ಶಿಡ್ಲಘಟ್ಟದಿಂದ ಸ್ವಿಟ್ಜರ್ ಲ್ಯಾಂಡ್ ವರೆಗೆ ಸಂಜು ವೆಡ್ಸ್ ಗೀತಾ ಕಥೆ.. ಮಳೆಯಂತೇ ಬಾ... ಬೆಳಕಂತೇ ಬಾ... ಸುದೀಪ್ ಹರಸಿದ ಹಾಡು ಸಂಜು ವೆಡ್ಸ್ ಗೀತಾ ಕಥೆ ಸುದೀಪ್ ಕೊಟ್ಟಿದ್ದು ! ಪವಿತ್ರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಚಲವಾದಿ ಕುಮಾರ್ ಅವರ ನಿರ್ಮಾಣದ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ-2 ಜನವರಿ 10ರಂದು ಪ್ರಪಂಚದಾದ್ಯಂತ ಬಿಡುಗಡೆಯಾಗಲಿದೆ. ಶಿಡ್ಲಘಟ್ಟದ ರೇಶ್ಮೆ ಬೆಳೆಗಾರರ ವಿಷಯವನ್ನಿಟ್ಟುಕೊಂಡು ನವಿರಾದ ಪ್ರೇಮಕಥೆಯನ್ನು ನಿರ್ದೇಶಕ ನಾಗಶೇಖರ್ ಈ ಚಿತ್ರದಲ್ಲಿ ಹೇಳಲು ಪ್ರಯತ್ನಿಸಿದ್ದಾರೆ. ಆನಂದ ಆಡಿಯೋ ಮೂಲಕ ರಿಲೀಸಾಗಿರುವ ಹಾಡುಗಳು ಕೇಳುಗರ ಮನ ಗೆದ್ದಿವೆ. ಇದೀಗ ಈ ಚಿತ್ರದ ಮತ್ತೊಂದು ....
*ಮುಂಗಾರು ಮಳೆ"ಗೆ ಹದಿನೆಂಟರ ಹರೆಯ* . *ಈ ಸವಿನೆನಪಿನಲ್ಲಿ "ಮನದ ಕಡಲಿ" ನಿಂದ ಬಂತು ಮನಮೋಹಕ ಗೀತೆ* . ಹದಿನೆಂಟು ವರ್ಷಗಳ ಹಿಂದೆ ಇ.ಕೆ. ಎಂಟರ್ ಟೈನರ್ಸ್ ಲಾಂಛನದಲ್ಲಿ ಇ. ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಸೂಪರ್ ಹಿಟ್ ಚಲನಚಿತ್ರ "ಮುಂಗಾರು ಮಳೆ". ಈ ಯಶಸ್ವಿ ಚಿತ್ರ ಬಿಡುಗಡೆಯಾಗಿ ಇದೇ ಡಿಸೆಂಬರ್ ಗೆ ಹದಿನೆಂಟು ವರ್ಷ ತುಂಬಿದೆ. ಹದಿನೆಂಟು ವರ್ಷಗಳ ಬಳಿಕ ಈ ಜೋಡಿ ಮತ್ತೆ ಒಂದಾಗಿದೆ. ಇ.ಕೃಷ್ಣಪ್ಪ ನಿರ್ಮಾಣದಲ್ಲಿ, ಯೋಗರಾಜ್ ಭಟ್ ನಿರ್ದೇಶನದಲ್ಲಿ "ಮನದ ಕಡಲು" ಮೂಡಿ ಬರುತ್ತಿದೆ. "ಮುಂಗಾರು ಮಳೆ" ಬಿಡುಗಡೆಯಾದ ದಿನವೇ "ಮನದ ಕಡಲು" ಚಿತ್ರಕ್ಕಾಗಿ ನಿರ್ದೇಶಕ ಯೋಗರಾಜ್ ಭಟ್ ಬರೆದಿರುವ, ವಿ.ಹರಿಕೃಷ್ಣ ಸಂಗೀತ ನೀಡಿರುವ ....
*ಹಿರಿಯ ರಾಜಕೀಯ ಮುಖಂಡರಾದ ಪಿ.ಜಿ.ಆರ್ ಸಿಂಧ್ಯಾ ಅವರಿಂದ ಪ್ರಸಿದ್ಧ್ ನಿರ್ದೇಶನದ "ಶೇರ್" ಚಿತ್ರದ ಟೀಸರ್ ಅನಾವರಣ* *ಕಿರಣ್ ರಾಜ್ ಅಭಿನಯದ ಈ ಚಿತ್ರದಲ್ಲಿ ಕ್ರಿಸ್ ಎಂಬ ನವನಟ ಖಡಕ್ ವಿಲನ್ ಆಗಿ ಚಿತ್ರರಂಗಕ್ಕೆ ಎಂಟ್ರಿ..* ಸುದರ್ಶನ್ ಸುಂದರರಾಜ್ ನಿರ್ಮಾಣದ, ಪ್ರಸಿದ್ಧ್ ನಿರ್ದೇಶನದ ಹಾಗೂ "ಕನ್ನಡತಿ" ಧಾರಾವಾಹಿ ಮೂಲಕ ಜನಪ್ರಿಯರಾಗಿರುವ ಕಿರಣ್ ರಾಜ್ ನಾಯಕನಾಗಿ ನಟಿಸಿರುವ "ಶೇರ್" ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಹಿರಿಯ ರಾಜಕೀಯ ಮುಖಂಡರಾದ ಪಿ.ಜಿ.ಆರ್ ಸಿಂಧ್ಯಾ ಟೀಸರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಸಾಕಷ್ಟು ಗಣ್ಯರು ಹಾಗೂ ಚಿತ್ರತಂಡದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಈ ಚಿತ್ರದ ಮೂಲಕ ನಿರ್ಮಾಪಕ ....
ಡಾ.ವಿಷ್ಣುವರ್ಧನ್ ನೆನಪಿಸುವ ಸಿಂಹದಹಾದಿ ಟೆಲಿಚಿತ್ರ
ಸಾಹಸ ಸಿಂಹ ಡಾ.ವಿಷ್ಣುವರ್ಧನ್ ನಮ್ಮನ್ನು ಅಗಲಿ ಹದಿನೈದು ವರ್ಷ ಆಗಿದೆ. ಆದರೂ ಅಭಿಮಾನಿಗಳು ಸೆಪ್ಟಂಬರ್ ೧೮ ಹುಟ್ಟುಹಬ್ಬ, ಡಿಸೆಂಬರ್ ೩೦ ಪುಣ್ಯದಿನದಂದು ಏನಾದರೂಂದು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಲೇ ಇರುತ್ತಾರೆ. ಈ ನಿಟ್ಟಿನಲ್ಲಿ ಜಿ.ಕೆ.ಶಶಿರಾಜ್ ದೊರೆ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಸಿಂಹದ ಹಾದಿ’ ಟೆಲಿಚಿತ್ರವು ಮೂವತ್ತು ನಿಮಿಷ ಅವಧಿ ಇರುತ್ತದೆ. ‘ಹೆಜ್ಜೆಜ್ಜೆಲಿ ಅಚ್ಚೊತ್ತಿದೆ ಅಭಿಮಾನದ ಧರ್ಮ’ ಎಂಬ ಅಡಿಬರಹವಿದೆ.
ಜನವರಿ 24ಕ್ಕೆ ವಿರಾಟ್ ಅಭಿನಯದ ‘ರಾಯಲ್’ ಬಿಡುಗಡೆ ಇದು ದಿನಕರ್ ತೂಗುದೀಪ ನಿರ್ದೇಶನದ ಚಿತ್ರ ಜಯಣ್ಣ ಕಂಬೈನ್ಸ್ ಬ್ಯಾನರ್ ಅಡಿ ನಿರ್ಮಾಣವಾಗಿರುವ ಚಿತ್ರ ಜನವರಿ ಎರಡನೇ ವಾರದಲ್ಲಿ ಟ್ರೇಲರ್ ಬಿಡುಗಡೆ ಜಯಣ್ಣ ಕಂಬೈನ್ಸ್ ಬ್ಯಾನರ್ ಅಡಿ ಜಯಣ್ಣ ಮತ್ತು ಭೋಗೇಂದ್ರ ಜೊತೆಯಾಗಿ ನಿರ್ಮಿಸಿರುವ, ದಿನಕರ್ ತೂಗುದೀಪ ನಿರ್ದೇಶನದಲ್ಲಿ ವಿರಾಟ್ ಅಭಿನಯಿಸಿರುವ ‘ರಾಯಲ್’ ಚಿತ್ರವು ಜನವರಿ 24ರಂದು ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ. ಇದಕ್ಕೂ ಮೊದಲು ಚಿತ್ರದ ಮೂರು ಹಾಡುಗಳು ಬಿಡುಗಡೆಯಾಗಿದ್ದು, ಸದ್ಯದಲ್ಲೇ ಚಿತ್ರದ ಟ್ರೇಲರ್ ಬಿಡುಗಡೆ ಆಗಲಿದೆ. ಅದಕ್ಕೂ ಮೊದಲು ಚಿತ್ರತಂಡದವರು ಮೊದಲ ಪತ್ರಿಕಾಗೋಷ್ಠಿ ....
*ಹೊಸವರ್ಷದ ಮೊದಲ ಚಿತ್ರವಾಗಿ ಜನವರಿ 3 ರಂದು ಬಿಡುಗಡೆಯಾಗಲಿದೆ "ಗನ್ಸ್ ಅಂಡ್ ರೋಸಸ್"* .. *ಕಥೆಗಾರ ಅಜಯ್ ಕುಮಾರ್ ಪುತ್ರ ಅರ್ಜುನ್ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶ* . ಸುಮಾರು ವರ್ಷಗಳಿಂದ ಕನ್ನಡದ ಹೆಸರಾಂತ ಚಿತ್ರಗಳಿಗೆ ಕಥೆ ಬರೆದಿರುವ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್, " ಗನ್ಸ್ ಅಂಡ್ ರೋಸಸ್" ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪ್ರವೇಶ ಮಾಡಿದ್ದಾರೆ. ಇವರ ನಟನೆಯ ಮೊದಲ ಚಿತ್ರ ಇದ್ದಾಗಿದ್ದು, 2025 ರ ಜನವರಿ 3, ಹೊಸವರ್ಷದ ಮೊದಲ ಚಿತ್ರವಾಗಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಹೆಚ್ ಆರ್ ನಟರಾಜ್ ಅವರು ದ್ರೋಣ ಕ್ರಿಯೇಷನ್ಸ್ ಲಾಂಛನದಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದು, ಶ್ರೀನಿವಾಸ್ ಕುಮಾರ್ ನಿರ್ದೇಶಿಸಿದ್ದಾರೆ. ....
ತಲ್ವಾರ್ ಮೇಕಿಂಗ್ ಜತೆ ಮೊದಲ ಹಾಡು ಈ ಹಿಂದೆ ಮಮ್ತಾಜ್ ಎಂಬ ಚಿತ್ರ ನಿರ್ದೇಶಿಸಿದ್ದ ಮುರಳಿ ಅವರ ಸಾರಥ್ಯದ ಮತ್ತೊಂದು ಚಿತ್ರ ತಲ್ವಾರ್. ಧರ್ಮ ಕೀರ್ತಿರಾಜ್ ನಾಯಕನಾಗಿ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಜನವರಿ ಕೊನೆಯ ವಾರ ತೆರೆಗೆ ಬರುತ್ತಿದೆ. ಇತ್ತೀಚೆಗೆ ಈ ಚಿತ್ರದ ಮೇಕಿಂಗ್ ವಿಡಿಯೋ ಹಾಗೂ ಮೊದಲ ಗೀತೆಯನ್ನು ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಅವರು ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಮಾಸ್ ಕಂಟೆಂಟ್ ಒಳಗೊಂಡಿರುವ ಈ ಚಿತ್ರದ ‘ಪಲ್ ಮರುಕಳಿಸಿತೇನೋ..’ ಎಂಬ ಮಧುರ ಗೀತೆ ಸರಿಗಮ ಕನ್ನಡ ಯೂಟ್ಯೂಬ್ ಚಾನೆಲ್ನಲ್ಲಿ ರಿಲೀಸಾಗಿದೆ. ಟಚ್ ಸ್ಟೋನ್ ಪಿಕ್ಚರ್ಸ್ ಬ್ಯಾನರ್ ....
*"ಗ್ಯಾಪಲ್ಲೊಂದು ಸಿನಿಮಾ" ಮಾಡಿ "ಓಮಿನಿ"ಯಲ್ಲಿ "ಪಾಠಶಾಲಾ"ಗೆ ಬಂದ ಹೆದ್ದೂರ್ ಮಂಜುನಾಥ್ ಶೆಟ್ಟಿ* . *"ಪಾಕಶಾಲಾ" ಪ್ರವೀಣರಿಂದ "ಪಾಠಶಾಲಾ" ಟೀಸರ್ ಅನಾವರಣ* . ಕೆಲವು ವರ್ಷಗಳ ಹಿಂದೆ "ಗ್ಯಾಪಲ್ಲೊಂದು ಸಿನಿಮಾ" ಮಾಡಿ ನಂತರ "ಓಮಿನಿ" ಎಂಬ ಚಿತ್ರ ನಿರ್ದೇಶಿಸಿರುವ ಹೆದ್ದೂರ್ ಮಂಜುನಾಥ್ ಶೆಟ್ಟಿ ಈಗ "ಪಾಠಶಾಲಾ" ಎಂಬ ಚಿತ್ರ ಮಾಡಿದ್ದಾರೆ. ಇತ್ತೀಚಿಗೆ ಈ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಿಹಿಕಹಿ ಚಂದ್ರು ಹಾಗೂ ಸಿಹಿಕಹಿ ಗೀತಾ ದಂಪತಿ ಟೀಸರ್ ಅನಾವರಣ ಮಾಡಿ "ಪಾಠಶಾಲಾ" ತಂಡಕ್ಕೆ ಶುಭ ಕೋರಿದರು. ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು, ಹೆಚ್ ಎಸ್ ರಾಘವೇಂದ್ರ ಶೆಟ್ಟಿ, ಸಂತೋಷ್ ಕುಮಾರ್ ಶೆಟ್ಟಿ, ವಿಜಯ್ ಶೆಟ್ಟಿ, ....
*ತೆರೆಗೆ ಬರುತ್ತಿದೆ ಮತ್ತೊಂದು ಕಡಲತಡಿಯ ಕಥೆ* *'ಕುಡ್ಲ ನಮ್ದು ಊರುʼ ಚಿತ್ರದ ಟ್ರೇಲರ್ ಮತ್ತು ಆಡಿಯೋ ಬಿಡುಗಡೆ* *ಕರಾವಳಿಯ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ಹೊಸಚಿತ್ರ ತೆರೆಗೆ ಸಿದ್ದ* ಬಹುತೇಕ ದಕ್ಷಿಣ ಕನ್ನಡ ಜಿಲ್ಲೆಯ ಕಡಲತಡಿಯ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ʼಕುಡ್ಲ ನಮ್ದು ಊರುʼ ಸಿನೆಮಾ ತೆರೆಗೆ ಬರಲು ತಯಾರಾಗುತ್ತಿದೆ. ಸದ್ಯ ಅಂತಿಮ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿರುವ ʼಕುಡ್ಲ ನಮ್ದು ಊರುʼ ಚಿತ್ರತಂಡ ಇದೀಗ ಸಿನೆಮಾದ ಟ್ರೇಲರ್ ಮತ್ತು ಆಡಿಯೋವನ್ನು ಬಿಡುಗಡೆ ಮಾಡಿದೆ. ʼಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿʼ ಮಾಜಿ ಅಧ್ಯಕ್ಷ ಭಾ. ಮ. ಹರೀಶ್, ʼಕನ್ನಡ ಚಲನಚಿತ್ರ ನಿರ್ಮಾಪಕರ ಸಂಘʼದ ಅಧ್ಯಕ್ಷ ಉಮೇಶ್ ....
*ಹಲವು ಗಣ್ಯರ ಉಪಸ್ಥಿತಿಯಲ್ಲಿ ಅನಾವರಣವಾಯಿತು "ಕ್ಯಾಪಿಟಲ್ ಸಿಟಿ" ಚಿತ್ರದ ಟ್ರೇಲರ್ ಹಾಗೂ ಹಾಡುಗಳು* . *ಆರ್ ಅನಂತರಾಜು ನಿರ್ದೇಶನದ ಈ ಚಿತ್ರಕ್ಕೆ ರಾಜೀವ್ ರೆಡ್ಡಿ ನಾಯಕ* ಇಪ್ಪತ್ತಕ್ಕೂ ಅಧಿಕ ಸಮಾನ ಮನಸ್ಕರು ಆರಂಭಿಸಿರುವ "ಇನಿಫಿನಿಟಿ ಕ್ರಿಯೇಷನ್ಸ್" ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ, "ಅಪ್ಪು ಪಪ್ಪು", " ಮಸ್ತ್ ಮಜಾ ಮಾಡಿ", "ನಂದ" ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಆರ್ ಅನಂತರಾಜು ನಿರ್ದೇಶನದ ಹಾಗೂ "ರಂಬಾ" ಸೇರಿದಂತೆ ಕೆಲವು ಚಿತ್ರಗಳಲ್ಲಿ ನಾಯಕರಾಗಿ ನಟಿಸಿರುವ ರಾಜೀವ್ ರೆಡ್ಡಿ ನಾಯಕನಾಗಿ ನಟಿಸಿರುವ "ಕ್ಯಾಪಿಟಲ್ ಸಿಟಿ" ಚಿತ್ರದ ಹಾಡುಗಳನ್ನು ಜಯನಗರ ವಿಧಾನಸಭಾ ಸದಸ್ಯರಾದ ಸಿ.ಕೆ.ರಾಮಮೂರ್ತಿ, ಬಿ.ಜೆ.ಪಿ ....
ಕೆಡಿ ಚಿತ್ರದ ಮೊದಲ ಹಾಡು ಶಿವ ಶಿವ ಲಿರಿಕಲ್ ವಿಡಿಯೋ ಬಿಡುಗಡೆ ಇನ್ನೇನು 2025ರ ಹೊಸ ವರ್ಷಕ್ಕೆ ಕೆಲವೇ ದಿನಗಳು ಬಾಕಿಯಿದೆ, ವರ್ಷದ ಕೊನೆಯಲ್ಲಿ ಬಂದ ಯುಐ, ಮ್ಯಾಕ್ಸ್ ಚಿತ್ರಗಳು ಭರ್ಜರಿ ಯಶಸ್ಸು ಕಾಣುತ್ತಿವೆ, ಈಗ ಹೊಸ ವರ್ಷದ ಆರಂಭದಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿರುವ ಚಿತ್ರ ಎಂದರೆ ಕೆಡಿ. ಏಕ್ ಲವ್ ಯಾ ನಂತರ ಜೋಗಿ ಪ್ರೇಮ್ ನಿರ್ದೇಶನ ಹಾಗೂ ಆಕ್ಷನ್ ಪ್ರಿನ್ಸ್ ದ್ರುವ ಸರ್ಜಾ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ಇದಾಗಿದ್ದು, ಚಿತ್ರವನ್ನು ದಕ್ಷಿಣ ಭಾರತದ ಹೆಸರಾಂತ ನಿರ್ಮಾಣ ಸಂಸ್ಥೆ ಕೆ.ವಿ.ಎನ್. ಪ್ರೊಡಕ್ಷನ್ಸ್ ನಿರ್ಮಿಸುತ್ತಿದೆ, ಕೆಡಿ ಮಾತಿನ ಭಾಗದ ಚಿತ್ರೀಕರಣ ಮುಗಿದು, 2 ಹಾಡುಗಳ ಶೂಟಿಂಗ್ ಮಾತ್ರವೇ ಬಾಕಿ ಇದೆ. ಮಂಗಳವಾರ ಈ ....
ಸ್ವೇಚ್ಛಾ ಟ್ರೈಲರ್ ಆಡಿಯೋ ಬಿಡುಗಡೆ ಪ್ರೀತಿ-ಬಾಂಧವ್ಯದ ಕಥೆಗಳ ಸಂಗಮ ಎರಡು ಕಥೆಗಳನ್ನು ಪ್ಯಾರಲಲ್ ಆಗಿ ಹೇಳಲು ಪ್ರಯತ್ನಿಸಿರುವ ನಿರ್ದೇಶಕ ಸುರೇಶ್ ರಾಜು ಅವರು ಆ ಕಥೆಗಳಲ್ಲಿ ಬರೋ ಐದು ಪಾತ್ರಗಳು, ಅವರವರ ಸ್ವೇಚ್ಚೆಗೋಸ್ಕರ ಯಾವ ರೀತಿ ಹೋರಾಟ ನಡೆಸುತ್ತವೆ ಎಂಬುದನ್ನು ’ಸ್ವೇಚ್ಛಾ’ ಚಿತ್ರದ ಮೂಲಕ ಹೇಳಲು ಪ್ರಯತ್ನಿಸಿದ್ದಾರೆ. ಸ್ಟಾರ್ ಮಸ್ತ್ ವಿಕ್ಟರಿ ಆರ್ಟ್ಸ್ ಬ್ಯಾನರ್ ಅಡಿ ಸ್ಟಾರ್ ಮಸ್ತಾನ್ ಹಾಗೂ ಕೆ.ಆರ್. ಮುರಹರಿ ರೆಡ್ಡಿ ಅವರ ನಿರ್ಮಾಣದ ಸ್ವೇಚ್ಛಾ ಚಿತ್ರದ ಟ್ರೈಲರ್ ಬಿಡುಗಡೆ ಹಾಗೂ ಎರಡು ಹಾಡುಗಳ ಪ್ರದರ್ಶನ ಇತ್ತೀಚೆಗೆ ನೆರವೇರಿತು, ಅನ್ವಿಶ್ ಹಾಗೂ ಪವಿತ್ರಾ ನಾಯಕ್ ಚಿತ್ರದ ನಾಯಕ, ....
*ಬೆಂಗಳೂರು ಫಿಲಂ ಸಿಟಿಯಲ್ಲಿ "ವರ್ಣವೇದಂ" ಹಾಡು* .
*ಇದು "ನಾನು ಮತ್ತು ಗುಂಡ" ಚಿತ್ರದ ನಿರ್ದೇಶಕರ ಹೊಸಚಿತ್ರ* .
"ನಾನು ಮತ್ತು ಗುಂಡ" ಚಿತ್ರದ ಖ್ಯಾತಿಯ ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ ನೂತನ ಚಿತ್ರ "ವರ್ಣವೇದಂ". ಇತ್ತೀಚಿಗೆ ಈ ಚಿತ್ರದ
ಶೀರ್ಷಿಕೆ ಗೀತೆಯ ಚಿತ್ರೀಕರಣ ಕನಕಪುರ ರಸ್ತೆಯಲ್ಲಿ ಮಹಮ್ಮದ್ ಗೌಸ್ ಅವರು ನಿರ್ಮಿಸಿರುವ ಬೆಂಗಳೂರು ಫಿಲಂ ಸಿಟಿ ಎಂಬ ನೂತನ ಸ್ಟುಡಿಯೋದಲ್ಲಿ ನಡೆಯಿತು. ಹಾಡು ಹಾಗೂ ಚಿತ್ರದ ಕುರಿತು ಚಿತ್ರತಂಡದವರು ಮಾತನಾಡಿದರು.
ಕಣ್ಣಾ ಮುಚ್ಚೆ ಕಾಡೇ ಗೂಡೇ ಟೀಸರ್ ಬಿಡುಗಡೆ ಮಕ್ಕಳು ಇಷ್ಟಪಡುವ ‘ಕಣ್ಣಾ ಮುಚ್ಚೆ ಕಾಡೇ ಗೂಡೇ’ ಹಾಡು ಈಗ ಸಿನಿಮಾದ ಶೀರ್ಷಿಕೆಯಾಗಿ ಹೊರಬಂದಿದೆ. ಪ್ರಚಾರದ ಎರಡನೇ ಹಂತವಾಗಿ ಟೀಸರ್ ಹಾಗೂ ಪುನೀತ್ ಆರ್ಯ ಸಾಹಿತ್ಯ, ವಾಸುಕಿವೈಭವ್-ಸುರಭಿ ಭಾರದ್ವಾಜ್ ಗಾಯನ, ಸಂತೋಷ್ ಜೋಶ್ವಾ ಸಂಗೀತದ ‘ನಿನ್ನ ನೋಡಿದಾಗಲೇ ಪ್ರೀತಿಯಲಿ ಬಿದ್ದಾಗಿದೆ’ ಹಾಡು ಬಿಡುಗಡೆ ಕಾರ್ಯಕ್ರಮ ಎಸ್ಆರ್ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ತಂಡಕ್ಕೆ ಶುಭ ಹಾರೈಸಲು ನಟ ನಾಗೇಂದ್ರ ಅರಸ್, ನಿರ್ಮಾಪಕ ಪ್ರಶಾಂತ್ನಾಯಕ್ ಆಗಮಿಸಿದ್ದರು. ಕಣ್ಣಾ ಮುಚ್ಚೆ ಹಾಡು ಸಾವಿನ ಗೀತೆಯಾಗಿದೆ. ....
'ಎಪ್.ಐ.ಆರ್. 6 to 6' ಟ್ರೈಲರ್ ಬಿಡುಗಡೆ ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ಅಭಿನಯದ ಕುತೂಹಲಕಾರಿ ಥ್ರಿಲ್ಲರ್ ಚಿತ್ರ ’ಎಫ್.ಐ.ಆರ್. 6 to 6' ಬಿಡುಗಡೆಗೆ ಸಿದ್ದವಾಗಿದೆ. ಈ ಹಿಂದೆ ಪಟ್ಟಾಭಿಷೇಕ ಎಂಬ ಚಿತ್ರವನ್ನು ನಿರ್ಮಿಸಿದ್ದ ಭಾಗ್ಯರಮೇಶ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕೆ.ವಿ.ರಮಣರಾಜ್ ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಓಂಜಿ ಅವರ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ. ಸತೀಶ್ ಬಾಬು ಹಾಗೂ ಎಂ.ಎಸ್. ತ್ಯಾಗರಾಜ್ ಸಂಗೀತ ಸಂಯೋಜನೆ ಮಾಡಿರುವ ಈ ಚಿತ್ರದ ಟ್ರೈಲರ್ ಹಾಗೂ ಆಡಿಯೋ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಫಿಲಂ ಚೇಂಬರ್ ಉಪಾಧ್ಯಕ್ಷ ಶಿಲ್ಪಾ ಶ್ರೀನಿವಾಸ್, ಹಿರಿಯ ನಿರ್ದೇಶಕ ಕೂಡ್ಲು ರಾಮಕೃಷ್ಣ ಮುಖ್ಯ ಅತಿಥಿಗಳಾಗಿ ....
*ಫೆಬ್ರವರಿ 7 ಕ್ಕೆ "ಅನ್ ಲಾಕ್ ರಾಘವ"ನ ಆಗಮನ* .!! *ಮಿಲಿಂದ್ - ರೆಚೆಲ್ ಡೇವಿಡ್ ಜೋಡಿ..ತೆರೆಯ ಮೇಲೆ ಮಾಡಲಿದೆ ಮೋಡಿ* .. ಚಿತ್ರ ಆರಂಭವಾದಗಿನಿಂದಲೂ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ "ಅನ್ ಲಾಕ್ ರಾಘವ" ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಫೆಬ್ರವರಿ 7 ರಂದು ಈ ಚಿತ್ರ ಬಿಡುಗಡೆಯಾಗಲಿದೆ. ಯುವ ಪ್ರತಿಭೆಗಳಾದ ಮಿಲಿಂದ್ ಹಾಗೂ ರೆಚೆಲ್ ಡೇವಿಡ್(ಲವ್ ಮಾಕ್ಟೇಲ್) ನಾಯಕ-ನಾಯಕಿಯಾಗಿ ನಟಿಸಿರುವ ಈ ಚಿತ್ರವನ್ನು ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ನಿರ್ಮಿಸಿದ್ದು, ದೀಪಕ್ ಮಧುವನಹಳ್ಳಿ ನಿರ್ದೇಶಿಸಿದ್ದಾರೆ. ಚಿತ್ರದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ....
*ಚಂದನವನದ ಗಣ್ಯರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು ಬಹು ನಿರೀಕ್ಷಿತ "UI" ಚಿತ್ರದ ಪ್ರೀ ರಿಲೀಸ್ ಇವೆಂಟ್* . *ವರ್ಣರಂಜಿತ ಸಮಾರಂಭದಲ್ಲಿ ಶಿವರಾಜಕುಮಾರ್, ದುನಿಯಾ ವಿಜಯ್, ಡಾಲಿ ಧನಂಜಯ್ ಸೇರಿದಂತೆ ಅನೇಕ ಗಣ್ಯರು ಭಾಗಿ* . ಜಿ.ಮನೋಹರನ್ ಮತ್ತು ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಒಂಭತ್ತು ವರ್ಷಗಳ ಬಳಿಕ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ "UI" ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಅದ್ದೂರಿಯಾಗಿ ನೆರವೇರಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ದುನಿಯಾ ವಿಜಯ್, ಡಾಲಿ ಧನಂಜಯ, ಪ್ರಿಯಾಂಕಾ ಉಪೇಂದ್ರ, ನಿರ್ಮಾಪಕರಾದ ಉದಯ್ ಕೆ ಮೆಹ್ತಾ, ರಮೇಶ್ ರೆಡ್ಡಿ, ಕಾರ್ತಿಕ್ ಗೌಡ, ಯೋಗಿ ಜಿ ರಾಜ್, ಜಗದೀಶ್, ನಿರ್ದೇಶಕರಾದ ಪವನ್ ....
*ಸ್ಯಾಂಡಲ್ ವುಡ್ ನ ಬ್ಯಾಚುಲರ್ ಸ್ಟಾರ್ ನಟರಿಂದ "ಅಪಾಯವಿದೆ ಎಚ್ಚರಿಕೆ" ಚಿತ್ರದ "ಬ್ಯಾಚುಲರ್ಸ್ ಬದುಕು" ಸಾಂಗ್ ಬಿಡುಗಡೆ* . *ಇದು "ಅಣ್ಣಯ್ಯ" ಧಾರಾವಾಹಿಯ ಜನಪ್ರಿಯ ನಟ ವಿಕಾಶ್ ಉತ್ತಯ್ಯ ಅಭಿನಯದ ಚಿತ್ರ* . ಕನ್ನಡ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ "ಅಣ್ಣಯ್ಯ" ಧಾರಾವಾಹಿಯ ಮೂಲಕ ಕನ್ನಡಿಗರ ಮನೆಮನ ತಲುಪಿರುವ ನಟ ವಿಕಾಶ್ ಉತ್ತಯ್ಯ ನಾಯಕನಾಗಿ ನಟಿಸುತ್ತಿರುವ "ಅಪಾಯವಿದೆ ಎಚ್ಚರಿಕೆ" ಚಿತ್ರದ "ಬ್ಯಾಚುಲರ್ಸ್ ಬದುಕು" ಹಾಡು ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಕನ್ನಡ ಚಿತ್ರರಂಗದ ಬ್ಯಾಚುಲರ್ ನಾಯಕ ನಟರಾದ ತಿಲಕ್, ರಾಕೇಶ್ ಅಡಿಗ, ನವೀನ್ ಶಂಕರ್ ಹಾಗೂ ವಿಕ್ಕಿ ವರುಣ್, ಚಿತ್ರದ ನಿರ್ದೇಶಕರೂ ....
*ಡಾ||ಹೆಚ್ ಎಂ ಕೃಷ್ಣಮೂರ್ತಿ (ಜೇಡ್ರಳ್ಳಿ ಕೃಷ್ಣಪ್ಪ) ನೇತೃತ್ವದ ’AKGTV' ಗೆ ಒಂದು ವರ್ಷದ ಸಂಭ್ರಮ* . *ಸುಂದರ ಸಮಾರಂಭದಲ್ಲಿ ಅನೇಕ ಗಣ್ಯರ ಉಪಸ್ಥಿತಿ* . ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಜನರ ಮನಸ್ಸನ್ನು ಗೆದ್ದಿರುವ ಡಾ||ಹೆಚ್ ಎಂ ಕೃಷ್ಣಮೂರ್ತಿ (ಜೇಡ್ರಳ್ಳಿ ಕೃಷ್ಣಪ್ಪ) ಅವರು ನಾಡಪ್ರಭು ಕೆಂಪೇಗೌಡರ ಬಗ್ಗೆ ಜನರಿಗೆ ಹೆಚ್ಚಿನ ಮಾಹಿತಿ ನೀಡುವ ಸಲುವಾಗಿ ’AKGTV' ಯೂಟ್ಯೂಬ್ ವಾಹಿನಿಯನ್ನು ಕಳೆದವರ್ಷ ಆರಂಭಿಸಿದ್ದರು. ಇದೇ ಸಂದರ್ಭದಲ್ಲಿ "ನಾಡಸಿಂಹ ಕೆಂಪೇಗೌಡ" ಎಂಬ ಅದ್ದೂರಿಗೀತೆಯನ್ನು ಸಹ ಬಿಡುಗಡೆ ಮಾಡಿದ್ದರು. ಈಗ ’AKGTV' ಗೆ ಮೊದಲನೇ ವಾರ್ಷಿಕೋತ್ಸವ. ಇತ್ತೀಚಿಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಈ ವಾಹಿನಿ ಪ್ರಥಮ ವಾರ್ಷಿಕೋತ್ಸವ ಸಮಾರಂಭ ....
*ಜನವರಿಯಲ್ಲಿ ಆರಂಭವಾಗಲಿದೆ "ಪ್ರೊ ಲುಡೋ ಸ್ಟಾರ್ ಲೀಗ್"*
*ಹಿರಿತೆರೆ ಹಾಗೂ ಕಿರುತೆರೆ ಕಲಾವಿದರು ಭಾಗಿ* .
ರಿಯಾಲಿಟಿ ಶೋಗಳು ಮತ್ತು ಕ್ರೀಡಾ ಲೀಗ್ಗಳ ಈ ಜಮಾನಾದಲ್ಲಿ ಇದೇ ಮೊದಲ ಬಾರಿಗೆ "ಪ್ರೊ ಲುಡೋ ಸ್ಟಾರ್ ಲೀಗ್" ಒಂದು ವಿಶೇಷ ಮನರಂಜನಾ ಕ್ರೀಡೆಯಾಗಿ ಹೊರಹೊಮ್ಮುತ್ತಿದೆ. ಜನವರಿಯಲ್ಲಿ ಆರಂಭವಾಗಲಿದೆ. ಈ ಕ್ರೀಡೆಯ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಆಯೋಜಕರು, ನಿರೂಪಕರು ಹಾಗೂ ಆಟಗಾರರು ಮಾತನಾಡಿದರು.
ಆಸ್ತ್ರ ಪ್ರೊಡಕ್ಷನ್ಸ್ ಲಂಚು ಲಾಲ್ ಈ ಲೀಗ್ ನ ಆಯೋಜಕರಾಗಿದ್ದು, ಸುದೇಶ್ ಭಂಡಾರಿ ನಿರ್ದೇಶಕರು ಹಾಗೂ ಅಜ್ಫರ್ ರಜಾಕ್ ಕಾರ್ಯನಿರ್ವಾಹಕ ನಿರ್ಮಾಪಕರಾಗಿದ್ದಾರೆ.