Saaravajra.Film Press Meet

Thursday, May 12, 2022

284

 

*ನೊಂದ ಹೆಣ್ಣಿನ ಕಥೆ "ಸಾರಾ ವಜ್ರ" ಈವಾರ ತೆರೆಗೆ*

 

       ಶ್ವೇತಾ ಶೆಟ್ಟಿ (ಆರ‍್ನಾ ಸಾಧ್ಯ)ಅವರ ನಿರ್ದೇಶನದ, ಸಾರಾ ಅಬೂಬಕ್ಕರ್ ಬರೆದ ಕಾದಂಬರಿ ಆಧಾರಿತ ಚಿತ್ರ "ಸಾರಾ ವಜ್ರ" ಈ ಶುಕ್ರವಾರ ತೆರೆಕಾಣುತ್ತಿದೆ.

 

 ಇತ್ತೀಚೆಗೆ ನಡೆದ ಪತ್ರಿಕಾಗೋಷ್ಟಿಯಲ್ಲಿ ಚಿತ್ರತಂಡ ಸಿನಿಮಾ ಕುರಿತಂತೆ ಮಾಹಿತಿ ನೀಡಿತ್ತು. ಈ ಚಿತ್ರದ ಕಥೆ ೧೯೮೯ರಿಂದ ಆರಂಭವಾಗಿ ಪ್ರಸ್ತುತ ಕಾಲಘಟ್ಟದವರೆಗೆ ಬಂದುನಿಲ್ಲುತ್ತದೆ. ತ್ರಿವಳಿ ತಲಾಖ್ ಪರಿಣಾಮವಾಗಿ ಹೆಣ್ಣು ಮಗಳೊಬ್ಬಳು ಅನುಭವಿಸುವ ಕಷ್ಟ, ನೋವುಗಳ ಚಿತ್ರಣವಿದು. ನಾಯಕಿ ಅನು ಪ್ರಭಾಕರ್  ಬ್ಯಾರಿ ಸಮಾಜದ ಹೆಣ್ಣುಮಗಳಾಗಿ ನಟಿಸಿದ್ದಾರೆ. ೨೦ನೇ ವಯಸ್ಸಿನಿಂದ ೬೦ ವರ್ಷದ ಮಹಿಳೆಯಾಗಿ ಅವರು ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

 

   ಆರಂಭದಲ್ಲಿ ಮಾತನಾಡಿದ ನಿರ್ಮಾಪಕ ದೇವೇಂದ್ರರೆಡ್ಡಿ ನಿರ್ದೇಶಕರು ಬಂದು ಈ ಕಾದಂಬರಿ ಬಗ್ಗೆ ಹೇಳಿದರು. ನಾನು ಮೊದಲು ಒಪ್ಪಲಿಲ್ಲ. ಮತ್ತೆಬಂದು ಕೇಳಿದಾಗ, ಅನು ಪ್ರಭಾಕರ್ ಅವರು  ನಾಯಕಿ ಅಂದಮೇಲೆ ಒಪ್ಪಿದೆ.  ಬಡಕುಟುಂಬದ ಹೆಣ್ಣುಮಕ್ಕಳು ಅನುಭವಿಸುವ ಕಷ್ಟದ ಕಥೆಯಿದು ಎಂದು ಹೇಳಿದರು.

 

  ನಂತರ ಚಿತ್ರಕ್ಕೆ ಸಾಹಿತ್ಯ ರಚಿಸಿದ ಪತ್ರಕರ್ತ ಬಿಎಂ ಹನೀಫ್ ಅವರು ಮಾತನಾಡುತ್ತ ೪೦ ವರ್ಷಗಳ ಹಿಂದಿನ ಕಥೆ ಆದರೂ ಈಗಲೂ ಅನ್ವಯವಾಗುತ್ತದೆ. ಬೇರೆ ಸಮುದಾಯದ ಹೆಣ್ಣುಮಕ್ಕಳು ಏನು ತೊಂದರೆ ಅನುಭವಿಸುತ್ತಿದ್ದಾರೆಂದು ಈ  ಚಿತ್ರದಲ್ಲಿ ಹೇಳಲಾಗಿದೆ. ಅನು ಪ್ರಭಾಕರ್, ಸುಹಾನಾ ಸಯ್ಯದ್, ರೆಹಮಾನ್ ನೈಜವಾಗಿ ಅಭಿನಯಿಸಿದ್ದಾರೆ ಎಂದು ಹೇಳಿದರು.

   ನಾಯಕಿ ಅನು ಪ್ರಭಾಕರ ಮಾತನಾಡುತ್ತ ನಫೀಜಾ ಎಂಬ ಮಹಿಳೆಯ ಕಥೆಯಿದು. ಈ ಥರದ ಸಿನಿಮಾಗಳನ್ನು ಅವಾರ್ಡ್, ಫಿಲಂ ಫೆಸ್ಟಿವಲ್‌ಗಳಿಗೆ ಮಾಡುತ್ತಾರೆ, ಆದರೆ ನಿರ್ಮಾಪಕರು ಕಮರ್ಷಿಯಲ್ ಆಗಿ ಥಿಯೇಟರ್

ಗಳಲ್ಲೇ ರಿಲೀಸ್ ಮಾಡುತ್ತಿದ್ದಾರೆ, ಎಲ್ಲಾ ಹೆಣ್ಣುಮಕ್ಕಳಿಗೂ ನಾಟುವಂಥ ಯೂನಿವರ್ಸಲ್ ಸಿನಿಮಾ. ಈ ಚಿತ್ರದಿಂದ ಹತ್ತು ಹೆಣ್ಣುಮಕ್ಕಳಿಗಾದ್ರೂ ಧೈರ್ಯ ಬರಲಿ  ಅನ್ನೋದೇ ನಮ್ಮ ಆಶಯ. ಸಿನಿಮಾ ನೋಡಿ ಹೊರಬಂದಮೇಲೆ ಒಂದು ನಗು ಇರುತ್ತದೆ. ಮಹಿಳೆ ಬರೆದ ಮಹಿಳಾಪ್ರದಾನ ಕಥೆ, ನಿರ್ದೇಶನವನ್ನೂ ಮಹಿಳೆಯೇ ಮಾಡಿರುವುದು ವಿಶೇಷ. ಪುನೀತ್ ಅವರು ನಮ್ಮ ಚಿತ್ರಕ್ಕೆ ತುಂಬಾ ಸಪೋರ್ಟ್ ಮಾಡಿದ್ದರು.  ಕಾಸರಗೋಡು ಕೇರಳದಲ್ಲಿ ಬ್ಯಾರಿ ಸಮುದಾಯ ವಾಸವಿರುವ ಜಾಗದಲ್ಲೇ ಚಿತ್ರೀಕರಣ ಮಾಡಿದ್ದೇವೆ. ಅವರು ಕನ್ನಡ, ಬ್ಯಾರಿ ಮಿಕ್ಸ್ ಮಾಡಿ ಮಾತಾಡ್ತಾರೆ. ನಫೀಜಾಗೆ ಚಿಕ್ಕ ವಯಸಿನಲ್ಲೇ ಮದುವೆಯಾಗಿ ೬೦ ವರ್ಷದವವಳಾಗುವವರೆಗೆ ಕಥೆ ಸಾಗುತ್ತದೆ ಎಂದು ಹೇಳಿದರು.

 

 ಗಾಯಕಿ ಸುಹಾನಾ ಇಲ್ಲಿ ನಾಯಕಿಯ ಸ್ನೇಹಿತೆಯಾಗಿ ನಟಿಸಿದ್ದಾರೆ. ರೆಹಮಾನ್ ಹಾಸನ್ ಗಂಡನಾಗಿ, ಸುಧಾ ಬೆಳವಾಡಿ, ರಮೇಶ್ `ಭಟ್ ತಂದೆ, ತಾಯಿಯಾಗಿ ನಟಿಸಿದ್ದಾರೆ. ಚಿತ್ರದಲ್ಲಿ  ಐದು ಹಾಡುಗಳಿದ್ದು ವಿ.ಮನೋಹರ್ ಸಂಗೀತ ಸಂಯೋಜಿಸಿದ್ದಾರೆ.  ಚಿತ್ರಕತೆ-ಸಂಭಾಷಣೆಯನ್ನು ನರೇಂದ್ರಬಾಬು ರಚಿಸಿದ್ದಾರೆ. ಛಾಯಾಗ್ರಹಣ ಪರಮೇಶ್.ಸಿ.ಎಂ, ನೃತ್ಯ ಮದನ್-ಹರಿಣಿ ಅವರದಾಗಿದೆ. ಸಂಭ್ರಮ ಡ್ರೀಮ್ ಹೌಸ್ ಮತ್ತು ಎಂ.ದೇವೇಂದ್ರ ರೆಡ್ಡಿ ಜಂಟಿಯಾಗಿ  ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

Copyright@2018 Chitralahari | All Rights Reserved. Photo Journalist K.S. Mokshendra,