Sidlingu 2.Film News

Friday, March 22, 2024

411

 

ಪೆಟ್ರೋಮ್ಯಾಕ್ಸ್ ಹಾಗೂ ತೋತಾಪುರಿ ಚಿತ್ರಗಳ ಬಳಿಕ ಚೇಷ್ಠೆಗೆ ಫುಲ್ಸ್ಟಾಪ್ ಇಟ್ಟಿರೋ ವಿಜಯ್ ಪ್ರಸಾದ್, ಸಿದ್ಲಿಂಗು ಸೀಕ್ವೆಲ್ ಸಿನಿಮಾನ ಕೈಗೆತ್ತಿಕೊಂಡಿದ್ದಾರೆ. ಲೂಸ್ಮಾದ ಯೋಗಿ ಜೊತೆಗೇನೇ ಸಿನಿಮಾ ಶುರು ಮಾಡ್ತಿರೋ ಪ್ರಸಾದ್, ಅಧಿಕೃತವಾಗಿ ನಿರ್ಮಾಪಕರ ಮನೆದೇವರ ಆಲಯದಲ್ಲಿ ಮುಹೂರ್ತ ಕೂಡ ನೆರವೇರಿಸಿದ್ರು. ಮೋಹಕತಾರೆ ರಮ್ಯಾ & ಆಂಡಾಳಮ್ಮ ಇರ್ತಾರಾ..? ಡಬಲ್ ಮೀನಿಂಗ್ ಇರುತ್ತಾ ಇರಲ್ವಾ ಅನ್ನೋದ್ರ ಕಂಪ್ಲೀಟ್ ಕಹಾನಿ ಇಲ್ಲಿದೆ ಒಮ್ಮೆ ಓದಿ.

 

ಸಿದ್ಲಿಂಗು.. ಈ ಸಿನಿಮಾ ಬಂದು ಬರೋಬ್ಬರಿ 12 ವರ್ಷಗಳಾಯ್ತು. ಇಂದಿಗೂ ನೋಡುಗರ ಮನದಲ್ಲಿ ಅಚ್ಚಳಿಯದೆ ಉಳಿದಿದೆ. ಅದಕ್ಕೆ ಕಾರಣ ಒಂದೊಳ್ಳೆ ಕಥೆ, ಸಂಬಂಧಗಳ ಮೌಲ್ಯಗಳು, ಕಾಮಿಡಿ, ಪ್ರೀತಿ, ಡೈಲಾಗ್ಸ್, ಸಾಹಿತ್ಯ, ಸಂಗೀತ ಹಾಗೂ ಮೇಕಿಂಗ್. ಹೌದು.. ಎಲ್ಲಾ ಌಂಗಲ್ನಿಂದ ಸಿದ್ಲಿಂಗು ವ್ಹಾವ್ ಫೀಲ್ ತರಿಸಿದ ಸಿನಿಮಾ ಆಗಿತ್ತು. ಇದೀಗ ಅದ್ರ ಸೀಕ್ವೆಲ್ ಸಿದ್ಲಿಂಗು-2 ಸೆಟ್ಟೇರಿದೆ.

 

 

ಜಮಾಲಿಗುಡ್ಡ ಚಿತ್ರದ ನಿರ್ಮಾಪಕ ಶ್ರೀಹರಿ ರೆಡ್ಡಿ ಅವ್ರು ತಮ್ಮ ನಿಹಾರಿಕಾ ಫಿಲಂಸ್ ಬ್ಯಾನರ್ನಡಿ ಈ ಚಿತ್ರವನ್ನ ನಿರ್ಮಿಸುತ್ತಿದ್ದು, ವಿಜಯ್ ಪ್ರಸಾದ್ ಅವರೇ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಅಬ್ಬಿಗೆರೆ ಬಳಿ ಇರೋ ಶೆಟ್ಟಿಹಳ್ಳಿ ವಾರ್ಡ್ನ ನಿವಾಸಿಯಾದ ಶ್ರೀಹರಿ ರೆಡ್ಡಿ ಅವ್ರ ಮನೆದೇವ್ರ ಆಲಯದಲ್ಲಿ ಸಿನಿಮಾ ಮುಹೂರ್ತ ಕಂಡಿದೆ. ನಂತ್ರ ಸುದ್ದಿಗೋಷ್ಠಿ ನಡೆಸಿದ ಚಿತ್ರತಂಡ, ಮಾಧ್ಯಮಗಳಿಗೆ ಒಂದಷ್ಟು ಮಾಹಿತಿ ನೀಡಿತು.

 

ಪೆಟ್ರೋಮ್ಯಾಕ್ಸ್ ಹಾಗೂ ತೋತಾಪುರಿ ಸಿನಿಮಾಗಳ ಬಳಿಕ ಡಬಲ್ ಮೀನಿಂಗ್ ಡೈಲಾಗ್ಸ್ಗೆ ಕಡಿವಾಣ ಹಾಕಿ, ಹೊಸ ಹುರುಪು ಹುಮ್ಮಸ್ಸಿನಿಂದ ಸಿದ್ಲಿಂಗು-2 ಮಾಡೋಕೆ ಮುಂದಾಗಿದ್ದಾರೆ ವಿಜಯ್ ಪ್ರಸಾದ್. ಇಲ್ಲಿ ಬರೀ ಮೀನಿಂಗ್ ಇರಲಿದೆ. ಡಬಲ್ ಮೀನಿಂಗ್ ಇರಲ್ಲ ಅಂತ ಜನಕ್ಕೆ ಕೈ ಮುಗಿದರು. ಅಲ್ಲದೆ, ಯಾರೂ ನಂಬಲಾರದ ಸ್ಥಿತಿಯಲ್ಲಿದ್ದ ತನ್ನನ್ನ ನಂಬಿದ ಪ್ರೊಡ್ಯೂಸರ್ಗೆ ಥ್ಯಾಂಕ್ಸ್ ಹೇಳಿದ್ರು. ಈ ಬಾರಿ 6ರಿಂದ 60 ವರ್ಷದ ಎಲ್ಲರೂ ನೋಡಬಹುದಾದ ಸಿನಿಮಾ ಕೊಡೋ ಭರವಸೆ ನೀಡಿದ್ರು.

ಬೈಟ್: ವಿಜಯ್ ಪ್ರಸಾದ್, ನಿರ್ದೇಶಕ

ಬೈಟ್: ಶ್ರೀಹರಿ ರೆಡ್ಡಿ, ನಿರ್ಮಾಪಕ

 

ನಾಯಕನಟ ಲೂಸ್ಮಾದ ಯೋಗಿ ಮಾತನಾಡಿ, ಇದು ನನ್ನ ಕರಿಯರ್ಗೆ ಮಹತ್ವದ ತಿರುವು ಕೊಟ್ಟ ಸಿನಿಮಾ. ಹಾಗಾಗಿ ಅದ್ರ ಸೀಕ್ವೆಲ್ ಬರ್ತಿರೋದು ಖುಷಿಯ ವಿಚಾರ. ಹದಿನೈದು ವರ್ಷದ ಗೆಳತಿ ಸೋನು ಗೌಡ ಜೊತೆ ಇಲ್ಲಿಯವರೆಗೂ ಸಿನಿಮಾ ಮಾಡೋ ಅವಕಾಶಗಳು ಸಿಗಲೇ ಇಲ್ಲ. ಇದೀಗ ಒಟ್ಟಿಗೆ ಕೆಲಸ ಮಾಡ್ತಿರೋದು ಸಂತೋಷವಾಗ್ತಿದೆ. ರಮ್ಯಾ ಅವ್ರು ಇರಲ್ಲ, ಆಂಡಾಳಮ್ಮನನ್ನ ಬಿಡಲ್ಲ ಅಂದ್ರು.

ಬೈಟ್: ಲೂಸ್ಮಾದ ಯೋಗಿ, ನಟ

 

ಕಿರಗೂರಿನ ಗಯ್ಯಾಳಿಗಳು ಸಿನಿಮಾದ ಪಾತ್ರ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದ ಡೈರೆಕ್ಟರ್, ಸಿದ್ಲಿಂಗು-2ಗೆ ಆಫರ್ ಮಾಡಿದ್ದು ನಿಜಕ್ಕೂ ಸರ್ಪ್ರೈಸ್ ಅಂದ್ರು ಸೋನು ಗೌಡ. ಕಲಾವಿದೆಯಾಗಿ ನಾನು ಕೊಟ್ಟ ಪಾತ್ರಕ್ಕೆ ಜೀವ ತುಂಬುತ್ತೇನೆ ಅಂತ ಅವಕಾಶ ನೀಡಿದ ಡೈರೆಕ್ಟರ್ಗೆ ಧನ್ಯವಾದ ಹೇಳಿದ್ರು, ಅಲ್ಲದೆ ಯೋಗಿ ಬಗ್ಗೆ ಕೊಂಡಾಡಿದ್ರು.

ಬೈಟ್: ಸೋನು ಗೌಡ, ನಟಿ

 

ಅನೂಪ್ ಸೀಳಿನ್ ಸಂಗೀತ, ಅರಸು ಅಂತಾರೆ ಸಾಹಿತ್ಯ ಚಿತ್ರಕ್ಕಿರಲಿದ್ದು, ಪದ್ಮಜಾ ರಾಜ್, ಆಂಟೊನಿ ಕಮಲ್, ಮಹಾಂತೇಶ್ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿರಲಿದೆ. ಮುಂದಿನ ವಾರದಿಂದ ಶೂಟಿಂಗ್ ಶುರುವಾಗಲಿದ್ದು, ಬೆಂಗಳೂರು ಹಾಗೂ ಮೈಸೂರಿನಲ್ಲಿ ಚಿತ್ರೀಕರಣ ಮಾಡಲು ಟೀಂ ನಿರ್ಧರಿಸಿದೆ.

Copyright@2018 Chitralahari | All Rights Reserved. Photo Journalist K.S. Mokshendra,