*ಶುರುವಾಯಿತು "ಶಂಭೋ ಶಿವ ಶಂಕರ" ಚಿತ್ರದ ಹಾಡುಗಳ ದಿಬ್ಬಣ್ಣ.*
ವರ್ತೂರು ಮಂಜು ನಿರ್ಮಾಣದ, ಶಂಕರ್ ಕೋನಮಾನಹಳ್ಳಿ ನಿರ್ದೇಶನದಲ್ಲಿ ಮೂಡಿಬಂದಿರುವ "ಶಂಭೋ ಶಿವ ಶಂಕರ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು.
ಖ್ಯಾತ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಹಾಗೂ ನಾಯಕ ವಸಿಷ್ಠ ಸಿಂಹ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಹಾಡುಗಳನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ
ಶುಭ ಕೋರಿದರು.
ನವೀನ್ ಸಜ್ಜು ಹಾಡಿರುವ "ನಾಟಿಕೋಳಿ" ಹಾಡು ಸಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡತ್ತಿದೆ.
ನಾನು ಕಿರುತೆರೆಯಲ್ಲಿ ಧಾರಾವಾಹಿಗಳನ್ನು ನಿರ್ದೇಶಿಸಿ ಅನುಭವವಿದ್ದವನು. ಹಿರಿತೆರೆಯಲ್ಲಿ ಇದು ಚೊಚ್ಚಲ ಚಿತ್ರ. ನನ್ನ ಕನಸಿಗೆ ಜೀವ ತುಂಬಿದ ನಿರ್ಮಾಪಕ, ತಂತ್ರಜ್ಞರಿಗೆ ಹಾಗೂ ಕಲಾವಿದರಿಗೆ ಧನ್ಯವಾದ. ಹಾಡುಗಳನ್ನು ಬಿಡುಗಡೆ ಮಾಡಿಕೊಟ್ಟ ಬಹುದಿನಗಳ ಗೆಳೆಯ ವಸಿಷ್ಠ ಸಿಂಹ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಅವರಿಗೆ ವಿಶೇಷ ಧನ್ಯವಾದ ಎಂದರು ನಿರ್ದೇಶಕ ಶಂಕರ್ ಕೋನಮಾನಹಳ್ಳಿ.
ಸಿನಿಮಾ ನಿರ್ಮಾಣದ ಬಗ್ಗೆ ವರ್ತೂರು ಮಂಜು, ಗೀತರಚನೆ ಕುರಿತು ಗೌಸ್ ಫಿರ್ ಹಾಗೂ ಸಂಗೀತದ ಬಗ್ಗೆ ಹಿತನ್ ಹಾಸನ್ ಮಾಹಿತಿ ನೀಡಿದರು. ಛಾಯಾಗ್ರಾಹಕ ನಟರಾಜು ಮದ್ದಾಲ, ನೃತ್ಯ ನಿರ್ದೇಶಕ ಕಲೈ ತಮ್ಮ ಕಾರ್ಯಗಳ ಬಗ್ಗೆ ಮಾತನಾಡಿದರು.
ನನಗೆ ಅಭಿನಯ ಅಂದರೆ ಏನೆಂದು ಗೊತ್ತಿರಲಿಲ್ಲ. ನನಗೆ ಅಭಿನಯ ಕಲಿಸಿದ ನಿರ್ದೇಶಕರಿಗೆ ನಾನು ಆಭಾರಿ ಎಂದರು ನಾಯಕ ಅಭಯ್ ಪುನೀತ್.
ನಾಯಕಿ ಸೋನಾಲ್ ಮಾಂಟೆರೊ, ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ರೋಹಿತ್ ಹಾಗೂ ರಕ್ಷಕ್ ತಮ್ಮ ಪಾತ್ರ ಪರಿಚಯ ಮಾಡಿಕೊಂಡರು.
ಆನಂದ್ ಆಡಿಯೋ ಮೂಲಕ ಈ ಚಿತ್ರದ ಹಾಡುಗಳು ಬಿಡುಗಡೆಯಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ.