*ಜೂನ್ 30 ರಂದು ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ "ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ" ದ ನೂತನ ಕಟ್ಟಡ ಉದ್ಘಾಟನೆ* .
ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ(ಶಿವಾನಂದ ಸರ್ಕಲ್) ಉದ್ಘಾಟನಾ ಸಮಾರಂಭ ಇದೇ ಜೂನ್ 30 ರಂದು ನಡೆಯಲಿದೆ. ಸನ್ಮಾನ್ಯ ಮುಖ್ಯಮಂತ್ರಿಗಾಳಾದ ಸಿದ್ದರಾಮಯ್ಯ ಅವರು ಹೊಸ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಈ ಕುರಿತು ಮಾಹಿತಿ ನೀಡಲು ನಿರ್ಮಾಪಕರ ಸಂಘದಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು.
*"ನಾ ನಿನ್ನ ಬಿಡಲಾರೆ" ಎನ್ನುತ್ತಿದ್ದಾರೆ ಹೇಮಂತ್ ಹೆಗಡೆ* . *ಕನ್ನಡದ ಸೂಪರ್ ಹಿಟ್ ಚಿತ್ರದ ಶೀರ್ಷಿಕೆ ಮತ್ತೊಮ್ಮೆ** . ಕಿರುತೆರೆ ಹಾಗೂ ಹಿರಿತೆರೆಯಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ಹೇಮಂತ್ ಹೆಗಡೆ ನಿರ್ದೇಶಿಸಿ ಪ್ರಮುಖಪಾತ್ರದಲ್ಲೂ ನಟಿಸುತ್ತಿರುವ "ನಾ ನಿನ್ನ ಬಿಡಲಾರೆ" ಚಿತ್ರದ ಮುಹೂರ್ತ ಸಮಾರಂಭ ಪದ್ಮನಾಭನಗರದ ಶ್ರೀ ಲಕ್ಷ್ಮೀಕಾಂತ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಆರಂಭ ಫಲಕ ತೋರಿದರು. ನೈಸ್ ಸಂಸ್ಥೆಯ ಅಶೋಕ್ ಖೇಣಿ ಅವರು ಕ್ಯಾಮೆರಾ ಚಾಲನೆ ಮಾಡಿದರು. ....
*ನಾಲ್ಕು ತಲೆಮಾರಿನ ಕಥೆ ಹೇಳುವ "ಮಾನ್ ಸ್ಟರ್" ಚಿತ್ರದ ಟೀಸರ್ ಹಾಗೂ ಹಾಡು ಬಿಡುಗಡೆ* .
ಪುಟ್ಟರಾಜ ರೆಡ್ಡಿ ಅವರ ನಿರ್ಮಾಣದ, ಆರನ್ ಕಾರ್ತಿಕ್ ವೆಂಕಟೇಶ್ ಕಥೆ, ಚಿತ್ರಕಥೆ ಬರೆದು ಸಂಗೀತ ಸಂಯೋಜಿಸುವುದರೊಂದಿಗೆ ನಿರ್ದೇಶನವನ್ನು ಮಾಡಿರುವ "ಮಾನ್ ಸ್ಟರ್" ಚಿತ್ರದ ಟೀಸರ್ ಹಾಗೂ ಹಾಡು ಬಿಡುಗಡೆ ಸಮಾರಂಭ ಇತ್ತೀಚಿಗೆ ಅದ್ದೂರಿಯಾಗಿ ನೆರವೇರಿತು. ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ಮುನೇಗೌಡ, ನಿರ್ಮಾಪಕ ಹರೀಶ್, ನಟ ರಕ್ಷಕ್ ಬುಲೆಟ್ , ಸಿರಿ ಮ್ಯೂಸಿಕ್ ಸಿರಿ ಚಿಕ್ಕಣ್ಣ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ಶತಭಿಷ ಟ್ರೈಲರ್, ಕಳ್ಳ ಪೊಲೀಸ್ ಆಟ 'ಶತಭಿಷ’ ಮಳೆ ನಕ್ಷತ್ರದ ಹೆಸರು. ಇದೇ ಶೀರ್ಷಿಕೆಯಡಿ ಚಲನಚಿತ್ರವೊಂದು ನಿರ್ಮಾಣವಾಗಿದ್ದು ಇದೇ ತಿಂಗಳಲ್ಲಿ ತೆರೆಗೆ ಬರಲು ಸಿದ್ದವಾಗಿದೆ. ಅದರಂಗವಾಗಿ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಪೊಲೀಸರು, ಟೆರರಿಸ್ಟ್ ಗಳು ಹಾಗೂ ಒಂದಷ್ಟು ಯುವಕರು ಅನಿರೀಕ್ಷಿತವಾಗಿ ಒಂದು ಕಡೆ ಸೇರುವಂತಾಗಿ, ಅಲ್ಲಿ ಒಂದಷ್ಟು ಸಮಸ್ಯೆಗಳು ಎದುರಾಗುತ್ತವೆ. ಅದನ್ನೆಲ್ಲ ಎದುರಿಸಿ ಅವರು ಹೇಗೆ ಹೊರಬರುತ್ತಾರೆ ಎನ್ನುವುದೇ ಶತಭಿಷ ಚಿತ್ರದ ಕಥಾಹಂದರ. ವೆಂಕಟೇಶ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ’ಶತಭಿಷ’ ಚಿತ್ರವನ್ನು ಶ್ರೀ ದುರ್ಗಿ ವಿಷ್ಣು ಕಂಬೈನ್ಸ್ ಮೂಲಕ ಕಾಶಿ ಶೇಖರ್ ಅವರು ನಿರ್ಮಾಣ ....
ಕಂಠೀರವದಲ್ಲಿ ಸೆಟ್ಟೇರಿದ ‘ದ ಪ್ರಸೆಂಟ್’ ಹೊಸ ಪ್ರತಿಭೆಗಳಿಗೆ ಅಂತಲೇ ತೆರೆದುಕೊಂಡಿರುವ ಗ್ಲೋಬಲ್ ಎಂಟರ್ಟೈನ್ಮೆಂಟ್ ನೆಟ್ವರ್ಕ್ (ಜೆನ್) ಸಂಸ್ಥೆಯು ‘ದ ಪ್ರಸೆಂಟ್’ ಸಿನಿಮಾವನ್ನು ಮೊದಲ ಹೆಜ್ಜೆಯಾಗಿ ನಿರ್ಮಾಣ ಮಾಡುತ್ತಿದೆ. ಶುಭ ಶನಿವಾರದಂದು ಕಂಠೀರವ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ಮುಹೂರ್ತ ನಡೆಯಿತು. ಮಾಜಿ ಸಂಸದ ಎಲ್.ಶಿವರಾಮೇಗೌಡ ಅಳಿಯ ರಾಜೀವ್ರಾಥೋಡ್ ನಾಯಕನಾಗಿ ನಟಿಸುತ್ತಿರುವುದರಿಂದ, ಸಮಾರಂಭಕ್ಕೆ ಆಗಮಿಸಿ ಪ್ರಥಮ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭ ಹಾರೈಸಿದರು. ರಾಷ್ಟ್ರ ಪ್ರಶಸ್ತಿ ವಿಜೇತ ತುಮಕೂರು ಜಿಲ್ಲೆಯ ಯುವ ರೈತ ರಮೇಶ್ ಕ್ಯಾಮಾರಾ ಆನ್ ಮಾಡಿದರು. ಹಾಗೂ ....
*ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ "ಜಿಗರ್" ಚಿತ್ರ ಜುಲೈ 5 ರಂದು ಬಿಡುಗಡೆ* . ಪೂಜಾ ವಸಂತಕುಮಾರ್ ನಿರ್ಮಾಣದ, ಸೂರಿ ಕುಂದರ್ ನಿರ್ದೇಶನದ ಹಾಗೂ ಪ್ರವೀಣ್ ತೇಜ್ ನಾಯಕನಾಗಿ ನಟಿಸಿರುವ "ಜಿಗರ್" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರ ಜುಲೈ 5ರಂದು ತೆರೆಗೆ ಬರುತ್ತಿದೆ. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು. ಪ್ರೇಮಕಥೆಗಳಿಗೆ ಸೀಮಿತನಾಗಿದ್ದ ನನ್ನನ್ನು ನಿರ್ದೇಶಕರು ಈ ಚಿತ್ರದ ಮೂಲಕ ಆಕ್ಷನ್ ಹೀರೋ ಮಾಡಿದ್ದಾರೆ ....
*ಜುಲೈನಲ್ಲಿ ಅದ್ದೂರಿಯಾಗಿ ನಡೆಯಲಿದೆ "ಅಪ್ಪು ಕಪ್ ಸೀಸನ್ 2"* . *ಟೀಮ್ ಬಿಲ್ಡಿಂಗ್ ಇವೆಂಟ್ ಗೆ ಆಗಮಿಸಿ ಶುಭ ಕೋರಿದ ಅಶ್ವಿನಿ ಪುನೀತ್ ರಾಜಕುಮಾರ್* . ಕನ್ನಡ ಚಿತ್ರರಂಗದೊಂದಿಗೆ ಒಂದು ದಶಕದಿಂದ ಒಡನಾಟ ಹೊಂದಿರುವ ಚೇತನ್ ಸೂರ್ಯ ಅವರ STELLER STUDIO & EVENT MANAGEMENT ಸಂಸ್ಥೆ, PRK Audio ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಿರುವ " ಅಪ್ಪು ಕಪ್ ಸೀಸನ್ 2"(ಶಟಲ್ ಬ್ಯಾಡ್ಮಿಂಟನ್ ಟೂರ್ನಿ) ಜುಲೈ ಅಂತ್ಯದಲ್ಲಿ ನಡೆಯಲಿದೆ. ಇತ್ತೀಚಿಗೆ ಈ ಟೂರ್ನಿಯ ಟೀಮ್ ಬಿಲ್ಡಿಂಗ್ ಇವೆಂಟ್ ನಡೆಯಿತು. ಅಶ್ವಿನಿ ಪುನೀತ್ ರಾಜಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಶುಭ ಕೋರಿದರು. ಸಾಯಿ ಗೋಲ್ಡ್ ಪ್ಯಾಲೆಸ್ ಮಾಲೀಕರು ಹಾಗೂ ವಿಧಾನ ಪರಿಷತ್ ಸದಸ್ಯರು ಶರವಣ(MLC) ಸೇರಿದಂತೆ ....
*ನಾಯಕ ನಟನ ಅನಾವರಣದ ವಿಶೇಷ ವಿಡಿಯೋ ಬಿಡುಗಡೆ ಮಾಡಿ "ರಾಮರಸ" ಚಿತ್ರದ ನಾಯಕನನ್ನು ಪರಿಚಯಿಸಿದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್* . *ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್ ಈ ಚಿತ್ರದ ನಾಯಕ* . ಗುರುದೇಶಪಾಂಡೆ ಅವರು ನಿರ್ಮಿಸುತ್ತಿರುವ, ‘ಜಟ್ಟ’ ಗಿರಿರಾಜ್ ನಿರ್ದೇಶನದ ‘ರಾಮರಸ’ ಚಿತ್ರದಲ್ಲಿ "ಜಿ ಅಕಾಡೆಮಿ"ಯಲ್ಲಿ ನಟನೆ ಕಲಿತಿರುವ ಹದಿನಾರು ಪ್ರತಿಭೆಗಳು ನಟಿಸುತ್ತಿರುವುದು ಗೊತ್ತಿರುವ ವಿಷಯ. ಈ ಹದಿನಾರು ಜನ ಯುವಪ್ರತಿಭೆಗಳೊಂದಿಗೆ ಖ್ಯಾತ ನಟರೊಬ್ಬರು ನಾಯಕನಾಗಿ ನಟಿಸಲಿದ್ದಾರೆ ಎಂದು ತಿಳಿಸಲಾಗಿತ್ತು. ಈಗ "ರಾಮರಸ" ಚಿತ್ರಕ್ಕೆ ನಾಯಕನ ಆಯ್ಕೆಯಾಗಿದೆ. ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್ "ರಾಮರಸ" ಚಿತ್ರದ ....
*ಕುತೂಹಲ ಮೂಡಿಸಿದೆ "ನಸಾಬ್" ಚಿತ್ರದ ಟ್ರೇಲರ್* . *ಅಪ್ಪನ ಕಥೆಗೆ ಮಗನೇ ನಾಯಕ ಹಾಗೂ ನಿರ್ದೇಶಕ* . ಕನ್ನಡದಲ್ಲಿ ಒಳ್ಳೆಯ ಕಂಟೆಂಟ್ ಚಿತ್ರಗಳು ಹೆಚ್ಚು ಬರುತ್ತಿದೆ. ಅಂತಹುದೇ ಉತ್ತಮ ಕಂಟೆಂಟ್ ಹೊಂದಿರುವ "ನಸಾಬ್" ಕನ್ನಡ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ಅದ್ದೂರಿಯಾಗಿ ನಡೆಯಿತು. ಟ್ರೇಲರ್ ಹಾಗೂ ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಂಜಾರ ಶಕ್ತಿಪೀಠದ ಶ್ರೀ ಕುಮಾರ ಮಹಾರಾಜರು, ಮಾಜಿ ಉಪ ಸಭಾಪತಿ ರುದ್ರಪ್ಪ ಎಂ ಲಮ್ಮಾಣಿ, ಐ ಎ ಎಸ್ ಅಧಿಕಾರಿ ಜಗದೀಶ್ ಜಿ, ಮಾಜಿ ಶಾಸಕ ಪಿ.ರಾಜೀವ್, ಡಾ||ಶೋಭ ಜಿ , ಶೋಭಾ ಟಿ.ಆರ್ , ಹರೀಶ್ ಮುಂತಾದವರು ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್ ಹಾಗೂ ....
*ರಮೇಶ್ ಅರವಿಂದ್ ಹಾಗೂ ಡಾಲಿ ಧನಂಜಯ ಅವರಿಂದ "ವಿ ಸಿನಿಮಾಸ್" ಅನಾವರಣ* .. *ರಾಮಮೂರ್ತಿನಗರದಲ್ಲಿ ಆರಂಭವಾಯಿತು ಸುಸಜ್ಜಿತ ಮಲ್ಟಿಪ್ಲೆಕ್ಸ್* . ಕನ್ನಡ ಚಿತ್ರರಂಗದಲ್ಲಿ ಇದೊಂದು ಉತ್ತಮ ಬೆಳವಣಿಗೆ ಎಂದರೆ ತಪ್ಪಾಗಲಾರದು. ಚಿತ್ರಮಂದಿರಗಳು ಮುಚ್ಚುತ್ತಿರುವ ಈ ಸಂದರ್ಭದಲ್ಲಿ ನೂತನ ಚಿತ್ರಮಂದಿರ ಪ್ರಾರಂಭವಾಗಿರುವುದು ನಿಜಕ್ಕೂ ಖುಷಿಯ ವಿಚಾರ. ಹೌದು. ಇತ್ತೀಚಿಗೆ ಹೊಯ್ಸಳ ನಗರ, ರಾಮಮೂರ್ತಿ ನಗರದ ಮುಖ್ಯರಸ್ತೆಯಲ್ಲಿ "ವಿ ಸಿನಿಮಾಸ್" ಎಂಬ ನಾಲ್ಕು ಆಡಿಗಳ ಸುಸಜ್ಜಿತ ಮಲ್ಟಿಪ್ಲೆಕ್ಸ್ ಆರಂಭವಾಯಿತು. ರಮೇಶ್ ಅರವಿಂದ್ ಚಿತ್ರಮಂದಿರವನ್ನು ಉದ್ಘಾಟಿಸಿ ಮೊದಲ ಶೋ ಗೆ ಟಿಕೇಟ್ ಪಡೆದರು. ಡಾಲಿ ಧನಂಜಯ ಪ್ರೊಜೆಕ್ಟರ್ ಚಾಲನೆ ಮಾಡಿದರು. ಹಿರಿಯ ವಿತರಕ ....
*ಅಭಿನವ ಕೆಂಪೇಗೌಡ ಹೆಚ್ ಎಂ ಕೃಷ್ಣಮೂರ್ತಿ(ಜೇಡ್ರಳ್ಳಿ ಕೃಷ್ಣಪ್ಪ) ಅವರು ನಟಿಸಿ, ನಿರ್ಮಿಸಿರುವ "ನಾಡಸಿಂಹ ಕೆಂಪೇಗೌಡ" ಹಾಡು ಲೋಕಾರ್ಪಣೆ* . ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಜನರ ಮನ ಗೆದ್ದಿರುವ ಹೆಚ್ ಎಂ ಕೃಷ್ಣಮೂರ್ತಿ ಅವರು ನಿರ್ಮಿಸಿ ಹಾಗು ಕೆಂಪೇಗೌಡರ ಪಾತ್ರದಲ್ಲೂ ಅಭಿನಯಿಸಿರುವ ನಾಡಪ್ರಭು ಶ್ರೀಕೆಂಪೇಗೌಡರ ಕುರಿತಾದ "ನಾಡಸಿಂಹ ಕೆಂಪೇಗೌಡ" ಎಂಬ ಹಾಡಿನ ಲೋಕಾರ್ಪಣೆ ಇತ್ತೀಚಿಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅದ್ದೂರಿಯಾಗಿ ನೆರವೇರಿತು. ಜೆ.ಕೆ ಶರ್ಮ ಗುರೂಜಿ, ನಟ ವಸಿಷ್ಠ ಸಿಂಹ, ಹಿರಿಯ ನಟ ಅಶೋಕ್, ನಿರ್ದೇಶಕ ಟಿ.ಎಸ್. ನಾಗಾಭರಣ, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ನಟರಾದ ಧರ್ಮ, ತಬಲ ನಾಣಿ, ನೀನಾಸಂ ....
"ರಾಖಾ" ಚಿತ್ರಕ್ಕೆ ಸಚಿವ ತಂಗಡಗಿ ಚಾಲನೆ ಕುಟುಂಬದ ಗೌರವ ಉಳಿಸಿದ ಮಗನ ಕಥೆ ಕನ್ನಡ ಚಿತ್ರರಂಗದ ಹೆಸರಾಂತ ಸಾಹಿತಿ, ಸಂಭಾಷಣೆಗಾರ ಮಳವಳ್ಳಿ ಸಾಯಿಕೃಷ್ಣ ಬಹಳ ದಿನಗಳ ನಂತರ ಮತ್ತೆ ನಿರ್ದೇಶನಕ್ಕಿಳಿದಿದ್ದಾರೆ. ಯುವನಟ ಕ್ರಾಂತಿ ಕಥೆ ಬರೆದು, ನಾಯಕನಾಗಿ ಅಭಿನಯಿಸುತ್ತಿರುವ ರಾಖಾ ಚಿತ್ರಕ್ಕೆ ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಶಿವಾ ಮೂವೀಸ್ ಮೂಲಕ ಡಾ.ಕೆ.ಬಿ. ನಾಗೂರ್(ಬಾಬು) ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇತ್ತೀಚೆಗೆ ರಾಖಾ ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ರಾಖಾ ಚಿತ್ರದ ಮುಹೂರ್ತ ದೃಶ್ಯಕ್ಕೆ ಸಚಿವರಾದ ಶಿವರಾಜ್ ಎಸ್.ತಂಗಡಗಿ ಕ್ಲಾಪ್ ಮಾಡಿದರೆ, ....
ಟೆಡ್ಡಿ ಬೇರ್ ಮಧ್ಯಮ ಭಾಗದ ಕಥನ ’ಟೆಡ್ಡಿ ಬೇರ್’ ಚಿತ್ರದ ಪ್ರೊಮೋ, ಟ್ರೇಲರ್ ಹಾಗೂ ಕ್ಲೈಮಾಕ್ಸ್ದಲ್ಲಿ ಬರುವ ಗೀತೆ ಅನಾವರಣ ಕಾರ್ಯಕ್ರಮವು ಕಿಕ್ಕಿರಿದ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ಆದ್ಯಲಕ್ಷೀ ಪ್ರೊಡಕ್ಷನ್ ಅಡಿಯಲ್ಲಿ ಜ್ಯೋತಿತಾರಕೇಶ್, ಭರತ್ ಮತ್ತು ನವೀನ್ ಜಂಟಿಯಾಗಿ ಬಂಡವಾಳ ಹೂಡಿದ್ದಾರೆ. ಟಾಲಿವುಡ್ನ ಪುರಿಜಗನ್ನಾಥ್ ಸಹಾಯಕರಾಗಿದ್ದ ಲೋಕೇಶ್.ಬಿ ಸಿನಿಮಾಕ್ಕೆ ಬರವಣಿಗೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು ಇದು ನನ್ನ ಮೊದಲ ಸಿನಿಮಾ. ನಂತರ ’ಸುಡೂಕು’ ವಿಧುರ’ ’ವಿಕ್ರಮಾರ್ಕ’ ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದೇನೆ. ....
*ಈ ವಾರ ತೆರೆಗೆ ‘ಸಂಭವಾಮಿ ಯುಗೇ ಯುಗೇ* ’ ರಾಜಲಕ್ಷ್ಮೀ ಎಂಟರ್ ಟೈನ್ಮೆಂಟ್ ಸಂಸ್ಥೆಯಡಿ ಶ್ರೀಮತಿ ಪ್ರತಿಭಾ ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ಕಥೆ, ಚಿತ್ರಕಥೆ, ಬರೆದು ನಿರ್ದೇಶನ ಮಾಡಿರುವ ‘ಸಂಭವಾಮಿ ಯುಗೇ ಯುಗೇ’ ಚಿತ್ರವು ಇದೇ ಶುಕ್ರವಾರ (ಜೂನ್ 21) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ಚೇತನ್ ಚಂದ್ರಶೇಖರ್ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇದಕ್ಕೂ ಮುನ್ನ ಕೆಲವು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿದ್ದ ಚೇತನ್ ಅವರಿಗೆ ಇದು ಮೊದಲ ಸ್ವತಂತ್ರ ಪ್ರಯತ್ನ. ಇದೊಂದು ಗ್ರಾಮೀಣ ಸೊಗಡಿನ ಕಮರ್ಷಿಯಲ್ ಥ್ರಿಲ್ಲರ್ ಚಿತ್ರವಾಗಿದ್ದು, ಮಂಡ್ಯ, ಚೆನ್ನಪಟ್ಟಣ, ರಾಮನಗರ ಮುಂತಾದ ಕಡೆ ....
ಈ ವಾರ ತೆರೆಗೆ "ಚಿಲ್ಲಿ ಚಿಕನ್” ಮೆಟನೋಯ್ ಸ್ಟುಡಿಯೋಸ್ ಪ್ರೊಡಕ್ಷನ್ ಅಡಿಯಲ್ಲಿ ದೀಪ್ ಭೀಮಜಿಯಾನಿ ಮತ್ತು ಸುಧಾ ನಂಬಿಯಾರ್ ಅವರ ನಿರ್ಮಾಣದ, ಪ್ರತೀಕ್ ಪ್ರಜೋಶ್ ಅವರ ನಿರ್ದೇಶನದ, ಥ್ರಿಲ್ಲರ್ ಕಥಾಹಂದರ ಒಳಗೊಂಡ ಚಿತ್ರ ’ಚಿಲ್ಲಿ ಚಿಕನ್’ ಈ ವಾರ ರಾಜ್ಯಾದ್ಯಂತ ತೆರೆಗೆ ಬರಲಿದೆ. ಬೆಂಗಳೂರಲ್ಲಿ ನಡೆದ ನೈಜ ಘಟನೆ ಆಧಾರಿತ ಚಿತ್ರ ಇದಾಗಿದ್ದು, ಉತ್ತರ ಭಾರತದಿಂದ ಬೆಂಗಳೂರಿಗೆ ಬಂದ ಐವರು ಹುಡುಗರು ಚೈನೀಸ್ ರೆಸ್ಟೋರೆಂಟ್ ನಲ್ಲಿ ಕೆಲಸ ಮಾಡುತ್ತ, ಸ್ವಂತ ಹೋಟೆಲ್ ತೆರೆಯಲು ಮುಂದಾಗುತ್ತಾರೆ. ಅನಿರೀಕ್ಷಿತ ಘಟನೆಯೊಂದು ಇವರ ಪ್ರಯತ್ನಕ್ಕೆ ಅಡ್ಡಿಯಾಗುತ್ತದೆ. ಕೊನೆಗೆ ಅದೆಲ್ಲದರಿಂದ ಪಾರಾಗಿ ಹೋಟೆಲ್ ಮಾಡ್ತಾರಾ, ....
ಬಿಡುಗಡೆಯಾಯ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರ ಸ್ಟೂಡೆಂಟ್ ಪಾರ್ಟಿ ವೀಡಿಯೋ ಸಾಂಗ್! ಅರುಣ್ ಅಮುಕ್ತ ನಿರ್ದೇಶನದ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಸ್ಟೂಡೆಂಟ್ ಪಾರ್ಟಿ ವೀಡಿಯೋ ಸಾಂಗ್ ಬಿಡುಗಡೆಗೊಂಡಿದೆ. ಅಚ್ಚುಕಟ್ಟಾದ ಪತ್ರಿಕಾಗೋಷ್ಠಿಯಲ್ಲಿ ಈ ಸಾಂಗ್ ಅನ್ನು ಅನಾವರಣಗೊಳಿಸಲಾಗಿದೆ. ನಿರ್ದೇಶಕ ಅರುಣ್ ಅಮುಕ್ತ, ಚಂದನ್ ಶೆಟ್ಟಿ, ಚೇತನ್ ಕುಮಾರ್ ಹಾಜರಿದ್ದ ಈ ವೇದಿಕೆಯಲ್ಲಿ ಒಟ್ಟಾರೆ ಸಿನಿಮಾ ರೂಪುಗೊಂಡಿದ್ದರ ಬಗ್ಗೆ, ಸದರಿ ಪಾರ್ಟಿ ಸಾಂಗ್ ನ ವಿಶೇಷತೆಗಳ ಬಗ್ಗೆ ಒಂದಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲಾಗಿದೆ. ಈಗ ಬಿಡುಗಡೆಗೊಂಡಿರೋ ಹಾಡು ರ್ಯಾಪ್ ಶೈಲಿಯಲ್ಲಿ ಮೂಡಿ ಬಂದಿದೆ. ಚೇತನ್ ಕುಮಾರ್ ಸಾಹಿತ್ಯಕ್ಕೆ ವಿಜೇತ್ ಕೃಷ್ಣ ಸಂಗೀತ ಸಂಯೋಜನೆ ....
ಡಾಲಿ ಧನಂಜಯ್ ವೃತ್ತಿಜೀವನದ ಬಹುಮುಖ್ಯ ಸಿನಿಮಾ ’ಕೋಟಿ’ ಡಾಲಿ, ನಟರಾಕ್ಷಸ ಎಂದೇ ಕನ್ನಡ ಜನತೆಯ ಪ್ರೀತಿಗೆ ಪಾತ್ರರಾಗಿರುವ ಧನಂಜಯ ಅವರ ಹೊಚ್ಚ ಹೊಸ ಸಿನಿಮಾ ’ಕೋಟಿ’ ಬಿಡುಗಡೆಗೆ ತಯಾರಾಗಿದೆ. ಹಲವಾರು ಕಾರಣಗಳಿಗೆ ಈ ಸಿನಿಮಾ ಧನಂಜಯ ಅವರ ವೃತ್ತಿ ಜೀವನದಲ್ಲೇ ಬಹುಮುಖ್ಯ ಸಿನಿಮಾವಾಗಲಿದೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಸೆಟ್ಟೇರಿದ್ದ ’ಕೋಟಿ’ ಈಗಾಗಲೇ ಒಂದು ವರ್ಷಕ್ಕಿಂತ ಕಡಿಮೆ ಅವಧಿಯಲ್ಲೇ ಎಲ್ಲ ಕೆಲಸಗಳ ಮುಗಿಸಿ ಜೂನ್ 14ಕ್ಕೆ ಬಿಡುಗಡೆಗೆ ಸಿದ್ಧವಾಗಿದೆ. ಧನಂಜಯ್ ಪೂರ್ಣಪ್ರಮಾಣದ ಹೀರೋ ಆದಮೇಲೆ ಮಾಡಿದ ದೊಡ್ಡ ಬಜೆಟ್ಟಿನ ಸಿನಿಮಾ ಇದಾಗಿದೆ. ’ಜಿಯೋ ಸ್ಟುಡಿಯೋಸ್’ನಂತಹ ದೊಡ್ಡ ಸಂಸ್ಥೆಯ ಮೊದಲ ಕನ್ನಡ ಸಿನಿಮಾ ಇದಾಗಿದ್ದು ಅವರ ನಾಯಕನಟನ ....
ಕೌರವ ವೆಂಕಟೇಶ್ ನಿರ್ದೇಶನದ ಕೊಕೇನ್ ಬಿ.ಸಿ.ಪಾಟೀಲ್ ನಿರ್ಮಾಣ, ಅಭಿನಯದ ’ಕೌರವ’ ಚಿತ್ರದ ಮೂಲಕ ಸಾಹಸ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದ, ಬೆಂಗಳೂರಿನ ಕೌರವ ವೆಂಕಟೇಶ್ ಇಲ್ಲಿಯವರೆಗೂ 1600ಕ್ಕೂ ಹೆಚ್ಚು ಚಿತ್ರಗಳಿಗೆ ಸಾಹಸ ಸಂಯೋಜಕರಾಗಿ, ಇಂದು ದಕ್ಷಿಣ ಭಾರತದ ಹೆಸರಾಂತ ಫೈಟ್ ಮಾಸ್ಟರ್ ಆಗಿ ಗುರುತಿಸಿಕೊಂಡಿದ್ದಾರೆ. ಇದೆಲ್ಲಾ ಅನುಭವದಿಂದ ಈಗ ಹೊಸ ಪ್ರಯತ್ನ ಎನ್ನುವಂತೆ ’ಕೊಕೇನ್’ ಸಿನಿಮಾಕ್ಕೆ ಸಾಹಸ ಮತ್ತು ಆಕ್ಷನ್ ಕಟ್ ಹೇಳುತ್ತಿದ್ದಾರೆ. ದ ಡಫಿನಿಷನ್ ಆಫ್ ಪ್ಯಾಟ್ರಿಯಾಟಿಸಮ್ ಎಂಬ ಅಡಿಬರಹವಿದೆ. ಅಯೋಧ್ಯರಾಮ್ ಪ್ರೊಡಕ್ಷನ್ಸ್ ಅಡಿಯಲ್ಲಿ ಪುನೀತ್ ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶಕರ ....
*ಆಗಸ್ಟ್ ನಲ್ಲಿ ತೆರೆಗೆ ಬರಲಿದೆ "ಸಿಗ್ನಲ್ ಮ್ಯಾನ್ 1971" ಚಿತ್ರ* . ಹಿಂದೂಸ್ಥಾನ್ ಮುಕ್ತ ಮೀಡಿಯಾ ಎಂಟರ್ ಟೈನರ್ ಲಾಂಛನದಲ್ಲಿ ಗಣೇಶ್ ಪ್ರಭು ಬಿ.ವಿ ಅವರು ನಿರ್ಮಿಸಿರುವ, ಕೆ.ಶಿವರುದ್ರಯ್ಯ ನಿರ್ದೇಶನದ ಹಾಗೂ ಪ್ರಕಾಶ್ ಬೆಳವಾಡಿ, ರಾಜೇಶ್ ನಟರಂಗ, ವೆಂಕಟೇಶ್ ಪ್ರಸಾದ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ "ಸಿಗ್ನಲ್ ಮ್ಯಾನ್ 1971" ಚಿತ್ರ ಆಗಸ್ಟ್ ನಲ್ಲಿ ಬಿಡುಗಡೆಯಾಗಲಿದೆ. ಇತ್ತೀಚೆಗೆ ನಡೆದ ಪತ್ರಿಕಾಗೋಷ್ಟಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. 1971ರಲ್ಲಿ ನಡೆದ ಇಂಡೋ - ಪಾಕ್ ಕದನದ ಹಿನ್ನೆಲೆಯನ್ನು ಈ ಚಿತ್ರದಲ್ಲಿ ಅಳವಡಿಸಿಕೊಡಲಾಗಿದೆ. ಜೊತೆಗೆ ಯಾರು ಇಳಿಯದ, ಹತ್ತದ ರೈಲ್ವೆ ನಿಲ್ದಾಣದಲ್ಲಿ ಇಪ್ಪತ್ತು ವರ್ಷಗಳ ಕಾಲ ಕಾರ್ಯ ನಿರ್ವಹಿಸುವ ....
ಕೋಟಿಯಲ್ಲಿ ಮಿಂಚಲು ನವಪ್ರತಿಭೆಗಳು ರೆಡಿ ಬರುವ ಶುಕ್ರವಾರ ಬಿಡುಗಡೆಗೆ ಸಿದ್ಧವಿರುವ ’ಕೋಟಿ’ ಸಿನಿಮಾ ಈಗಾಗಲೇ ಟ್ರೇಲರ್ ಮತ್ತು ಹಾಡುಗಳಿಂದ ಸದ್ದು ಮಾಡುತ್ತಿದೆ. ಡಾಲಿ ಧನಂಜಯ್ ’ಕೋಟಿ’ ಎಂಬ ಒಬ್ಬ ಸಾಮಾನ್ಯ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. 'ಕೋಟಿ’ ಚಿತ್ರದ ಇನ್ನೊಂದು ವಿಶೇಷತೆ ಇಬ್ಬರು ಹೊಸ ಪ್ರತಿಭೆಗಳು. ’ಕೋಟಿ’ಯಲ್ಲಿ ಧನಂಜಯ್ಗೆ ತಾಯಿಯಾಗಿ ತಾರಾ ಅಭಿನಯಿಸಿದ್ದರೆ, ತಮ್ಮ - ತಂಗಿಯಾಗಿ ಪೃಥ್ವಿ ಶಾಮನೂರು ಮತ್ತು ತನುಜಾ ವೆಂಕಟೇಶ್ ಅಭಿನಯಿಸಿದ್ದಾರೆ. ಇತ್ತಿಚೆಗೆ ನಡೆದ ಚಿತ್ರದ ....