Katle.Film News

Sunday, November 17, 2024

20

*ಡಾರ್ಲಿಂಗ್ ಕೃಷ್ಣ ಅವರಿಂದ ಬಿಡುಗಡೆಯಾಯಿತು ಕೆಂಪೇಗೌಡ ಅಭಿನಯದ "ಕಟ್ಲೆ" ಸಿನಿಮಾದ ಮೊದಲ ಹಾಡು* .

 

 *ಭರತ್ ಗೌಡ ನಿರ್ಮಾಣದ ಹಾಗೂ ಶ್ರೀವಿದ ನಿರ್ದೇಶನದ ಈ ಚಿತ್ರ ಸದ್ಯದಲ್ಲೇ ತೆರೆಗೆ* .

 

ಭರತ್ ಗೌಡ ಹೊಸಕೋಟೆ ನಿರ್ಮಾಣದ, ಶ್ರೀವಿದ ನಿರ್ದೇಶನದ ಹಾಗೂ ಹಾಸ್ಯನಟನಾಗಿ ಜನಮನ ಗೆದ್ದಿರುವ ಕೆಂಪೇಗೌಡ ಪ್ರಮುಖಪಾತ್ರದಲ್ಲಿ ನಟಿಸಿರುವ "ಕಟ್ಲೆ" ಚಿತ್ರದ ಮೊದಲ ಹಾಡನ್ನು ನಟ ಡಾರ್ಲಿಂಗ್ ಕೃಷ್ಣ  ಇತ್ತೀಚೆಗೆ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.  ಬಹದ್ದೂರ್ ಚೇತನ್ ಕುಮಾರ್ ಬರೆದಿರುವ "ಯಾರೋ ನಾ ಕಾಣೆ. ಚಂದಾಗೌಳೆ ಶಾಣೆ" ಎಂಬ ಈ ಹಾಡನ್ನು ಖ್ಯಾತ ಗಾಯಕ ಟಿಪ್ಪು ಅವರು ಹಾಡಿದ್ದು, ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

 

ಹಾಸ್ಯನಟನಾಗಿದ್ದ ನನ್ನ ಮೇಲೆ ಭರವಸೆಯಿಟ್ಟು ನನ್ನನ್ನು ನಾಯಕನನ್ನಾಗಿ ಮಾಡಿದ ನಿರ್ಮಾಪಕ ಭರತ್ ಗೌಡ ಅವರಿಗೆ ನಾನು ಆಭಾರಿ ಎಂದು ಮಾತು ಆರಂಭಿಸಿದ ನಾಯಕ ಕೆಂಪೇಗೌಡ, ಶ್ರೀವಿದ ಅವರು "ಕಟ್ಲೆ" ಚಿತ್ರಕ್ಕೆ ಅದ್ಭುತವಾದ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇಂದು ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಚೇತನ್ ಕುಮಾರ್ ಬರೆದು ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿರುವ ಈ ಹಾಡು ಎಲ್ಲರಿಗೂ ಮೆಚ್ಚುಗೆಯಾಗಲಿದೆ. ಹಾಡು ಬಿಡುಗಡೆ ಮಾಡಿಕೊಟ್ಟ ಡಾರ್ಲಿಂಗ್ ಕೃಷ್ಣ ಅವರಿಗೆ ಧನ್ಯವಾದ ಎಂದರು.

ಈ ಚಿತ್ರ ಉತ್ತಮವಾಗಿ ಮೂಡಿಬರಲು ಮುಖ್ಯ ಕಾರಣ ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿರುವ ಭರತ್ ಗೌಡ‌ ಅವರು. ಅವರು ನಮ್ಮ‌ ಮೇಲೆ ನಂಬಿಕೆಯಿಟ್ಟು ಬಂಡವಾಳ ಹಾಕಿರುವುದೇ ನಮ್ಮ ಕನಸು ನನಸಾಗಲು ಕಾರಣ. ಅವರಿಗೆ ಹಾಗೂ ನನ್ನ‌ ತಂಡಕ್ಕೆ ನನ್ನ ಧನ್ಯವಾದ. ನಮ್ಮ ಚಿತ್ರದ ಪ್ರಥಮ ಹಾಡು ಇಂದು ಬಿಡುಗಡೆಯಾಗಿದೆ.  ಸದ್ಯದಲ್ಲೇ "ಕಟ್ಲೆ" ಸೆನ್ಸಾರ್ ವೀಕ್ಷಿಸಲಿದ್ದು, ಡಿಸೆಂಬರ್ ವೇಳೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದರು ನಿರ್ದೇಶಕ ಶ್ರೀವಿದ.

 

ಶ್ರೀವಿದ ಅವರು ಹೇಳಿದ ಕಥೆ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆ. ಎಲ್ಲರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ಮಾಪಕ ಭರತ್ ಗೌಡ ಹೇಳಿದರು‌.

 

ಹಾಡು ಹುಟ್ಟಿದ ಬಗ್ಗೆ ಹಾಡು ಬರೆದಿರುವ ಚೇತನ್ ಕುಮಾರ್ ಹಾಗೂ ಸಂಗೀತ ಸಂಯೋಜಕನೆ ಕುರಿತು ಸಂಗೀತ ನಿರ್ದೇಶಕ ಶ್ರೀಧರ್ ವಿ ಸಂಭ್ರಮ್ ಮಾಹಿತಿ ನೀಡಿದರು. ನಾಯಕಿಯರಾದ ಅಮೃತ ರಾಜ್, ಸಂಹಿತ, ನಟರಾದ ಉಮೇಶ್, ತಬಲ ನಾಣಿ, ಹರೀಶ್ ರಾಜ್, ಕರಿಸುಬ್ಬು ನಟಿಯರಾದ ಶೃತಿ, ನಿಸರ್ಗ ಅಪ್ಪಣ್ಣ ಮುಂತಾದವರು "ಕಟ್ಲೆ" ಬಗ್ಗೆ ಮಾತನಾಡಿದರು.

Copyright@2018 Chitralahari | All Rights Reserved. Photo Journalist K.S. Mokshendra,