*"ಜೀನಿಯಸ್ ಮುತ್ತ" ನಿಗೆ ಸಾಥ್ ನೀಡಿದ "ಚಿನ್ನಾರಿ ಮುತ್ತ"* . *ನಾಗಿಣಿ ಭರಣ ನಿರ್ದೇಶನದ ಈ ಚಿತ್ರ ಆಗಸ್ಟ್ ನಲ್ಲಿ ತೆರೆಗೆ* . ಖ್ಯಾತ ನಿರ್ದೇಶಕ ಟಿ.ಎಸ್. ನಾಗಾಭರಣ ಅವರ ಪತ್ನಿ ನಾಗಿಣಿ ಭರಣ ನಿರ್ದೇಶನದ ಮೊದಲ ಚಿತ್ರ "ಜೀನಿಯಸ್ ಮುತ್ತ" ತೆರೆಗೆ ಬರಲು ಸಿದ್ದವಾಗಿದೆ. ಆಗಸ್ಟ್ ನಲ್ಲಿ ಚಿತ್ರ ತೆರೆಗೆ ಬರಲಿದೆ. ಜಿ.ಎಸ್ ಲತಾ ಜೈಪ್ರಕಾಶ್ ನಿರ್ಮಾಣದ ಈ ಚಿತ್ರದಲ್ಲಿ "ಜೀನಿಯಸ್ ಮುತ್ತ" ನಾಗಿ ಮಾಸ್ಟರ್ ಶ್ರೇಯಸ್ಸ್ ಜೈಪ್ರಕಾಶ್ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ "ಚಿನ್ನಾರಿಮುತ್ತ"ನಾಗಿ ಮೆಚ್ಚುಗೆ ಪಡೆದಿರುವ ವಿಜಯ ರಾಘವೇಂದ್ರ ಅಭಿನಯಿಸಿದ್ದಾರೆ. ಈ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ....
ಆಗಸ್ಟ್ ೯ರಂದು ಭೀಮನ ಆಟ ಶುರು ದುನಿಯಾವಿಜಯ್ ನಿರ್ದೇಶನ ಮತ್ತು ನಾಯಕನಾಗಿ ನಟಿಸಿರುವ ‘ಭೀಮ’ ಚಿತ್ರವು ಆಗಸ್ಟ್ ೯ಕ್ಕೆ ತೆರೆಕಾಣಲು ಸಿದ್ದತೆಗಳು ನಡೆಯುತ್ತಿದೆ. ಸದು ಸ್ಟಾರ್ ಸಿನಿಮಾಗಳು ಇಲ್ಲದೆ ಸೊರಗಿ ಹೋಗಿರುವ ಚಿತ್ರರಂಗಕ್ಕೆ ಭೀಮ ಟಾನಿಕ್‌ನಂತೆ ಬರುತ್ತಿದೆ. ಅಲ್ಲದೆ ನಿರ್ಮಾಪಕರು ಮುಚ್ಚಿ ಹೋಗಿರುವ ೧೮ ಟಾಕೀಸ್‌ಗಳಲ್ಲಿ ಬಿಡುಗಡೆ ಮಾಡುತ್ತಿದ್ದಾರಂತೆ. ಒಟ್ಟಾರೆ ರಾಜ್ಯಾದ್ಯಂತ ೪೦೦ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಜನರಿಗೆ ತೋರಿಸಲು ಸಜ್ಜಾಗುತ್ತಿದೆ. ಕೃಷ್ಣಸಾರ್ಥಕ್ ಮತ್ತು ಜಗದೀಶ್‌ಗೌಡ ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ. ಈ ವರ್ಷದ ಬಹು ನಿರೀಕ್ಷೆಯ ಚಿತ್ರಗಳಲ್ಲಿ ಇದು ....
ವ್ಯವಸಾಯದ ಸಮಸ್ಯೆ ಸಾರುವ ಕಬಂಧ ಕುಂಜಾರ ಫಿಲಂಸ್ ಲಾಂಛನದಲ್ಲಿ ಸಿದ್ದಗೊಂಡಿರುವ ‘ಕಬಂಧ’ ಚಿತ್ರದ ಗೆಳೆತನ ಕುರಿತಾದ ಲಿರಿಕಲ್ ಸಾಂಗ್ ಬಿಡುಗಡೆ ಕಾರ್ಯಕ್ರಮ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. ಕೆ.ಕಲ್ಯಾಣ್ ಸಾಹಿತ್ಯ, ಸಾನಿತೇಜ್ ಸಂಗೀತದಲ್ಲಿ ವಾಸುಕಿವೈಭವ್ ಧ್ವನಿಯಾಗಿದ್ದಾರೆ. ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಸತ್ಯನಾಥ್ ಮಾತನಾಡಿ ಕೆಲವು ವರ್ಷಗಳ ಹಿಂದೆ ನಡೆದ ಪ್ರಕರಣ ರಾಜ್ಯಾದ್ಯಂತ ಭಯ ಹುಟ್ಟಿಸಿತ್ತು. ಇದನ್ನೆ ಬಳಸಿಕೊಂಡು ಒಂದಷ್ಟು ಹಾರರ್ ರೂಪಕೊಟ್ಟು ಸನ್ನಿವೇಶಗಳನ್ನು ಸೃಷ್ಟಿಸಲಾಗಿದೆ. ಅದರಲ್ಲೂ ವ್ಯವಸಾಯದ ಸಮಸ್ಯೆ ನಮಗೆ ಗೊತ್ತಿಲ್ಲದೆ ತುಂಬಾ ವರ್ಷದಿಂದ ಕಾಡ್ತಾ ಇದೆ. ಅದು ....
ಗುಂಮ್ಟಿ ಇದು ಚಿತ್ರದ ಹೆಸರು ಕಳೆದ ವರ್ಷ ‘ಡೊಳ್ಳು’ ಕಲೆಯ ಕುರಿತಾದ ಚಿತ್ರವೊಂದು ತೆರೆಕಂಡು ಪ್ರಶಂಸೆ ಗಳಿಸಿತ್ತು. ಈಗ ಮಂಗಳೂರು, ಕಾರವಾರ, ಉಡುಪಿ ಕಡೆಗಳಲ್ಲಿ ‘ಗುಂಮ್ಟಿ’ ಸಮುದಾಯ ಮತ್ತು ವಾದ್ಯವೊಂದು ಹೆಚ್ಚಾಗಿ ಗುರುತಿಸಿಕೊಂಡಿಲ್ಲ. ಆ ಸಲುವಾಗಿಯೇ ಅಲ್ಲಿನ ಭಾಗದವರೇ ಸೇರಿಕೊಂಡು ಇದೇ ಹೆಸರಿನಲ್ಲಿ ಚಿತ್ರವೊಂದನ್ನು ಸಿದ್ದಪಡಿಸಿದ್ದಾರೆ. ‘ಇದು ಸಂಸ್ಕ್ರತಿಯ ಸದ್ದು’ ಎಂಬ ಅಡಿಬರಹವಿದೆ. ‘ಕತ್ತಲ ಕೋಣೆ’ ‘ಇನಾಂದಾರ್’ ಚಿತ್ರಗಳನ್ನು ನಿರ್ದೇಶನ ಮಾಡಿದ್ದ ಸಂದೀಪ್‌ಶೆಟ್ಟಿ ಅಜ್ರಿ ಆಕ್ಷನ್ ಕಟ್ ಹೇಳುವ ಜತೆಗೆ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಇವರ ಶ್ರಮಕ್ಕೆ ಬಿಲ್ಡರ್ ವಿಕಾಸ್.ಎಸ್.ಶೆಟ್ಟಿ ....
ಮಾಡೆಲಿಂಗ್ ಕ್ಷೇತ್ರದಿಂದ ಬಂದು ಸಿನಿಮಾ ನಿರ್ಮಾಣ ಮಾಡುವುದರ ಜೊತೆಗೆ ಹೀರೋ ಆಗಿ ಅಭಿನಯಿಸಿ ಸತ್ವ ಪರೀಕ್ಷೆಗೆ ನಿಂತಿರುವ ರೋಹಿತ್ ನಟನೆಯ ’ರಕ್ತಾಕ್ಷ’ ಇದೇ ವಾರ ಬಿಡುಗಡೆ ಕಾಣುತ್ತಿದೆ. ನಟನೆ, ಡ್ಯಾನ್ಸ್ ಮತ್ತು ಸಾಹಸದ ತರಬೇತಿ ಜೊತೆಗೆ ಉತ್ತಮ ದೇಹ ವಿನ್ಯಾಸದ ಅತ್ಯುತ್ತಮ ಕಲ್ಪನೆ ಹೊಂದಿರುವ ರೋಹಿತ್ ನೋಡಲು ಥೇಟ್ ಸಲ್ಮಾನ್ ಖಾನ್. ಇದೀಗ ಅವರು ಮಾಡಿ ಮುಗಿಸಿರುವ ರಕ್ತಾಕ್ಷ ಹೊಸ ನೆಲೆಯಲ್ಲಿರುವ ಆಧುನಿಕ ಸಂವೇದನೆಯ ಚಿತ್ರ. ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಅಭಿಮಾನಿಗಳಿಗೆ ರೋಚಕತೆ ಮುಟ್ಟಿಸುತ್ತದೆ ಎಂಬುದು ರೋಹಿತ್ ನಂಬಿಕೆ. ಹಾಗಾಗಿ ಪ್ರಚಾರದ ಭರಟೆಯ ಜೊತೆಗೆ ಚಿತ್ರದ ಆಶಯಗಳನ್ನು ಹೋದ ಕಡೆಯಲ್ಲಿ ಹೇಳಲಾಗುತ್ತಿದೆ ಮತ್ತು ಜನರು ಅದರಲ್ಲೂ ....
ಮಾರಮ್ಮ ದೇವಿ ಸಮ್ಮುಖದಲ್ಲಿ ಸಿಂಹರೂಪಿಣಿ ಟೀಸರ್ ಬಿಡುಗಡೆ ಗುರು ಪೂರ್ಣಿಮೆ ದಿನದಂದು ‘ಸಿಂಹರೂಪಿಣಿ’ ಚಿತ್ರದ ಪಾತ್ರಗಳ ಪರಿಚಯದ ಟೀಸರ್ ಬಿಡುಗಡೆ ಸಮಾರಂಭವು ಕಲಾವಿದರ ಭವನದಲ್ಲಿ ಅದ್ದೂರಿಯಾಗಿ ನಡೆಯಿತು. ವೇದಿಕೆ ಮೇಲೆ ಸಾಕ್ಷಾತ್ ಮಾರಮ್ಮ ದೇವಿ ಪ್ರತಿಷ್ಠಾಪನೆ, ಮಾವಿನ ಮತ್ತು ಬೇವಿನ ಎಲೆಯಿಂದ ಸಿಂಗಾರ ಗೊಳಿಸಿದ್ದು ವಿಶೇಷವಾಗಿತ್ತು. ಕಿನ್ನಾಳ್‌ರಾಜ್ ಚಿತ್ರಕಥೆ-ಸಂಭಾಷಣೆ-ಸಾಹಿತ್ಯ ಹಾಗೂ ನಿರ್ದೇಶನ. ದೊಡ್ಡಬಳ್ಳಾಪುರ ಕೆ.ಎಂ.ನಂಜುಂಡೇಶ್ವರ ಕಥೆ ಬರೆದು ಶ್ರೀ ಚಕ್ರ ಫಿಲಿಂಸ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ಆಕಾಶ್‌ಪರ್ವ ಸಂಗೀತ, ಕಿರಣ್‌ಕುಮಾರ್ ಛಾಯಾಗ್ರಹಣ, ವೆಂಕಿ.ಯುಡಿವಿ ....
*ಭಾರ್ಗವ್ ಕೃಷ್ಣ ಅಭಿನಯದ "ಓಂ ಶಿವಂ" ಚಿತ್ರದ ಲಿರಿಕಲ್ ಸಾಂಗ್ ಬಿಡುಗಡೆ* . *ಆಲ್ವಿನ್ ನಿರ್ದೇಶನದ ಈ ಚಿತ್ರ ಆಗಸ್ಟ್ ನಲ್ಲಿ ತೆರೆಗೆ* . ಕನ್ನಡದಲ್ಲಿ ಹೊಸ ನಾಯಕನಟರ ಆಗಮನವಾಗುತ್ತಿರುತ್ತದೆ. ನೂತನ ನಾಯಕನಟರ ಪಟ್ಟಿಗೆ ಈಗ ಭಾರ್ಗವ್ ಕೃಷ್ಣ ಕೂಡ ಸೇರಿದ್ದಾರೆ. ಪ್ರಸ್ತುತ ಭಾರ್ಗವ್ ಕೃಷ್ಣ ಅಭಿನಯದ ಚೊಚ್ಚಲ ಚಿತ್ರ "ಓಂ ಶಿವಂ" ನ ಲಿರಿಕಲ್ ಸಾಂಗ್ ಇತ್ತೀಚಿಗೆ ಬಿಡುಗಡೆಯಾಯಿತು. ಭಾರ್ಗವ್ ಕೃಷ್ಣ ಅವರ ಅಜ್ಜಿ, ತಾತಾ ಈ ಹಾಡನ್ನು ಬಿಡುಗಡೆ ಮಾಡಿ ಮೊಮ್ಮಗನ ಮೊದಲ ಚಿತ್ರಕ್ಕೆ ಶುಭ ಹಾರೈಸಿದರು. ಭಾರ್ಗವ್ ಕೃಷ್ಣ ಅವರ ತಂದೆ ಕೃಷ್ಣ ಕೆ.ಎನ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಹಾಡು ಬಿಡುಗಡೆಯ ನಂತರ ....
ಕಂಠೀರವ ಸ್ಟುಡಿಯೋದಲ್ಲಿ ಸಂಜು ವೆಡ್ಸ್ ಗೀತಾ ಪ್ರೀ ಕ್ಲೈಮ್ಯಾಕ್ಸ್ ನಿರ್ದೇಶಕ ನಾಗಶೇಖರ್ ಸಾರಥ್ಯದ "ಸಂಜು ವೆಡ್ಸ್ ಗೀತಾ-2" ಪ್ರಾರಂಭದಿಂದಲೂ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಸಂಜು ಹಾಗೂ ಗೀತಾರ ನವೀನ ಪ್ರೇಮಕಥೆಯನ್ನು ರೇಶ್ಮೆ ಬೆಳೆಯುವ ರೈತರ ಹೋರಾಟದ ಹಿನ್ನೆಲೆ ಇಟ್ಟುಕೊಂಡು ನಾಗಶೇಖರ್ ಹೇಳಹೊರಟಿದ್ದಾರೆ. ಈ ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಜೊತೆ ರಮ್ಯಾ ಬದಲು ರಚಿತಾರಾಮ್ ಎಂಟ್ರಿಯಾಗಿದ್ದಾರೆ. ಈ ಚಿತ್ರದ ಪ್ರೀ ಕ್ಲೈಮ್ಯಾಕ್ಸ್ ದೃಶ್ಯದ ಚಿತ್ರೀಕರಣ ನಿನ್ನೆ ಕಂಠೀರವ ಸ್ಟುಡಿಯೋದಲ್ಲಿ ನಡೆದಿತ್ತು. ಅಲ್ಲಿ ನಾಯಕ ಶ್ರೀನಗರ ಕಿಟ್ಟಿ ಒಬ್ಬ ಸೈನಿಕನ ಗೆಟಪ್ ನಲ್ಲಿದ್ದರು. ಜರ್ಮನ್ ಸೈನಿಕರ ವಿರುದ್ದ ಸೆಣೆಸಾಟ ನಡೆಸಿ ಅವರ ....
‘ಪ್ರಕರಣ ತನಿಖಾ ಹಂತದಲ್ಲಿದೆ’ ಮೋಷನ್ ಪೋಸ್ಟರ್ ಬಿಡುಗಡೆ ರಿಲೀಸ್ ಆಯ್ತು ‘ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರದ ಮೋಷನ್ ಪೋಸ್ಟರ್ ಕನ್ನಡ ಚಿತ್ರರಂಗಕ್ಕೆ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಹೊಸಬರ ತಂಡಗಳು ಬರುತ್ತಿವೆ. ಅದರಲ್ಲೂ ರಂಗಭೂಮಿಯಲ್ಲಿ ಕೆಲಸ ಮಾಡಿ ಅನುಭವ ಗಳಿಸಿರುವ ಒಂದಿಷ್ಟು ಯುವಕರು, ಕನ್ನಡ ಚಿತ್ರರಂಗಕ್ಕೆ ಹೊಸ ಆಲೋಚನೆಗಳನ್ನು ಇಟ್ಟುಕೊಂಡು ಬರುತ್ತಿದ್ದಾರೆ. ಅಂತವರ ಸಾಲಿಗೆ ಈಗ ‘ಪಕರಣ ತನಿಖಾ ಹಂತದಲ್ಲಿದೆ’ ಚಿತ್ರ ಸೇರಿಕೊಳ್ಳಲಿದೆ. ‘ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರವನ್ನು ಕರದಾಯಾಮ ಸ್ಟುಡಿಯೋಸ್ ಸಂಸ್ಥೆಯಡಿ ಚಿಂತನ್ ಕಂಬಣ್ಣ ನಿರ್ಮಿಸಿದರೆ, ಸುಂದರ‍್ ಎಸ್ ಕಥೆ, ಚಿತ್ರಕಥೆ, ಸಂಭಾಷಣೆ ....
*ಆರ್ ಚಂದ್ರು ಅವರಿಂದ ಅನಾವರಣವಾಯಿತು ಹಾರಾರ್ ಜಾನರ್ ನ "ಹಗ್ಗ" ಚಿತ್ರದ ಟೀಸರ್* . . *ಸುಂದರ ಸಮಾರಂಭದಲ್ಲಿ ನಿರ್ಮಾಪಕರಾದ ಕೆ.ಮಂಜು, ದಯಾಳ್ ಸೇರಿದಂತೆ ಅನೇಕ ಗಣ್ಯರ ಉಪಸ್ಥಿತಿ* ವಸಂತ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜ್ ಭಾರದ್ವಾಜ್ ನಿರ್ಮಿಸಿರುವ, ಅವಿನಾಶ್ ಎನ್ ನಿರ್ದೇಶನದ ಹಾಗೂ ಅನು ಪ್ರಭಾಕರ್, ಹರ್ಷಿಕಾ ಪೂಣಚ್ಛ, ವೇಣು ಪ್ರಮುಖಪಾತ್ರದಲ್ಲಿ ನಟಿಸಿರುವ "ಹಗ್ಗ" ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನೆರವೇರಿತು. ಖ್ಯಾತ ನಿರ್ದೇಶಕ ಆರ್ ಚಂದ್ರು ಟೀಸರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಿರ್ಮಾಪಕರಾದ ಕೆ.ಮಂಜು, ದಯಾಳ್ ಅವರು ಸೇರಿದಂತೆ ಅನೇಕ ಗಣ್ಯರು "ಹಗ್ಗ" ಚಿತ್ರದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ....
*"ಬ್ಯಾಕ್ ಬೆಂಚರ್ಸ್" ಗೆಲ್ಲಲೇಬೇಕು ನಿರ್ದೇಶಕ - ನಿರ್ಮಾಪಕ ರಾಜಶೇಖರ್* . *ಕಾಲೇಜು ಕೇಂದ್ರಿತ ಕಥಾಹಂದರ ಹೊಂದಿರುವ ಈ ಚಿತ್ರ ಈ ವಾರ ತೆರೆಗೆ* . ಭಿನ್ನ ಕಂಟೆಂಟಿನ ಮನ್ಸೂಚನೆಯೊಂದಿಗೆ ಕ್ರೇಜ್ ಹುಟ್ಟುಹಾಕಿರುವ ಚಿತ್ರ `ಬ್ಯಾಕ್ ಬೆಂಚರ್ಸ್’. ಈಗಾಗಲೇ ಟೀಸರ್ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿರುವ ಈ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕಾಲೇಜು ಕೇಂದ್ರಿತ ಕಥೆ ಮತ್ತು ಬೇರೆ ಹೊಸತನದ ನಿರೂಪಣೆಯ ಸುಳಿವಿನೊಂದಿಗೆ ಎಲ್ಲಾ ವರ್ಗದ ಪ್ರೇಕ್ಷಕರನ್ನೂ "ಬ್ಯಾಕ್ ಬೆಂಚರ್ಸ್" ಆಕರ್ಷಿಸಿದ್ದಾರೆ. ಪಿಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಜಶೇಖರ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರದ ನಿರ್ದೇಶಕರು ಕೂಡ ರಾಜಶೇಖರ್ ....
ಸಿಂಗಾಪೂರ‍್ನಲ್ಲಿ ವಿಶ್ವ ಕನ್ನಡ ಹಬ್ಬ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್‍ನಿಂದ ಸೆ.28ರಂದು ಆಯೋಜನೆ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಸಂಸ್ಥೆಯು ಕನ್ನಡವನ್ನು ವಿದೇಶದಲ್ಲೂ ಬೆಳೆಸಬೇಕು ಎಂಬ ನಿಟ್ಟಿನಲ್ಲಿ ಕಳೆದ ವರ್ಷ ದುಬೈನಲ್ಲಿ ವಿಶ್ವ ಕನ್ನಡ ಹಬ್ಬವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಸಿಕ್ಕ ಅಭೂತಪೂರ್ವ ಯಶಸ್ಸಿನಿಂದ ಪ್ರೇರೀತರಾಗಿರುವ ಕೌನ್ಸಿಲ್, ಸೆಪ್ಟೆಂಬರ‍್ 28ರಂದು ಎರಡನೇ ವಿಶ್ವ ಕನ್ನಡ ಹಬ್ಬವನ್ನು ಸಿಂಗಾಪೂರ‍್ನಲ್ಲಿ ಆಯೋಜಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡುವುದಕ್ಕಾಗಿ ಇತ್ತೀಚೆಗೆ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್‍ನ ಅಧ್ಯಕ್ಷ ಡಾ. ಶಿವಕುಮಾರ‍್ ....
ಜುಲೈ 19ರಂದು ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರ ಬಿಡುಗಡೆ ದುಬೈನಲ್ಲಿ ಪ್ರೀಮಿಯರ‍್ ಶೋ; ಪ್ರೇಕ್ಷಕರಿಂದ ಭರಪೂರ ಮೆಚ್ಚುಗೆ ಈಗಾಗಲೇ ಟೀಸರ‍್, ಹಾಡುಗಳು ಮತ್ತು ಎರಡು ಟ್ರೇಲರ‍್ಗಳಿಂದ ಗಮನಸೆಳೆದಿರುವ ಅರುಣ್ ಅಮುಕ್ತ ರಚಿಸಿ-ನಿರ್ದೇಶಿಸಿರುವ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರವು ಇದೇ ಶುಕ್ರವಾರ (ಜುಲೈ 19) ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಅದಕ್ಕೂ ಮುನ್ನ, ಇತ್ತೀಚೆಗೆ ದುಬೈನಲ್ಲಿ ಚಿತ್ರದ ಪ್ರೀಮಿಯರ‍್ ಶೋ ಆಗಿದ್ದು, ಚಿತ್ರ ನೋಡಿರುವ ಅನಿವಾಸಿ ಕನ್ನಡಿಗರು ಚಿತ್ರವನ್ನು ಮೆಚ್ಚಿಕೊಂಡಿರುವುದಷ್ಟೇ ಅಲ್ಲ, ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ. ಈ ವಿಷಯವನ್ನು ಹಂಚಿಕೊಳ್ಳುವುದಕ್ಕೆ ....
*ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದ ’ರೂಪಾಂತರ’* . *ಚಿತ್ರದ ಪ್ರಮುಖಪಾತ್ರದಲ್ಲಿ ರಾಜ್ ಬಿ ಶೆಟ್ಟಿ ನಟನೆ* . ಇತ್ತೀಚೆಗಷ್ಟೆ "ಟರ್ಬೋ" ಮಳಯಾಳಂ ಚಿತ್ರದಲ್ಲಿ ವೆಟ್ರಿವೇಲ್ ಶನ್ಮುಗಸುಂದರಂ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದಿರುವ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ "ರೂಪಾಂತರ" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಟ್ರೇಲರ್ ನಲ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರ ಜುಲೈ 26 ರಂದು ಬಿಡುಗಡೆಯಾಗುತ್ತಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. "ರೂಪಾಂತರ" ಚಿತ್ರದ ಕುರಿತು ಮಾತನಾಡಿದ ರಾಜ್ ಬಿ ಶೆಟ್ಟಿ, ’ನಾವು ಮಂಗಳೂರಿನಲ್ಲಿ ಸಿನಿಮಾ ಮಾಡಬೇಕಾದರೆ ಮಾರ್ಕೇಟ್ ....
*"ಗೌರಿ" ಚಿತ್ರದಿಂದ ಬಂತು "ಮುದ್ದಾದ" ಹಾಡು* . *ಇಂದ್ರಜಿತ್ ಲಂಕೇಶ್ ನಿರ್ದೇಶನದ "ಮೊನಾಲಿಸ" ಚಿತ್ರಕ್ಕೆ ಇಪ್ಪತ್ತು ವರ್ಷಗಳ ಸಂಭ್ರಮ* .. ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಧ್ಯಾನ್ ಹಾಗೂ ಸದಾ ನಾಯಕ, ನಾಯಕಿಯಾಗಿ ನಟಿಸಿದ್ದ ಸೂಪರ್ ಹಿಟ್ "ಮೊನಾಲಿಸ" ಚಿತ್ರ ತೆರೆಕಂಡು ಇಪ್ಪತ್ತು ವರ್ಷಗಳಾಗಿದೆ. ಚಿತ್ರತಂಡದ ಸದಸ್ಯರೊಡನೆ ಕೇಕ್ ಕಟ್ ಮಾಡುವ ಮೂಲಕ "ಮೊನಾಲಿಸ" ಚಿತ್ರದ ಇಪ್ಪತ್ತರ ಸಂಭ್ರಮವನ್ನು ಆಚರಿಸಲಾಯಿತು. ನಿರ್ದೇಶಕ ಇಂದ್ರಜಿತ್ ಲಂಕೇಶ್, ನಾಯಕ ಧ್ಯಾನ್, ನಾಯಕಿ ಸದಾ, ನಟ ಶರಣ್, ಸಂಭಾಷಣೆ ಬರೆದಿದ್ದ ಬಿ.ಎ.ಮಧು, ಸ್ಥಿರ ಛಾಯಾಗ್ರಾಹಕ ಗುಂಡ್ಲುಪೇಟೆ ಸುರೇಶ್, ಡಿಸೈನರ್ ಮಣಿ ಸೇರಿದಂತೆ ....
ಇದೇ 19 ರಂದು ಮೊದಲ ಪ್ಯಾರಲಲ್ ಲೈಫ್ ಚಿತ್ರ "ಹೆಜ್ಜಾರು" ಬಿಡುಗಡೆ. ಬೆಳ್ಳಿ ಪರದೆಯ ಮೇಲೆ ವಿಭಿನ್ನ ಶೈಲಿಯ ವಿನೂತನ ಕತೆಯನ್ನು ನೋಡಬಯಸುವವರಿಗಾಗಿ ಒಂದು ಪ್ರೇಮಕಥೆಯ ಮೂಲಕ ಇದೇ 19ರಂದು ರಾಜ್ಯದ್ಯಂತ "ಹೆಜ್ಜಾರು" ಚಿತ್ರವನ್ನು ಬಿಡುಗಡೆ ಮಾಡುತಿದ್ದೇವೆ ಎಂದು ಹೇಳಲು ಚಿತ್ರತಂಡ ಪತ್ರಿಕಾಗೋಷ್ಠಿಯನ್ನು ಆಯೋಜನೆ ಮಾಡಿತ್ತು. ಹಾಗೆಯೇ ಚಿತ್ರದ ಟ್ರೈಲರ್ ಅನ್ನು ಕೂಡ ಪ್ರದರ್ಶಿಸಲಾಯಿತು. ನಿರ್ದೇಶಕ ಹರ್ಷಪ್ರಿಯ ಮಾತನಾಡುತ್ತಾ ನಾನು ಮೂಲತಃ ಭದ್ರಾವತಿಯವನು , ನನ್ನ ವೃತ್ತಿ ಪೈಂಟರ್ ಕೆಲಸ , ನನಗೆ ಸಿನಿಮಾ ಬಗ್ಗೆ ಅಪಾರ ಪ್ರೀತಿ , ಆಸಕ್ತಿ ಇತ್ತು ಆದರೆ ಅವಕಾಶ ಸಿಕ್ಕಿರಲಿಲ್ಲ. ಅದು ಸಿಕ್ಕಿದ್ದು ನಮ್ಮ ನಟ , ನಿರ್ದೇಶಕ ನವೀನ್ ....
*"ಅಪ್ಪು ಕಪ್ ಸೀಸನ್ 2" ಅಪ್ಪು ಸಂಭ್ರಮಕ್ಕೆ ಅದ್ದೂರಿ ಚಾಲನೆ* . *ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಶ್ರೀಮುರಳಿ ಅವರಿಂದ ಅಪ್ಪು ಬೆಳ್ಳಿ ಟ್ರೋಫಿ ಅನಾವರಣ* . ಓರಾಯನ್ ಮಾಲ್ ನ ಹೊರಾಂಗಣದಲ್ಲಿ ತಣ್ಣನೆ ಬೀಸುತ್ತಿದ್ದ ಗಾಳಿ. ಪಕ್ಕದಲ್ಲೊಂದು ಕೆರೆ. ಆ ಸುಂದರ ಪರಿಸರದಲ್ಲೊಂದು ವರ್ಣರಂಜಿತ ವೇದಿಕೆ. ಆ ವೇದಿಕೆಯಲ್ಲಿ ಚೇತನ್ ಸೂರ್ಯ ಅವರ STELLER STUDIO & EVENT MANAGEMENT ಸಂಸ್ಥೆ, PRK Audio ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಿರುವ " ಅಪ್ಪು ಕಪ್ ಸೀಸನ್ 2"(ಶಟಲ್ ಬ್ಯಾಡ್ಮಿಂಟನ್ ಟೂರ್ನಿ) ಅಪ್ಪು ಸಂಭ್ರಮ ಸಮಾರಂಭ ಅದ್ದೂರಿಯಾಗಿ ನಡೆಯಿತು. ಸಾಯಿ ಗೋಲ್ಡ್ ಪ್ಯಾಲೆಸ್ ನ ಶರವಣ ಅವರು ನಿರ್ಮಿಸಿರುವ ಐದು ಕೆಜಿ ತೂಕದ ಅಪ್ಪು ಭಾವಚಿತ್ರವುಳ್ಳ ಬೆಳ್ಳಿ ಕಪ್ ಅಶ್ವಿನಿ ಪುನೀತ್ ....
ಯುವ ಪಡೆಗಳ "ಮ್ಯಾಡಿ" ಟೈಟಲ್ , ಬ್ಯಾನರ್, ಹೀರೋ ಇಂಟ್ರೊಡಕ್ಷನ್ ಪ್ರಮೋಶನಲ್ ಸಾಂಗ್ ರಿಲೀಸ್. ಮಾಜಿ ಸಚಿವ ಹೆಚ್. ಎಂ.ರೇವಣ್ಣ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ರಿಂದ ಬಿಡುಗಡೆ. ಸ್ಯಾಂಡಲ್ವುಡ್ ನಲ್ಲಿ ಮತ್ತೊಂದು ಯುವ ಪಡೆಗಳ ತಂಡ ಭರ್ಜರಿಯಾಗಿ ಸದ್ದು ಮಾಡಲು ಸಿದ್ಧವಾಗಿದೆ. ಬಹಳಷ್ಟು ಪೂರ್ವ ತಯಾರಿಯೊಂದಿಗೆ ಸಿನಿಮಾ ಮಾಡಲು ಮುಂದಾಗಿರುವ ಈ ತಂಡವು ತಮ್ಮ ಚಿತ್ರ ಸಂಸ್ಥೆಯ ಹೆಸರು , ಶೀರ್ಷಿಕೆ ಹಾಗೂ ನಾಯಕನ ಪರಿಚಯಿಸುವ ಪ್ರಮೋಷನಲ್ ಸಾಂಗ್ ಬಿಡುಗಡೆ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ಬೆಂಗಳೂರಿನ ಕಲಾವಿದರ ಭವನದಲ್ಲಿ ಅದ್ದೂರಿಯಾಗಿ ಆಯೋಜಿಸಲಾಯಿತು. ಈ ಒಂದು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವರಾದ ....
*ಕಣ್ಮನ ಸೆಳೆಯುತ್ತಿದೆ ”ಕಡಲೂರ ಕಣ್ಮಣಿ” ಚಿತ್ರದ ಟ್ರೇಲರ್* . *ವಿಭಿನ್ನ ಪ್ರೇಮಕಥೆಯ ಈ ಚಿತ್ರ ಜುಲೈ 19 ರಂದು ತೆರೆಗೆ* . ರಾಮ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿರುವ "ಕಡಲೂರ ಕಣ್ಮಣಿ" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷರಾದ ವೆಂಕಟೇಶ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. "ಕಡಲೂರ ಕಣ್ಮಣಿ" ಪ್ರೇಮಕಥಾಹಂದರ ಹೊಂದಿರುವ ಚಿತ್ರ. ಈವರೆಗೂ ಸಾಕಷ್ಟು ಪ್ರೇಮಕಥೆಗಳು ಬಂದಿವೆಯಾದರೂ ಇದು ವಿಭಿನ್ನ ಪ್ರೇಮಕಥೆ ಎನ್ನಬಹುದು. ಕಡಲಿನಲ್ಲಿ ಮುತ್ತು ಸಿಗುವುದು ಎಲ್ಲರಿಗೂ ತಿಳಿದ ಸಂಗತಿ ನನಗೂ ಸಹ ಈ ಈ ಚಿತ್ರದಲ್ಲಿ ಮೂರು ಮುತ್ತುಗಳು ....
ಬಿ ಸೈಡ್ ಟ್ರೈಲರ್ ಮೂಲಕ ಬೆರಗಾಗಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರು! ಅರುಣ್ ಅಮುಕ್ತ ನಿರ್ದೇಶನದ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಇದೇ ತಿಂಗಳ 19ರಂದು ತೆರೆಗಾಣುತ್ತಿದೆ. ಈಗಾಗಲೇ ಸೈಡ್ ಎ ಟ್ರೈಲರ್ ಮೂಲಕ ಈ ಸಿನಿಮಾ ಪ್ರೇಕ್ಷಕರನ್ನು ಸೆಳೆದುಕೊಂಡಿತ್ತು.ಇದೀಗ ಬಿಡುಗಡೆಯ ಹೊಸ್ತಿಲಿನಲ್ಲಿ ಸೈಡ್ ಬಿ ಟ್ರೈಲರ್ ಲಾಂಚ್ ಆಗಿದೆ. ಜಬರ್ದಸ್ತ್ ಶೈಲಿಯಲ್ಲಿ ಮೂಡಿ ಬಂದಿರುವ ಈ ಟ್ರೈಲರ್ ಕಂಡವರೆಲ್ಲ ಅಕ್ಷರಶಃ ಥ್ರಿಲ್ ಆಗಿದ್ದಾರೆ. ಶೀರ್ಷಿಕೆ ನೋಡಿದವರು ಒಂದು ಸಿದ್ಧಸೂತ್ರದ ಕಲ್ಪನೆ ಮೂಡಿಸಿಕೊಂಡಿದ್ದರು. ಆದರೆ, ಈ ಸಿನಿಮಾ ಅದೆಲ್ಲವನ್ನೂ ಮೀರಿಕೊಂಡ ರಗಡ್ ಕಥೆಯನ್ನೊಳಗೊಂಡಿದೆ ಎಂಬುದನ್ನು ಸೈಡ್ ಬಿ ಟ್ರೈಲರ್ ಸಾಕ್ಷೀಕರಿಸಿದೆ! ನಿರ್ದೇಶಕ ಅರುಣ್ ಅಮುಕ್ತ ಇದೊಂದು ....