Bad.Film News

Thursday, March 20, 2025

43

*ಅದ್ದೂರಿಯಾಗಿ ಅನಾವರಣವಾಯಿತು ನಕುಲ್ ಗೌಡ - ಮಾನ್ವಿತ ಹರೀಶ್ ಅಭಿನಯದ  "BAD" ಚಿತ್ರದ ಟೀಸರ್* .

 

 *ಪಿ.ಸಿ.ಶೇಖರ್ ನಿರ್ದೇಶನದ ಈ ಚಿತ್ರ ಮಾರ್ಚ್ 28 ರಂದು ಬಿಡುಗಡೆ* .

 

ಎಸ್ ಆರ್ ವೆಂಕಟೇಶ್ ಗೌಡ ನಿರ್ಮಾಣದ, ಪಿ.ಸಿ.ಶೇಖರ್ ನಿರ್ದೇಶನದ ಹಾಗೂ "ಪ್ರೀತಿಯ ರಾಯಭಾರಿ" ಖ್ಯಾತಿಯ ನಕುಲ್ ಗೌಡ ನಾಯಕನಾಗಿ ನಟಿಸಿರುವ "BAD"  ಚಿತ್ರದ ಟೀಸರ್ ಇತ್ತೀಚೆಗೆ ಲುಲು ಮಾಲ್ ನಲ್ಲಿ ಅದ್ದೂರಿಯಾಗಿ ಅನಾವರಣವಾಯಿತು. ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ರಾಜಕೀಯ ಮುಖಂಡರಾದ ಬಿ.ಕೆ.ಶಿವರಾಮ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟೀಸರ್ ಸಾಕಷ್ಟು ಕುತೂಹಲ ಮೂಡಿಸಿದ್ದು, ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ. ಟೀಸರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

 

ಇದು ನನ್ನ ನಿರ್ದೇಶನದ ಹನ್ನೊಂದನೇ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಪಿ.ಸಿ.ಶೇಖರ್, ಇದೊಂದು ವಿಭಿನ್ನ ಚಿತ್ರಕಥೆಯುಳ್ಳ ಚಿತ್ರ. ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳು ಈ ಚಿತ್ರದಲ್ಲಿದೆ. ಅರ್ಜುನ್ ಜನ್ಯ ಅವರು ಸಂಗೀತ ನೀಡಿರುವ ಹಾಡುಗಳು ಈಗಾಗಲೇ ಎಲ್ಲರ ಮನ ಗೆದ್ದಿದೆ. ಇಂದು ಟೀಸರ್ ಬಿಡುಗಡೆಯಾಗಿದೆ. ಚಿತ್ರ ಇದೇ ತಿಂಗಳ  28 ರಂದು ತೆರೆಗೆ ಬರಲಿದೆ. ಕಲಾವಿದರು ಹಾಗೂ ತಂತ್ರಜ್ಞರ ಸಹಕಾರದಿಂದ ಚಿತ್ರ ಉತ್ತಮವಾಗಿ ಬಂದಿದೆ. ಯಾವುದೇ ಕೊರತೆಯಿಲ್ಲದೆ ಹಾಗೆ ನಿರ್ಮಾಪಕರು ಚಿತ್ರ ನಿರ್ಮಾಣ ಮಾಡಿದ್ದಾರೆ ಎಂದರು ನಿರ್ದೇಶಕ ಪಿ.ಸಿ.ಶೇಖರ್.  

ನನ್ನ ಹಿಂದಿನ "ಪ್ರೀತಿಯ ರಾಯಭಾರಿ" ಚಿತ್ರದಿಂದಲೂ ತಾವು ನೀಡುತ್ತಿರುವ ಪ್ರೋತ್ಸಾಹಕ್ಕೆ ಧನ್ಯವಾದ. ಪಿ.ಸಿ.ಶೇಖರ್ ಅವರ ನಿರ್ದೇಶನದಲ್ಲಿ ಈ ಚಿತ್ರ ಚೆನ್ನಾಗಿ ಬಂದಿದೆ. ಪ್ರೇಕ್ಷಕರು ಕೊಟ್ಟ ದುಡ್ಡಿಗೆ ಮೋಸ ಆಗದಂತಹ ಚಿತ್ರವಿದು‌. ನನ್ನ ಪಾತ್ರ ಕೂಡ ವಿಭಿನ್ನವಾಗಿದೆ. ದಯವಿಟ್ಟು ಎಲ್ಲರೂ ನಮ್ಮ ಚಿತ್ರವನ್ನು ಚಿತ್ರಮಂದಿರಗಳಲ್ಲೇ ನೋಡಿ ಎಂದು ನಾಯಕ ನಕುಲ್ ಗೌಡ ಹೇಳಿದರು.

 

ಪಿ.ಸಿ.ಶೇಖರ್ ಅವರ ನಿರ್ದೇಶನದ ಹಿಂದಿನ ಚಿತ್ರಗಳು ಚೆನ್ನಾಗಿತ್ತು. ಅವರ ನಿರ್ದೇಶನದ ನಮ್ಮ "BAD" ಚಿತ್ರ ಸಹ ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ ಎಂದರು ನಿರ್ಮಾಪಕ ಎಸ್ ಆರ್ ವೆಂಕಟೇಶ್ ಗೌಡ.  

 

ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರುಪಾತ್ರಗಳಲ್ಲಿ ನಾನು ಒಂದು ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದು ನಟಿ ಅಪೂರ್ವ ಭಾರದ್ವಾಜ್ ತಿಳಿಸಿದರು.  

 

ಚಿತ್ರದಲ್ಲಿ ನಟಿಸಿರುವ ಅಶ್ವಿನಿ, ಪದ್ಮ ಶಿವಮೊಗ್ಗ, ಮಂಜುನಾಥ್ ಮುಂತಾದವರು ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು.

 

Copyright@2018 Chitralahari | All Rights Reserved. Photo Journalist K.S. Mokshendra,