*ತಮ್ಮ ಹುಟ್ಟುಹಬ್ಬದ ದಿನ "UI" ಚಿತ್ರದ ಬಗ್ಗೆ ಮಾಹಿತಿ ನೀಡಿದ ರಿಯಲ್ ಸ್ಟಾರ್.* *ಉಪೇಂದ್ರ ನಟಿಸಿ, ನಿರ್ದೇಶಿಸಿರುವ ಬಹು ನಿರೀಕ್ಷಿತ ಈ ಚಿತ್ರ ಅಕ್ಟೋಬರ್ ನಲ್ಲಿ ತೆರೆಗೆ* . ಸೆಪ್ಟೆಂಬರ್ 18 ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬ. ಈ ದಿನದಂದು ಅವರು ನಟಿಸಿ, ನಿರ್ದೇಶಿಸಿರುವ ಬಹು ನಿರೀಕ್ಷಿತ "UI" ಚಿತ್ರದ ಬಗ್ಗೆ ಮಾತನಾಡಿ, ಹೆಚ್ಚಿನ ಮಾಹಿತಿ ನೀಡಿದ್ದಾರೆ. ಹುಟ್ಟುಹಬ್ಬದ ದಿನ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ "UI" ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ನಟ, ನಿರ್ದೇಶಕ ಉಪೇಂದ್ರ, ನಿರ್ಮಾಪಕರಾದ ಜಿ.ಮನೋಹರನ್, ಕೆ.ಪಿ.ಶ್ರೀಕಾಂತ್, ಸಹ ನಿರ್ಮಾಪಕರಾದ ನವೀನ್, ತುಳಸಿರಾಮ ನಾಯ್ಡು(ಲಹರಿ ವೇಲು), ನಾಯಕಿ ರೀಶ್ಮಾ ನಾಣಯ್ಯ, ಸಂಗೀತ ನಿರ್ದೇಶಕ ....
*ಸೆಪ್ಟಂಬರ್ 20ಕ್ಕೆ ಬಿಡುಗಡೆಯಾಗಲಿದೆ ಸಂಜೋತ ಭಂಡಾರಿ ನಿರ್ದೇಶನದ "ಲಂಗೋಟಿ ಮ್ಯಾನ್"* . ತನು ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಸಂಜೋತ ಭಂಡಾರಿ ನಿರ್ದೇಶನದ " ಲಂಗೋಟಿ ಮ್ಯಾನ್" ಚಿತ್ರದ ಟ್ರೇಲರ್ ಬಿಡುಗಡೆ, ಹಾಡಿನ ಪ್ರದರ್ಶನ ಮತ್ತು ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಚಿತ್ರ ಸೆಪ್ಟೆಂಬರ್ 20ರಂದು ಬಿಡುಗಡೆಯಾಗಲಿದೆ. ಈ ವೇಳೆ ಚಿತ್ರತಂಡ "ಲಂಗೋಟಿ ಮ್ಯಾನ್ " ಬಗ್ಗೆ ಮಾಹಿತಿ ಹಂಚಿಕೊಂಡಿತ್ತು. ನಿರ್ದೇಶಕಿ ಸಂಜೋತ ಭಂಡಾರಿ ಮಾತನಾಡಿ, ’ಲಂಗೋಟಿ ಮ್ಯಾನ್’ ಚಿತ್ರ ಅನಗತ್ಯ ಕಾರಣಕ್ಕೆ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಚಿತ್ರ ನೋಡಿದ ಮೇಲೆ ಶೀರ್ಷಿಕೆ ಸೂಕ್ತ ಅಂತ ಗೊತ್ತಾಗಲಿದೆ. ಯಾವ ಸಮಯದಾಯವನ್ನು ಅವಮಾನ ಮಾಡುವ ಮತ್ತು ....
ಹಂಸಲೇಖ ಅವರಿಂದ ‘ಲುಕ್ ಬ್ಯಾಕ್’ ಟ್ರೇಲರ್ ಬಿಡುಗಡೆ ಕಳರಿ ಪಯಟ್ಟು ಕುರಿತಾದ ಚಿತ್ರ ಸೆ. 27ರಂದು ತೆರೆಗೆ ಕೇರಳದಲ್ಲಿ ಹೆಚ್ಚಾಗಿ ಬಳಕೆಯಲ್ಲಿರುವ ಕಳರಿ ಪಯಟ್ಟು ಎಂಬ ಯುದ್ದ ಕಲೆ ಕುರಿತಾದ ಸಿನಿಮಾವೊಂದು ಸಿದ್ಧವಾಗಿದೆ. ಆ ಚಿತ್ರದ ಹೆಸರು ‘ಲುಕ್ ಬ್ಯಾಕ್’. ಮಲಯಾಳಂ, ಕನ್ನಡ, ಹಿಂದಿ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಸಿನಿಮಾ ತಯಾರಾಗಿದ್ದು, ಕನ್ನಡದಲ್ಲಿ ಚಿತ್ರಕ್ಕೆ ‘ನೆನೆ ಮನವೆ’ ಎಂದು ಹೆಸರು ಇಡಲಾಗಿದೆ. ಇದೇ ಸೆಪ್ಟೆಂಬರ್ 27ರಂದು ಕರ್ನಾಟಕ ಮತ್ತು ಕೇರಳದಲ್ಲಿ ರಿಲೀಸ್ ಆಗಲಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಟ್ರೇಲರ್ ಬಿಡುಗಡೆ ಮಾಡಿದ ಹಿರಿಯ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ‘ನಾನು ಇದರಲ್ಲಿ ....
*ನವರಾತ್ರಿ ಮೊದಲ ದಿನವೇ "ಭೈರಾದೇವಿ" ಆಗಮನ* .
*ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಿದ ರಾಧಿಕಾ ಕುಮಾರಸ್ವಾಮಿ* .* .
ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ಕನ್ನಡದ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ನಿರ್ಮಿಸಿರುವ ಹಾಗೂ ನಾಯಕಿಯಾಗೂ ನಟಿಸಿರುವ ಬಹು ನಿರೀಕ್ಷಿತ "ಭೈರಾದೃವಿ" ಚಿತ್ರ ಅಕ್ಟೋಬರ್ 3 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ನಾಡಹಬ್ಬ ನವರಾತ್ರಿಯ ಮೊದಲ ದಿನವೇ ಈ ಚಿತ್ರ ಬಿಡುಗಡೆಯಾಗುತ್ತಿರುವುದು ವಿಶೇಷ.
*ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ಬಹು ನಿರೀಕ್ಷಿತ "45" ಚಿತ್ರದ ವಿಶೇಷ ಪೋಸ್ಟರ್* .
ಕರುನಾಡ ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಬಹು ನಿರೀಕ್ಷಿತ "45" ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ.
*ನೈಸ್ ರೋಡ ಅಲ್ಲ ಈಗ ನೈಟ್ ರೋಡ್* ನೈಸ್ ರೋಡ್ ಎಂದು ಸಿನಿಮಾಕ್ಕೆ ಹೆಸರಿಟ್ಟುಕೊಂಡು ಬಿಡುಗಡೆಗೆ ಸಿದ್ಧವಾಗಿದ್ದಾಗಲೇ ನೈಸ್ ರೋಡ್ ಕಂಪನಿಯವರಿಂದ ಟೈಟಲ್ ಬದಲಾಯಿಸಿ ಎಂದು ನೋಟೀಸ್ ಬಂದಿದ್ದರಿಂದ ಈಗ ನೈಸ್ ರೋಡ್ ಬದಲಾಗಿ ನೈಟ್ ರೋಡ್ ಎಂದು ಚಿತ್ರಕ್ಕೆ ಮರು ನಾಮಕರಣ ಮಾಡಿ ಈಗ ಬಿಡುಗಡೆಗೆ ಸಿದ್ದಮಾಡಿದ್ದಾರೆ.. ಈ ಹಿಂದೆ ನೈಸ್ ರೋಡ್ ಎಂದು ಸಿನಿಮಾ ಬಿಡುಗಡೆಗೆ ಸಿದ್ದವಾಗಿತ್ತು ಈ ಸಂದರ್ಭದಲ್ಲಿ ನೈಸ್ ರೋಡ್ ಕಂಪನಿಯವರು ಸಿನಿಮಾ ಟೈಟಲ್ ಬದಲಿಸುವಂತೆ ನೋಟೀಸ್ ನೀಡಿದ್ದರು, ಸಿನಿಮಾ ತಂಡದವರು ಈ ಸಿನಿಮಾಗೂ ನೈಸ್ ರೋಡ್ ಗು ಯಾವುದೇ ಸಂಬಂಧವಿಲ್ಲ ಎಂದು ಮನವರಿಕೆ ಮಾಡಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ, ಆದ್ದರಿಂದ ಕೊನೆಗೆ ಸಿನಿಮಾ ಟೈಟಲ್ ಬದಲಿಸಲು ....
*ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಅನು ಪ್ರಭಾಕರ್ ಅಭಿನಯದ "ಹಗ್ಗ" ಚಿತ್ರ ಈ ವಾರ ತೆರೆಗೆ* . ಅನು ಪ್ರಭಾಕರ್ ಕನ್ನಡ ಚಿತ್ರರಂಗದಲ್ಲಿ ನಾಯಕಿಯಾಗಿ 25 ವರ್ಷಗಳನ್ನು ಪೂರೈಸಿದ್ದಾರೆ. ಅನು ಪ್ರಭಾಕರ್ ನಾಯಕಿಯಾಗಿ ಅಭಿನಯಿಸಿದ ಮೊದಲ ಚಿತ್ರ ‘ಹೃದಯ ಹೃದಯ’, 1999ರ ಸೆಪ್ಟೆಂಬರ್ 15ರಂದು ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಆ ಚಿತ್ರದ ಮೂಲಕ ವೃತ್ತಿ ಜೀವನ ಪ್ರಾರಂಭಿಸಿದ ಅವರು, ಈ 25 ವರ್ಷಗಳಲ್ಲಿ 80ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅಂದಹಾಗೆ, ಅನು ಪ್ರಭಾಕರ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ಹಗ್ಗ’ ಚಿತ್ರವು ಸೆಪ್ಟೆಂಬರ್ 20ರಂದು ಬಿಡುಗಡೆಯಾಗುತ್ತಿದೆ. ಅನು ಅಭಿನಯದ ಮೊದಲ ಚಿತ್ರ ಬಿಡುಗಡೆಯಾದ ದಿನವೇ ‘ಹಗ್ಗ’ ಚಿತ್ರದ ....
"ನಾ ನಿನ್ನ ಬಿಡಲಾರೆ" ಚಿತ್ರದ ಟೀಸರ್ ಬಿಡುಗಡೆ ಮಾಡಿದ ನಟ ಶರಣ್. ಬೆಳ್ಳಿ ಪರದೆಗೆ ಮತ್ತೊಂದು ಹೊಸ ತಂಡ ಒಂದು ವಿಭಿನ್ನ ಪ್ರಯತ್ನದ ಚಿತ್ರದ ಮೂಲಕ ಚಿತ್ರ ಪ್ರೇಮಿಗಳನ್ನು ಸೆಳೆಯಲು ಮುಂದಾಗಿದೆ. ಗುಲ್ಬರ್ಗ ಮೂಲದ ಯುವ ಪ್ರತಿಭೆ ಅಂಬಾಲಿ ಭಾರತಿ ನಾಯಕಿಯಾಗಿ ನಟಿಸುವ ಮೂಲಕ ಅವರ ತಾಯಿ ಶ್ರೀಮತಿ ಭಾರತಿ ಬಾಳಿ ನಿರ್ಮಾಣದಲ್ಲಿ ಮೂಡಿ ಬರುತ್ತಿರುವಂತಹ ಚಿತ್ರ "ನಾ ನಿನ್ನ ಬಿಡಲಾರೆ". ಇತ್ತೀಚೆಗೆ ಈ ಚಿತ್ರದ ಟೀಸರ್ ಅನ್ನು ನಟ ಶರಣ್ ಬಿಡುಗಡೆ ಮಾಡಿ ಹೊಸ ತಂಡಕ್ಕೆ ಸಾಥ್ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಶರಣ್ ಈ ಚಿತ್ರದ ನಟಿ , ನಿರ್ಮಾಪಕಿ ಭಾರತಿ ರವರ ಶ್ರಮಕ್ಕೆ ತಕ್ಕ ಚಿತ್ರ ಇದಾಗಿದೆ. ಬಹಳ ಸೌಮ್ಯ ಸ್ವಭಾವವಿದ್ದರೂ ಆಸಕ್ತಿ , ಗುರಿ, ಶ್ರಮ ....
ರಮ್ಮಿ ಆಟ ಹಾಡು -ಟ್ರೈಲರ್ ಬಿಡುಗಡೆ ವಿದ್ಯಾಸಂಸ್ಥೆಯನ್ನು ನಡೆಸುತ್ತಿರುವ ಉಮರ್ ಷರೀಫ್ ಅವರೀಗ ಚಿತ್ರರಂಗಕ್ಕೆ ಬಂದಿದ್ದಾರೆ. ಆನ್ ಲೈನ್ ಗೇಮ್ ಈಗಿನ ಯುವ ಜನತೆಯನ್ನು ಹೇಗೆ ಹಾಳು ಮಾಡುತ್ತಿದೆ. ಅದರಿಂದ ಏನೆಲ್ಲ ಅನಾಹುತಗಳಾಗುತ್ತಿವೆ ಎಂಬ ಕಾನ್ಸೆಪ್ಟ್ ಇಟ್ಟುಕೊಂಡು "ರಮ್ಮಿ ಆಟ" ಎಂಬ ಚಿತ್ರವನ್ನು ನಿರ್ಮಿಸಿದ್ದಾರೆ. ಅಲ್ಲದೆ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ರಮ್ಮಿ ಗೇಮ್ ನಂಥ ಆಟಗಳ ಚಟಕ್ಕೆ ಕೆಲವರು ತಮ್ಮ ಮನೆ ಮಠ ಕಳೆದುಕೊಂಡು ಜೀವನವನ್ನೇ ಸರ್ವನಾಶ ಮಾಡಿಕೊಂಡಿದ್ದಾರೆ. ಹಣದಾಸೆಗೆ ಬಿದ್ದು ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಆನ್ ಲೈನ್ ರಮ್ಮಿ ಆಡುವುದರಿಂದ ಏನೇನು ತೊಂದರೆಗಳಾಗುತ್ತವೆ, ಜನ ....
ಪ್ರವರದೊಂದಿಗೆ ಪ್ರಾರಂಭವಾದ " ಗ್ಯಾಂಗ್ಸ್ ಆಫ್ ಯುಕೆ " ಡೆಡ್ಲಿ ಸೋಮ, ಮಾದೇಶ, ದಶಮುಖ ಹೀಗೆ ಬಹುತೇಕ ಸ್ಟಾರ್ ಚಿತ್ರಗಳನ್ನೇ ನಿರ್ದೇಶಿಸಿದ ರವಿ ಶ್ರೀವತ್ಸ ಅವರೀಗ ತಮ್ಮದೇ ಆದ ಹೊಸ ನಿರ್ಮಾಣ ಸಂಸ್ಥೆಯೊದನ್ನು ಸ್ಥಾಪಿಸಿದ್ದು, ಆ ಮೂಲಕ ನಿರ್ಮಾಣವಾಗುತ್ತಿರುವ ’ಗ್ಯಾಂಗ್ಸ್ ಆಫ್ ಯುಕೆ’ ಚಿತ್ರದಲ್ಲಿ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ. ಇತ್ತೀಚೆಗೆ ರವಿ ಶ್ರೀವತ್ಸ ಅವರ ’ಡೆಡ್ಲಿ ಆರ್ಟ್ಸ್’ ಸಂಸ್ಥೆಯ ಲಾಂಛನ ಬಿಡುಗಡೆ ಹಾಗೂ ಗ್ಯಾಂಗ್ಸ್ ಆಫ್ ಯುಕೆ ಚಿತ್ರದ ಪತ್ರಿಕಾಗೋಷ್ಠಿ ನಡೆಯಿತು. ನಿರ್ದೇಶಕ ಕೆವಿ.ರಾಜು ಅವರ ಧರ್ಮಪತ್ನಿ ನೂತನ ನಿರ್ಮಾಣ ಸಂಸ್ಥೆಯ ಲಾಂಛನಕ್ಕೆ ಚಾಲನೆ ನೀಡಿದರು. ಕನ್ನಡದ ....
ಗಗನ ಕುಸುಮ ಹಾಡುಗಳ ಬಿಡುಗಡೆ
’ಗಗನ ಕುಸುಮ’ ಹಾಡುಗಳ ಬಿಡುಗಡೆ ಕಾರ್ಯಕ್ರಮ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಬಿಡುಗಡೆಗೊಂಡಿತು. ಹಿರಿಯ ನಿರ್ಮಾಪಕ ಮತ್ತು ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಎಸ್.ಎ.ಚಿನ್ನೆಗೌಡ ಕಾರ್ಯಕ್ರಮಕ್ಕೆ ಚಾಲನ ನೀಡಿದರು. ನಂತರ ಮಾತನಾಡುತ್ತಾ ನಿರ್ಮಾಪಕ ಹುಟ್ಟಿಕೊಂಡರೆ ನೂರಾರು ಜನರಿಗೆ ಕೆಲಸ ಸಿಗುತ್ತದೆ. ಮೊದಲು ಅವರು ಉಳಿಯಬೇಕು. ಟೈಟಲ್ ಚೆನ್ನಾಗಿದೆ. ಸಿನಿಮಾವು ಯಶಸ್ಸು ಗಳಿಸಲಿ ಅಂತ ಶುಭ ಹಾರೈಸಿದರು.
ಜಾಂಟಿ ಸನ್ ಆಫ್ ಜಯರಾಜ್ ಟೀಸರ್ ಬಿಡುಗಡೆ ’ಜಾಂಟಿ ಸನ್ ಆಫ್ ಜಯರಾಜ್’ ಚಿತ್ರದ ಪಾತ್ರಗಳ ಪರಿಚಯದ ಟೀಸರ್ ಹಾಗೂ ಟ್ರೈಲರ್ ಬಿಡುಗಡೆ ಸಮಾರಂಭವು ನಡೆಯಿತು. ನಟಿ ವಿನೋಧ್ ಪ್ರಭಾಕರ್ ಮತ್ತು ಶ್ರೀನಗರ ಕಿಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು. ಚಿತ್ರರಂಗದಲ್ಲಿ ಎರಡು ದಶಕಗಳ ಕಾಲ ಪ್ರಚಾರ ಕಾರ್ಯದಲ್ಲಿ ಅನುಭವ ಹೊಂದಿರುವ ಸುಗೂರುಕುಮಾರ್ ಪ್ರಥಮ ಅನುಭವ ಎನ್ನುವಂತೆ ನಿರ್ಮಾಣ ಮಾಡಿದ್ದಾರೆ. ಕತೆ ಬರೆದು ನಿರ್ದೇಶನ ಮಾಡಿರುವ ಆನಂದರಾಜ್ ಮಾತನಾಡಿ ಜಯರಾಜ್ ನಂತರದ ದಿನಗಳ ಸಂದರ್ಭದಲ್ಲಿ ಹಣಕಾಸು ವ್ಯವಹಾರ, ಮಾರ್ಕೆಟ್ ದಂಧೆ ಎಲ್ಲವು ರಾರಾಜಿಸುತ್ತಿತ್ತು. ಇಂತಹ ವಿಷಯಗಳನ್ನು ಕೇಳಿದ್ದು, ನೋಡಿದ್ದು, ....
ಬಾಬಾನ ಸನ್ನಿಧಿಯಲ್ಲಿ ತಾಯಿನೇ ದೇವರ? ಮುಹೂರ್ತ ಪ್ರಪಂಚದಲ್ಲಿ ತಾಯಿಯನ್ನು ದೇವರಿಗೆ ಹೋಲಿಸುತ್ತಾರೆ. ಅಂತಹುದೇ ಅಂಶಗಳನ್ನು ಹೆಕ್ಕಿಕೊಂಡು ’ತಾಯಿನೇ ದೇವರ?’ ಚಿತ್ರವೊಂದು ಸೆಟ್ಟೇರಿದೆ. ಶುಭ ಗುರುವಾರದಂದು ಮಾಗಡಿ ರಸ್ತೆ ಲಕ್ಷೀಪುರದಲ್ಲಿರುವ ’ದಕ್ಷಿಣ ಶಿರಡಿ ಶ್ರೀ ಸಾಯಿ ಮಂದಿರ’ದಲ್ಲಿ ಅದ್ದೂರಿಯಾಗಿ ಮುಹೂರ್ತ ಸಮಾರಂಭ ನಡೆಯಿತು. ಪೂಜೆ ನಂತರ ತಂಡವು ಮಾಹಿತಿಗಳನ್ನು ಹಂಚಿಕೊಂಡಿತು. ಡಾ.ಸಾಯಿ ಸತೀಶ್ ತೋಟಯ್ಯ ಮಾತನಾಡಿ, ಸಿನಿಮಾರಂಗದಲ್ಲಿ ಹದಿನಾರು ವರ್ಷ ಅನುಭವ ಹೊಂದಿದ್ದೇನೆ. ಸಿನಿಮಾಕ್ಕೆ ರಚನೆ,ಚಿತ್ರಕಥೆ ಬರೆದು ಶ್ರೀ ಸಾಯಿಶಕ್ತಿ ಸಿನಿ ಕಂಬೈನ್ಸ್ ಹೆಸರಿನಲ್ಲಿ ನಿರ್ಮಾಣ ಮಾಡುತ್ತಿದ್ದೇನೆ. ....
*ಚಿತ್ರೀಕರಣ ಮುಗಿಸಿದ ನಿಮ್ದೆ ಕಥೆ* ಕನ್ನಡ ಚಿತ್ರರಂಗದಲ್ಲಿ ಹೊಸಬರ ಸಿನಿಮಾದ ಪಟ್ಟಿಯಲ್ಲಿ ಈಗ ನಿಮ್ದೆ ಕಥೆ ಎನ್ನುವ ಚಿತ್ರವು ಸೇರಿದೆ, Love Moktail ಖ್ಯಾತಿಯ ಅಭಿಲಾಷ ಧಳಪತಿ ಮತ್ತು ರಾಷಿಕಾ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿ ನಟಿಸಿ ಜೊತೆಗೆ ಸಿಹಿ ಕಹಿ ಚಂದ್ರು, ಕಾಮಿಡಿ ಕಿಲಾಡಿಯ ಕೋಳಿ ಕಳ್ಳ ಮನೋಹರ್ ಗೌಡ, ಕೆ ವಿ ಮಂಜಯ್ಯ, ಜ್ಯೋತಿ ಮರೂರ್ ಹಾಗೂ ಮುಂತಾದವರು ಈ ಚಿತ್ರದಲ್ಲಿ ನಟಿಸಿದಾರೆ. ಶ್ರೀನಿವಾಸ ರೆಡ್ಡಿ ಮತ್ತು ಅರವಿಂದ್ ಯು ಎಸ್ ಜಂಟಿಯಾಗಿ ನಿಮ್ದೆ ಕಥೆ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ, ಸಿ ಎಸ್ ರಾಘವೇಂದ್ರ ಅವರು ನಿಮ್ದೆ ಕಥೆ ಚಿತ್ರದ ನಿರ್ದೇಶಕರು, ಪ್ರವೀಣ್ ನಿಕೇತನ್ ಅವರ ಸಂಗೀತ ಸಂಯೋಜನೆ, ಪ್ರಶಾಂತ್ ಸಾಗರ್ ಅವರ ಛಾಯಾಗ್ರಹಣವಿದ್ದು, ಸುನಿಲ್ ಎಸ್ ....
"ಮಾಂತ್ರಿಕ"ನ ಟೀಸರ್ ಆತ್ಮಗಳನ್ನು ಹುಡುಕಾಟದ ಸುತ್ತ... ಜಗತ್ತಿನಲ್ಲಿ ದೆವ್ವ, ಭೂತಗಳು ಇದೆಯೋ ಇಲ್ಲವೊ ಗೊತ್ತಿಲ್ಲ. ಆದರೆ ಅವುಗಳ ಸತ್ಯಾಸತ್ಯತೆಯ ಹುಡುಕಾಟ ಮಾತ್ರ ನಡೆದೇ ಇದೆ. ಅಂಥದೇ ಒಂದು ಹುಡುಕಾಟದ ಪ್ರಯತ್ನದಲ್ಲಿ ಹೊರಬಂದ ಚಿತ್ರವೇ ಮಾಂತ್ರಿಕ. ಐಟಿ ಹಿನ್ನೆಲೆಯಿಂದ ಬಂದ ವ್ಯಾನವರ್ಣ ಜಮ್ಮುಲ ಅವರು ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಜೊತೆಗೆ ಪ್ರಮುಖ ಪಾತ್ರದಲ್ಲೂ ಸಹ ಕಾಣಿಸಿಕೊಂಡಿದ್ದಾರೆ, ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಘೋಸ್ಟ್ ಹಂಟರ್(ಆತ್ಮಗಳನ್ನು ಪತ್ತೆಹಚ್ಚುವವ) ಸುತ್ತ ನಡೆಯುವ ಇಂಟಲೆಕ್ಚುಯಲ್, ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಈ ....
ಟ್ರೈಲರ್ ನಲ್ಲಿ "ರಣಾಕ್ಷ"ನ ಝಲಕ್! ದೇವರು- ದೆವ್ವದ ನಡುವಿನ ಸಂಘರ್ಷದ ಕಥೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೀರುಂಡೆ ರಘು ನಾಯಕನಾಗಿ ನಟಿಸಿರುವ, ದೇವರು, ದೆವ್ವದ ನಡುವಿನ ಸಂಘರ್ಷದ ಸುತ್ತ ನಡೆಯೋ ಸಸ್ಪೆನ್ಸ್ , ಥ್ರಿಲ್ಲರ್ ಜಾನರ್ ಚಿತ್ರ "ರಣಾಕ್ಷ". ಕೆ.ರಾಘವ ಅವರ ನಿರ್ದೇಶನವಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಈ ಸಂದರ್ಭದಲ್ಲಿ ನಿರ್ಮಾಪಕ ರಾಮು ಮಾತನಾಡುತ್ತಾ 6ರಿಂದ 80 ವರ್ಷದವರೂ ಕೂತು ನೋಡುವಂಥ, ಹಳ್ಳಿ ಸೊಗಡಿನ ಕೌಟುಂಬಿಕ ಕಥಾನಕ ಇರೋ ಚಿತ್ರವಿದು. ಸಿನಿಮಾ ನೋಡಿ ನೀವೆಲ್ಲ ಗೆಲ್ಲಿಸಿದರೆ, ವರ್ಷಕ್ಕೆ ಒಂದೆರಡು ಸಿನಿಮಾ ಮಾಡುವ ಆಸೆಯಿದೆ. ಕುಚುಕು ಸ್ನೇಹಿತ ಉಮಾಮಹೇಶ್ವರ ....
ಬ್ಯಾಡ್ ಕಾಮೆಂಟ್ ಮಾಡೋರ "ಅಸಲಿ ಬಣ್ಣ" ಕಳಚಿದ ಇಶಾನಿ ಹಿಪಾಪ್ ಸಾಂಗ್ ಮೂಲಕ ಟಾಂಗ್ ಕೊಟ್ಟ ಇಶಾನಿ ಬಿಗ್ ಬಾಸ್ ಖ್ಯಾತಿಯ ಇಶಾನಿ ಅಭಿನಯದ ಅಸಲಿ ಬಣ್ಣ ಆಲ್ಬಂ ಸಾಂಗ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕನ್ನಡದಲ್ಲಿ ಮಹಿಳೆಯರ ಹಿಪಾಪ್ ಸಾಂಗ್ ಎಂದರೆ ನೆನಪಿಗೆ ಬರೋದು ಇಶಾನಿ. ಸೋಷಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಆಗಿರುವ ಇವರ ಪೋಸ್ಟ್ ಗಳಿಗೆ ಕೆಲವರು ಕೆಟ್ಟದಾಗಿ ಕಮೆಂಟ್ ಮಾಡುತ್ತಾರೆ. ಯುವತಿಯರು ಮಾಡ್ರನ್ ಡ್ರೆಸ್ ಹಾಕೋದು, ಬೋಲ್ಡ್ ಆಗಿರುವುದು ತಪ್ಪೇ, ನನ್ನ ಇಷ್ಟದಂತೆ ನಾನಿರೋದನ್ನು ಯಾಕೆ ಸಹಿಸಲ್ಲ ಎನ್ನುವುದು ಇವರ ಪ್ರಶ್ನೆ. ಅಂಥವರಿಗೆ ಅಸಲಿ ಬಣ್ಣ ಎಂಬ ಈ ಹಿಪಪ್ ಸಾಂಗ್ ಮೂಲಕ ಇಶಾನಿ ತಿರುಗೇಟು ಕೊಟ್ಟಿದ್ದಾರೆ. ....
“ವೈಬೋಗ” ಟೈಟಲ್ ಲಾಂಚ್ ಯು ಟರ್ನ್-2 ಚಂದ್ರು ಓಬಯ್ಯ ಹೊಸ ಚಿತ್ರ ಯೂ ಟರ್ನ್-2, ರಾಮು ಅಂಡ್ ರಾಮು ಹಾಗೂ ಕರಿಮಣಿ ಮಾಲೀಕ ಚಿತ್ರಗಳ ನಂತರ ನಿರ್ದೇಶಕ ಚಂದ್ರು ಓಬಯ್ಯ ಇದೀಗ ನಾಲ್ಕನೇ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಅದುವೇ “ವೈಭೋಗ”. ಚಿತ್ರದ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ’ಯೌವ್ವನದಲ್ಲಿ ಹುಟ್ಟೋ ಪ್ರೀತಿಗೋಸ್ಕರ ಹೆತ್ತವರನ್ನು ಮರೀಬೇಡ’ ಎಂಬ ಟ್ಯಾಗ್ ಲೈನ್ ಹೊಂದಿರುವ ಈ ಚಿತ್ರವನ್ನು ಡಾ.ಚೇತನ್ ನಿಂಗೇಗೌಡ ಅವರು ನಿರ್ಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಚಂದ್ರು ಓಬಯ್ಯ, ವೈಭೋಗ, ಒಂದು ಕಮರ್ಷಿಯಲ್ ಸಿನಿಮಾ, ಯೌವ್ವನಲ್ಲಿ ಹುಟ್ಟುವ ಪ್ರೀತಿಗೋಸ್ಕರ ಹೆತ್ತವರ ಮರಿಬೇಡ, ....
ತಾರಕೇಶ್ವರ ಹಾಡುಗಳ ಬಿಡುಗಡೆ ಭಕ್ತಿ ಪ್ರಧಾನ ’ತಾರಕೇಶ್ವರ’ ಚಿತ್ರದ ಸಮಾರಂಭವು ಎಸ್ಆರ್ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಸಂಸ್ಥೆಯ ನಾಮಫಲಕವನ್ನು ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಇದರ ಬೆನ್ನಲ್ಲೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ.ಸುರೇಶ್ ಶೀರ್ಷಿಕೆ ಅನಾವರಣಗೊಳಿಸಿದರೆ, ಸಿರಿ ಮ್ಯೂಸಿಕ್ ಸಂಸ್ಥೆಯು ಹೊರತಂದಿರುವ ಹಾಡುಗಳ ಪೈಕಿ, ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಟೈಟಲ್ ಸಾಂಗ್ಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ಟೆಲಿವಿಷನ್ ಸಂಘದ ಅಧ್ಯಕ್ಷ ರವಿ.ಆರ್.ಗರಣಿ, ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್ಕೆ ವಿಶ್ವನಾಥ್ ....
*ಟೈಟಲ್ ಸಾಂಗ್ ನಲ್ಲೇ ಮೋಡಿ ಮಾಡಿದ ‘ರಾನಿ* ’* . *ಕಿರಣ್ ರಾಜ್ ಅಭಿನಯದ ಈ ಚಿತ್ರ ಸೆಪ್ಟೆಂಬರ್ 12 ರಂದು ತೆರೆಗೆ* . ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ತಮ್ಮದೇ ಆದ ಛಾಪು ಮೂಡಿಸಿರುವ ಕಿರಣ್ ರಾಜ್ ನಾಯಕನಾಗಿ ನಟಿಸಿರುವ "ರಾನಿ" ಚಿತ್ರದ ಟೈಟಲ್ ಸಾಂಗ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ಚಿತ್ರಲೇಖಕ ಜೆ.ಕೆ.ಭಾರವಿ ಪ್ರಮೋದ್ ಮರವಂತೆ ಬರೆದು, ಸಚಿನ್ ಬಸ್ರೂರ್ ಸಂಗೀತ ನೀಡಿರುವ "ರಾನಿ" ಚಿತ್ರದ ಟೈಟಲ್ ಸಾಂಗ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಗುರುತೇಜ್ ಶೆಟ್ಟಿ ನಿರ್ದೇಶನದ ಹಾಗೂ ಸ್ಟಾರ್ ಕ್ರಿಯೇಷನ್ಸ್ ನಿರ್ಮಾಣದ ಈ ಚಿತ್ರ ಸೆಪ್ಟೆಂಬರ್ 12 ಗುರುವಾರ ಬಿಡುಗಡೆಯಾಗಲಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ....