Gaalipata 2.Film Song Launch

Wednesday, June 29, 2022

221

 

*ಗಣೇಶ್ ಹುಟ್ಟುಹಬ್ಬಕ್ಕೆ ಹಾಡಿನ ಉಡುಗೊರೆ.*

 

ಜುಲೈ 2 ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬ. ಇದರ ಸವಿನೆನಪಿಗಾಗಿ "ಗಾಳಿಪಟ ೨" ಚಿತ್ರತಂಡ ಹಾಡೊಂದನ್ನು ಬಿಡುಗಡೆ ಮಾಡುವ ಮೂಲಕ ಹುಟ್ಟುಹಬ್ಬದ ಉಡುಗೊರೆ ನೀಡಿದೆ.

 

ಜಯಂತ ಕಾಯ್ಕಿಣಿ ಅವರು ಬರೆದಿರುವ "ನಾನಾಡದ ಮಾತೆಲ್ಲವ ಕದ್ದಾಲಿಸು" ಎಂಬ ಹಾಡನ್ನು ಸೋನು ನಿಗಮ್ ಸುಶ್ರಾವ್ಯವಾಗಿ ಹಾಡಿದ್ದಾರೆ . "ಗಾಳಿಪಟ" ಮೊದಲ ಭಾಗದ "ಮಿಂಚಾಗಿ ನೀನು ಬರಲು" ಹಾಡು ಕೂಡ ಜಯಂತ ಕಾಯ್ಕಿಣಿ, ಸೋನು ನಿಗಮ್, ಗಣೇಶ್ ಹಾಗೂ ಯೋಗರಾಜ್ ಭಟ್ ಅವರ ಕಾಂಬಿನೇಶನ್ ನಲ್ಲಿ ಬಂದು ಭರ್ಜರಿ ಯಶಸ್ಸು ಕಂಡಿತ್ತು. ಈಗ "ಗಾಳಿಪಟ ೨" ಚಿತ್ರದ ಈ ಹಾಡು ಕೂಡ ಅದೇ‌ ರೀತಿ ಯಶಸ್ಸು ಕಾಣಲಿದೆ.

 

ನಮ್ಮ ಚಿತ್ರದ ನಾಯಕ ಗಣೇಶ್ ಅವರ ಹುಟ್ಟುಹಬ್ಬದ ಸಂದರ್ಭ. ಈ ಸುಂದರ ಕ್ಷಣಕ್ಕೆ ನಮ್ಮ ಹಾಡಿನ ಉಡುಗೊರೆ. ಜುಲೈ 2 ಗಣೇಶ್  ಹುಟ್ಟುಹಬ್ಬ. ಅಂದು ಅವರು ಊರಿನಲ್ಲಿರದ ಕಾರಣ ಈಗ ಮಾಧ್ಯಮ ಮಿತ್ರರ ಮುಂದೆ ಈ ಹಾಡು ಬಿಡುಗಡೆ ಮಾಡಿದ್ದೇವೆ. ಜುಲೈ 2 ರಂದು ಆನಂದ್ ಆಡಿಯೋ ಮೂಲಕ ಈ ಹಾಡು ಎಲ್ಲರಿಗೂ ತಲುಪಲಿದೆ ಎಂದು ನಿರ್ದೇಶಕ ಯೋಗರಾಜ್ ಭಟ್ ತಿಳಿಸಿದರು ಹಾಗೂ ಹಾಡಿನ  ಪದಪದದ ಅರ್ಥ ವಿವರಿಸಿ, ಹಾಡು ಬರೆದಿರುವ  ಜಯಂತ ಕಾಯ್ಕಿಣಿ ಕಾಯ್ಕಿಣಿ, ಹಾಡಿರುವ ಸೋನು ನಿಗಂ ಹಾಗೂ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಧನ್ಯವಾದ ಹೇಳಿದರು.

ಮತ್ತೆ ಕೋವಿಡ್ ಹೆಚ್ಚುತ್ತಿರುವ ಕಾರಣ, ನಾನು ಈ ಬಾರಿ ನನ್ನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸುತ್ತಿಲ್ಲ. ನಾನು ಅಂದು ಬೆಂಗಳೂರಿನಲ್ಲಿ ಇರುವುದಿಲ್ಲ.

ಈ ಹಾಡನ್ನು ಕೇಳಿ ಮತ್ತೆ ಹದಿನೈದು ವರ್ಷಗಳ ಹಿಂದೆ ಹೋದೆ. ಅದೇ ಕಾಂಬಿನೇಷನ್ ನಲ್ಲಿ ಮತ್ತೆ ಇಂಪಾದ ಹಾಡು ಬಂದಿದೆ. ಅಷ್ಟೇ ಜನಪ್ರಿಯವಾಗಲಿದೆ ಎಂಬ ಭರವಸೆಯಿದೆ. ನನ್ನ ಹುಟ್ಟುಹಬ್ಬಕ್ಕೆ ಇದೊಂದು ವಿಶೇಷ ಉಡುಗೊರೆ. ನಿರ್ಮಾಪಕ ರಮೇಶ್ ರೆಡ್ಡಿ ಅವರು ಯಾವುದಕ್ಕೂ ಕೊರತೆ ಇಲ್ಲದೆ ಚಿತ್ರ ನಿರ್ಮಾಣ ಮಾಡಿದ್ದಾರೆ. ಕುದುರೆಮುಖದಲ್ಲಿ ಸುಮಾರು 200 ಜನರ ತಂಡ ಇದ್ದೆವು. ಕಲಾ ನಿರ್ದೇಶಕ‌ ಪಂಡಿತ್ ಅವರಂತೂ ಅದ್ಭುತ ಸೆಟ್ ಹಾಕಿದ್ದರು. ಯೋಗರಾಜ್ ಸರ್ ಬಗ್ಗೆ ಎಷ್ಟು ಹೇಳಿದರು ಕಡಿಮೆ. ನೀರಿನಲ್ಲಿ ಐರನ್ ಬಾಕ್ಸ್ ಇಟ್ಟು ಹೊಗೆ ಬರೆಸಿದ್ದಾರೆ ಅವರು.  ಇದರ ಬಗ್ಗೆ ಕೇಳಿದಾಗ ಹುಡುಗ ಹೀಟ್ ಆಗಿರುತ್ತಾನೆ. ಇದು ಅದರ ಸಂಕೇತವೆಂದರು. ಧನು ಮಾಸ್ಟರ್ ಸುಂದರವಾಗಿ ನೃತ್ಯ ಸಂಯೋಜನೆ ಮಾಡಿದ್ದಾರೆ ಎಂದರು ನಾಯಕ ಗಣೇಶ್.

 

ಹಾಡು ಚೆನ್ನಾಗಿದೆ. ಈ ಹಾಡಿಗೆ ಬಳಿಸಿದ ವಸ್ತುಗಳನ್ನು ನೆನಪಿಗಾಗಿ ನಮ್ಮ ಮನೆಯ ಬಳಿ ತರಿಸಿಟ್ಟುಕೊಂಡಿದ್ದೀನಿ. ಈ ಹಾಡನ್ನು ನನ್ನ ಮಗಳು ದಿನ ಕೇಳುತ್ತಿರುತ್ತಾಳೆ. ಬಿಡುಗಡೆ ಮುಂಚೆಯೇ ಈ ಹಾಡು ಗೆದ್ದಿದೆ ಎನ್ನಬಹುದು. ನಮ್ಮ ಚಿತ್ರಕ್ಕೆ

ನಿಮ್ಮ ಬೆಂಬಲವಿರಲಿ ಎಂದರು ನಿರ್ಮಾಪಕ ರಮೇಶ್ ರೆಡ್ಡಿ.

 

ಸುಂದರವಾದ ಹಾಡು. ಅಷ್ಟೇ ಸುಂದರವಾದ ಸ್ಥಳ. ಅದ್ಭುತವಾದ ಸೆಟ್ ನಲ್ಲಿ ಐದು ದಿನಗಳ ಕಾಲ ಈ ಹಾಡಿನ ಚಿತ್ರೀಕರಣ ನಡೆದಿದೆ.

ಗಣೇಶ್ ಅವರನ್ನು ಕ್ಲೋಸಪ್ ನಲ್ಲಿ ತೋರಿಸಿದ್ದೇವೆ. ತುಂಬಾ ಮುದ್ದಾಗಿ ಕಾಣುತ್ತಾರೆ ಎನ್ನುತ್ತಾರೆ ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ.

 

ಚಿತ್ರದ ಬಗ್ಗೆ ಹೆಚ್ಚಿನ ವಿವರಗಳನ್ನು ಪಡೆಯಲು 9538669922 ಈ ನಂಬರ್ ಸಂಪರ್ಕಿಸಬಹುದು.

Copyright@2018 Chitralahari | All Rights Reserved. Photo Journalist K.S. Mokshendra,