25 ದಿನ ಪೂರೈಸಿದ ಸಾಮ್ರಾಟ್ ಮಾಂಧಾತ ಹೇಮಂತ್ ಪ್ರೊಡಕ್ಷನ್ಸ್ ಅಡಿ ಹೇಮಂತ್ ಕುಮಾರ್ ನಿರ್ದೇಶನ ಮಾಡಿರುವ, ಪೌರಾಣಿಕ ಕಥಾಹಂದರ ಹೊಂದಿರುವ "ಸಾಮ್ರಾಟ್ ಮಂಧಾತ" ಚಿತ್ರ ದಿನದಿಂದ ದಿನಕ್ಕೆ ಜನಮನ್ನಣೆ ಗಳಿಸುತ್ತ ಸಾಗಿ, ಇದೀಗ ಬೆಂಗಳೂರಿನ ಉಲ್ಲಾಸ್ ಥೇಟರಿನಲ್ಲಿ ಯಶಸ್ವಿಯಾಗಿ 25 ದಿನಗಳನ್ನು ಪೂರೈಸಿದೆ. ಈಗ ಚಿತ್ರವನ್ನು ರಾಜ್ಯಾದ್ಯಂತ ರಿಲೀಸ್ ಮಾಡುವ ಉದ್ದೇಶ ಹೊಂದಿರುವ ಚಿತ್ರತಂಡ ಮಾಧ್ಯಮಗಳ ಮುಂದೆ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿತು. ನಿರ್ದೇಶಕ ಹೇಮಂತ್ ಮಾತನಾಡುತ್ತ ಆರಂಭದಲ್ಲಿ ನಮ್ಮ ಚಿತ್ರವನ್ನು 20 ಥೇಟರುಗಳಲ್ಲಾದರೂ ರಿಲೀಸ್ ಮಾಡಬೇಕೆಂಬ ಆಸೆಯಿತ್ತು. ಆದರೆ ಬಾಡಿಗೆ ಕಟ್ಟುವ ಶಕ್ತಿ ನಮ್ಮಲ್ಲಿರಲಿಲ್ಲ. ಆಗ ....
ವಿದ್ಯಾರ್ಥಿ ವಿದ್ಯಾರ್ಥಿನಿಯರೇ: ಟ್ರೈಲರ್ ಮೂಲಕ ದುಮ್ಮಿಕ್ಕಿತು ಹರೆಯದ ತೊರೆ! ರ್ಯಾಪರ್ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ಚಿತ್ರ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’. ಶೀರ್ಷಿಕೆಯಲ್ಲಿಯೇ ಟೀನೇಜ್ ಸ್ಟೋರಿಯ ಕಂಪು ಹೊಂದಿರುವ ಈ ಸಿನಿಮಾ ಈಗಾಗಲೇ ನಾನಾ ಕ್ರೀಯಾಶೀಲ ಚಟುವಟಿಕೆಗಳ ಮೂಲಕ ಪ್ರೇಕ್ಷಕರನ್ನು ತಲುಪಿಕೊಂಡಿತ್ತು. ಆ ಕಾರಣದಿಂದಲೇ ಎಲ್ಲರೂ ಟ್ರೈಲರ್ ನತ್ತ ದೃಷ್ಟಿ ನೆಟ್ಟಿದ್ದರು. ಇದೀಗ ಚಿತ್ರತಂಡ ಯುವ ಆವೇಗದಿಂದ ತೊನೆದಾಡುತ್ತಿರುವಂತೆ ಭಾಸವಾಗುವ ಟ್ರೈಲರ್ ಅನ್ನು ಬಿಡುಗಡೆಗೊಳಿಸಿದೆ. ಅದರೊಳಗೆ ಹದಿಹರೆಯದ ಮನಸುಗಳ ನಾನಾ ಮಗ್ಗುಲುಗಳು ಹರೆಯದ ತೊರೆಯೊಂದಿಗೆ ದುಮ್ಮಿಕ್ಕಿ ಹರಿದಿವೆ. ಈ ಟ್ರೈಲರ್ ಅನ್ನು ಸೈಡ್ ಎ ಅಂತ ಹೆಸರಿಸಲಾಗಿದೆ. ....
*ಹೆಚ್ ಎಸ್ ಆರ್ ಲೇಔಟ್ ನಲ್ಲಿ ಆರಂಭವಾಯಿತು ನಾಯಕಿ ಎಸ್ತರ್ ನರೋನ್ಹ ಅವರ "FRIMOUSSE" ಸಲೂನ್, ಮೇಕಪ್ ಸ್ಟುಡಿಯೋ ಹಾಗೂ ಅಕಾಡೆಮಿ* .
ಕಳೆದ ಹತ್ತು ವರ್ಷಗಳಿಂದ ಕನ್ನಡ, ತೆಲುಗು ಸೇರಿದಂತೆ ಅನೇಕ ಭಾಷೆಗಳ ಚಿತ್ರಗಳಲ್ಲಿ ನಟಿಸಿ ಅಭಿಮಾನಿಗಳ ಮನ ಗೆದ್ದಿರುವ ನಾಯಕಿ ಎಸ್ತರ್ ನರೋನ್ಹ, ಗಾಯಕಿಯಾಗೂ ಜನಪ್ರಿಯ. ಈಗ ಎಸ್ತರ್ ನರೋನ್ಹ ಹೊಸ ಹೆಜ್ಜೆ ಇಟ್ಟಿದ್ದಾರೆ.
ಬೆಂಗಳೂರಿನ ಹೆಚ್ ಎಸ್ ಆರ್ ಬಡಾವಣೆಯಲ್ಲಿ "FRIMOUSSE" ಸಲೂನ್, ಮೇಕಪ್ ಸ್ಟುಡಿಯೋ ಹಾಗೂ ಅಕಾಡೆಮಿ ಆರಂಭಿಸಿದ್ದಾರೆ. ಇತ್ತೀಚೆಗೆ ಇದರ ಉದ್ಘಾಟನೆ ಅದ್ದೂರಿಯಾಗಿ ನೆರವೇರಿತು. ಈ ಸಲೂನ್ ಬಗ್ಗೆ ಎಸ್ತರ್ ನರೋನ್ಹ ಮಾಹಿತಿ ನೀಡಿದ್ದಾರೆ.
*ಸ್ಯಾಂಡಲ್ ವುಡ್ ಕ್ವೀನ್ ಗಾಗಿ ಶುರು ಕ್ವೀನ್ ಪ್ರೀಮಿಯರ್ ಲೀಗ್...QPL ಕ್ರಿಕೆಟ್ ಪಂದ್ಯಾವಳಿ ಹಿಂದಿದೆ ಒಂದೊಳ್ಳೆ ಉದ್ದೇಶ* *ಬ್ಯಾಟು ಬಾಲು ಹಿಡಿದು ಕ್ರಿಕೆಟ್ ಆಡಲು ರೆಡಿ ಎಂದ ಕ್ವೀನ್ಸ್..ಕಿರುತೆರೆ ಹಾಗೂ ಹಿರಿತೆರೆ ಹೆಣ್ಮಕ್ಕಳಿಗಾಗಿ ಶುರು QPL* ಕನ್ನಡ ಚಿತ್ರರಂಗದಲ್ಲಿ ಸೆಲೆಬ್ರಿಟಿಗಳಿಗಾಗಿ ಹಲವರು ಕ್ರಿಕೆಟ್ ಪಂದ್ಯಾವಳಿಗಳಿವೆ. ಸಿಸಿಎಲ್, ಕೆಸಿಸಿ, ಟಿಪಿಎಲ್ ಸೇರಿದಂತೆ ಹತ್ತಕ್ಕೂ ಹೆಚ್ಚು ಕ್ರಿಕೆಟ್ ಟೂರ್ನಮೆಂಟ್ ಗಳಿವೆ. ಆದರೆ ಕಿರುತೆರೆ ಹಾಗೂ ಹಿರಿತೆರೆ ಮಹಿಳೆಯರಿಗಾಗಿ ಯಾವುದೇ ಕ್ರಿಕೆಟ್ ಪಂದ್ಯಾವಳಿಗಳಿಲ್ಲ. ಹೀಗಾಗಿ ಕ್ರಿಯೇಟಿವ್ ಫ್ರೆಂಡ್ಸ್ ಕಂಪನಿ ಕ್ವೀನ್ ಪ್ರೀಮಿಯರ್ ಲೀಗ್ ಎಂಬ ಹೊಸ ಪರಿಕಲ್ಪನೆಯನ್ನು ಪರಿಚಯಿಸಿದೆ. ಈ ....
*ಬಿ.ಎಂ.ಎಸ್ ಕಾಲೇಜಿನಲ್ಲಿ "ಗೌರಿ" ಚಿತ್ರದ ಮೊದಲ ಹಾಡಿನ ಅನಾವರಣ* . *ಇದು ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ಅಭಿನಯದ ಚೊಚ್ಚಲ ಚಿತ್ರ* . ಪತ್ರಕರ್ತ, ನಿರ್ದೇಶಕ ಹಾಗೂ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ "ಗೌರಿ" ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಇಂದ್ರಜಿತ್ ಲಂಕೇಶ್ ನಿರ್ಮಿಸಿ, ನಿರ್ದೇಶಿಸಿರುವ ಈ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚಿಗೆ ಬಸವನಗುಡಿಯ ಬಿ.ಎಂ.ಎಸ್ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ, ಸಾವಿರಾರು ವಿದ್ಯಾರ್ಥಿಗಳ ಸಮ್ಮಖದಲ್ಲಿ "ಗೌರಿ" ಚಿತ್ರದ ಮೊದಲ ಹಾಡು ಲೋಕಾರ್ಪಣೆಯಾಯಿತು. ....
*ಮತ್ತೊಂದು ಕರಾವಳಿ ಕಥೆ ಹೊತ್ತು ಬಂದ ಅಧಿಪತ್ರ ಟೀಸರ್...ಪ್ರಾಮಿಸಿಂಗ್ ಆಗಿದೆ ಮೊದಲ ಝಲಕ್* *ಟೀಸರ್ ಮೂಲಕವೇ ಗರಿಗೆದರಿದ ’ಅಧಿಪತ್ರ’ ಸಿನಿಮಾ...ಕರಾವಳಿ ಭಾಗದಲ್ಲಿ ಇಂದಿಗೂ ಆಚರಣೆ ಯಲ್ಲಿರುವ ಆಟಿ ಕಳಂಜಾ ,, ಹುಲಿ ಕುಣಿದ ಟೀಸರ್ ಸ್ಪೆಷಾಲಿಟಿ ಏನು?* *ಟೀಸರ್ ನಲ್ಲಿಯೇ ಕುತೂಹಲ ಕೆರಳಿಸಿದ ರೂಪೇಶ್ ನಟನೆಯ ಅಧಿಪತ್ರ ಸಿನಿಮಾ* *ಕರಾವಳಿಯ ಭಾಗದ ಸುತ್ತ ಅಧಿಪತ್ರ...ಕುತೂಹಲ ಹೆಚ್ಚಿಸಿದ ಟೀಸರ್* ಸಿನಿಮಾವೊಂದು ಆರಂಭವಾದ ಬಳಿಕ ಕ್ರಿಯಾಶೀಲತೆಯ ಹಾದಿಯಲ್ಲಿಯೇ ಪ್ರೇಕ್ಷಕರನ್ನು ಸೆಳೆಯೋದಿದೆಯಲ್ಲಾ? ಅದು ನಿಜಕ್ಕೂ ಸವಾಲಿನ ಸಂಗತಿ. ಈ ನಿಟ್ಟಿನಲ್ಲಿ ನೋಡುವುದಾದರೆ, ಅಧಿಪತ್ರ ಮೊದಲ ಪ್ರಯತ್ನದಲ್ಲಿಯೇ ಗೆದ್ದಂತಿದೆ. ....
*ಕುಂದಾಪುರದ ಆನೆಗುಡ್ಡೆ ಗಣಪತಿ ದೇಗುಲದಲ್ಲಿ ಗಾಡ್ ಪ್ರಾಮಿಸ್ ಸಿನಿಮಾಗೆ ಮುಹೂರ್ತ..ಸೂಚನ್ ಶೆಟ್ಟಿ ಹೊಸ ಪ್ರಯತ್ನಕ್ಕೆ ಪ್ರಮೋದ್ ಶೆಟ್ಟಿ ಹಾಗೂ ರವಿ ಬಸ್ರೂರು ಸಾಥ್* *'ಗಾಡ್ ಪ್ರಾಮಿಸ್’ಗೆ ಮುನ್ನುಡಿ..ಕುಂದಾಪುರ ಆನೆಗುಡ್ಡೆ ಗಣಪತಿ ದೇಗುಲದಲ್ಲಿ ನೆರವೇರಿತು ಸಿನಿಮಾ ಮುಹೂರ್ತ* *'ಗಾಡ್ ಪ್ರಾಮಿಸ್’ಗೆ ಪ್ರಮೋದ್ ಶೆಟ್ಟಿ-ರವಿ ಬಸ್ರೂರು ಬೆಂಬಲ...ಕುಂದಾಪುರ ಆನೆಗುಡ್ಡೆ ಗಣಪತಿ ದೇಗುಲದಲ್ಲಿ ಸೆಟ್ಟೇರಿತು ಸಿನಿಮಾ* ಯುವ ಪ್ರತಿಭೆ ಸೂಚನ್ ಶೆಟ್ಟಿ ನಟಿಸಿ ನಿರ್ದೇಶನ ಮಾಡುತ್ತಿರುವ ಚೊಚ್ಚಲ ಪ್ರಯತ್ನ ಗಾಡ್ ಪ್ರಾಮಿಸ್ ಸಿನಿಮಾಗೆ ಮುನ್ನುಡಿ ಸಿಕ್ಕಿದೆ. ಉಡುಪಿ ಜಿಲ್ಲೆಯ ಕುಂದಾಪುರದ ಆನೆಗುಡ್ಡದ ಗಣಪತಿ ದೇಗಲುದಲ್ಲಿಂದು ಮುಹೂರ್ತ ....
ಡಾಲಿ ಧನಂಜಯ್ ಅಭಿನಯದ ಕೋಟಿ ಸಿನಿಮಾದ ಮೊದಲ ಹಾಡು ’ಮಾತು ಸೋತು’ ಮೇ 13, ಸೋಮವಾರ ಸಂಜೆ 5 ಗಂಟೆಗೆ ಬಿಡುಗಡೆಯಾಗಲಿದೆ. ಈ ಹಾಡನ್ನು ವಾಸುಕಿ ವೈಭವ್ ಸಂಯೋಜಿಸಿದ್ದು, ಯೋಗರಾಜ್ ಭಟ್ ಸಾಹಿತ್ಯ ರಚಿಸಿ, ಅರ್ಮಾನ್ ಮಲಿಕ್ ಹಾಡಿದ್ದಾರೆ. ಕೋಟಿ ಸಿನಿಮಾದ ಹಾಡುಗಳ ಹಕ್ಕನ್ನು ಸರೆಗಮ ಖರೀದಿಸಿದ್ದು ಈ ಹಾಡಿನ ಲಿರಿಕಲ್ ವಿಡಿಯೋ ಸರೆಗಮ ಕನ್ನಡ ಯೂಟ್ಯೂಬ್ ಚಾನೆಲ್ಲಿನಲ್ಲಿ ಮೇ 13ರಂದು ಬಿಡುಗಡೆಯಾಗಲಿದೆ.
ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ರಮೇಶ್ ಇಂದಿರಾ, ತಾರಾ, ಸರ್ದಾರ್ ಸತ್ಯ ಮುಂತಾದವರು ಅಭಿನಯಿಸಿದ್ದಾರೆ.
*ಮೊದಲ ಹಾಡಿನಲ್ಲೇ ಮೋಡಿ ಮಾಡುತ್ತಿದ್ದಾನೆ "chef ಚಿದಂಬರ"* . *ನಾಯಕ ಅನಿರುದ್ದ್ ಅವರ ಗಾಯನದಲ್ಲಿ ಮೂಡಿಬಂದಿರುವ ಶೀರ್ಷಿಕೆ ಗೀತೆ(ಟೈಟಲ್ ಟ್ರ್ಯಾಕ್)ಗೆ ಅಭಿಮಾನಿಗಳು ಫಿದಾ* . ಎಂ.ಆನಂದರಾಜ್ ನಿರ್ದೇಶನದ ಹಾಗೂ ಅನಿರುದ್ದ್ ಜತಕರ್ ನಾಯಕರಾಗಿ ನಟಿಸಿರುವ "chef ಚಿದಂಬರ" ಚಿತ್ರದ ಚಿತ್ರೀಕರಣ ಹಾಗೂ ಪೊಸ್ಟ್ ಪ್ರೊಡಕ್ಷನ್ ವರ್ಕ್ ಪೂರ್ಣವಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ಆರಂಭದ ಫಸ್ಟ್ ಲುಕ್ ಪೋಸ್ಟರ್ ನಿಂದಲೇ ಈ ಚಿತ್ರ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಇತ್ತೀಚಿಗೆ ಈ ಚಿತ್ರದ ಟೈಟಲ್ ಟ್ರ್ಯಾಕ್ A2 music ಮೂಲಕ ಬಿಡುಗಡೆಯಾಗಿದೆ. ಇದು ಬಿಡುಗಡೆಯಾಗುತ್ತಿರುವ ಚಿತ್ರದ ಮೊದಲ ಗೀತೆಯೂ ಹೌದು. ಶ್ರೀಗಣೇಶ್ ಪರಶುರಾಮ್ ಬರೆದು, ರಿತ್ವಿಕ್ ....
*ಶರಣ್ ಅಭಿನಯದ "ಛೂ ಮಂತರ್" ಚಿತ್ರದ ಬಿಡುಗಡೆ ಮುಂದಕ್ಕೆ* .
ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, "ಕರ್ವ" ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ಹೆಸರಾಂತ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಛೂ ಮಂತರ್" ಚಿತ್ರ ಮೇ 10 ರಂದು ಬಿಡುಗಡೆ ಮಾಡುವುದಾಗಿ ಮೊದಲು ತಿಳಿಸಲಾಗಿತ್ತು. ಈಗ ಸಿನಿಮಾ ಬಿಡುಗಡೆ ಸ್ವಲ್ಪ ಮುಂದೆ ಹೋಗಿದೆ.
*ಭಾರತದ ಹೆಸರಾಂತ ರಿಲಯನ್ಸ್ ಎಂಟರ್ಟೈನ್ಮೆಂಟ್ ಮೂಲಕ ಬಹು ನಿರೀಕ್ಷಿತ "ದ ಜಡ್ಜ್ ಮೆಂಟ್" ಚಿತ್ರ ಬಿಡುಗಡೆ.*
*ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ಕ್ರೇಜಿಸ್ಟಾರ್ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ ಈ ಚಿತ್ರ*
.
G9 Communication Media and Entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ, ಅದ್ದೂರಿ ತಾರಾಬಳಗ ಹೊಂದಿರುವ "ದ ಜಡ್ಜ್ ಮೆಂಟ್" ಚಿತ್ರದ ವಿತರಣೆ ಹಕ್ಕನ್ನು ಭಾರತದ ಹೆಸರಾಂತ ರಿಲಯನ್ಸ್ ಎಂಟರ್ಟೈನ್ಮೆಂಟ್ ಸಂಸ್ಥೆ ಪಡೆದುಕೊಂಡಿದೆ. ಚಿತ್ರದ ಟೀಸರ್ ಸಹ ಬಿಡುಗಡೆಯಾಗಿದ್ದು ಕುತೂಹಲ ಮೂಡಿಸಿದೆ. ಚಿತ್ರವನ್ನು ನೋಡುವ ಕಾತುರವನ್ನು ಹೆಚ್ಚಿಸಿದೆ.
ಕುಂಟೆಬಿಲ್ಲೆ ಮಹೂರ್ತ ಈ ಮೊದಲು ದಕ್ಷ ಯಜ್ಞ, ತರ್ಲೆ ವಿಲೇಜ್, ಋತುಮತಿ ಚಿತ್ರ ಗಳನ್ನು ನಿರ್ದೇಶನ ಮಾಡಿದ್ದ ಸಿದ್ದೇಗೌಡ ಜಿ.ಬಿ.ಎಸ್. ಅವರು ಕುಂಟೆಬಿಲ್ಲೆ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಯುವ ನಟ ಯದು ಮೊದಲ ಬಾರಿಗೆ ನಾಯಕರಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ. ಹತ್ತಕ್ಕೂ ಹೆಚ್ಚು ಚಿತ್ರ ಮಾಡಿರುವ ಮೇಘ ಶ್ರೀ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಪೋಷಕ ಪಾತ್ರಗಳಲ್ಲಿ ಕಿಶೋರ್, ಪವಿತ್ರ ಲೋಕೇಶ್, ಶಂಕರ್ ಅಶ್ವಥ್, ಚಂದ್ರಪ್ರಭ ಮೊದಲಾದವರು ನಟಿಸಲಿದ್ದಾರೆ. ನಾವೆಲ್ಲಾ ಚಿಕ್ಕ ವಯಸ್ಸಿನಲ್ಲಿ ಆಡುತ್ತಿದ್ದ ಆಟ ಕುಂಟೆಬಿಲ್ಲೆ. ಅದೇ ಟೈಟಲ್ ಇಟ್ಟುಕೊಂಡು ಪ್ರೀತಿ, ನೋವು, ಕಾಮ ಎಲ್ಲವನ್ನೂ ಕಟ್ಟಿಕೊಡಲಿದ್ದೇವೆ ಎಂದು ....
ಹನ್ನೆರಡನೆ ಶತಮಾನದಲ್ಲಿ ಬಸವಣ್ಣನವರ ಅವತಾರಗಳು ಹನ್ನೆರಡನೇ ಶತಮಾನದಲ್ಲಿ ಶರಣರು, ಅನುಭವ ಮಂಟಪ ಮತ್ತು ಬಸವಣ್ಣ ಎನ್ನುವುದು ಎಷ್ಟು ಆಕರ್ಷಕವಾಗಿತ್ತು. ಇಂತಹ ಅಂಶಗಳನ್ನು ಸಂಶೋಧನೆ ನಡೆಸಿ ’ಶರಣರ ಶಕ್ತಿ’ ಎನ್ನುವ ಚಿತ್ರವೊಂದು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇದೆ. ’ತಡಿವ್ಯರ ನೋಡು’ ಎಂಬ ಅಡಿಬರಹವಿದೆ. ಪ್ರಚಾರದ ಮೊದಲ ಹಂತವಾಗಿ ’ಬಸವ ಜಯಂತಿ’ ಮುನ್ನ ದಿನದಂದು ಹಾಡು ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. ಎಲ್ಲಾ ಕಲಾವಿದರುಗಳು ಪಾತ್ರಧಾರಿಗಳಾಗಿ ವೇದಿಕೆ ಹಂಚಿಕೊಂಡಿದ್ದು ವಿಶೇಷವಾಗಿತ್ತು. ಶ್ರೀಷ ಫಿಲಂಸ್ ಅಡಿಯಲ್ಲಿ ಆರಾಧನಾ ಕುಲಕರ್ಣಿ ಬಂಡವಾಳ ಹೂಡುವ ಜತೆಗೆ ಅಕ್ಕ ನಾಗಮ್ಮನ ....
ಎಸ್ ವ್ಯಾಸದಿಂದ ಆಗಸ್ಟ್ ನಲ್ಲಿ ನೂತನ ತರಗತಿಗಳು ರಾಜರಾಜೇಶ್ವರಿ ನಗರದ ಗ್ಲೋಬಲ್ ವಿಲೇಜ್ ಟೆಕ್‌ಪಾರ್ಕನಲ್ಲಿ ಎಸ್ ವ್ಯಾಸ ವಿಶ್ವ ವಿದ್ಯಾನಿಲಯವು ನೂತನವಾಗಿ ನಲವತ್ತು ವಿವಿಧ ಕೋರ್ಸ್ಗಳನ್ನು ಬರುವ ಆಗಸ್ಟ್ ತಿಂಗಳಲ್ಲಿ ಆರಂಭಿಸಲಿದೆ ಎಂದು ಎಸ್ ವ್ಯಾಸದ ಸ್ಥಾಪಕ ಡಾ.ಎಚ್.ಆರ್. ನಾಗೇಂದ್ರ ಅವರು ಮಾಹಿತಿ ನೀಡಿದರು. ಗುರುವಾರ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಣ್ಣ ಸಣ್ಣ ದೇಶಗಳಲ್ಲಿ ಕ್ರೀಡಾಪಟುಗಳು ಅಧಿಕ ಸಂಖ್ಯೆಯಲ್ಲಿದ್ದಾರೆ, ಆದರೆ ನಮ್ಮ ಭಾರತದಲ್ಲಿ ಮಾತ್ರ ಕ್ರೀಡಾಪಟುಗಳ ಸಂಖ್ಯೆ ಬೆರಳಣಿಕೆಯಷ್ಟಿದೆ. ಆ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕ್ರೀಡೆಗೆ ಹೆಚ್ಚಿನ ಮಹತ್ವ ....
*ಚಂದನವನದಲ್ಲಿ ಮತ್ತೊಂದು "ಗಾಂಧಿನಗರ"* .. *ಎನ್ ಆರ್ ಫಿಲಂ ಇನ್ಸ್ಟಿಟ್ಯೂಟ್ ವಿದ್ಯಾರ್ಥಿಗಳೇ ಈ ಚಿತ್ರದ ಪಾತ್ರಧಾರಿಗಳು* . ಡಾ||ರಾಜಕುಮಾರ್ ಅವರು ನಟಿಸಿದ್ದ ಸೂಪರ್ ಹಿಟ್ ಚಿತ್ರ " ಗಾಂಧಿನಗರ". ಹಲವು ವರ್ಷಗಳ ಬಳಿಕ ಅದೇ ಹೆಸರಿನ ಚಿತ್ರ ಆರಂಭವಾಗಿದೆ. ಇತ್ತೀಚಿಗೆ ಎನ್ ಆರ್ ಫಿಲಂ ಇನ್ಸ್ಟಿಟ್ಯೂಟ್ ನಲ್ಲಿ ಈ ಚಿತ್ರದ ಮುಹೂರ್ತ ಸಮಾರಂಭ ನೆರವೇರಿತು. ಇಬ್ಬನಿ ಅವರು ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಕನ್ನಡ ಚಿತ್ರರಂಗದಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಾರ್ಯ ನಿರ್ವಹಿಸಿರುವ ಹಾಗೂ ಎನ್ ಆರ್ ಫಿಲಂ ಇನ್ಸ್ಟಿಟ್ಯೂಟ್ ನ ರುವಾರಿಗಳೂ ಆಗಿರುವ ಎಸ್.ಹೆಚ್ ನಾಗೇಶ್ ರೈತ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದೇ ....
*ಟೀಸರ್ ಹಾಗೂ ಹಾಡುಗಳ ಮೂಲಕ ಸದ್ದು ಮಾಡುತ್ತಿದೆ "ರಣಹದ್ದು"* . *ಇದು ತಂದೆ ನಿರ್ದೇಶನದಲ್ಲಿ ಮಕ್ಕಳು ನಟಿಸಿರುವ ಚಿತ್ರ* . ಕಳೆದ ನಲವತ್ತು ವರ್ಷಗಳಿಂದ ಪೋಷಕ ಕಲಾವಿದನಾಗಿ ಪ್ರಸನ್ನಕುಮಾರ್(ಜಂಗ್ಲಿ ಪ್ರಸನ್ನ) ಕನ್ನಡ ಚಿತ್ರರಂಗಕ್ಕೆ ಚಿರಪರಿಚಿತ. ನೂರಾರು ಚಿತ್ರಗಳಲ್ಲಿ ನಟಿಸಿ ನಟನಾಗಿ ಜನಪ್ರಿಯರಾಗಿರುವ ಪ್ರಸನ್ನ ಕುಮಾರ್ "ರಣಹದ್ದು" ಚಿತ್ರದ ಮೂಲಕ ನಿರ್ದೇಶಕರಾಗಿದ್ದಾರೆ.ಇವರೆ ಚಿತ್ರದ ನಿರ್ಮಾಪಕರು ಕೂಡ. ಪ್ರಸನ್ನಕುಮಾರ್ ಅವರ ಮಕ್ಕಳಾದ ಶಶಾಂಕ್ ಹಾಗೂ ಸೂರಜ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಒಬ್ಬ ಮಗ ನಾಯಕನಾಗಿ, ಮತ್ತೊಬ್ಬ ಮಗ ಖಳನಾಯಕನಾಗಿ ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದಾರೆ. ಇತ್ತೀಚಿಗೆ ಈ ....
*ಮಾನ್ಸೂನ್ ವೇಳೆಗೆ "ಭಗೀರಥ"ನ ಆಗಮನ* . *ಕುತೂಹಲ ಮೂಡಿಸಿದೆ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಟೀಸರ್* . ಧರೆಗೆ ತನ್ನ ತಪ್ಪಿಸಿನಿಂದ ಗಂಗೆಯನ್ನು ತಂದವರು "ಭಗೀರಥ". ಅದರಿಂದ ಗಂಗೆಗೆ ಭಾಗೀರಥಿ ಎಂಬ ಹೆಸರು ಉಂಟು. ತುಂಬಾ ಅಸಾಧ್ಯವಾದ್ದುದ್ದನ್ನು ಕಷ್ಟಪಟ್ಟು ಸಾಧ್ಯವಾಗಿಸಿದರೆ ಅದನ್ನು " ಭಗೀರಥ " ಪ್ರಯತ್ನ ಎನ್ನುತ್ತಾರೆ. ಇಂತಹ ಒಂದು ವಿಭಿನ್ನ ಕಥೆಯನ್ನಿಟ್ಟಿಕೊಂಡು "ಭಗೀರಥ" ಸಿನಿಮಾ ಬರುತ್ತಿದೆ. ಮುಂದಿನ ತಿಂಗಳು ಜೂನ್(ಮಾನ್ಸೂನ್ ವೇಳೆ)ನಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಸಾಯಿ ರಮೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಕೆ.ರಮೇಶ್ ಹಾಗೂ ಬಿ.ಭೈರಪ್ಪ ಮೈಸೂರು ನಿರ್ಮಿಸಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ ಈ ಚಿತ್ರದ ....
*"4 ಎನ್ 6" ಈವಾರ ಬಿಡುಗಡೆ* ಪರ್ಪಲ್ ಪ್ಯಾಚ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸಾಯಿಪ್ರೀತಿ ಎನ್. ಅವರು ನಿರ್ಮಿಸಿರುವ, ಮರ್ಡರ್ ಮಿಸ್ಟ್ರಿ ಜೊತೆಗೆ ಇನ್ ವೆಸ್ಟಿಗೇಷನ್ ಥ್ರಿಲ್ಲರ್ ಕಾನ್ಸೆಪ್ಟ್ ಹೊಂದಿರುವ ಚಿತ್ರ ’4 ಎನ್ 6' ಮೇ 10 ರಂದು ಶುಕ್ರವಾರ ರಾಜ್ಯಾದ್ಯಂತ ತೆರೆಗೆ ಬರಲಿದೆ. ಕೊಲೆಯೊಂದರ ತನಿಖೆಯ ಸುತ್ತ ನಡೆಯುವ ಕಥಾಹಂದರ ಚಿತ್ರದಲ್ಲಿದ್ದು, ಇಂಥ ಪ್ರಕರಣ ಪತ್ತೆಹಚ್ಚುವಲ್ಲಿ ಫೋರೆನ್ಸಿಕ್ ರಿಪೋರ್ಟ್ ತುಂಬಾ ಪ್ರಮುಖವಾಗಿರುತ್ತದೆ. ಇದು ಬರೀ ಮರ್ಡರ್ ಇನ್ವೆಸ್ಟಿಗೇಶನ್ ಸುತ್ತ ನಡೆವ ಕಥೆಯಲ್ಲ, ಸೈಕಲಾಜಿಕಲ್ ಚಿತ್ರವೂ ಹೌದು, ಲವ್ ಮಾಕ್ಟೇಲ್ ಹಾಗೂ ಲವ್ 360 ಖ್ಯಾತಿಯ ರಚನಾ ಇಂದರ್ ಅವರು ಇದೇ ಮೊದಲ ಬಾರಿಗೆ ಫಾರೆನ್ಸಿಕ್ ....
ಬಾಹುಬಲಿ ಒಂದು ಅದ್ಬುತ ಅನುಭವ - ಎಸ್.ಎಸ್.ರಾಜಮೌಳಿ
’ಬಾಹುಬಲಿ’ ಹೊಸ ಅಧ್ಯಾಯದೊಂದಿಗೆ ಅನಿಮೇಟೆಡ್ ಫಾರ್ಮೆಟ್‌ದಲ್ಲಿ ಹೇಳಲು ಯೋಜನೆ ಸಿದ್ದಗೊಂಡಿದೆ ಎಂಬುದು ಸುದ್ದಿಯಾಗಿತ್ತು. ಎ ಗ್ರಾಫಿಕ್ ಇಂಡಿಯಾ ಮತ್ತು ಆರ್ಕ ಮೀಡಿಯಾ ವರ್ಕ್ಸ್ ಪ್ರೊಡಕ್ಷನ್ ಅಡಿಯಲ್ಲಿ ಎಸ್.ಎಸ್.ರಾಜಮೌಳಿ-ಶರದ್‌ದೇವರಾಜನ್ ಕ್ರಿಯೆಟೀವ್ ಮುಖ್ಯಸ್ಥರಾಗಿರುತ್ತಾರೆ. ಜೀವನ್.ಜೆ.ಕಾಂಗ್-ನವೀನ್ ಜಾನ್ ಜಂಟಿಯಾಗಿ ನಿರ್ದೇಶನ ಮಾಡಿದ್ದಾರೆ. ಇವರೆಲ್ಲರೂ ನಿರ್ಮಾಣದಲ್ಲಿ ಪಾಲುದಾರರಾಗಿರುತ್ತಾರೆ.
*ಟ್ರೇಲರ್ ಮೂಲಕ ಗಮನ ಸೆಳೆಯುತ್ತಿರುವ "ದ ಸೂಟ್" ಚಿತ್ರ ಮೇ 17 ರಂದು ತೆರೆಗೆ* . *"ದ ಸೂಟ್" ಟ್ರೇಲರ್ ನೋಡಿ ಶುಭ ಹಾರೈಸಿದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ* . ನಾವು ಧರಿಸುವ ಉಡುಗೆಗಳಲ್ಲಿ "ಸೂಟ್" ಗೆ ಅದರದೆ ಆದ ವಿಶೇಷತೆ ಇದೆ. ಈ "ಸೂಟ್" ನ ಕುರಿತಂತೆ "ದ ಸೂಟ್" ಚಿತ್ರ ಬರುತ್ತಿದ್ದು, ಇತ್ತೇಚೆಗೆ ಟ್ರೇಲರ್ ಬಿಡುಗಡೆಯಾಗಿದೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ "ದ ಸೂಟ್" ಚಿತ್ರಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಮೇ 17 ಚಿತ್ರ ಬಿಡುಗಡೆಯಾಗುತ್ತಿದೆ. ಮಾಲತಿ ಗೌಡ ಹಾಗೂ ರಾಮಸ್ವಾಮಿ ಅವರು ನಿರ್ಮಿಸಿರುವ, ಎಸ್ ಭಗತ್ ರಾಜ್ ನಿರ್ದೇಶಿಸಿರುವ ಹಾಗೂ ಬಾಲಿವುಡ್ ನಿಂದ ಬಂದಿರುವ ಕಮಲ್ ಪ್ರಮುಖಪಾತ್ರದಲ್ಲಿ ....