Scam 1770.Film News

Wednesday, March 27, 2024

43

 

*ಪ್ರಸ್ತುತ ಶಿಕ್ಷಣದ ವ್ಯವಸ್ಥೆಯ ನ್ಯೂನ್ಯತೆಗಳನ್ನು ಎತ್ತಿ ಹಿಡಿದಿರುವ  "SCAM 1770 ಚಿತ್ರದ ಟ್ರೇಲರ್ ಬಿಡುಗಡೆ"* .

 

ಮನುಷ್ಯನಿಗೆ ಎಲ್ಲಕ್ಕಿಂತ ಹೆಚ್ಚು ಉತ್ತಮ ಶಿಕ್ಷಣ. ಆ ಶಿಕ್ಷಣದಲ್ಲೇ ಈಗ ಸಾಕಷ್ಟು scam ಗಳು ನಡೆಯುತ್ತಿದೆ. ಅಂತಹ scamಗಳನ್ನು ಎತ್ತಿ ಹಿಡಿಯುವ ಕಥಾಹಂದರ ಹೊಂದಿರುವ "scam 1770" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಪ್ರತಿದಿನ ಬೆಳಗ್ಗೆ ಎಲ್ಲರ ಮನೆಗೂ ಪೇಪರ್ ಹಾಕಿ, ವಿದ್ಯಾಭ್ಯಾಸ ಮಾಡುತ್ತಿರುವ ಆದರ್ಶ್ ಅವರಿಂದ ಈ ಚಿತ್ರದ ಟ್ರೇಲರ್ ಬಿಡುಗಡೆಯಾಯಿತು.     

 

ಡಿ ಕ್ರಿಯೇಷನ್ಸ್ ಲಾಂಛನದಲ್ಲಿ ದೇವರಾಜ್ ಆರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ವಿಕಾಸ್ ಪುಷ್ಪಗಿರಿ ನಿರ್ದೇಶಿಸಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ "ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು" ಖ್ಯಾತಿಯ ರಂಜನ್ ನಟಿಸಿದ್ದಾರೆ.  ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದು ಹೀಗೆ.

 ಪ್ರಸ್ತುತ ಶಿಕ್ಷಣ ವ್ಯವಸ್ಥೆ ಕುರಿತಾದ ಚಿತ್ರ "SCAM 1770". ಶಿಕ್ಷಣ ಇಂದು ವ್ಯವಹಾರ ಆಗಿಹೋಗಿದೆ‌. ಆ ರೀತಿ ಆಗಬಾರದು.  ಯಾವ ಅಭ್ಯಾಸ ತಪ್ಪಿದರೂ ಬದುಕಬಹುದು. ಆದರೆ ವಿದ್ಯಾಭ್ಯಾಸ ತಪ್ಪಿದ್ದರೆ ಬದುಕುವುದು ಕಷ್ಟ. ಆದರೆ ಅಂತಹ ವಿದ್ಯಾಭ್ಯಾಸ ಇಂದು ಬಡವರಿಗೆ ಹಾಗೂ ಮಧ್ಯಮವರ್ಗದ ಜನರಿಗೆ ದುಬಾರಿಯಾಗಿದೆ. ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿನ ನ್ಯೂನ್ಯತೆಗಳನ್ನು ತೋರಿಸುವ ಪ್ರಯತ್ನವನ್ನು ನಮ್ಮ ಚಿತ್ರದಲ್ಲಿ ಮಾಡಿದ್ದೇವೆ.  ಏಪ್ರಿಲ್ 12 ರಂದು ಚಿತ್ರ ತೆರೆಗೆ ಬರಲಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ತಪ್ಪದೇ ನೋಡಬೇಕಾದ ಸಿನಿಮಾವಿದು. ಮೊದಲಿನಿಂದಲೂ ಉತ್ತಮ ಸದಭಿರುಚಿಯ ಚಿತ್ರಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿರುವ ನಿರ್ಮಾಪಕ ದೇವರಾಜ್ ಅವರು ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಅವರಿಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ನನ್ನ ಧನ್ಯವಾದ ಎಂದರು ನಿರ್ದೇಶಕ ವಿಕಾಸ್ ಪುಷ್ಪಗಿರಿ.

 

ನಾನು "ಕಾಂತಾರ" ಸಿನಿಮಾ ಸಂದರ್ಭದಲ್ಲಿ ನಿರ್ದೇಶನದ ತಂಡದಲ್ಲಿ ಕೆಲಸ ಮಾಡುತ್ತಿದ್ದೆ. ಫೋನ್ ಬಳಸುವ ಹಾಗಿರಲಿಲ್ಲ. ಆಗ ಈ ಚಿತ್ರತಂಡದವರು ನನ್ನನ್ನು ಸಂಪರ್ಕಿಸಲು ಪ್ರಯತ್ನ ಮಾಡುತ್ತಿರುವ ವಿಷಯ ಸ್ನೇಹಿತನಿಂದ ತಿಳಿಯಿತು. ಸ.ಹಿ.ಪ್ರಾ.ಶಾಲೆ ಕಾಸರಗೋಡು ಚಿತ್ರದಲ್ಲಿ "ದಡ್ಡ ಪ್ರವೀಣ" ನ ಪಾತ್ರ ಮಾಡಿದ್ದೆ. ಇದರಲ್ಲಿ ಜಾಣನ ಪಾತ್ರ ಕೊಟ್ಟಿದ್ದಾರೆ. ಶಿಕ್ಷಣದ ಕುರಿತಾದ ಈ ಚಿತ್ರದಲ್ಲಿ ನಟಿಸಲು ಅವಕಾಶ ನೀಡಿದ ನಿರ್ದೇಶಕರಿಗೆ ಹಾಗೂ ನಿರ್ಮಾಪಕರಿಗೆ ಧನ್ಯವಾದ ತಿಳಿಸಿದರು ನಾಯಕ ರಂಜನ್.

 

ನಾಯಕಿ ನಿಶ್ಚಿತ ಕೂಡ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಚಿತ್ರದಲ್ಲಿ ಅಭಿನಯಿಸಿರುವ ಹರಿಣಿ, ನಾರಾಯಣಸ್ವಾಮಿ, ನಟನ ಪ್ರಶಾಂತ್, ರಾಘು ಶಿವಮೊಗ್ಗ, ಸಂಗೀತ ನಿರ್ದೇಶಕ ಸತೀಶ್ ಆರ್ಯನ್ ಹಾಗೂ ನಿರ್ದೇಶಕರೊಂದಿಗೆ ಚಿತ್ರಕಥೆ ಬರೆದಿರುವ ಶಂಕರ್ ರಾಮನ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

Copyright@2018 Chitralahari | All Rights Reserved. Photo Journalist K.S. Mokshendra,