*ಕಣ್ಮನ ಸೆಳೆಯುತ್ತಿದೆ "ಕಡಲೂರ ಕಣ್ಮಣಿ" ಚಿತ್ರದ ಹಾಡು.*
ರಾಮ್ ಪ್ರಸನ್ನ ಹುಣಸೂರು ನಿರ್ದೇಶನದ "ಕಡಲೂರ ಕಣ್ಮಣಿ" ಚಿತ್ರಕ್ಕಾಗಿ ಮಧುರಾಮ್ ಅವರು ಬರೆದಿರುವ "ಎದೆಯೊಳಗೆ ಈ ಪ್ರೀತಿ ಶುರುವಾಯಿತು ನನಗೆ" ಎಂಬ ಹಾಡು ಇತ್ತೀಚೆಗೆ A2 music ಮೂಲಕ ಬಿಡುಗಡೆಯಾಯಿತು.
ನನಗೆ ಹದಿನಾಲ್ಕು ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ನಂಟು. ಈ ಚಿತ್ರ ಆರಂಭವಾದ ಒಂದು ಪ್ರಸಂಗ ನಿಮ್ಮ ಮುಂದೆ ಹಂಚಿಕೊಳ್ಳುತ್ತೇನೆ. ಜೀವನದಲ್ಲಿ ನೊಂದ ನಾನು ಆತ್ಮಹತ್ಯೆ ಮಾಡಿಕೊಳ್ಳಲು ಸಮುದ್ರದ ಬಳಿ ಹೋಗುತ್ತಿದೆ. ಇನೇನ್ನೂ ಆತ್ಮಹತ್ಯೆ ಮಾಡಿಕೊಳ್ಳುವಷ್ಟರಲ್ಲಿ ಹಿಂದೆ ನನ್ನ ತಂದೆ-ತಾಯಿ ಕಂಡರು. ಆಗ ನಾನು ನನ್ನ ನಿರ್ಧಾರದಿಂದ ಹಿಂದೆ ಸರಿದೆ. ಈ ಸಿನಿಮಾದ ನಿರ್ಮಾಪಕರು ನನ್ನ ಸ್ನೇಹಿತರು. ಅವರೆಲ್ಲಾ ನನ್ನ ಪ್ರೋತ್ಸಹಕ್ಕೆ ನಿಂತರು. ಈ ಸಿನಿಮಾ ಆರಂಭವಾಯಿತು. ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಬಿರುಸಿನಿಂದ ಸಾಗಿದೆ.
"ಕಡಲೂರ ಕಣ್ಮಣಿ" ಯನ್ನು ನಾನು ವಜ್ರ ಎನ್ನುತ್ತೇನೆ. ಈ ಸಿನಿಮಾದ ಕೊನೆಯ ಇಪ್ಪತ್ತು ನಿಮಿಷ ಎಲ್ಲರ ಕಣ್ಣಲ್ಲೂ ನೀರು ತರಿಸುತ್ತದೆ. ಇದರ ಕಥೆ ಈಗಲೇ ಪೂರ್ತಿ ಹೇಳಲಾಗದು. ಚಿತ್ರಕ್ಕೆ ಸಂಗೀತ ನೀಡುವಂತೆ ಸಂಗೀತ ನಿರ್ದೇಶಕರೊಬ್ಬರನ್ನು ಕೇಳಲಾಗಿತ್ತು. ಆದರೆ ಅವರು ಆರು ತಿಂಗಳಾದರು ಒಂದು ಹಾಡು ಮಾಡಿ ಕೊಡಲಿಲ್ಲ. ಕೊನೆಗೆ ನಿರ್ಮಾಪಕರ ಒತ್ತಾಯಕ್ಕೆ ಮಣಿದು ನಾನೇ ಸಂಗೀತ ನಿರ್ದೇಶನ ಮಾಡಿದ್ದೇನೆ ಎಂದರು ನಿರ್ದೇಶಕ ರಾಮ್ ಪ್ರಸನ್ನ ಹುಣಸೂರು.
ನನಗೆ ನನ್ನ ಸ್ನೇಹಿತನ ಮೂಲಕ ನಿರ್ದೇಶಕರು ಪರಿಚಯವಾದರು. ಸ್ವಲ್ಪ ಸಮಯ ಅವರೊಡನೆ ಮಾತನಾಡಿದೆ. ನೀವೆ ನಮ್ಮ ಸಿನಿಮಾ ಹೀರೋ ಎಂದರು. ಚಿತ್ರದಲ್ಲಿ ನನ್ನ ಪಾತ್ರ ಚೆನ್ನಾಗಿದೆ. ಸಹಕಾರ ನೀಡಿದ ಇಡೀ ತಂಡಕ್ಕೆ ಧನ್ಯವಾದ ಎಂದರು ನಾಯಕ ಅರ್ಜುನ್.
ನಿರ್ಮಾಪಕರಾದ ವಿನೋದ್ ರಾಮ್ ಹೊಳೆನರಸೀಪುರ, ಕೊಳ ಶೈಲೇಶ್ ಆರ್ ಪೂಜಾರ್ , ಸಹ ನಿರ್ಮಾಪಕ ಬಸವರಾಜ ಗಚ್ಚಿ, ಹಾಡು ಬರೆದಿರುವ ಮಧುರಾಮ್, ಕಿರಣ್ ದೇವಲಾಪುರ ಹಾಗೂ ಛಾಯಾಗ್ರಾಹಕರಾದ ಮನೋಹರ್ ಹಾಗೂ ರವಿರಾಮ್ ಚಿತ್ರದ ಕುರಿತಾಗಿ ತಮ್ಮ ಅಭಿಪ್ರಾಯ ಹಂಚಿಕೊಂಡರು.