ಹೊಸ ಚಿತ್ರಕ್ಕೆ ಸಹಿ ಹಾಕಿದ ಗುರುನಂದನ್
‘ಫಸ್ಟ್ರ್ಯಾಂಕ್ ರಾಜು’ ಖ್ಯಾತಿಯ ಗುರುನಂದನ್ ಹೆಸರಿಡದ ಸಿನಿಮಾಕ್ಕೆ ಸಹಿ ಹಾಕಿದ್ದಾರೆ. ಕಳೆದವಾರ ಶ್ರೀ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ನಡೆಯಿತು. ಮೊದಲ ದೃಶ್ಯಕ್ಕೆ ಅಶ್ವಿನಿ ಪುನೀತ್ರಾಜ್ಕುಮಾರ್ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ವಿಶೇಷ ಅಧಿಕಾರಿ ವೆಂಕಟೇಶ್ ಮತ್ತು ಗೋಲ್ಡ್ ಫಿಂಚ್ ಹೋಟೆಲ್ ಮಾಲೀಕ ಪ್ರಕಾಶ್ ಶೆಟ್ಟಿ ಉಪಸ್ತಿತರಿದ್ದರು. ಮಂಡಿಮನೆ ಟಾಕೀಸ್ ನಿರ್ಮಾಣದ ಜವಬ್ದಾರಿಯನ್ನು ಹೊತ್ತುಕೊಂಡಿದೆ. ಸುಮಂತ್ಗೌಡ್ರು ನಿರ್ದೇಶನ ಮಾಡುತ್ತಿದ್ದಾರೆ.
‘ಹರಿಕಥೆ ಅಲ್ಲ ಗಿರಿಕಥೆ’ ಖ್ಯಾತಿಯ ತಪಸ್ವಿನಿ ಪೂರ್ಣಚ್ಚ ನಾಯಕಿ. ಇವರೊಂದಿಗೆ ತಬಲನಾಣಿ, ಧರ್ಮಣ್ಣ ಮುಂತಾದವರು ನಟಿಸುತ್ತಿದ್ದಾರೆ. ಕಥೆಯ ಗುಟ್ಟನ್ನು ಬಿಟ್ಟುಕೊಡದ ತಂಡವು ಮುಂದಿನ ದಿನಗಳಲ್ಲಿ ಮಾಹಿತಿ ನೀಡುವುದಾಗಿ ಹೇಳಿಕೊಂಡಿದೆ. ಕಿರಣ್ ರವೀಂದ್ರನಾಥ್ ಸಂಗೀತ, ‘ಭೀಮ’ದ ಶಿವಸೇನಾ ಛಾಯಾಗ್ರಹಣ, ಶರತ್ ಚಕ್ರವರ್ತಿ ಸಂಭಾಷಣೆ ಇರಲಿದೆ.