*ಬೆಂಗಳೂರು ಫಿಲಂ ಸಿಟಿಯಲ್ಲಿ "ವರ್ಣವೇದಂ" ಹಾಡು* .
*ಇದು "ನಾನು ಮತ್ತು ಗುಂಡ" ಚಿತ್ರದ ನಿರ್ದೇಶಕರ ಹೊಸಚಿತ್ರ* .
"ನಾನು ಮತ್ತು ಗುಂಡ" ಚಿತ್ರದ ಖ್ಯಾತಿಯ ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ ನೂತನ ಚಿತ್ರ "ವರ್ಣವೇದಂ". ಇತ್ತೀಚಿಗೆ ಈ ಚಿತ್ರದ
ಶೀರ್ಷಿಕೆ ಗೀತೆಯ ಚಿತ್ರೀಕರಣ ಕನಕಪುರ ರಸ್ತೆಯಲ್ಲಿ ಮಹಮ್ಮದ್ ಗೌಸ್ ಅವರು ನಿರ್ಮಿಸಿರುವ ಬೆಂಗಳೂರು ಫಿಲಂ ಸಿಟಿ ಎಂಬ ನೂತನ ಸ್ಟುಡಿಯೋದಲ್ಲಿ ನಡೆಯಿತು. ಹಾಡು ಹಾಗೂ ಚಿತ್ರದ ಕುರಿತು ಚಿತ್ರತಂಡದವರು ಮಾತನಾಡಿದರು.
ಕಣ್ಣಾ ಮುಚ್ಚೆ ಕಾಡೇ ಗೂಡೇ ಟೀಸರ್ ಬಿಡುಗಡೆ ಮಕ್ಕಳು ಇಷ್ಟಪಡುವ ‘ಕಣ್ಣಾ ಮುಚ್ಚೆ ಕಾಡೇ ಗೂಡೇ’ ಹಾಡು ಈಗ ಸಿನಿಮಾದ ಶೀರ್ಷಿಕೆಯಾಗಿ ಹೊರಬಂದಿದೆ. ಪ್ರಚಾರದ ಎರಡನೇ ಹಂತವಾಗಿ ಟೀಸರ್ ಹಾಗೂ ಪುನೀತ್ ಆರ್ಯ ಸಾಹಿತ್ಯ, ವಾಸುಕಿವೈಭವ್-ಸುರಭಿ ಭಾರದ್ವಾಜ್ ಗಾಯನ, ಸಂತೋಷ್ ಜೋಶ್ವಾ ಸಂಗೀತದ ‘ನಿನ್ನ ನೋಡಿದಾಗಲೇ ಪ್ರೀತಿಯಲಿ ಬಿದ್ದಾಗಿದೆ’ ಹಾಡು ಬಿಡುಗಡೆ ಕಾರ್ಯಕ್ರಮ ಎಸ್ಆರ್ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ತಂಡಕ್ಕೆ ಶುಭ ಹಾರೈಸಲು ನಟ ನಾಗೇಂದ್ರ ಅರಸ್, ನಿರ್ಮಾಪಕ ಪ್ರಶಾಂತ್ನಾಯಕ್ ಆಗಮಿಸಿದ್ದರು. ಕಣ್ಣಾ ಮುಚ್ಚೆ ಹಾಡು ಸಾವಿನ ಗೀತೆಯಾಗಿದೆ. ....
'ಎಪ್.ಐ.ಆರ್. 6 to 6' ಟ್ರೈಲರ್ ಬಿಡುಗಡೆ ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ಅಭಿನಯದ ಕುತೂಹಲಕಾರಿ ಥ್ರಿಲ್ಲರ್ ಚಿತ್ರ ’ಎಫ್.ಐ.ಆರ್. 6 to 6' ಬಿಡುಗಡೆಗೆ ಸಿದ್ದವಾಗಿದೆ. ಈ ಹಿಂದೆ ಪಟ್ಟಾಭಿಷೇಕ ಎಂಬ ಚಿತ್ರವನ್ನು ನಿರ್ಮಿಸಿದ್ದ ಭಾಗ್ಯರಮೇಶ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕೆ.ವಿ.ರಮಣರಾಜ್ ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಓಂಜಿ ಅವರ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ. ಸತೀಶ್ ಬಾಬು ಹಾಗೂ ಎಂ.ಎಸ್. ತ್ಯಾಗರಾಜ್ ಸಂಗೀತ ಸಂಯೋಜನೆ ಮಾಡಿರುವ ಈ ಚಿತ್ರದ ಟ್ರೈಲರ್ ಹಾಗೂ ಆಡಿಯೋ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಫಿಲಂ ಚೇಂಬರ್ ಉಪಾಧ್ಯಕ್ಷ ಶಿಲ್ಪಾ ಶ್ರೀನಿವಾಸ್, ಹಿರಿಯ ನಿರ್ದೇಶಕ ಕೂಡ್ಲು ರಾಮಕೃಷ್ಣ ಮುಖ್ಯ ಅತಿಥಿಗಳಾಗಿ ....
*ಫೆಬ್ರವರಿ 7 ಕ್ಕೆ "ಅನ್ ಲಾಕ್ ರಾಘವ"ನ ಆಗಮನ* .!! *ಮಿಲಿಂದ್ - ರೆಚೆಲ್ ಡೇವಿಡ್ ಜೋಡಿ..ತೆರೆಯ ಮೇಲೆ ಮಾಡಲಿದೆ ಮೋಡಿ* .. ಚಿತ್ರ ಆರಂಭವಾದಗಿನಿಂದಲೂ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ "ಅನ್ ಲಾಕ್ ರಾಘವ" ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಫೆಬ್ರವರಿ 7 ರಂದು ಈ ಚಿತ್ರ ಬಿಡುಗಡೆಯಾಗಲಿದೆ. ಯುವ ಪ್ರತಿಭೆಗಳಾದ ಮಿಲಿಂದ್ ಹಾಗೂ ರೆಚೆಲ್ ಡೇವಿಡ್(ಲವ್ ಮಾಕ್ಟೇಲ್) ನಾಯಕ-ನಾಯಕಿಯಾಗಿ ನಟಿಸಿರುವ ಈ ಚಿತ್ರವನ್ನು ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ನಿರ್ಮಿಸಿದ್ದು, ದೀಪಕ್ ಮಧುವನಹಳ್ಳಿ ನಿರ್ದೇಶಿಸಿದ್ದಾರೆ. ಚಿತ್ರದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ....
*ಚಂದನವನದ ಗಣ್ಯರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು ಬಹು ನಿರೀಕ್ಷಿತ "UI" ಚಿತ್ರದ ಪ್ರೀ ರಿಲೀಸ್ ಇವೆಂಟ್* . *ವರ್ಣರಂಜಿತ ಸಮಾರಂಭದಲ್ಲಿ ಶಿವರಾಜಕುಮಾರ್, ದುನಿಯಾ ವಿಜಯ್, ಡಾಲಿ ಧನಂಜಯ್ ಸೇರಿದಂತೆ ಅನೇಕ ಗಣ್ಯರು ಭಾಗಿ* . ಜಿ.ಮನೋಹರನ್ ಮತ್ತು ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಒಂಭತ್ತು ವರ್ಷಗಳ ಬಳಿಕ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ "UI" ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಅದ್ದೂರಿಯಾಗಿ ನೆರವೇರಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ದುನಿಯಾ ವಿಜಯ್, ಡಾಲಿ ಧನಂಜಯ, ಪ್ರಿಯಾಂಕಾ ಉಪೇಂದ್ರ, ನಿರ್ಮಾಪಕರಾದ ಉದಯ್ ಕೆ ಮೆಹ್ತಾ, ರಮೇಶ್ ರೆಡ್ಡಿ, ಕಾರ್ತಿಕ್ ಗೌಡ, ಯೋಗಿ ಜಿ ರಾಜ್, ಜಗದೀಶ್, ನಿರ್ದೇಶಕರಾದ ಪವನ್ ....
*ಸ್ಯಾಂಡಲ್ ವುಡ್ ನ ಬ್ಯಾಚುಲರ್ ಸ್ಟಾರ್ ನಟರಿಂದ "ಅಪಾಯವಿದೆ ಎಚ್ಚರಿಕೆ" ಚಿತ್ರದ "ಬ್ಯಾಚುಲರ್ಸ್ ಬದುಕು" ಸಾಂಗ್ ಬಿಡುಗಡೆ* . *ಇದು "ಅಣ್ಣಯ್ಯ" ಧಾರಾವಾಹಿಯ ಜನಪ್ರಿಯ ನಟ ವಿಕಾಶ್ ಉತ್ತಯ್ಯ ಅಭಿನಯದ ಚಿತ್ರ* . ಕನ್ನಡ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ "ಅಣ್ಣಯ್ಯ" ಧಾರಾವಾಹಿಯ ಮೂಲಕ ಕನ್ನಡಿಗರ ಮನೆಮನ ತಲುಪಿರುವ ನಟ ವಿಕಾಶ್ ಉತ್ತಯ್ಯ ನಾಯಕನಾಗಿ ನಟಿಸುತ್ತಿರುವ "ಅಪಾಯವಿದೆ ಎಚ್ಚರಿಕೆ" ಚಿತ್ರದ "ಬ್ಯಾಚುಲರ್ಸ್ ಬದುಕು" ಹಾಡು ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಕನ್ನಡ ಚಿತ್ರರಂಗದ ಬ್ಯಾಚುಲರ್ ನಾಯಕ ನಟರಾದ ತಿಲಕ್, ರಾಕೇಶ್ ಅಡಿಗ, ನವೀನ್ ಶಂಕರ್ ಹಾಗೂ ವಿಕ್ಕಿ ವರುಣ್, ಚಿತ್ರದ ನಿರ್ದೇಶಕರೂ ....
*ಡಾ||ಹೆಚ್ ಎಂ ಕೃಷ್ಣಮೂರ್ತಿ (ಜೇಡ್ರಳ್ಳಿ ಕೃಷ್ಣಪ್ಪ) ನೇತೃತ್ವದ ’AKGTV' ಗೆ ಒಂದು ವರ್ಷದ ಸಂಭ್ರಮ* . *ಸುಂದರ ಸಮಾರಂಭದಲ್ಲಿ ಅನೇಕ ಗಣ್ಯರ ಉಪಸ್ಥಿತಿ* . ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಜನರ ಮನಸ್ಸನ್ನು ಗೆದ್ದಿರುವ ಡಾ||ಹೆಚ್ ಎಂ ಕೃಷ್ಣಮೂರ್ತಿ (ಜೇಡ್ರಳ್ಳಿ ಕೃಷ್ಣಪ್ಪ) ಅವರು ನಾಡಪ್ರಭು ಕೆಂಪೇಗೌಡರ ಬಗ್ಗೆ ಜನರಿಗೆ ಹೆಚ್ಚಿನ ಮಾಹಿತಿ ನೀಡುವ ಸಲುವಾಗಿ ’AKGTV' ಯೂಟ್ಯೂಬ್ ವಾಹಿನಿಯನ್ನು ಕಳೆದವರ್ಷ ಆರಂಭಿಸಿದ್ದರು. ಇದೇ ಸಂದರ್ಭದಲ್ಲಿ "ನಾಡಸಿಂಹ ಕೆಂಪೇಗೌಡ" ಎಂಬ ಅದ್ದೂರಿಗೀತೆಯನ್ನು ಸಹ ಬಿಡುಗಡೆ ಮಾಡಿದ್ದರು. ಈಗ ’AKGTV' ಗೆ ಮೊದಲನೇ ವಾರ್ಷಿಕೋತ್ಸವ. ಇತ್ತೀಚಿಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಈ ವಾಹಿನಿ ಪ್ರಥಮ ವಾರ್ಷಿಕೋತ್ಸವ ಸಮಾರಂಭ ....
*ಜನವರಿಯಲ್ಲಿ ಆರಂಭವಾಗಲಿದೆ "ಪ್ರೊ ಲುಡೋ ಸ್ಟಾರ್ ಲೀಗ್"*
*ಹಿರಿತೆರೆ ಹಾಗೂ ಕಿರುತೆರೆ ಕಲಾವಿದರು ಭಾಗಿ* .
ರಿಯಾಲಿಟಿ ಶೋಗಳು ಮತ್ತು ಕ್ರೀಡಾ ಲೀಗ್ಗಳ ಈ ಜಮಾನಾದಲ್ಲಿ ಇದೇ ಮೊದಲ ಬಾರಿಗೆ "ಪ್ರೊ ಲುಡೋ ಸ್ಟಾರ್ ಲೀಗ್" ಒಂದು ವಿಶೇಷ ಮನರಂಜನಾ ಕ್ರೀಡೆಯಾಗಿ ಹೊರಹೊಮ್ಮುತ್ತಿದೆ. ಜನವರಿಯಲ್ಲಿ ಆರಂಭವಾಗಲಿದೆ. ಈ ಕ್ರೀಡೆಯ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಆಯೋಜಕರು, ನಿರೂಪಕರು ಹಾಗೂ ಆಟಗಾರರು ಮಾತನಾಡಿದರು.
ಆಸ್ತ್ರ ಪ್ರೊಡಕ್ಷನ್ಸ್ ಲಂಚು ಲಾಲ್ ಈ ಲೀಗ್ ನ ಆಯೋಜಕರಾಗಿದ್ದು, ಸುದೇಶ್ ಭಂಡಾರಿ ನಿರ್ದೇಶಕರು ಹಾಗೂ ಅಜ್ಫರ್ ರಜಾಕ್ ಕಾರ್ಯನಿರ್ವಾಹಕ ನಿರ್ಮಾಪಕರಾಗಿದ್ದಾರೆ.
*ಮೋಷನ್ ಪೋಸ್ಟರ್ ನಲ್ಲೇ ಮೋಡಿ ಮಾಡಿದ "ಫಾದರ್"* . *ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಈ ಚಿತ್ರಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾಥ್* . ಕೆಲವುದಿನಗಳ ಹಿಂದೂ ಆರ್ ಸಿ ಸ್ಟುಡಿಯೋಸ್ ಎಂಬ ಬೃಹತ್ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿದ ಆರ್ ಚಂದ್ರು, ಮೊದಲ ಬಾರಿಗೆ ಐದು ಸಿನಿಮಾಗಳ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಆ ಪೈಕಿ ಆರ್ ಸಿ ಸ್ಟುಡಿಯೋಸ್ ನ ಮೊದಲ ಚಿತ್ರವಾಗಿ " ಫಾದರ್" ನಿರ್ಮಾಣವಾಗುತ್ತಿದೆ. ಇತ್ತೀಚಿಗೆ ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ "ಫಾದರ್" ಚಿತ್ರದ ಮೋಷನ್ ಪೋಸ್ಟರ್ ಅನಾವರಣ ಮಾಡಿದರು. ರಾಜಕೀಯ ಮುಖಂಡರಾದ ಹೆಚ್ ಎಂ ರೇವಣ್ಣ, ನಟ ಅನೂಪ್ ರೇವಣ್ಣ, ಆನಂದ್ ಆಡಿಯೋ ಶ್ಯಾಮ್ ಸೇರಿದಂತೆ ....
ಅದ್ದೂರಿಯಾಗಿ ಸೆಟ್ಟೇರಿತು ’ಅಯೋಗ್ಯ-2' ಸಿನಿಮಾ 'ಅಯೋಗ್ಯ 2'ಗೆ ಅದ್ದೂರಿ ಮುಹೂರ್ತ ಮತ್ತೆ ಅಭಿಮಾನಿಗಳ ಮುಂದೆ ಸೂಪರ್ ಸಕ್ಸಸ್ ಜೋಡಿ ಸತೀಶ್-ರಚಿತಾ ಸ್ಯಾಂಡಲ್ ವುಡ್ ನ ಸೂಪರ್ ಸಕ್ಸಸ್ ಜೋಡಿಗಳಲ್ಲಿ ಒಂದಾಗಿರುವ ರಚಿತಾ ರಾಮ್ ಹಾಗೂ ಸತೀಶ್ ನೀನಾಸಂ ಮತ್ತೆ ಅಭಿಮಾನಿಗಳ ಮುಂದೆ ಸಜ್ಜಾಗಿದ್ದಾರೆ. ಹೌದು ‘ಅಯೋಗ್ಯ 2’ ಸಿನಿಮಾಗಿ ರಚಿತಾ ರಾಮ್ ಮತ್ತು ಸತೀಶ್ ನೀನಾಸಂ ಒಂದಾಗಿದ್ದಾರೆ. ಸೂಪರ್ ಹಿಟ್ ಅಯೋಗ್ಯ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಜೋಡಿ ಇದೀಗ 6 ವರ್ಷಗಳ ಬಳಿಕ ಮತ್ತೆ ಅಭಿಮಾನಿಗಳನ್ನು ರಂಜಿಸಲು ರೆಡಿಯಾಗಿದ್ದಾರೆ. ಅಯೋಗ್ಯ-2 ಸಿನಿಮಾ ಅದ್ದೂರಿಯಾಗಿ ಸೆಟ್ಟೇರಿದೆ. ಇಂದು ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ನಡೆದ ಅದ್ದೂರಿ ಮುಹೂರ್ತ ....
*ಜನವರಿ 10ರಂದು ಶರಣ್ ಅಭಿನಯದ "ಛೂಮಂತರ್"* *ಸಂಕ್ರಾಂತಿ ಸಮಯಕ್ಕೆ ಬಹಳ ವರ್ಷಗಳ ನಂತರ ಕನ್ನಡ ಚಿತ್ರವೊಂದರ ಬಿಡುಗಡೆ* ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, "ಕರ್ವ" ಖ್ಯಾತಿಯ ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಛೂ ಮಂತರ್" ಚಿತ್ರ ಹೊಸವರ್ಷದ ಆರಂಭದಲ್ಲಿ ಹಾಗೂ ಸಂಕ್ರಾಂತಿ ಸಮೀಪದಲ್ಲಿ ಅಂದರೆ ಜನವರಿ 10 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸಂಕ್ರಾಂತಿ ಸಮಯದಲ್ಲಿ ತೆಲುಗು, ತಮಿಳಿನ ದೊಡ್ಡದೊಡ್ಡ ಚಿತ್ರಗಳು ಬಿಡುಗಡೆಯಾಗುತ್ತಿದ್ದವು. ಆದರೆ ಕನ್ನಡದಲ್ಲಿ ಯಾವುದೇ ಚಿತ್ರಗಳು ಸಂಕ್ರಾಂತಿ ಸಮಯದಲ್ಲಿ ಇತ್ತೀಚಿನ ವರ್ಷಗಳಲ್ಲಿ ಬಿಡುಗಡೆಯಾಗಿಲ್ಲ. ಬಹಳ ....
*ದಾಸರಹಳ್ಳಿ ಟ್ರೇಲರ್ ರಿಲೀಸ್: ಕ್ಯಾಡ್ಬರಿ ಮಾಸ್ ಎಂಟ್ರಿ..!* *'ದಾಸರಹಳ್ಳಿ’ ಟ್ರೇಲರ್ ಔಟ್ : ಥ್ರಿಲ್ಲರ್ ಮಂಜು ಫೈಟ್.. ಧರ್ಮ ಆಕ್ಷನ್.. ಸೂಪರ್ ಕಿಕ್..!* ಪಿ.ಉಮೇಶ ನಿರ್ಮಾಣದ ಎಂ. ಆರ್. ಶ್ರೀನಿವಾಸ್ ನಿರ್ದೇಶನದ ದಾಸರಹಳ್ಳಿ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಮಾಸ್ ಪ್ರಿಯರಿಗೊಂದು ಕಿಕ್ಕೇರಿಸುವಂತ ಟ್ರೇಲರ್ ಇದಾಗಿದೆ. ಧರ್ಮ ಕೀರ್ತಿರಾಜ್ ಮುಖ್ಯಭೂಮಿಕೆಯಲ್ಲಿರುವ ಸಿನಿಮಾ ಇದಾಗಿದ್ದು, ಚಾಕ್ಲೇಟ್ ಬಾಯ್ ದೊಣ್ಣೆ ಹಿಡಿದರೆ ಎದುರಿದ್ದವರ ಮೀಟರ್ ಆಫ್ ಆಗೋದು ಗ್ಯಾರಂಟಿ. ಟ್ರೇಲರ್ ನಲ್ಲಿ ಮಾಸ್ ಎಲಿಮೆಂಟ್ಸ್ ಎದ್ದು ಕಾಣಿಸುತ್ತಿದೆ. ಟ್ರೇಲರ್ ಲಾಂಚ್ ವೇಳೆ ಸಿನಿಮಾದ ಹಿರಿಯ ಕಲಾವಿದರು ಕೂಡ ಭಾಗಿಯಾಗಿದ್ದರು. ಈ ವೇಳೆ ನಿರ್ದೇಶಕ ಎಂ. ಆರ್. ....
ಬಿಡುಗಡೆ ಆಯ್ತು
*ಔಟ್ ಆಫ್ ಸಿಲಬಸ್* Trailer..
ಶ್ರೀಮತಿ ವಿಜಯಕಲಾ ಸುಧಾಕರ್,ತನುಷ್ ಎಸ್ ವಿ,
ದೇಸಾಯಿ ಗೌಡ ಜಂಟಿಯಾಗಿ ನಿರ್ಮಾಣ ಮಾಡಿರುವ,
ಪ್ರದೀಪ್ ದೊಡ್ಡಯ್ಯ ನಟಿಸಿ,ನಿರ್ದೇಶನ ಮಾಡಿರುವ
*ಔಟ್ ಆಫ್ ಸಿಲಬಸ್* ಚಿತ್ರದ ಟ್ರೈಲರ್ ಬಿಡುಗಡೆ ಜೊತೆಗೆ ಚಿತ್ರ ಬಿಡುಗಡೆಯ ದಿನಾಂಕವನ್ನು ಸಹ ಚಿತ್ರ ತಂಡ ಅಧಿಕೃತವಾಗಿ ಘೋಷಣೆ ಮಾಡಿತು..
*ಔಟ್ ಆಫ್ ಸಿಲಬಸ್*
ಟ್ರೈಲರ್ ಸಖತ್ ಇಂಟರೆಸ್ಟಿಂಗ್ ಆಗಿದ್ದು,ಯುವ ಜನತೆಯನ್ನು ಕೇಂದ್ರವಾಗಿಟ್ಟು,ಭರ್ಜರಿ ಮನೋರಂಜನೆ ಕೊಡುವ ಎಲ್ಲ ಅಂಶಗಳನ್ನು ಒಳಗೊಂಡಿದೆ, ಚಿತ್ರವೂ ರಾಜ್ಯಾದ್ಯಂತ ಇದೇ ಡಿಸೆಂಬರ್ 27ಕ್ಕೆ ಬಿಡುಗಡೆ ಆಗುತ್ತಿದೆ..
*ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದಲ್ಲಿ "ಅಪಾಯವಿದೆ ಎಚ್ಚರಿಕೆ"* . *ನಾಯಕನಾಗಿ "ಅಣ್ಣಯ್ಯ" ಧಾರಾವಾಹಿಯ ಜನಪ್ರಿಯ ನಟ ವಿಕಾಶ್ ಉತ್ತಯ್ಯ* . ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಜನ ಹೆಚ್ಚು ಮೆಚ್ಚಿಕೊಳ್ಳುತ್ತಿದ್ದಾರೆ. ಚಿತ್ರದ ಮೋಷನ್ ಪೋಸ್ಟರ್ ನೋಡಿದಾಗ ಆ ಸಾಲಿಗೆ "ಅಪಾಯವಿದೆ ಎಚ್ಚರಿಕೆ" ಚಿತ್ರ ಸಹ ಸೇರುವ ಎಲ್ಲಾ ಲಕ್ಷಣಗಳಿದೆ. ತೀರ್ಥಹಳ್ಳಿ ಮೂಲದವರಾದ ಅಭಿಜಿತ್ ತೀರ್ಥಹಳ್ಳಿ ಈ ಚಿತ್ರವನ್ನು ನಿರ್ದೇಶಿಸಿದ್ದು, ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ "ಅಣ್ಣಯ್ಯ" ಧಾರಾವಾಹಿ ಖ್ಯಾತಿಯ ನಟ ವಿಕಾಶ್ ಉತ್ತಯ್ಯ ನಾಯಕನಾಗಿ ನಟಿಸಿದ್ದಾರೆ. ವಿ.ಜಿ.ಮಂಜುನಾಥ್ ಹಾಗು ಪೂರ್ಣಿಮಾ ಎಂ ಗೌಡ ಈ ನಿರ್ಮಾಣ ....
. *ಹಾಡಿನಲ್ಲೇ ಮೋಡಿ ಮಾಡಿದ "ಕೋರ"* *ಸುನಾಮಿ ಕಿಟ್ಟಿ ಅಭಿನಯದ, ಪಿ.ಮೂರ್ತಿ ನಿರ್ಮಾಣ ಹಾಗೂ ಒರಟ ಶ್ರೀ ನಿರ್ದೇಶನದ ಈ ಚಿತ್ರ ಜನವರಿಯಲ್ಲಿ ತೆರೆಗೆ* ರತ್ನಮ್ಮ ಮೂವೀಸ್ ಲಾಂಛನದಲ್ಲಿ ಪಿ.ಮೂರ್ತಿ ನಿರ್ಮಿಸಿರುವ, ಒರಟ ಶ್ರೀ ನಿರ್ದೇಶನದ ಹಾಗೂ ರಿಯಾಲಿಟಿ ಶೋ ಮೂಲಕ ನಾಡಿನ ಜನರ ಗಮನ ಸೆಳೆದಿದ್ದ ಸುನಾಮಿ ಕಿಟ್ಟಿ ನಾಯಕನಾಗಿ ನಟಿಸಿರುವ "ಕೋರ" ಚಿತ್ರದ "ಒಪ್ಪಿಕೊಂಡಳು" ಹಾಡು ಇತ್ತೀಚಿಗೆ ಬಿಡುಗಡೆಯಾಗಿ, ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿದೆ. ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಜನವರಿಯಲ್ಲಿ ಬಿಡುಗಡೆಯಾಗಲಿದೆ. ಹಾಡು ಗೆದ್ದಿರುವ ಖುಷಿಯನ್ನು ಹಂಚಿಕೊಳ್ಳಲು ಹಾಗೂ ಚಿತ್ರದ ....
*ಧಿಕ್ಕಾರಕ್ಕಿಂತ ಆಧಿಕಾರ ಮುಖ್ಯ ಎಂದು "ವಾರ್ನರ್" ಮೂಲಕ ಹೇಳಿದ ರಿಯಲ್ ಸ್ಟಾರ್* . *ಜಿ.ಮನೋಹರನ್ ಮತ್ತು ಕೆ.ಪಿ.ಶ್ರೀಕಾಂತ್ ನಿರ್ಮಾಣದ ಹಾಗೂ ಉಪೇಂದ್ರ ನಿರ್ದೇಶಿಸಿ, ನಟಿಸಿರುವ "UI" ಚಿತ್ರ ಡಿಸೆಂಬರ್ 20 ರಂದು ಬಿಡುಗಡೆ* . ಜಿ.ಮನೋಹರನ್ ಮತ್ತು ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಸುಮಾರು ವರ್ಷಗಳ ಬಳಿಕ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ "UI" ಚಿತ್ರದ ವಾರ್ನರ್ ಬಿಡುಗಡೆಯಾಗಿದೆ. ಎಲ್ಲಾ ಚಿತ್ರಗಳಲ್ಲೂ ಸಾಮಾನ್ಯವಾಗಿ ಟೀಸರ್ ಹಾಗೂ ಟ್ರೇಲರ್ ಬಿಡುಗಡೆ ಮಾಡುತ್ತಾರೆ. ಆದರೆ ಉಪೇಂದ್ರ ಅವರು ಇವೆರಡನ್ನೂ ಬಿಡುಗಡೆ ಮಾಡದೆ ವಾರ್ನರ್ ಬಿಡುಗಡೆ ಮಾಡಿದ್ದಾರೆ. ಈ ವಾರ್ನರ್ ನಲ್ಲಿ 2040ರ ಕಾಲಘಟ್ಟದ ಪರಿಸ್ಥಿತಿಯನ್ನು ತೋರಿಸುವ ....
ಸುದೀಪ್ ಮಾತಲ್ಲಿ ಮ್ಯಾಕ್ಸ್ ಅನುಭವಗಳು ಈ ವರ್ಷದ ಡಿಸೆಂಬರ್ ತಿಂಗಳ ಬಹು ನಿರೀಕ್ಷೆಯ ಚಿತ್ರಗಳಲ್ಲಿ ‘ಮ್ಯಾಕ್ಸ್’ ಕೂಡ ಸೇರ್ಪಡೆಯಾಗಿದೆ. ಇದೇ ೨೫ರಂದು ವಿಶ್ವದಾದ್ಯಂತ ತೆರೆಗೆ ಬರುತ್ತಿರುವುದರಿಂದ, ತಂಡವು ಮೊದಲ ಬಾರಿ ಮಾಧ್ಯಮದ ಮುಂದೆ ಹಾಜರಾಗಿ ಅನುಭವಗಳನ್ನು ಹೇಳಿಕೊಂಡರು. ಕಿಚ್ಚ ಸುದೀಪ್ ಮಾತನಾಡಿ ಕಲೈಪುಲಿ ಥನು ಈಗಾಗಲೇ ನಲವತ್ತೇಳು ಚಿತ್ರಗಳನ್ನು ನಿರ್ಮಿಸಿದ್ದಾರೆ. ಅವರು ಕನ್ನಡ ಚಿತ್ರರಂಗಕ್ಕೆ ಬಂದಿರುವುದು ಹೆಮ್ಮೆಯ ವಿಷಯ. ನಿರ್ದೇಶಕ ವಿಜಯ್ ಕಾರ್ತಿಕೇಯನ್ ಕಥೆ ಹೇಳಲು ಚೆನ್ನೈನಿಂದ ಬೆಂಗಳೂರಿಗೆ ಬಂದವರು. ನನಗೆ ಇಷ್ಟವಾಗದಿದ್ದಲ್ಲಿ ಮಾತುಕತೆ ಸ್ಪಲ್ಪ ಹೊತ್ತಿನಲ್ಲೆ ಮುಗಿದು ....
*"ಮುಂಗಾರು ಮಳೆ" ನಂತರ "ಮನದ ಕಡಲು"* . *ಇದು ಯೋಗರಾಜ್ ಭಟ್ ಹಾಗೂ ಇ.ಕೃಷ್ಣಪ್ಪ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಮತ್ತೊಂದು ವಿಭಿನ್ನ ಪ್ರೇಮ ಕಥಾನಕ* . ಹದಿನೆಂಟು ವರ್ಷಗಳ ಹಿಂದೆ ಇ.ಕೆ. ಎಂಟರ್ ಟೈನರ್ಸ್ ಲಾಂಛನದಲ್ಲಿ ಇ. ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಸೂಪರ್ ಹಿಟ್ ಚಲನಚಿತ್ರ "ಮುಂಗಾರು ಮಳೆ". ಇಷ್ಟು ವರ್ಷಗಳ ಬಳಿಕ ಈ ಜೋಡಿ ಮತ್ತೆ ಒಂದಾಗಿದೆ. ಇ.ಕೃಷ್ಣಪ್ಪ ನಿರ್ಮಾಣದಲ್ಲಿ ಯೋಗರಾಜ್ ಭಟ್ ನಿರ್ದೇಶಿಸುತ್ತಿರುವ ನೂತನ ಚಿತ್ರದ ಹೆಸರು "ಮನದ ಕಡಲು". ಸುಮುಖ ಈ ಚಿತ್ರದ ನಾಯಕನಾಗಿ, ರಾಶಿಕಾ ಶೆಟ್ಟಿ ಮತ್ತು ಅಂಜಲಿ ಅನೀಶ್ ನಾಯಕಿಯರಾಗಿ ಹಾಗೂ ರಂಗಾಯಣ ರಘು ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ....
ಮಲ್ಲೇಪುರಂ ಜಿ ವೆಂಕಟೇಶ್ ಅವರಿಂದ ಬಹು ನಿರೀಕ್ಷಿತ "ತಮಟೆ" ಚಿತ್ರದ ಟೀಸರ್ ಹಾಗೂ ಹಾಡಿನ ಅನಾವರಣ* . ಮದನ್ ಪಟೇಲ್ ಅಭಿನಯದ, ಮಯೂರ್ ಪಟೇಲ್ ನಿರ್ದೇಶನದ ಈ ಚಿತ್ರ ನವೆಂಬರ್ 29 ರಂದು ಬಿಡುಗಡೆ.* . ವಂದನ್ ಎಂ ನಿರ್ಮಾಣದ, ಮಯೂರ್ ಪಟೇಲ್ ಚೊಚ್ಚಲ ನಿರ್ದೇಶನದ ಹಾಗೂ ಮದನ್ ಪಟೇಲ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ "ತಮಟೆ" ಚಿತ್ರದ ಟೀಸರ್ ಹಾಗೂ ಹಾಡನ್ನು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ಮೊದಲ ಕುಲಪತಿಗಳಾದ ಮಲ್ಲೇಪುರಂ ಜಿ ವೆಂಕಟೇಶ್ ಬಿಡುಗಡೆ ಮಾಡಿದರು. ದಿನಕರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಂತರ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು. ಮದನ್ ಪಟೇಲ್ ಅವರು ನನ್ನ ಬಹುಕಾಲದ ಗೆಳೆಯರು. ಅವರು ಬರೆದಿರುವ ....
*ರೇವಣ ಸಿದ್ದೇಶ್ವರ ಬೆಟ್ಟದಲ್ಲಿ "ಕುಲದಲ್ಲಿ ಕೀಳ್ಯಾವುದೊ" ಚಿತ್ರಕ್ಕೆ ಭರ್ಜರಿ ಕ್ಲೈಮ್ಯಾಕ್ಸ್* .* . *ಸಾಹಸ ಸನ್ನಿವೇಶದಲ್ಲೂ ಸೈ ಎನಿಸಿಕೊಂಡ ಮಡೆನೂರ್ ಮನು."* ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ನಿರ್ಮಿಸುತ್ತಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ "ಕಾಮಿಡಿ ಕಿಲಾಡಿಗಳು" ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ "ಕುಲದಲ್ಲಿ ಕೀಳ್ಯಾವುದೋ" ಚಿತ್ರದ ಕ್ಲೈಮ್ಯಾಕ್ಸ್ ಭಾಗದ ಸಾಹಸ ಸನ್ನಿವೇಶದ ಚಿತ್ರೀಕರಣ ರಾಮನಗರದ ಸಮೀಪ ಅದ್ದೂರಿಯಾಗಿ ನೆರವೇರಿತು. ವಿನೋದ್ ಮಾಸ್ಟರ್ ಸಾಹಸ ನಿರ್ದೇಶನದಲ್ಲಿ ನಾಯಕ ಮಡೆನೂರ್ ಮನು, ನಾಯಕಿ ....