ಶೀರ್ಷಿಕೆ ಹಳೇದು ಕಥೆ ಹೊಸತು
೮೦ರ ದಶಕದಲ್ಲಿ ಸಿದ್ದಲಿಂಗಯ್ಯ ನಿರ್ದೇಶನದ ‘ಸಂಭವಾಮಿ ಯುಗೇ ಯುಗೇ’ ಚಿತ್ರವು ತೆರೆ ಕಂಡಿತ್ತು. ಕಟ್ ಮಾಡಿದರೆ ಈಗ ಅದೇ ಹೆಸರಿನಲ್ಲಿ ಸಿನಿಮಾವೊಂದು ಸಿದ್ದಗೊಂಡಿದೆ. ಮೊನ್ನೆಯಷ್ಟೇ ಡೋಲು ತಮಟೆ ಹಾಡು ಬಿಡುಗಡೆ ಕಾರ್ಯಕ್ರಮ ನಡೆಯಿತು. ಜಾನಪದ ಶೈಲಿಯಲ್ಲಿ ಮೂಡಿಬಂದಿರುವ ಸಾಂಗ್‌ನ್ನು ಶೃತಿಹರಿಹರನ್ ಅನಾವರಣಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. ಅರಸುಅಂತಾರೆ ಸಾಹಿತ್ಯ, ಗೀತಾ ನೃತ್ಯ, ಪೂರನ್ ಶೆಟ್ಟಿಗಾರ್ ಸಂಗೀತ, ನಕಾಶ್ ಹಾಗೂ ಸ್ಪರ್ಶ ಧ್ವನಿ ಇರಲಿದೆ. ಪ್ರತಿಭಾ ನಿರ್ಮಾಣ ಮಾಡಿದ್ದಾರೆ.
ಸಿಂಹಗುಹೆಯಲ್ಲಿ ವಿಡಿಯೋ ಪೆನ್ ಡ್ರೈವ್ ಸದ್ದು ! ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನೇ ಹೋಲುವ ಝಲಕ್ ಒಳಗೊಂಡ ಸಿಂಹಗುಹೆ ಚಿತ್ರದ ಟೀಸರ್ ಇದೀಗ ಭಾರೀ ಸದ್ದು ಮಾಡುತ್ತಿದೆ. ಅಶ್ಲೀಲ ವಿಡಿಯೋ ಪ್ರಕರಣ, ಪೆನ್ ಡ್ರೈವ್ ನಂಥ ವಿಚಾರಗಳೂ ಈ ಟೀಸರ್ ನಲ್ಲಿದೆ. ಈಗಾಗಲೇ ಬಿಡುಗಡೆಯಾದ ಈ ಟೀಸರ್ ಹಲವಾರು ಪ್ರಶ್ನೆ ಹಾಗು ಕುತೂಹಲ ಹುಟ್ಟು ಹಾಕಿದೆ. ಸಮರ್ಥ, ತಾಜಾ ಚಿತ್ರಗಳ ನಂತರ ಎಸ್.ಜಿ.ಆರ್. ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಸಿಂಹಗುಹೆ ಚಿತ್ರದ ಟೀಸರ್ ಸದ್ಯ ಒಂದಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ನಿರ್ದೇಶಕ ಎಸ್‌ಜಿಆರ್ ಮಾತನಾಡಿ, ಸಸ್ಪೆನ್ಸ್, ಕ್ರೈಂ, ಮರ್ಡರ್ ಮಿಸ್ಟ್ರಿ ಕಥೆ ....
ಈವಾರ ತೆರೆಗೆ ಥ್ರಿಲ್ಲರ್ ಎವಿಡೆನ್ಸ್ ಕ್ರೈಂ, ಸಸ್ಪೆನ್ಸ್, ಥ್ರಿಲ್ಲರ್ ಜೊತೆಗೊಂದು ತ್ರಿಕೋನ ಪ್ರೇಮಕಥಾಹಂದರ ಒಳಗೊಂಡ ಚಿತ್ರ ಎವಿಡೆನ್ಸ್ ಈ ಶುಕ್ರವಾರ (ಮೇ.24) ರಾಜ್ಯಾದ್ಯಂತ ತೆರೆ ಕಾಣಲಿದೆ. ನಟ, ನಿರ್ದೇಶಕ ಉಪೇಂದ್ರ ಅವರ ಜೊತೆ ಷ್.. ಚಿತ್ರದಿಂದ ಉಪೇಂದ್ರ-2 ವರೆಗೂ ಕೆಲಸ ಮಾಡಿದ ಪ್ರವೀಣ್ ಸಿ. ಪಿ. ಅವರು ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಶ್ರೀಧೃತಿ ಪ್ರೊಡಕ್ಷನ್ ಲಾಂಛನದಲ್ಲಿ ಡಾ.ಕೊಡ್ಲಾಡಿ ಸುರೇಂದ್ರ ಶೆಟ್ಟಿ ಅವರು ಅರ್ಪಿಸಿ, ಶ್ರೀನಿವಾಸ್ ಪ್ರಭು ಕೆ.ಮಾದೇಶ್(ಕೋಡಿಹಳ್ಳಿ), ನಟರಾಜ್ ಸಿ.ಎಸ್.(ಚನ್ನಸಂದ್ರ) ಅವರ ನಿರ್ಮಾಣದ ಎವಿಡೆನ್ಸ್ ಚಿತ್ರಕ್ಕೆ ಅರವಿಂದ್ ಅಚ್ಚು, ....
ಚೈನೀಸ್ ಹೋಟೆಲ್ ಹುಡುಗರ "ಚಿಲ್ಲಿ ಚಿಕನ್" ಟೀಸರ್ ಬಿಡುಗಡೆ ಮೆಟನೋಯ್ ಸ್ಟುಡಿಯೋಸ್ ಪ್ರೊಡಕ್ಷನ್ ಅಡಿಯಲ್ಲಿ ದೀಪ್ ಭೀಮಜಿಯಾನಿ ಮತ್ತು ಸುಧಾ ನಂಬಿಯಾರ್ ಅವರು ನಿರ್ಮಾಣದ, ಪ್ರತೀಕ್ ಪ್ರಜೋಶ್ ಅವರ ನಿರ್ದೇಶನದ, ಬೆಂಗಳೂರಲ್ಲಿ ನಡೆದ ನೈಜ ಘಟನೆ ಆಧಾರಿತ ಚಿತ್ರ ಚಿಲ್ಲಿ ಚಿಕನ್. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆಯಾಯಿತು. ಕೆಲಸಕ್ಕೆಂದು ಉತ್ತರ ಭಾರತದಿಂದ ಬಂದ ಐವರು ಹುಡುಗರು ಬೆಂಗಳೂರಿನಲ್ಲಿ ಚೈನೀಸ್ ರೆಸ್ಟೋರೆಂಟ್ ವೊಂದರಲ್ಲಿ ಕೆಲಸ ಮಾಡುತ್ತ, ತಾವೇ ಸ್ವಂತ ಹೋಟೆಲ್ ತೆರೆಯಲು ಮುಂದಾಗುತ್ತಾರೆ. ಅನಿರೀಕ್ಷಿತ ಘಟನೆಯೊಂದು ಇವರ ಪ್ರಯತ್ನಕ್ಕೆ ಅಡ್ಡಿಯಾಗುತ್ತದೆ. ಕೊನೆಗೆ ಅದೆಲ್ಲದರಿಂದ ಪಾರಾಗಿ ....
*ಹಾಫ್ ಸೆಂಚೂರಿ ಬಾರಿಸಿದ ಬ್ಲಿಂಕ್ ಸಿನಿಮಾ..ಅಮೇಜಾನ್ ಒಟಿಟಿಯಲ್ಲಿಯೂ ಚಿತ್ರಕ್ಕೆ ಭರಪೂರ ಮೆಚ್ಚುಗೆ* ಶ್ರೀನಿಧಿ ಬೆಂಗಳೂರು ನಿರ್ದೇಶನದ ಟೈಮ್ ಟ್ರಾವೆಲ್ ಸಿನಿಮಾ "ಬ್ಲಿಂಕ್" ಅಮೇಜಾನ್ ಒಟಿಟಿಯಲ್ಲಿ ಬಿಡುಗಡೆಯಾಗಿದ್ದು, ಅದ್ಭುತ ಪ್ರತಿಕ್ರಿಯೆ ಪಡೆಯುತ್ತಿದೆ. ಈ ಸಿನಿಮಾದ ಕುರಿತು ಜನ ಸೋಷಿಯಲ್ ಮೀಡಿಯಾದಲ್ಲಿ ಒಳ್ಳೆ ಅಭಿಪ್ರಾಯಗಳನ್ನು ಹಂಚಿಕೊಳ್ತಿದ್ದಾರೆ. ಒಟಿಟಿಗೂ ಎಂಟ್ರಿ ಕೊಟ್ಟಿರುವ ಚಿತ್ರವೀಗ ಯಶಸ್ವಿಯಾಗಿ 50 ದಿನ ಪೂರೈಸಿದೆ. ಕನ್ನಡ ಸಿನಿಮಾಗಳನ್ನು ಪ್ರೇಕ್ಷಕ ನೋಡುತ್ತಿಲ್ಲ ಎಂಬ ಅಪವಾದದ ನಡುವೆ ಬ್ಲಿಂಕ್ ಆಫ್ ಸೆಂಚೂರಿ ಬಾರಿಸಿರುವುದು ಇಡೀ ತಂಡಕ್ಕೆ ಖುಷಿ ಕೊಟ್ಟಿದೆ. ಈ ಕ್ಷಣಗಳನ್ನು ಚಿತ್ರತಂಡ ಮಾಧ್ಯಮದವರೊಟ್ಟಿಗೆ ....
'ಮೂರನೇ ಕೃಷ್ಣಪ್ಪ’ ಸಿನಿಮಾ ಸೀಕ್ರೆಟ್ ಬಿಚ್ಚಿಟ್ಟ ರಂಗಾಯಣ ರಘು ಹಾಗೂ ಸಂಪತ್ ಮೈತ್ರಿಯಾ..ಇದೇ 24ಕ್ಕೆ ಚಿತ್ರ ರಿಲೀಸ್ ಟ್ರೇಲರ್ ಮೂಲಕ ಗರಿಗೆದರಿರುವ ಮೂರನೇ ಕೃಷ್ಣಪ್ಪ ಇದೇ 24ಕ್ಕೆ ಬಿಡುಗಡೆ..ಪಾತ್ರದ ಬಗ್ಗೆ ಏನಂದ್ರು ರಂಗಾಯಣ ರಘು ಕನ್ನಡ ಚಿತ್ರರಂಗದಲ್ಲೀಗ ನಮ್ಮ ನೆಲದ ಕಥೆಗಳ ಸಿನಿಮಾಗಳು ಹೊಸ ಕ್ರಾಂತಿ ಮಾಡುತ್ತೀವೆ. ಕಾಂತಾರ, ಕಾಟೇರ ಸಕ್ಸಸ್ ಬಳಿಕ ಇಲ್ಲಿನ ನೆಲದ ಘಮಲನ್ನು ಹೊತ್ತು ಬರ್ತಿರುವ ಚಿತ್ರ ಮೂರನೇ ಕೃಷ್ಣಪ್ಪ. ಕೋಲಾರ ಭಾಗದ ಭಾಷೆಯ ಸೊಗಡನ್ನು ಪ್ರೇಕ್ಷಕರಿಗೆ ಉಣಬಡಿಸಲು ಹೊರಟಿರುವ ಮೂರನೇ ಕೃಷ್ಣಪ್ಪ ಚಿತ್ರದ ಬಗ್ಗೆ ಚಿತ್ರತಂಡ ಸಾಕಷ್ಟು ಮಾಹಿತಿಯನ್ನು ಹಂಚಿಕೊಂಡಿದೆ. ಇತ್ತೀಚೆಗೆಷ್ಟೇ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮೂರನೇ ಕೃಷ್ಣಪ್ಪ ....
ಅನರ್ಥ ಹಾಡು ಮತ್ತು ಟೀಸರ್ ಬಿಡುಗಡೆ ’ಬಲಹೀನತೆಯಿಂದ ಕ್ರೂರತನ ಹುಟ್ಟುತ್ತದೆ’ ಎಂಬ ವಾಕ್ಯವನ್ನು ರೋಮ್ ಫಿಲಾಸಫರ್ ಸೆನಕ ಅಂದೇ ಹೇಳಿದ್ದರು. ಇಂತಹುದೆ ಅಂಶಗಳನ್ನು ಹೆಕ್ಕಿಕೊಂಡು ’ಅನರ್ಥ’ ಎನ್ನುವ ಸಿನಿಮಾದ ಅಡಿಬರಹಕ್ಕೆ ಬಳಸಲಾಗಿ, ಸೆನ್ಸಾರ್‌ನಿಂದ ಪ್ರಶಂಸೆ ಪಡೆದುಕೊಂಡಿದೆ. ಪ್ರಚಾರದ ಮೊದಲ ಹಂತವಾಗಿ ಟೀಸರ್ ಹಾಗೂ ಸಾಂಗ್, ರೇಣುಕಾಂಬ ಸ್ಟುಡಿಯೋದಲ್ಲಿ ಕಿಕ್ಕಿರಿದ ಜನರು ಎದುರು ಲೋಕಾರ್ಪಣೆಗೊಂಡಿತು. ನಿರ್ದೇಶಕರು ಮಾಧ್ಯಮಮಿತ್ರರನ್ನು ಮುಖ್ಯ ಅತಿಥಿ ಎಂದು ಪರಿಗಣಿಸಿದ್ದರಿಂದ, ಹಿರಿಯ ಪತ್ರಕರ್ತರಿಂದ ಟೇಸರ್ ಹಾಗೂ ಸಹ ನಿರ್ಮಾಪಕಿ ಜೆ.ಅಂಜಲಿ ಪುತ್ರಿಯರಾದ ಕುಮಾರಿ ಜಯಕೀರ್ತಿ ಮತ್ತು ಜಯಕನ್ನಿಕ ಜಂಟಿಯಾಗಿ ಹಾಡನ್ನು ಬಿಡುಗಡೆ ....
30 ಕೋಟಿ ಬಜೆಟ್ ವೆಬ್ ಸರಣಿಯಲ್ಲಿ ಮದರ್ ತೆರೇಸಾ ಕಥೆ.... ಬಡವರು ಹಾಗೂ ದೀನದಲಿತರ ಸೇವೆಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟಿದ್ದ ಮಹಿಳೆ, ಪದ್ಮಶ್ರೀ ಪುರಸ್ಕೃತೆ, ಶಾಂತಿಗಾಗಿ ನೋಬೆಲ್ ಪ್ರಶಸ್ತಿ ಪಡೆದ ಮದರ್ ತೆರೇಸಾ ಅವರ ಜೀವನ ಚರಿತ್ರೆ ಇದೀಗ ವೆಬ್ ಸರಣಿಯಲ್ಲಿ ಮೂಡಿಬರಲಿದೆ. ಸಾಹಿತಿ, ಚಿತ್ರಕಥೆಗಾರ ದಿ. ಜಾನ್ ಪಾಲ್ ಪುತ್ತುಸ್ಸೆರಿ, ಹಾಗೂ ನಿರ್ದೇಶಕ ಪಿ. ಚಂದ್ರಕುಮಾರ್ ಸೇರಿ ಮೂರು ವರ್ಷಗಳಿಂದ ಇವರ ಬಗ್ಗೆ ಮಾಹಿತಿ ಕಲೆಹಾಕಿ ಈ ಸೀರೀಸ್ ಮಾಡುತ್ತಿದ್ದಾರೆ. ಮದರ್ ತೆರೇಸಾ ವೆಬ್ ಸರಣಿಯ ಶೀರ್ಷಿಕೆ ಹಾಗೂ ಬ್ಯಾನರ್ ಅನಾವರಣ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಈಗಾಗಲೇ ಮಲಯಾಳಂ ಚಿತ್ರರಂಗದಲ್ಲಿ ದೊಡ್ಡ ಹೆಸರುವ ....
*ಟ್ರೇಲರ್ ನಲ್ಲಿ ಕುತೂಹಲ ಮೂಡಿಸಿದೆ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ "ದ ಜಡ್ಜ್ ಮೆಂಟ್"* . *ಬಹು ನಿರೀಕ್ಷಿತ ಈ ಚಿತ್ರ ಮೇ 24 ರಂದು ದೇಶಾದ್ಯಂತ ಬಿಡುಗಡೆ* . G9 communication media & entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ "ದ ಜಡ್ಜ್ ಮೆಂಟ್" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. MMB legacy ಯಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ನಿರ್ಮಾಪಕ ಉದಯ್ ಕೆ ಮಹ್ತಾ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲಿಗೆ ಮಾತನಾಡಿದ ನಿರ್ದೇಶಕ ಗುರುರಾಜ ಕುಲಕರ್ಣಿ, ....
*ಐ ಪಿ ಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರಿಂದ "ಇದು ನಮ್ ಶಾಲೆ" ಚಿತ್ರದ ಹಾಡಿನ ಅನಾವರಣ* . ಶ್ರೀ ಜೇನುಕಲ್ ಪ್ರೊಡಕ್ಷನ್ ಇವರ ಮೊದಲ ಕಾಣಿಕೆ, "ಇದು ನಮ್ ಶಾಲೆ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನೆರೆವೇರಿತು. ಚಿತ್ರದಲ್ಲಿ ಎರಡು ಹಾಡುಗಳಿದ್ದು, ಮೊದಲ ಹಾಡನ್ನು ಖ್ಯಾತ ಐ ಪಿ ಎಸ್ ಅಧಿಕಾರಿ ರವಿ ಡಿ ಚನ್ನಣ್ಣವರ್ ಬಿಡುಗಡೆ ಮಾಡಿದರು. ಎರಡನೇ ಗೀತೆಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಅನಾವರಣಗೊಳಿಸಿದರು. ಇದೇ ಸಮಯದಲ್ಲಿ ಚಿತ್ರದ ಪೋಸ್ಟರ್ ಸಹ ಬಿಡುಗಡೆಯಾಯಿತು. ಸಾಕಷ್ಟು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು. ಇದು ಖಾಸಗಿ ಹಾಗೂ ಸರ್ಕಾರಿ ಶಾಲೆಯ ಸುತ್ತಲಿನ ....
25 ದಿನ ಪೂರೈಸಿದ ಸಾಮ್ರಾಟ್ ಮಾಂಧಾತ ಹೇಮಂತ್ ಪ್ರೊಡಕ್ಷನ್ಸ್ ಅಡಿ ಹೇಮಂತ್ ಕುಮಾರ್ ನಿರ್ದೇಶನ ಮಾಡಿರುವ, ಪೌರಾಣಿಕ ಕಥಾಹಂದರ ಹೊಂದಿರುವ "ಸಾಮ್ರಾಟ್ ಮಂಧಾತ" ಚಿತ್ರ ದಿನದಿಂದ ದಿನಕ್ಕೆ ಜನಮನ್ನಣೆ ಗಳಿಸುತ್ತ ಸಾಗಿ, ಇದೀಗ ಬೆಂಗಳೂರಿನ ಉಲ್ಲಾಸ್ ಥೇಟರಿನಲ್ಲಿ ಯಶಸ್ವಿಯಾಗಿ 25 ದಿನಗಳನ್ನು ಪೂರೈಸಿದೆ. ಈಗ ಚಿತ್ರವನ್ನು ರಾಜ್ಯಾದ್ಯಂತ ರಿಲೀಸ್ ಮಾಡುವ ಉದ್ದೇಶ ಹೊಂದಿರುವ ಚಿತ್ರತಂಡ ಮಾಧ್ಯಮಗಳ ಮುಂದೆ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿತು. ನಿರ್ದೇಶಕ ಹೇಮಂತ್ ಮಾತನಾಡುತ್ತ ಆರಂಭದಲ್ಲಿ ನಮ್ಮ ಚಿತ್ರವನ್ನು 20 ಥೇಟರುಗಳಲ್ಲಾದರೂ ರಿಲೀಸ್ ಮಾಡಬೇಕೆಂಬ ಆಸೆಯಿತ್ತು. ಆದರೆ ಬಾಡಿಗೆ ಕಟ್ಟುವ ಶಕ್ತಿ ನಮ್ಮಲ್ಲಿರಲಿಲ್ಲ. ಆಗ ....
ವಿದ್ಯಾರ್ಥಿ ವಿದ್ಯಾರ್ಥಿನಿಯರೇ: ಟ್ರೈಲರ್ ಮೂಲಕ ದುಮ್ಮಿಕ್ಕಿತು ಹರೆಯದ ತೊರೆ! ರ್ಯಾಪರ್ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ಚಿತ್ರ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’. ಶೀರ್ಷಿಕೆಯಲ್ಲಿಯೇ ಟೀನೇಜ್ ಸ್ಟೋರಿಯ ಕಂಪು ಹೊಂದಿರುವ ಈ ಸಿನಿಮಾ ಈಗಾಗಲೇ ನಾನಾ ಕ್ರೀಯಾಶೀಲ ಚಟುವಟಿಕೆಗಳ ಮೂಲಕ ಪ್ರೇಕ್ಷಕರನ್ನು ತಲುಪಿಕೊಂಡಿತ್ತು. ಆ ಕಾರಣದಿಂದಲೇ ಎಲ್ಲರೂ ಟ್ರೈಲರ್ ನತ್ತ ದೃಷ್ಟಿ ನೆಟ್ಟಿದ್ದರು. ಇದೀಗ ಚಿತ್ರತಂಡ ಯುವ ಆವೇಗದಿಂದ ತೊನೆದಾಡುತ್ತಿರುವಂತೆ ಭಾಸವಾಗುವ ಟ್ರೈಲರ್ ಅನ್ನು ಬಿಡುಗಡೆಗೊಳಿಸಿದೆ. ಅದರೊಳಗೆ ಹದಿಹರೆಯದ ಮನಸುಗಳ ನಾನಾ ಮಗ್ಗುಲುಗಳು ಹರೆಯದ ತೊರೆಯೊಂದಿಗೆ ದುಮ್ಮಿಕ್ಕಿ ಹರಿದಿವೆ. ಈ ಟ್ರೈಲರ್ ಅನ್ನು ಸೈಡ್ ಎ ಅಂತ ಹೆಸರಿಸಲಾಗಿದೆ. ....
*ಹೆಚ್ ಎಸ್ ಆರ್ ಲೇಔಟ್ ನಲ್ಲಿ ಆರಂಭವಾಯಿತು ನಾಯಕಿ ಎಸ್ತರ್ ನರೋನ್ಹ ಅವರ "FRIMOUSSE" ಸಲೂನ್, ಮೇಕಪ್ ಸ್ಟುಡಿಯೋ ಹಾಗೂ ಅಕಾಡೆಮಿ* .
ಕಳೆದ ಹತ್ತು ವರ್ಷಗಳಿಂದ ಕನ್ನಡ, ತೆಲುಗು ಸೇರಿದಂತೆ ಅನೇಕ ಭಾಷೆಗಳ ಚಿತ್ರಗಳಲ್ಲಿ ನಟಿಸಿ ಅಭಿಮಾನಿಗಳ ಮನ ಗೆದ್ದಿರುವ ನಾಯಕಿ ಎಸ್ತರ್ ನರೋನ್ಹ, ಗಾಯಕಿಯಾಗೂ ಜನಪ್ರಿಯ. ಈಗ ಎಸ್ತರ್ ನರೋನ್ಹ ಹೊಸ ಹೆಜ್ಜೆ ಇಟ್ಟಿದ್ದಾರೆ.
ಬೆಂಗಳೂರಿನ ಹೆಚ್ ಎಸ್ ಆರ್ ಬಡಾವಣೆಯಲ್ಲಿ "FRIMOUSSE" ಸಲೂನ್, ಮೇಕಪ್ ಸ್ಟುಡಿಯೋ ಹಾಗೂ ಅಕಾಡೆಮಿ ಆರಂಭಿಸಿದ್ದಾರೆ. ಇತ್ತೀಚೆಗೆ ಇದರ ಉದ್ಘಾಟನೆ ಅದ್ದೂರಿಯಾಗಿ ನೆರವೇರಿತು. ಈ ಸಲೂನ್ ಬಗ್ಗೆ ಎಸ್ತರ್ ನರೋನ್ಹ ಮಾಹಿತಿ ನೀಡಿದ್ದಾರೆ.
*ಸ್ಯಾಂಡಲ್ ವುಡ್ ಕ್ವೀನ್ ಗಾಗಿ ಶುರು ಕ್ವೀನ್ ಪ್ರೀಮಿಯರ್ ಲೀಗ್...QPL ಕ್ರಿಕೆಟ್ ಪಂದ್ಯಾವಳಿ ಹಿಂದಿದೆ ಒಂದೊಳ್ಳೆ ಉದ್ದೇಶ* *ಬ್ಯಾಟು ಬಾಲು ಹಿಡಿದು ಕ್ರಿಕೆಟ್ ಆಡಲು ರೆಡಿ ಎಂದ ಕ್ವೀನ್ಸ್..ಕಿರುತೆರೆ ಹಾಗೂ ಹಿರಿತೆರೆ ಹೆಣ್ಮಕ್ಕಳಿಗಾಗಿ ಶುರು QPL* ಕನ್ನಡ ಚಿತ್ರರಂಗದಲ್ಲಿ ಸೆಲೆಬ್ರಿಟಿಗಳಿಗಾಗಿ ಹಲವರು ಕ್ರಿಕೆಟ್ ಪಂದ್ಯಾವಳಿಗಳಿವೆ. ಸಿಸಿಎಲ್, ಕೆಸಿಸಿ, ಟಿಪಿಎಲ್ ಸೇರಿದಂತೆ ಹತ್ತಕ್ಕೂ ಹೆಚ್ಚು ಕ್ರಿಕೆಟ್ ಟೂರ್ನಮೆಂಟ್ ಗಳಿವೆ. ಆದರೆ ಕಿರುತೆರೆ ಹಾಗೂ ಹಿರಿತೆರೆ ಮಹಿಳೆಯರಿಗಾಗಿ ಯಾವುದೇ ಕ್ರಿಕೆಟ್ ಪಂದ್ಯಾವಳಿಗಳಿಲ್ಲ. ಹೀಗಾಗಿ ಕ್ರಿಯೇಟಿವ್ ಫ್ರೆಂಡ್ಸ್ ಕಂಪನಿ ಕ್ವೀನ್ ಪ್ರೀಮಿಯರ್ ಲೀಗ್ ಎಂಬ ಹೊಸ ಪರಿಕಲ್ಪನೆಯನ್ನು ಪರಿಚಯಿಸಿದೆ. ಈ ....
*ಬಿ.ಎಂ.ಎಸ್ ಕಾಲೇಜಿನಲ್ಲಿ "ಗೌರಿ" ಚಿತ್ರದ ಮೊದಲ ಹಾಡಿನ ಅನಾವರಣ* . *ಇದು ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ಅಭಿನಯದ ಚೊಚ್ಚಲ ಚಿತ್ರ* . ಪತ್ರಕರ್ತ, ನಿರ್ದೇಶಕ ಹಾಗೂ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ "ಗೌರಿ" ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಇಂದ್ರಜಿತ್ ಲಂಕೇಶ್ ನಿರ್ಮಿಸಿ, ನಿರ್ದೇಶಿಸಿರುವ ಈ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚಿಗೆ ಬಸವನಗುಡಿಯ ಬಿ.ಎಂ.ಎಸ್ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ, ಸಾವಿರಾರು ವಿದ್ಯಾರ್ಥಿಗಳ ಸಮ್ಮಖದಲ್ಲಿ "ಗೌರಿ" ಚಿತ್ರದ ಮೊದಲ ಹಾಡು ಲೋಕಾರ್ಪಣೆಯಾಯಿತು. ....
*ಮತ್ತೊಂದು ಕರಾವಳಿ ಕಥೆ ಹೊತ್ತು ಬಂದ ಅಧಿಪತ್ರ ಟೀಸರ್...ಪ್ರಾಮಿಸಿಂಗ್ ಆಗಿದೆ ಮೊದಲ ಝಲಕ್* *ಟೀಸರ್ ಮೂಲಕವೇ ಗರಿಗೆದರಿದ ’ಅಧಿಪತ್ರ’ ಸಿನಿಮಾ...ಕರಾವಳಿ ಭಾಗದಲ್ಲಿ ಇಂದಿಗೂ ಆಚರಣೆ ಯಲ್ಲಿರುವ ಆಟಿ ಕಳಂಜಾ ,, ಹುಲಿ ಕುಣಿದ ಟೀಸರ್ ಸ್ಪೆಷಾಲಿಟಿ ಏನು?* *ಟೀಸರ್ ನಲ್ಲಿಯೇ ಕುತೂಹಲ ಕೆರಳಿಸಿದ ರೂಪೇಶ್ ನಟನೆಯ ಅಧಿಪತ್ರ ಸಿನಿಮಾ* *ಕರಾವಳಿಯ ಭಾಗದ ಸುತ್ತ ಅಧಿಪತ್ರ...ಕುತೂಹಲ ಹೆಚ್ಚಿಸಿದ ಟೀಸರ್* ಸಿನಿಮಾವೊಂದು ಆರಂಭವಾದ ಬಳಿಕ ಕ್ರಿಯಾಶೀಲತೆಯ ಹಾದಿಯಲ್ಲಿಯೇ ಪ್ರೇಕ್ಷಕರನ್ನು ಸೆಳೆಯೋದಿದೆಯಲ್ಲಾ? ಅದು ನಿಜಕ್ಕೂ ಸವಾಲಿನ ಸಂಗತಿ. ಈ ನಿಟ್ಟಿನಲ್ಲಿ ನೋಡುವುದಾದರೆ, ಅಧಿಪತ್ರ ಮೊದಲ ಪ್ರಯತ್ನದಲ್ಲಿಯೇ ಗೆದ್ದಂತಿದೆ. ....
*ಕುಂದಾಪುರದ ಆನೆಗುಡ್ಡೆ ಗಣಪತಿ ದೇಗುಲದಲ್ಲಿ ಗಾಡ್ ಪ್ರಾಮಿಸ್ ಸಿನಿಮಾಗೆ ಮುಹೂರ್ತ..ಸೂಚನ್ ಶೆಟ್ಟಿ ಹೊಸ ಪ್ರಯತ್ನಕ್ಕೆ ಪ್ರಮೋದ್ ಶೆಟ್ಟಿ ಹಾಗೂ ರವಿ ಬಸ್ರೂರು ಸಾಥ್* *'ಗಾಡ್ ಪ್ರಾಮಿಸ್’ಗೆ ಮುನ್ನುಡಿ..ಕುಂದಾಪುರ ಆನೆಗುಡ್ಡೆ ಗಣಪತಿ ದೇಗುಲದಲ್ಲಿ ನೆರವೇರಿತು ಸಿನಿಮಾ ಮುಹೂರ್ತ* *'ಗಾಡ್ ಪ್ರಾಮಿಸ್’ಗೆ ಪ್ರಮೋದ್ ಶೆಟ್ಟಿ-ರವಿ ಬಸ್ರೂರು ಬೆಂಬಲ...ಕುಂದಾಪುರ ಆನೆಗುಡ್ಡೆ ಗಣಪತಿ ದೇಗುಲದಲ್ಲಿ ಸೆಟ್ಟೇರಿತು ಸಿನಿಮಾ* ಯುವ ಪ್ರತಿಭೆ ಸೂಚನ್ ಶೆಟ್ಟಿ ನಟಿಸಿ ನಿರ್ದೇಶನ ಮಾಡುತ್ತಿರುವ ಚೊಚ್ಚಲ ಪ್ರಯತ್ನ ಗಾಡ್ ಪ್ರಾಮಿಸ್ ಸಿನಿಮಾಗೆ ಮುನ್ನುಡಿ ಸಿಕ್ಕಿದೆ. ಉಡುಪಿ ಜಿಲ್ಲೆಯ ಕುಂದಾಪುರದ ಆನೆಗುಡ್ಡದ ಗಣಪತಿ ದೇಗಲುದಲ್ಲಿಂದು ಮುಹೂರ್ತ ....
ಡಾಲಿ ಧನಂಜಯ್ ಅಭಿನಯದ ಕೋಟಿ ಸಿನಿಮಾದ ಮೊದಲ ಹಾಡು ’ಮಾತು ಸೋತು’ ಮೇ 13, ಸೋಮವಾರ ಸಂಜೆ 5 ಗಂಟೆಗೆ ಬಿಡುಗಡೆಯಾಗಲಿದೆ. ಈ ಹಾಡನ್ನು ವಾಸುಕಿ ವೈಭವ್ ಸಂಯೋಜಿಸಿದ್ದು, ಯೋಗರಾಜ್ ಭಟ್ ಸಾಹಿತ್ಯ ರಚಿಸಿ, ಅರ್ಮಾನ್ ಮಲಿಕ್ ಹಾಡಿದ್ದಾರೆ. ಕೋಟಿ ಸಿನಿಮಾದ ಹಾಡುಗಳ ಹಕ್ಕನ್ನು ಸರೆಗಮ ಖರೀದಿಸಿದ್ದು ಈ ಹಾಡಿನ ಲಿರಿಕಲ್ ವಿಡಿಯೋ ಸರೆಗಮ ಕನ್ನಡ ಯೂಟ್ಯೂಬ್ ಚಾನೆಲ್ಲಿನಲ್ಲಿ ಮೇ 13ರಂದು ಬಿಡುಗಡೆಯಾಗಲಿದೆ.
ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ರಮೇಶ್ ಇಂದಿರಾ, ತಾರಾ, ಸರ್ದಾರ್ ಸತ್ಯ ಮುಂತಾದವರು ಅಭಿನಯಿಸಿದ್ದಾರೆ.
*ಮೊದಲ ಹಾಡಿನಲ್ಲೇ ಮೋಡಿ ಮಾಡುತ್ತಿದ್ದಾನೆ "chef ಚಿದಂಬರ"* . *ನಾಯಕ ಅನಿರುದ್ದ್ ಅವರ ಗಾಯನದಲ್ಲಿ ಮೂಡಿಬಂದಿರುವ ಶೀರ್ಷಿಕೆ ಗೀತೆ(ಟೈಟಲ್ ಟ್ರ್ಯಾಕ್)ಗೆ ಅಭಿಮಾನಿಗಳು ಫಿದಾ* . ಎಂ.ಆನಂದರಾಜ್ ನಿರ್ದೇಶನದ ಹಾಗೂ ಅನಿರುದ್ದ್ ಜತಕರ್ ನಾಯಕರಾಗಿ ನಟಿಸಿರುವ "chef ಚಿದಂಬರ" ಚಿತ್ರದ ಚಿತ್ರೀಕರಣ ಹಾಗೂ ಪೊಸ್ಟ್ ಪ್ರೊಡಕ್ಷನ್ ವರ್ಕ್ ಪೂರ್ಣವಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ಆರಂಭದ ಫಸ್ಟ್ ಲುಕ್ ಪೋಸ್ಟರ್ ನಿಂದಲೇ ಈ ಚಿತ್ರ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಇತ್ತೀಚಿಗೆ ಈ ಚಿತ್ರದ ಟೈಟಲ್ ಟ್ರ್ಯಾಕ್ A2 music ಮೂಲಕ ಬಿಡುಗಡೆಯಾಗಿದೆ. ಇದು ಬಿಡುಗಡೆಯಾಗುತ್ತಿರುವ ಚಿತ್ರದ ಮೊದಲ ಗೀತೆಯೂ ಹೌದು. ಶ್ರೀಗಣೇಶ್ ಪರಶುರಾಮ್ ಬರೆದು, ರಿತ್ವಿಕ್ ....
*ಶರಣ್ ಅಭಿನಯದ "ಛೂ ಮಂತರ್" ಚಿತ್ರದ ಬಿಡುಗಡೆ ಮುಂದಕ್ಕೆ* .
ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, "ಕರ್ವ" ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ಹೆಸರಾಂತ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಛೂ ಮಂತರ್" ಚಿತ್ರ ಮೇ 10 ರಂದು ಬಿಡುಗಡೆ ಮಾಡುವುದಾಗಿ ಮೊದಲು ತಿಳಿಸಲಾಗಿತ್ತು. ಈಗ ಸಿನಿಮಾ ಬಿಡುಗಡೆ ಸ್ವಲ್ಪ ಮುಂದೆ ಹೋಗಿದೆ.