇವೆ. ನಮ್ಮ ಚಿತ್ರದ ಟ್ರೇಲರ್ ನೋಡಿ ಖ್ಯಾತ ಕಲಾವಿದರಾದ ಕ್ರೇಜಿಸ್ಟಾರ್ ರವಿಚಂದ್ರನ್, ರಿಯಲ್ ಸ್ಟಾರ್ ಉಪೇಂದ್ರ, ಸೃಜನ್ ಲೋಕೇಶ್ ಹಾಗೂ ನಟಿ ತಾರಾ ಅವರು ಮೆಚ್ಚುಗೆ ಸೂಚಿಸಿ ಶುಭ ಕೋರಿದ್ದಾರೆ . ಅವರಿಗೆಲ್ಲಾ ತುಂಬು ಹೃದಯದ ಧನ್ಯವಾದ ಎನ್ನುತ್ತಾರೆ ಮಿಮಿಕ್ರಿ ದಯಾನಂದ್.
ನಿರ್ಮಾಣ ಕೆಲಸದಲ್ಲಿ ಕೈ ಜೋಡಿಸಿರುವ ಸಂತೋಷ್ ಕೊಡಂಕೇರಿ, ಚಿತ್ರಕಥೆ ಬರೆದಿರುವ ರಾಜಶೇಖರನ್ ಸೇರಿದಂತೆ ಚಿತ್ರತಂಡದ ಹಲವು ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತಿರಿದ್ದು, ತಮ್ಮ ಅನುಭವ ಹಂಚಿಕೊಂಡರು.
ಎಸ್.ಕೆ.ಟಾಕೀಸ್ ಲಾಂಛನದಲ್ಲಿ ಶಾಂತಕುಮಾರ್ ನಿರ್ಮಿಸಿರುವ ಈ ಚಿತ್ರದ ಸಹ ನಿರ್ಮಾಪಕರು ಸಂತೋಷ್ ಕೊಡಂಕೇರಿ, ರಘು ಎಸ್ ಹಾಗೂ ಮಿಮಿಕ್ರಿ ದಯಾನಂದ್.
ದಯಾನಂದ್ ಅವರೆ ಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಚಿತ್ರಕಥೆ, ಸಂಭಾಷಣೆಯನ್ನು ನೆಳ್ಳುಳ್ಳಿ ರಾಜಶೇಖರನ್ ಬರೆದಿದ್ದಾರೆ.
ಗುರುಕಿರಣ್ ಸಂಗೀತ ನೀಡಿದ್ದಾರೆ
ಜೀವನ್ ಗೌಡ ಛಾಯಾಗ್ರಹಣ ಹಾಗೂ ರಘು ಅವರ ಸಂಕಲನ ಈ ಚಿತ್ರಕ್ಕಿದೆ.
ಚಿತ್ರದಲ್ಲಿ ಕೇವಲ ಎರಡುಪಾತ್ರಗಳಿದ್ದು, ಮಿಮಿಕ್ರಿ ದಯಾನಂದ್ ಹಾಗೂ ಭಾಮ ಅಭಿನಯಿಸಿದ್ದಾರೆ.
ಸಹ ನಿರ್ಮಾಪಕ ಸಂತೋಷ್ ಕೊಡೆಂಕೇರಿ ಈ ಚಿತ್ರದ ತಾಂತ್ರಿಕ ವಿನ್ಯಾಸದ ಜವಾಬ್ದಾರಿ ಹೊತ್ತಿದ್ದಾರೆ.