Amaravathi Police Station.News

Monday, February 17, 2025

21

 

ಅಮರಾವತಿ ಪೋಲಿಸ್ ಸ್ಟೇಷನ್

 ಚಿತ್ರದ  ಟೀಸರ್ ಬಿಡುಗಡೆ

 

  ಕಡಲ ತೀರದ ಕಾಲ್ಪನಿಕ ಅಮರಾವತಿ ಎಂಬ ಊರಲ್ಲಿ ನಡೆಯುವ  ಮಿಸ್ಸಿಂಗ್, ಮರ್ಡರ್, ಅಚ್ಚರಿ  ಎನಿಸುವ ಘಟನೆಗಳ ಸುತ್ತ ನಡೆಯುವ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡ,

 ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸಿರುವ ಚಿತ್ರ "ಅಮರಾವತಿ ಪೊಲೀಸ್ ಸ್ಟೇಷನ್". 

     ಪುನೀತ್ ಅರಸೀಕೆರೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ, ಎರಡು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಟೀಸರ್  ಬಿಡುಗಡೆ ಕಾರ್ಯಕ್ರಮ ಚಲನಚಿತ್ರ ಕಲಾವಿದರ ಸಂಘದ ಆವರಣದಲ್ಲಿ  ನಡೆಯಿತು. ಸುಮಾರು 800ಕ್ಕೂ ಹೆಚ್ಚು ಚಿತ್ರಗಳಿಗೆ ಪ್ರಚಾರ ಕಾರ್ಯ ನಿರ್ವಹಿಸಿರುವ  ಕನ್ನಡ ಚಿತ್ರರಂಗದ ಹಿರಿಯ ಪ್ರಚಾರ ಕರ್ತರಾದ ನಾಗೇಂದ್ರ ಅವರು ಅಮರಾವತಿ ಪೊಲೀಸ್ ಸ್ಡೇಷನ್ ಚಿತ್ರದ ಟೀಸರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

   ಇದ್ದಕ್ಕಿದ್ದ ಹಾಗೆ ಕಾಣೆಯಾಗುವ ಊರಿನ ಗೌಡ, ಆತನನ್ನು ಪತ್ತೆಹಚ್ಚಲು ಬಂದ ಪೋಲೀಸ್ ಕೂಡ ಕಾಣೆಯಾಗುತ್ತಾನೆ.  ಇದೆಲ್ಲದರ ಹಿಂದೆ ಇರುವ ಮರ್ಮ ಏನೆಂಬುದನ್ನು ಹೇಳುವ ಚಿತ್ರವೇ  ಅಮರಾವತಿ ಪೊಲೀಸ್ ಸ್ಟೇಷನ್. ಒಂದಷ್ಟು ನಾಗಾಸಾಧುಗಳ‌ ಕಂಟೆಂಟ್ ಕೂಡ ಚಿತ್ರದಲ್ಲಿದೆ ಅದು ಹೇಗೆ, ಏಕೆ ಅಂತ ಚಿತ್ರ ನೋಡಿಯೇ ತಿಳಿದುಕೊಳ್ಳಬೇಕಿದೆ.

  ಯುವನಟ ಧರ್ಮ ಕೀರ್ತಿರಾಜ್  ಈ ಚಿತ್ರದಲ್ಲಿ ಪೊಲೀಸ್ ಇನ್ ಸ್ಪೆಕ್ಟರ್ ಆಗಿ  ನಟಿಸಿದ್ದು, ಗುರುರಾಜ್ ಜಗ್ಗೇಶ್ ಮತ್ತೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.  ವೇದ್ವಿಕ  ಚಿತ್ರದ ನಾಯಕಿಯ ಪಾತ್ರ ಮಾಡಿದ್ದಾರೆ.

 ನಾಯಕ ಧರ್ಮ‌ ಕೀರ್ತಿರಾಜ್ ಮಾತನಾಡುತ್ತ ಈ ಚಿತ್ರದಲ್ಲಿ ನಾನು ಮಫ್ತಿಯಲ್ಲಿರುವ ಪೊಲೀಸ್ ಫಾತ್ರ ಮಾಡಿದ್ದೇನೆ.  ಸಿನಿಮಾದಲ್ಲಿ ಆಕ್ಷನ್ ತುಂಬಾ ವಿಶೇಷವಾಗಿದೆ. ನಿರ್ದೇಶಕ ಪುನೀತ್ ಅವರು ಮಾಡಿಕೊಂಡಿದ್ದ ಕಥೆ ತುಂಬಾ ಚೆನ್ನಾಗಿದೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ  ಮಾತನಾಡಿದ ನಿರ್ದೇಶಕ ಪುನೀತ್ ಈಗಾಗಲೇ ೩೬ ದಿನಗಳ ಕಾಲ ನಮ್ಮ ಚಿತ್ರದ ಶೇ.೯೦ ಭಾಗದ ಚಿತ್ರೀಕರಣ ನಡೆಸಲಾಗಿದೆ. ಕ್ಲೈಮ್ಯಾಕ್ಸ್ ಹಾಗೂ ಹಾಡೊಂದರ ಶೂಟಿಂಗ್ ಮಾತ್ರವೇ ಬಾಕಿಯಿದೆ. ಅದನ್ನು ಗೋವಾ ಹಾಗೂ ಹಿಙದೂಪುರದಲ್ಲಿ ಚಿತ್ರೀಕರಿಸುವ ಪ್ಲಾನಿದೆ. ಅಲ್ಲದೆ ಮಾರ್ಚ್ ೧೭ರಂದು  ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ದಿನ  ನಮ್ಮ ಚಿತ್ರದ ಲವ್ ಟ್ರ್ಯಾಕೊಂದನ್ನು ಬಿಡುಗಡೆ ಮಾಡುತ್ತಿದ್ದೇವೆ. ಮಾರ್ಚ್ ಎಂಡ್ ಅಥವಾ ಏಪ್ರಿಲ್ ವೇಳೆಗೆ ಸಿನಿಮಾ ರಿಲೀಸ್ ಮಾಡೋ ಯೋಚನೆಯಿದೆ ಎಂದು ಹೇಳಿದರು.

ಪುನೀತ್ ಅರಸೀಕೆರೆ ಅವರ ನಿರ್ದೇಶನದ ಎರಡನೇ ಚಿತ್ರ ಇದಾಗಿದ್ದು, ಪಿ. ಪಿ. ಪವರ್ ಪಿಕ್ಚರ್ಸ್  ಲಾಛನದಲ್ಲಿ  ಕೆ.ಆರ್.ಪ್ರದೀಪ್ ಕಮಲಪುರ ಅವರು ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಿಸಿದ್ದಾರೆ. ಶ್ರೀಮತಿ ಗೀತಾ ಅಂಜನರೆಡ್ಡಿ ಅವರು ಸಹ ನಿರ್ಮಾಪಕಿಯಾಗಿದ್ದಾರೆ,

   ಹಿರಿಯನಟಿ ಭವ್ಯ, ಧರ್ಮ, ಸಾಧು ಕೋಕಿಲ, ಕಾಕ್ರೋಚ್ ಸುಧಿ  ನಾಗೇಂದ್ರ ಪ್ರಸಾದ್, ಧರ್ಮಣ್ಣ ಕಡೂರು ಮುಂತಾದವರು ಚಿತ್ರದ  ಉಳಿದ ತಾರಾಗಣದಲ್ಲಿದ್ದಾರೆ. ಚಿತ್ರದಲ್ಲಿ ೪ ಹಾಡುಗಳಿದ್ದು, ರೋಣದ ಬಕ್ಕೇಶ್ ಅವರ ಸಂಗೀತ ಸಂಯೋಜನೆಯಿದೆ. ಗೌತಮ್ ಮಟ್ಟಿ ಅವರ ಛಾಯಾಗ್ರಹಣ, ಡಿಫರೆಂಟ್ ಡ್ಯಾನಿ, ಅಲ್ಟಿಮೇಟ್ ಶಿವು ಅವರ ಸಾಹಸ ನಿರ್ದೇಶನ, ವೆಂಕಿ ಯುವಿಡಿ ಅವರ ಸಂಕಲನ, ಆರ್ಯ ಶಿವು ಕರಗುಂದ ಅವರ ಸಂಭಾಷಣೆ ಅಮರಾವತಿ ಪೊಲೀಸ್ ಸ್ಟೇಷನ್

ಚಿತ್ರಕ್ಕಿದೆ.

 

Copyright@2018 Chitralahari | All Rights Reserved. Photo Journalist K.S. Mokshendra,