*ಭಾರತದ ಹೆಸರಾಂತ ರಿಲಯನ್ಸ್ ಎಂಟರ್ಟೈನ್ಮೆಂಟ್ ಮೂಲಕ ಬಹು ನಿರೀಕ್ಷಿತ "ದ ಜಡ್ಜ್ ಮೆಂಟ್" ಚಿತ್ರ ಬಿಡುಗಡೆ.*
*ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ಕ್ರೇಜಿಸ್ಟಾರ್ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ ಈ ಚಿತ್ರ*
.
G9 Communication Media and Entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ, ಅದ್ದೂರಿ ತಾರಾಬಳಗ ಹೊಂದಿರುವ "ದ ಜಡ್ಜ್ ಮೆಂಟ್" ಚಿತ್ರದ ವಿತರಣೆ ಹಕ್ಕನ್ನು ಭಾರತದ ಹೆಸರಾಂತ ರಿಲಯನ್ಸ್ ಎಂಟರ್ಟೈನ್ಮೆಂಟ್ ಸಂಸ್ಥೆ ಪಡೆದುಕೊಂಡಿದೆ. ಚಿತ್ರದ ಟೀಸರ್ ಸಹ ಬಿಡುಗಡೆಯಾಗಿದ್ದು ಕುತೂಹಲ ಮೂಡಿಸಿದೆ. ಚಿತ್ರವನ್ನು ನೋಡುವ ಕಾತುರವನ್ನು ಹೆಚ್ಚಿಸಿದೆ.
ಕುಂಟೆಬಿಲ್ಲೆ ಮಹೂರ್ತ ಈ ಮೊದಲು ದಕ್ಷ ಯಜ್ಞ, ತರ್ಲೆ ವಿಲೇಜ್, ಋತುಮತಿ ಚಿತ್ರ ಗಳನ್ನು ನಿರ್ದೇಶನ ಮಾಡಿದ್ದ ಸಿದ್ದೇಗೌಡ ಜಿ.ಬಿ.ಎಸ್. ಅವರು ಕುಂಟೆಬಿಲ್ಲೆ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಯುವ ನಟ ಯದು ಮೊದಲ ಬಾರಿಗೆ ನಾಯಕರಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ. ಹತ್ತಕ್ಕೂ ಹೆಚ್ಚು ಚಿತ್ರ ಮಾಡಿರುವ ಮೇಘ ಶ್ರೀ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಪೋಷಕ ಪಾತ್ರಗಳಲ್ಲಿ ಕಿಶೋರ್, ಪವಿತ್ರ ಲೋಕೇಶ್, ಶಂಕರ್ ಅಶ್ವಥ್, ಚಂದ್ರಪ್ರಭ ಮೊದಲಾದವರು ನಟಿಸಲಿದ್ದಾರೆ. ನಾವೆಲ್ಲಾ ಚಿಕ್ಕ ವಯಸ್ಸಿನಲ್ಲಿ ಆಡುತ್ತಿದ್ದ ಆಟ ಕುಂಟೆಬಿಲ್ಲೆ. ಅದೇ ಟೈಟಲ್ ಇಟ್ಟುಕೊಂಡು ಪ್ರೀತಿ, ನೋವು, ಕಾಮ ಎಲ್ಲವನ್ನೂ ಕಟ್ಟಿಕೊಡಲಿದ್ದೇವೆ ಎಂದು ....
ಹನ್ನೆರಡನೆ ಶತಮಾನದಲ್ಲಿ ಬಸವಣ್ಣನವರ ಅವತಾರಗಳು ಹನ್ನೆರಡನೇ ಶತಮಾನದಲ್ಲಿ ಶರಣರು, ಅನುಭವ ಮಂಟಪ ಮತ್ತು ಬಸವಣ್ಣ ಎನ್ನುವುದು ಎಷ್ಟು ಆಕರ್ಷಕವಾಗಿತ್ತು. ಇಂತಹ ಅಂಶಗಳನ್ನು ಸಂಶೋಧನೆ ನಡೆಸಿ ’ಶರಣರ ಶಕ್ತಿ’ ಎನ್ನುವ ಚಿತ್ರವೊಂದು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇದೆ. ’ತಡಿವ್ಯರ ನೋಡು’ ಎಂಬ ಅಡಿಬರಹವಿದೆ. ಪ್ರಚಾರದ ಮೊದಲ ಹಂತವಾಗಿ ’ಬಸವ ಜಯಂತಿ’ ಮುನ್ನ ದಿನದಂದು ಹಾಡು ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. ಎಲ್ಲಾ ಕಲಾವಿದರುಗಳು ಪಾತ್ರಧಾರಿಗಳಾಗಿ ವೇದಿಕೆ ಹಂಚಿಕೊಂಡಿದ್ದು ವಿಶೇಷವಾಗಿತ್ತು. ಶ್ರೀಷ ಫಿಲಂಸ್ ಅಡಿಯಲ್ಲಿ ಆರಾಧನಾ ಕುಲಕರ್ಣಿ ಬಂಡವಾಳ ಹೂಡುವ ಜತೆಗೆ ಅಕ್ಕ ನಾಗಮ್ಮನ ....
ಎಸ್ ವ್ಯಾಸದಿಂದ ಆಗಸ್ಟ್ ನಲ್ಲಿ ನೂತನ ತರಗತಿಗಳು ರಾಜರಾಜೇಶ್ವರಿ ನಗರದ ಗ್ಲೋಬಲ್ ವಿಲೇಜ್ ಟೆಕ್‌ಪಾರ್ಕನಲ್ಲಿ ಎಸ್ ವ್ಯಾಸ ವಿಶ್ವ ವಿದ್ಯಾನಿಲಯವು ನೂತನವಾಗಿ ನಲವತ್ತು ವಿವಿಧ ಕೋರ್ಸ್ಗಳನ್ನು ಬರುವ ಆಗಸ್ಟ್ ತಿಂಗಳಲ್ಲಿ ಆರಂಭಿಸಲಿದೆ ಎಂದು ಎಸ್ ವ್ಯಾಸದ ಸ್ಥಾಪಕ ಡಾ.ಎಚ್.ಆರ್. ನಾಗೇಂದ್ರ ಅವರು ಮಾಹಿತಿ ನೀಡಿದರು. ಗುರುವಾರ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಣ್ಣ ಸಣ್ಣ ದೇಶಗಳಲ್ಲಿ ಕ್ರೀಡಾಪಟುಗಳು ಅಧಿಕ ಸಂಖ್ಯೆಯಲ್ಲಿದ್ದಾರೆ, ಆದರೆ ನಮ್ಮ ಭಾರತದಲ್ಲಿ ಮಾತ್ರ ಕ್ರೀಡಾಪಟುಗಳ ಸಂಖ್ಯೆ ಬೆರಳಣಿಕೆಯಷ್ಟಿದೆ. ಆ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕ್ರೀಡೆಗೆ ಹೆಚ್ಚಿನ ಮಹತ್ವ ....
*ಚಂದನವನದಲ್ಲಿ ಮತ್ತೊಂದು "ಗಾಂಧಿನಗರ"* .. *ಎನ್ ಆರ್ ಫಿಲಂ ಇನ್ಸ್ಟಿಟ್ಯೂಟ್ ವಿದ್ಯಾರ್ಥಿಗಳೇ ಈ ಚಿತ್ರದ ಪಾತ್ರಧಾರಿಗಳು* . ಡಾ||ರಾಜಕುಮಾರ್ ಅವರು ನಟಿಸಿದ್ದ ಸೂಪರ್ ಹಿಟ್ ಚಿತ್ರ " ಗಾಂಧಿನಗರ". ಹಲವು ವರ್ಷಗಳ ಬಳಿಕ ಅದೇ ಹೆಸರಿನ ಚಿತ್ರ ಆರಂಭವಾಗಿದೆ. ಇತ್ತೀಚಿಗೆ ಎನ್ ಆರ್ ಫಿಲಂ ಇನ್ಸ್ಟಿಟ್ಯೂಟ್ ನಲ್ಲಿ ಈ ಚಿತ್ರದ ಮುಹೂರ್ತ ಸಮಾರಂಭ ನೆರವೇರಿತು. ಇಬ್ಬನಿ ಅವರು ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಕನ್ನಡ ಚಿತ್ರರಂಗದಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಾರ್ಯ ನಿರ್ವಹಿಸಿರುವ ಹಾಗೂ ಎನ್ ಆರ್ ಫಿಲಂ ಇನ್ಸ್ಟಿಟ್ಯೂಟ್ ನ ರುವಾರಿಗಳೂ ಆಗಿರುವ ಎಸ್.ಹೆಚ್ ನಾಗೇಶ್ ರೈತ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದೇ ....
*ಟೀಸರ್ ಹಾಗೂ ಹಾಡುಗಳ ಮೂಲಕ ಸದ್ದು ಮಾಡುತ್ತಿದೆ "ರಣಹದ್ದು"* . *ಇದು ತಂದೆ ನಿರ್ದೇಶನದಲ್ಲಿ ಮಕ್ಕಳು ನಟಿಸಿರುವ ಚಿತ್ರ* . ಕಳೆದ ನಲವತ್ತು ವರ್ಷಗಳಿಂದ ಪೋಷಕ ಕಲಾವಿದನಾಗಿ ಪ್ರಸನ್ನಕುಮಾರ್(ಜಂಗ್ಲಿ ಪ್ರಸನ್ನ) ಕನ್ನಡ ಚಿತ್ರರಂಗಕ್ಕೆ ಚಿರಪರಿಚಿತ. ನೂರಾರು ಚಿತ್ರಗಳಲ್ಲಿ ನಟಿಸಿ ನಟನಾಗಿ ಜನಪ್ರಿಯರಾಗಿರುವ ಪ್ರಸನ್ನ ಕುಮಾರ್ "ರಣಹದ್ದು" ಚಿತ್ರದ ಮೂಲಕ ನಿರ್ದೇಶಕರಾಗಿದ್ದಾರೆ.ಇವರೆ ಚಿತ್ರದ ನಿರ್ಮಾಪಕರು ಕೂಡ. ಪ್ರಸನ್ನಕುಮಾರ್ ಅವರ ಮಕ್ಕಳಾದ ಶಶಾಂಕ್ ಹಾಗೂ ಸೂರಜ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಒಬ್ಬ ಮಗ ನಾಯಕನಾಗಿ, ಮತ್ತೊಬ್ಬ ಮಗ ಖಳನಾಯಕನಾಗಿ ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದಾರೆ. ಇತ್ತೀಚಿಗೆ ಈ ....
*ಮಾನ್ಸೂನ್ ವೇಳೆಗೆ "ಭಗೀರಥ"ನ ಆಗಮನ* . *ಕುತೂಹಲ ಮೂಡಿಸಿದೆ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಟೀಸರ್* . ಧರೆಗೆ ತನ್ನ ತಪ್ಪಿಸಿನಿಂದ ಗಂಗೆಯನ್ನು ತಂದವರು "ಭಗೀರಥ". ಅದರಿಂದ ಗಂಗೆಗೆ ಭಾಗೀರಥಿ ಎಂಬ ಹೆಸರು ಉಂಟು. ತುಂಬಾ ಅಸಾಧ್ಯವಾದ್ದುದ್ದನ್ನು ಕಷ್ಟಪಟ್ಟು ಸಾಧ್ಯವಾಗಿಸಿದರೆ ಅದನ್ನು " ಭಗೀರಥ " ಪ್ರಯತ್ನ ಎನ್ನುತ್ತಾರೆ. ಇಂತಹ ಒಂದು ವಿಭಿನ್ನ ಕಥೆಯನ್ನಿಟ್ಟಿಕೊಂಡು "ಭಗೀರಥ" ಸಿನಿಮಾ ಬರುತ್ತಿದೆ. ಮುಂದಿನ ತಿಂಗಳು ಜೂನ್(ಮಾನ್ಸೂನ್ ವೇಳೆ)ನಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಸಾಯಿ ರಮೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಕೆ.ರಮೇಶ್ ಹಾಗೂ ಬಿ.ಭೈರಪ್ಪ ಮೈಸೂರು ನಿರ್ಮಿಸಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ ಈ ಚಿತ್ರದ ....
*"4 ಎನ್ 6" ಈವಾರ ಬಿಡುಗಡೆ* ಪರ್ಪಲ್ ಪ್ಯಾಚ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸಾಯಿಪ್ರೀತಿ ಎನ್. ಅವರು ನಿರ್ಮಿಸಿರುವ, ಮರ್ಡರ್ ಮಿಸ್ಟ್ರಿ ಜೊತೆಗೆ ಇನ್ ವೆಸ್ಟಿಗೇಷನ್ ಥ್ರಿಲ್ಲರ್ ಕಾನ್ಸೆಪ್ಟ್ ಹೊಂದಿರುವ ಚಿತ್ರ ’4 ಎನ್ 6' ಮೇ 10 ರಂದು ಶುಕ್ರವಾರ ರಾಜ್ಯಾದ್ಯಂತ ತೆರೆಗೆ ಬರಲಿದೆ. ಕೊಲೆಯೊಂದರ ತನಿಖೆಯ ಸುತ್ತ ನಡೆಯುವ ಕಥಾಹಂದರ ಚಿತ್ರದಲ್ಲಿದ್ದು, ಇಂಥ ಪ್ರಕರಣ ಪತ್ತೆಹಚ್ಚುವಲ್ಲಿ ಫೋರೆನ್ಸಿಕ್ ರಿಪೋರ್ಟ್ ತುಂಬಾ ಪ್ರಮುಖವಾಗಿರುತ್ತದೆ. ಇದು ಬರೀ ಮರ್ಡರ್ ಇನ್ವೆಸ್ಟಿಗೇಶನ್ ಸುತ್ತ ನಡೆವ ಕಥೆಯಲ್ಲ, ಸೈಕಲಾಜಿಕಲ್ ಚಿತ್ರವೂ ಹೌದು, ಲವ್ ಮಾಕ್ಟೇಲ್ ಹಾಗೂ ಲವ್ 360 ಖ್ಯಾತಿಯ ರಚನಾ ಇಂದರ್ ಅವರು ಇದೇ ಮೊದಲ ಬಾರಿಗೆ ಫಾರೆನ್ಸಿಕ್ ....
ಬಾಹುಬಲಿ ಒಂದು ಅದ್ಬುತ ಅನುಭವ - ಎಸ್.ಎಸ್.ರಾಜಮೌಳಿ
’ಬಾಹುಬಲಿ’ ಹೊಸ ಅಧ್ಯಾಯದೊಂದಿಗೆ ಅನಿಮೇಟೆಡ್ ಫಾರ್ಮೆಟ್‌ದಲ್ಲಿ ಹೇಳಲು ಯೋಜನೆ ಸಿದ್ದಗೊಂಡಿದೆ ಎಂಬುದು ಸುದ್ದಿಯಾಗಿತ್ತು. ಎ ಗ್ರಾಫಿಕ್ ಇಂಡಿಯಾ ಮತ್ತು ಆರ್ಕ ಮೀಡಿಯಾ ವರ್ಕ್ಸ್ ಪ್ರೊಡಕ್ಷನ್ ಅಡಿಯಲ್ಲಿ ಎಸ್.ಎಸ್.ರಾಜಮೌಳಿ-ಶರದ್‌ದೇವರಾಜನ್ ಕ್ರಿಯೆಟೀವ್ ಮುಖ್ಯಸ್ಥರಾಗಿರುತ್ತಾರೆ. ಜೀವನ್.ಜೆ.ಕಾಂಗ್-ನವೀನ್ ಜಾನ್ ಜಂಟಿಯಾಗಿ ನಿರ್ದೇಶನ ಮಾಡಿದ್ದಾರೆ. ಇವರೆಲ್ಲರೂ ನಿರ್ಮಾಣದಲ್ಲಿ ಪಾಲುದಾರರಾಗಿರುತ್ತಾರೆ.
*ಟ್ರೇಲರ್ ಮೂಲಕ ಗಮನ ಸೆಳೆಯುತ್ತಿರುವ "ದ ಸೂಟ್" ಚಿತ್ರ ಮೇ 17 ರಂದು ತೆರೆಗೆ* . *"ದ ಸೂಟ್" ಟ್ರೇಲರ್ ನೋಡಿ ಶುಭ ಹಾರೈಸಿದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ* . ನಾವು ಧರಿಸುವ ಉಡುಗೆಗಳಲ್ಲಿ "ಸೂಟ್" ಗೆ ಅದರದೆ ಆದ ವಿಶೇಷತೆ ಇದೆ. ಈ "ಸೂಟ್" ನ ಕುರಿತಂತೆ "ದ ಸೂಟ್" ಚಿತ್ರ ಬರುತ್ತಿದ್ದು, ಇತ್ತೇಚೆಗೆ ಟ್ರೇಲರ್ ಬಿಡುಗಡೆಯಾಗಿದೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ "ದ ಸೂಟ್" ಚಿತ್ರಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಮೇ 17 ಚಿತ್ರ ಬಿಡುಗಡೆಯಾಗುತ್ತಿದೆ. ಮಾಲತಿ ಗೌಡ ಹಾಗೂ ರಾಮಸ್ವಾಮಿ ಅವರು ನಿರ್ಮಿಸಿರುವ, ಎಸ್ ಭಗತ್ ರಾಜ್ ನಿರ್ದೇಶಿಸಿರುವ ಹಾಗೂ ಬಾಲಿವುಡ್ ನಿಂದ ಬಂದಿರುವ ಕಮಲ್ ಪ್ರಮುಖಪಾತ್ರದಲ್ಲಿ ....
*ಟ್ರೇಲರ್ ನಲ್ಲೇ ಮೋಡಿ ಮಾಡಿದ "ಗ್ರೇ ಗೇಮ್ಸ್"* *ವಿಜಯ ರಾಘವೇಂದ್ರ ಅಭಿನಯದ ಈ ಚಿತ್ರ ಮೇ ಹತ್ತರಂದು ಬಿಡುಗಡೆ* ಆನಂದ್ ಮುಗದ್ ನಿರ್ಮಾಣದ, ಪ್ರಶಸ್ತಿ ವಿಜೇತ "ಆಯನ" ಚಿತ್ರದ ಖ್ಯಾತಿಯ ಗಂಗಾಧರ್ ಸಾಲಿಮಠ ನಿರ್ದೇಶನದ ಹಾಗೂ "ಚಿನ್ನಾರಿ ಮುತ್ತ" ವಿಜಯ ರಾಘವೇಂದ್ರ ಪ್ರಮುಖಪಾತ್ರದಲ್ಲಿ ನಟಿಸಿರುವ "ಗ್ರೇ ಗೇಮ್ಸ್" ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಎಸ್ ಎ ಚಿನ್ನೇಗೌಡ, ಅಶ್ವಿನಿ ಪುನೀತ್ ರಾಜಕುಮಾರ್, ಶ್ರೀಮುರಳಿ, ವೀಣಾ ಮುಂತಾದ ಗಣ್ಯರು ಸೇರಿ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಈ ಚಿತ್ರದ ಮೂಲಕ ವಿಜಯ ರಾಘವೇಂದ್ರ ಹಾಗೂ ಶ್ರೀಮುರಳಿ ಅವರ ಸೋದರ ಅಳಿಯ(ಅಕ್ಕನ ಮಗ) ಜೈ ಚಿತ್ರರಂಗಕ್ಕೆ ....
ಹೊಸ ಅಧ್ಯಾಯದಲ್ಲಿ ಕ್ರೌನ್ ಆಫ್ ಬ್ಲಡ್ ಬಾಹುಬಲಿ
ಎಸ್.ಎಸ್.ರಾಜಮೌಳಿ ನಿರ್ದೇಶನದಲ್ಲಿ ’ಬಾಹುಬಲಿ’ ಪಾರ್ಟ್-1,2 ಚಿತ್ರವು ಬಿಡುಗಡೆಗೊಂಡು ವಿಶ್ವದಾದ್ಯಂತ ಸದ್ದು ಮಾಡಿ ಗಲ್ಲಾಪೆಟ್ಟಿಗೆಯನ್ನು ದೋಚಿತ್ತು. ಇದರಲ್ಲಿ ಕೆಲಸ ಮಾಡಿದ ಕಲಾವಿದರು ಹಾಗೂ ತಂತ್ರಜ್ಘರುಗಳಿಗೆ ಹೆಚ್ಚಿನ ಅವಕಾಶಗಳು ಲಭಿಸಿದವು. ಕಥೆಯಲ್ಲಿ ಬಾಹುಬಲಿಯಾಗಿ ಪ್ರಭಾಸ್ ಮತ್ತು ಭಲ್ಲಾಳ ದೇವನಾಗಿ ರಾಣಾದಗ್ಗುಭಾಟಿ ಅಭಿನಯಿಸಿದ್ದರು. ಇಬ್ಬರ ಜೀವನದ ಅನೇಕ ತಿಳಿಯದ ತಿರುವುಗಳು, ಮಾಹಿತಿಗಳನ್ನು ಚಿತ್ರದಲ್ಲಿ ತೋರಿಸಲಿಕ್ಕೆ ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಈಗ ಎಲ್ಲವನ್ನು ಹೊಸ ಅಧ್ಯಾಯದೊಂದಿಗೆ ಅನಿಮೇಟೆಡ್ ಫಾರ್ಮೆಟ್‌ದಲ್ಲಿ ಹೇಳಲು ಯೋಜನೆ ಸಿದ್ದಗೊಂಡಿದೆ.
*ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ "ಅಧ್ಯಾಯ" ಆರಂಭ* . *ಸಮರ್ಥ್ ಎಂ ನಿರ್ದೇಶನದ ಈ ಚಿತ್ರಕ್ಕೆ ಚೈತನ್ಯ ಬಂಜಾರ ನಾಯಕ* ಜೈಭವಾನಿ ಕ್ರಿಯೇಷನ್ಸ್ ಲಾಂಛನದಲ್ಲಿ ಶಾಂತ ಜಯರಾಂ ಅವರು ನಿರ್ಮಿಸುತ್ತಿರುವ ಹಾಗೂ ಸಮರ್ಥ್ ಎಂ ನಿರ್ದೇಶನದಲ್ಲಿ ಚೈತನ್ಯ ಬಂಜಾರ ಅವರು ನಾಯಕನಾಗಿ ನಟಿಸುತ್ತಿರುವ "ಅಧ್ಯಾಯ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಮಹಾಲಕ್ಷ್ಮಿ ಲೇಔಟ್ ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ನಿರ್ಮಾಪಕಿ ಶಾಂತ ಜಯರಾಂ ಅವರು ಆರಂಭಫಲಕ ತೋರಿದರು. ಅಣಜಿ ನಾಗರಾಜ್ ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ಸಾಕಷ್ಟು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ....
ಫೇಸ್‌ಬುಕ್ ಪೇಜ್ ’ಜಾಸ್ತಿ ಪ್ರೀತಿ’ಗೆ ಸ್ಪೂರ್ತಿ ಪೂರ್ಣ ಶ್ರೀ ಎಂಟರ್‌ಪ್ರೈಸಸ್ ಮುಖಾಂತರ ಸಿದ್ದಗೊಂಡಿರುವ ’ಜಾಸ್ತಿ ಪ್ರೀತಿ’ ಚಿತ್ರದ ಟ್ರೇಲರ್ ಹಾಗೂ ಹಾಡು ಬಿಡುಗಡೆ ಸಮಾರಂಭ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ’ಮಿಡಿದ ಹೃದಯಗಳ ಮೌನರಾಗ’ ಎಂಬ ಅಡಿಬರಹವಿದೆ. ರಿಯಲ್ ಎಸ್ಟೇಟ್ ಉದ್ಯಮಿ ಶಿವರಾಂ ಕೊಡತಿ ಬಂಡವಾಳ ಹೂಡಿರುವುದು ಹೊಸ ಅನುಭವ. ಎಸ್‌ಆರ್‌ಕೆ ಕೃಷ್ಣಪ್ಪ ಸರ್ಜಾಪುರ ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಸಿನಿಮಾಕ್ಕೆ ಕಥೆ,ಚಿತ್ರಕಥೆ,ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿರುವುದು ಅರುಣ್ ಮಾನವ್. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು ಪ್ರೀತಿಯ ಅವ್ಯಕ್ತಭಾವ ....
ಯುವ ಪ್ರತಿಭೆಗಳ ’ ರಂಗಸ್ಥಳ’ ಚಿತ್ರದ ಟೈಟಲ್ ಲಾಂಚ್. ಮಲಯಾಳಂನ ಖ್ಯಾತ ನಟ ಮನೋಜ್. ಕೆ. ಜಯನ್ ಎಂಟ್ರಿ. ಚಂದನವನಕ್ಕೆ ಯುವಕರ ಬಳಗವು ಪೂರ್ವ ತಯಾರಿಯೊಂದಿಗೆ ಒಂದು ಕಂಪನಿಯ ಮಾದರಿಯಲ್ಲಿ ತಂಡವನ್ನು ಕಟ್ಟಿಕೊಂಡು ಚಿತ್ರ ನಿರ್ಮಾಣಕ್ಕೆ ಮುಂದಾಗಿದೆ. ಜೀವನವೇ ಒಂದು ರಂಗ ಪ್ರಪಂಚ ಅಲ್ಲಿ ಎಲ್ಲಾ ರೀತಿಯ ಏಳು, ಬೀಳುಗಳು, ಪಾತ್ರಧಾರಿಗಳು ಕಣ್ಣ ಮುಂದೆ ಹಾದು ಹೋಗುತ್ತಾರೆ. ಅಂತಹದ್ದೇ ಒಂದು ವಿಭಿನ್ನ ಕಥೆಯ ಮೂಲಕ ಅಘೋರ್ ಮೋಶನ್ ಪಿಚ್ಚರ್ಸ್ ಅಡಿಯಲ್ಲಿ ಡಾ. ರೇವಣ್ಣ ನಿರ್ಮಾಣದ ’ರಂಗಸ್ಥಳ ’ ಎಂಬ ನೂತನ ಚಿತ್ರದ ಟೈಟಲ್ ಲಾಂಚ್ ಬಿಡುಗಡೆ ಮಾಡಲಾಯಿತು.ಈ ಒಂದು ಕಾರ್ಯಕ್ರಮಕ್ಕೆ ರಾಜಕೀಯ ಮುಖಂಡ ಮಂಜುನಾಥ್ , ಸಂತೋಷ್ ಸೇರಿದಂತೆ ಹಲವರು ....
*ಕನ್ನಡ ಮಾಧ್ಯಮ ಸಿನಿಮಾಗೆ ದೊಡ್ಡರಂಗೇಗೌಡ ಸಾಥ್..ಮೋಷನ್ ಪೋಸ್ಟರ್ ರಿಲೀಸ್ ಮಾಡಿದ ಹಿರಿಯ ಸಾಹಿತಿ* *ಕನ್ನಡ ಮಾಧ್ಯಮ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್..* ಕಲ್ಕಿ ಪ್ರೊಡಕ್ಷನ್ ನಡಿ ವೆಂಕಟೇಶ್.ಎಸ್ ನಿರ್ಮಾಣ ಮಾಡುತ್ತಿರುವ ಕನ್ನಡ ಮಾಧ್ಯಮ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ನಿನ್ನೆ ಹಿರಿಯ ಸಾಹಿತಿ ದೊಡ್ಡರಂಗೇಗೌಡ, ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಚಿತ್ರದ ಮೋಷನ್ ಪೋಸ್ಟರ್ ಅನಾವರಣ ಮಾಡಿ ಇಡೀ ತಂಡಕ್ಕೆ ಶುಭ ಕೋರಿದರು. ಹಿರಿಯ ಸಾಹಿತಿ ದೊಡ್ಡರಂಗೇಗೌಡ ಮಾತನಾಡಿ, ಎಲ್ಲಿ ಕನ್ನಡ ಅಲ್ಲಿ ದೊಡ್ಡ ರಂಗೇಗೌಡರು. ಆದ್ದರಿಂದ ಕನ್ನಡದ ಯಾವುದೇ ಕಾರ್ಯವಿರಲಿ, ಸಮಾರಂಭವಿರಲಿ. ಗೀತೆ ಪ್ರಸ್ತುತಿ ....
*ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ಆರಂಭವಾಯಿತು ಆರ್ ಸಿ ಸ್ಟುಡಿಯೋಸ್ ನ ಮೊದಲ ಚಿತ್ರ "ಫಾದರ್"* ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಕೆಲವು ದಿನಗಳ ಹಿಂದೆ ಆರ್ ಸಿ ಸ್ಟುಡಿಯೋಸ್ ಎಂಬ ನಿರ್ಮಾಣ ಸಂಸ್ಥೆ ಆರಂಭಿಸುವುದರ ಮೂಲಕ ಐದು ಸಿನಿಮಾಗಳನ್ನು ನಿರ್ಮಾಣ ಮಾಡುವುದಾಗಿ ಹೇಳಿದ್ದರು. ಆ ಪೈಕಿ ಮೊದಲ ಚಿತ್ರವಾಗಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ "ಫಾದರ್" ಚಿತ್ರ ನಿರ್ಮಾಣವಾಗುತ್ತಿದೆ. ಇತ್ತೀಚಿಗೆ ಈ ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಗೀತಾ ಶಿವರಾಜಕುಮಾರ್ ಅವರು ಆರಂಭ ಫಲಕ ತೋರುವುದರ ಮೂಲಕ "ಫಾದರ್ ಚಿತ್ರದ ಮೊದಲ ....
*ಡಾ|| ರಾಜಕುಮಾರ್ ಹುಟ್ಟುಹಬ್ಬದಂದು ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ "ದ ಜಡ್ಜ್ ಮೆಂಟ್" ಚಿತ್ರದ ಚಿತ್ರೀಕರಣ ಮುಕ್ತಾಯ.* G9 Communication Media and Entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ "ದ ಜಡ್ಜ್ ಮೆಂಟ್" ಚಿತ್ರದ ಚಿತ್ರೀಕರಣ ಡಾ|| ರಾಜಕುಮಾರ್ ಅವರ ಹುಟ್ಟುಹಬ್ಬದಂದು ಮುಕ್ತಾಯವಾಗಿದೆ. ಈ ಸಂದರ್ಭದಲ್ಲಿ ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಮೊದಲಿಗೆ ಮಾತನಾಡಿದ ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ), ನಮ್ಮ ಚಿತ್ರದ ಚಿತ್ರೀಕರಣ ಇಂದಿಗೆ ಪೂರ್ಣವಾಗಿದೆ. ಕಾಕತಾಳೀಯ ಎಂದರೆ ನಮ್ಮ ಚಿತ್ರದ ಚಿತ್ರೀಕರಣ ಕಳೆದವರ್ಷ ....
*ಅನಿಲ್ ಕುಂಬ್ಳೆ ಹಾಗೂ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಅನಾವರಣವಾಯಿತು "ಗೌರಿ" ಚಿತ್ರದ ಪ್ರೀ ಟೀಸರ್* . ಲಾಫಿಂಗ್ ಬುದ್ದ ಫಿಲಂಸ್ ಲಾಂಛನದಲ್ಲಿ ಇಂದ್ರಜಿತ್ ಲಂಕೇಶ್ ನಿರ್ಮಿಸಿ, ನಿರ್ದೇಶಿಸಿರುವ ಹಾಗೂ ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ ಮೊದಲ ಚಿತ್ರ "ಗೌರಿ". ಇತ್ತೀಚಿಗೆ ಈ ಚಿತ್ರದ ಪ್ರೀ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಸ್ಪಿನ್ ಮಾಂತ್ರಿಕ ಎಂದೆ ಖ್ಯಾತರಾಗಿರುವ ಅನಿಲ್ ಕುಂಬ್ಳೆ ಹಾಗೂ ಹೆಸರಾಂತ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ "ಗೌರಿ" ಚಿತ್ರದ ಪ್ರೀ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು. ನಿರ್ಮಾಪಕ ರಮೇಶ್ ರೆಡ್ಡಿ, ಪತ್ರಕರ್ತ ಸದಾಶಿವ ಶೆಣೈ, ಕವಿತಾ ಲಂಕೇಶ್ ....
*ಮಾಲಾಶ್ರೀ ಅಭಿನಯದ "ಮಾರಕಾಸ್ತ್ರ" ಚಿತ್ರ "ಮಾರಣಾಯಧಂ" ಹೆಸರಿನಿಂದ ತೆಲುಗಿನಲ್ಲಿ ಬಿಡುಗಡೆ* . ಕೋಮಲ ನಟರಾಜ್ ನಿರ್ಮಾಣದ, ಗುರುಮೂರ್ತಿ ಸುನಾಮಿ ನಿರ್ದೇಶನದ ಹಾಗೂ ಮಾಲಾಶ್ರೀ ಅವರು ಪ್ರಮುಖಪಾತ್ರದಲ್ಲಿ ನಟಿಸಿದ್ದ "ಮಾರಕಾಸ್ತ್ರ" ಚಿತ್ರ ಕಳೆದವರ್ಷ ಬಿಡುಗಡೆಯಾಗಿ ಕನ್ನಡಿಗರ ಮನ ಗೆದ್ದಿತ್ತು. ಈ ಚಿತ್ರ ಈಗ ತೆಲುಗಿನಲ್ಲೂ ನಿರ್ಮಾಣವಾಗಿದ್ದು "ಮಾರಣಾಯುಧಂ" ಎಂದು ಹೆಸರಿಡಲಾಗಿದೆ. ಆಂದ್ರ ಹಾಗು ತೆಲಂಗಾಣದಲ್ಲಿ ಈ ಚಿತ್ರ ಈಗಾಗಲೇ ಬಿಡುಗಡೆಯಾಗಿದ್ದು, ಅಲ್ಲಿನ ಜನರ ಮನ ಗೆದ್ದಿದೆ. ಏಪ್ರಿಲ್ 26 ರಂದು ಕರ್ನಾಟಕದಲ್ಲಿ ಈ ಚಿತ್ರ ತೆಲುಗು ಹಾಗೂ ಕನ್ನಡದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಮಾತನಾಡಿದರು. ....