ರಮೇಶ್ ಅರವಿಂದ್ - ಗೋಲ್ಡನ್ ಸ್ಟಾರ್ ಗಣೇಶ್
ಜೋಡಿಯ ಹೊಸ ಚಿತ್ರಕ್ಕೆ ವಿಖ್ಯಾತ್ ನಿರ್ದೇಶನ
ಕನ್ನಡ ಚಿತ್ರರಂಗಕ್ಕೆ ವಿಖ್ಯಾತ್ ಚಿತ್ರ ಪ್ರೊಡಕ್ಷನ್ಸ್ ಮೂಲಕ ಪುಷ್ಪಕ ವಿಮಾನ, ಇನ್ಸ್ ಪೆಕ್ಟರ್ ವಿಕ್ರಂ, ಮಾನ್ಸೂನ್ ರಾಗದಂಥ ವಿಭಿನ್ನ ಶೈಲಿಯ ಚಿತ್ರಗಳನ್ನು ಕೊಡುಗೆಯಾಗಿ ನೀಡಿದ ನಿರ್ಮಾಪಕ ವಿಖ್ಯಾತ್ ತಮ್ಮ ಸಂಸ್ಥೆಯ ನಿರ್ಮಾಣದ ಆರನೇ ಚಿತ್ರದ ಮೂಲಕ ನಿರ್ದೇಶಕರಾಗುತ್ತಿದ್ದಾರೆ. ತಮ್ಮ ಪ್ರಥಮ ಪ್ರಯತ್ನದಲ್ಲೇ ಮಲ್ಟಿ ಸ್ಟಾರ್ ಚಿತ್ರ ನಿರ್ದೇಶನಕ್ಕೆ ಕೈಹಾಕಿದ್ದಾರೆ.
ಶಿವಾಜಿ ಸುರತ್ಕಲ್ ಭಾಗ ೧ ಮತ್ತು ೨ ರ ಯಶಸ್ಸಿನ ಬೆನ್ನಲ್ಲೇ ಮತ್ತೊಂದು ಚಿತ್ರಕ್ಕೆ ನಟ ರಮೇಶ್ ಅರವಿಂದ್ ಮತ್ತು ನಿರ್ದೇಶಕ ಆಕಾಶ್ ಶ್ರೀವತ್ಸ ಕೈಜೋಡಿಸುತ್ತುದ್ದಾರೆ. ಚಿತ್ರದ ಶೀರ್ಷಿಕೆ ’ದೈಜಿ’. ಈ ಚಿತ್ರವನ್ನು ವಿಭಾ ಕಶ್ಯಪ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ರವಿ ಕಶ್ಯಪ್ ನಿರ್ಮಿಸುತ್ತಿದ್ದಾರೆ. ಇದಕ್ಕೂ ಮುಂಚೆ ಕಾನ್ಸ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ತೆರೆ ಕಂಡ ಕಿರು ಚಿತ್ರ ಸುಳ್ಳೇ ಸತ್ಯ, ಪವನ್ ಕುಮಾರ್ ರವರ ಲೂಸಿಯಾ, ಡಾಲಿ ಧನಂಜಯ್ ಅವರು ನಟಿಸಿದ ’ಬದ್ಮಾಶ್’ ಇದೇ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿದ್ದವು. ಚಿತ್ರದ ಶೀರ್ಶಿಕೆ ’ದೈಜಿ’ ಗೆ ಬೇರೆ ಬೇರೆ ಭಾಷೆಗಳಲ್ಲಿ ಬೇರೆ ಬೇರೆ ಅರ್ಥಗಳಿವೆ. ಕೊಂಕಣಿಯಲಿ ದೈಜಿ ಎಂದರೆ ರಕ್ತ ....
*"ಟೇಕ್ವಾoಡೋ ಗರ್ಲ್ "* ಚಿತ್ರದ ಧ್ವನಿ ಸುರುಳಿ ಬಿಡುಗಡೆ 10 ವರ್ಷದ ಪೋರಿ 4 ಅಂತರಾಷ್ಟ್ರೀಯ ಚಾಂಪಿಯನ್ ಶಿಪ್ ಗಳಲ್ಲಿ ಭಾಗವಹಿಸಿ ಬ್ಲಾಕ್ ಬೆಲ್ಟ್ ಪಡೆದು ಈಗ ನಟಿಯಾಗಿ "ಟೇಕ್ವಾಂಡೋ ಗರ್ಲ್" ಆಗಿ ಬೆಳ್ಳಿತೆರೆಗೆ ಎಂಟ್ರಿ "ಟೇಕ್ವಾಂಡೋ ಸಮರ ಕಲೆ ಕುರಿತ ಚಿತ್ರ ಟೇಕ್ವಾಂಡೋ ಗರ್ಲ್ ಚಿತ್ರದ ಹಾಡುಗಳ ಬಿಡುಗಡೆ" ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣಿನ ಕುಲಕ್ಕೆ ಕಂಟಕಪ್ರಾಯವಾದ ಕೃತ್ಯಗಳು ನಡೆಯುತ್ತಲೇ ಬಂದಿದೆ. ಹೆಣ್ಣು ತನ್ನನ್ನು ತಾನು ರಕ್ಷಿಸಿಕೊಳ್ಳುವುದು ಅತೀ ಮುಖ್ಯವಾದ ವಿಚಾರ ಈ ನಿಟ್ಟಿನಲ್ಲಿ ಸದ್ದಿಲ್ಲದೆ ಒಂದು ಸಿನಿಮಾ ತಯಾರಾಗಿದೆ. ಚಿತ್ರದ ಹೆಸರು "ಟೇಕ್ವಾಂಡೋ ಗರ್ಲ್". ಈ ಚಿತ್ರದಲ್ಲಿ ಒಂದು ಬಡ ಕುಟುಂಬದ ....
*ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ "ಭಗೀರಥ" ಚಿತ್ರಕ್ಕೆ ಚಾಲನೆ* . ಸಾಯಿ ರಮೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಕೆ.ರಮೇಶ್ ಹಾಗೂ ಬಿ.ಭೈರಪ್ಪ ಮೈಸೂರು ನಿರ್ಮಿಸುತ್ತಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ "ಭಗೀರಥ" ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ಸನ್ನಿವೇಶಕ್ಕೆ ಹೆಸರಾಂತ ನಿರ್ದೇಶಕ ಸಾಯಿಪ್ರಕಾಶ್ ಆರಂಭ ಫಲಕ ತೋರಿದರು. ಸಿರಿ ಕನ್ನಡ ವಾಹಿನಿ ಮುಖ್ಯಸ್ಥರಾದ ರಾಜೇಶ್ ರಾಜಘಟ್ಟ ಕ್ಯಾಮೆರಾ ಚಾಲನೆ ಮಾಡಿದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು. ನಾನು 2005 ರಲ್ಲಿ "ಬಾಯ್ ಫ್ರೆಂಡ್" ಮೂಲಕ ನನ್ನ ಚಿತ್ರರಂಗದ ಜರ್ನಿ ಆರಂಭವಾಯಿತು. ನಂತರ ಕೆಲವು ಚಿತ್ರಗಳಲ್ಲಿ ....
ಆಂಜನೇಯನ ಸನ್ನಿದಿಯಲ್ಲಿ ಯೋಗಿ ನೃತ್ಯ ‘ವಜ್ರಕಾಯ’ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಜೊತೆ ಸ್ಟಾರ್ ಕಲಾವಿದರು ದೇವರ ಹಾಡಿಗೆ ಡ್ಯಾನ್ಸ್ ಮಾಡಿದ್ದರು. ಇದರಿಂದ ಪ್ರೇರಿತಗೊಂಡ ‘ರಾಜರಾಣಿ’ ಚಿತ್ರದ ನಾಯಕ ಮತ್ತು ನಿರ್ದೇಶಕ ಬಳ್ಳಾರಿಯ ರಣಧೀರ್ ಇದೇ ತರಹದ ಗೀತೆಯನ್ನು ಸೃಷಿಸಿದ್ದಾರೆ. ‘ಇಟ್ಟಿಗೆ ಗೂಡಿನಲ್ಲಿ ರಾಜರಾಣಿ’ ಎಂಬ ಅಡಿಬರಹವಿದೆ. ರಾಜನಕುಂಟೆ ಬಯಲು ಭೂಮಿಯಲ್ಲಿ ಬೃಹದಕಾರದ ಕಲರ್ಫುಲ್ ಸೆಟ್ನಲ್ಲಿ ಹತ್ತು ಅಡಿ ಎತ್ತರದ ಆಂಜನೇಯನ ಮೂರ್ತಿಯನ್ನು ಪ್ರತಿಷ್ಟಾಪಿಸಲಾಗಿತ್ತು. ಮಾಧ್ಯಮದವರು ಸೆಟ್ಗೆ ಭೇಟಿ ನೀಡಿದಾಗ ರವಿತಪಸ್ವಿ ಸಾಹಿತ್ಯ, ಪ್ರಭು ನೃತ್ಯ ....
ಸತ್ಯಘಟನೆ ಆಧಾರಿತ "ಭೀಮಾ ಕೋರೇಗಾಂವ" ಶೀರ್ಷಿಕೆ ಅನಾವರಣ ಇತ್ತೀಚೆಗಷ್ಟೇ ಸಂಜು ವೆಡ್ಸ್ ಗೀತಾ-2 ಚಿತ್ರಕ್ಕೆ ಚಾಲನೆ ನೀಡಿದ್ದ ನಿರ್ದೇಶಕ ನಾಗಶೇಖರ್, ಅದರ ಬೆನ್ನಲ್ಲೇ ಮತ್ತೊಂದು ಬಿಗ್ ಪ್ರಾಜೆಕ್ಟ್ ಗೆ ಕೈ ಹಾಕಿದ್ದಾರೆ. ರೆವಲ್ಯೂಷನರಿ ಸಬ್ಜೆಕ್ಟ್ ಇಟ್ಟುಕೊಂಡು ನೈಜ ಘಟನೆಯನ್ನು ತೆರೆಯ ಮೇಲೆ ಹೇಳಹೊರಟಿದ್ದಾರೆ. ಅದಕ್ಕೆ ಕೊಟ್ಟಿರುವ ಹೆಸರು ಭೀಮಾ ಕೋರೇಗಾಂವ. ನಾಗಶೇಖರ್ ಮೂವೀಸ್ ಹಾಗೂ ಪವಿತರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿ ಛಲವಾದಿ ಕುಮಾರ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬಹು ಸೂಕ್ಷ್ಮ ವಿಚಾರ ಇಟ್ಟುಕೊಂಡು ಮಾಡುತ್ತಿರುವ ಚಲನಚಿತ್ರ ಇದಾಗಿದ್ದು, ಬೆಂಗಳೂರಿನ ಅಶೋಕಾ ....
*ಸೆಪ್ಟಂಬರ್ 28ಕ್ಕೆ ಲೈಕಾ ನಿರ್ಮಾಣದ, ರಾಘವ್ ಲಾರೆನ್ಸ್-ಕಂಗನಾ ನಟನೆಯ ‘ಚಂದ್ರಮುಖಿ-2’ ರಿಲೀಸ್*
ಖ್ಯಾತ ನಿರ್ದೇಶಕ ಕಂ ನಟ ರಾಘವ ಲಾರೆನ್ಸ್ ಮತ್ತು ಬಾಲಿವುಡ್ ನಟಿ ಕಂಗನಾ ರಣಾವತ್ ನಟನೆಯ ಬಹುನಿರೀಕ್ಷಿತ ಸಿನಿಮಾ ’ಚಂದ್ರಮುಖಿ 2' ಬಿಡುಗಡೆ ದಿನಾಂಕ ಮುಂದೂಡಲಾಗಿದೆ. ಹಿರಿಯ ನಿರ್ದೇಶಕ ಪಿ. ವಾಸು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಹಾರರ್ ಕಾಮಿಡಿ ಸಿನಿಮಾ ಸೆಪ್ಟಂಬರ್ 19 ರಂದು ಬಿಡುಗಡೆಗೊಳಿಸಲು ನಿರ್ಧರಿಸಲಾಗಿತ್ತು. ಆದರೆ ಇದೀಗ ’ಚಂದ್ರಮುಖಿ 2' ಈ ತಿಂಗಳ ಕೊನೆಯಲ್ಲಿ ತೆರೆ ಕಾಣಲಿದೆ. ಅಂದ್ರೆ ಸೆಪ್ಟಂಬರ್ 28ಕ್ಕೆ ವಿಶ್ವಾದ್ಯಂತ ರಿಲೀಸ್ ಆಗಲಿದೆ.
*ಸುಮಂತ್ ಶೈಲೇಂದ್ರ ಹುಟ್ಟುಹಬ್ಬಕ್ಕೆ ಬರಲಿದೆ "ಚೇಸರ್" ಚಿತ್ರದ ಫಸ್ಟ್ ಲುಕ್* .
*ಎಂ.ಜೈರಾಮ್ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಮುಕ್ತಾಯಹಂತದಲ್ಲಿ* .
ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಎಂ ಜೈರಾಮ್ ನಿರ್ದೇಶನದಲ್ಲಿ ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸುತ್ತಿರುವ "ಚೇಸರ್" ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದ್ದು, ಕೆಲವು ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ.
ಸೆಪ್ಟೆಂಬರ್ 7 ನಾಯಕ , ಶೈಲೇಂದ್ರ ಹುಟ್ಟುಹಬ್ಬ. ಅದೇ ದಿನ "ಚೇಸರ್" ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಸುಮಂತ್ ಅವರಿಗೆ ಹುಟ್ಟುಹಬ್ಬದ ಉಡುಗೊರೆ ನೀಡಲು ಚಿತ್ರತಂಡ ಮುಂದಾಗಿದೆ.
*ಹಲವು ಗಣ್ಯರ ಉಪಸ್ಥಿತಿಯಲ್ಲಿ ಅನಾವರಣವಾಯಿತು ಡಾ||ಅಮರನಾಥ ರೆಡ್ಡಿ ವಿ ನಿರ್ಮಿಸಿ, ನಟಿಸಿರುವ "ಆದರ್ಶ ರೈತ" ಚಿತ್ರದ ಟ್ರೇಲರ್* *ಇದು ರೈತನಿಂದ ರೈತರಿಗಾಗಿ ನಿರ್ಮಾಣವಾಗಿರುವ ಚಿತ್ರ* ರೈತನ ಕುರಿತು ಸಾಕಷ್ಟು ಚಿತ್ರಗಳು ಬಂದಿದೆ. ಆದರೆ ರೈತ ಏನು ಮಾಡಬೇಕು? ಏನು ಮಾಡಬಾರದು? ಎಂದು ಹೇಳುವ ಕಥಾಹಂದರ ಹೊಂದಿರುವ "ಆದರ್ಶ ರೈತ" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ, ಹಾಡುಗಳ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ನಟಿ ಪ್ರಿಯಾ ಹಾಸನ್, ವೇಗಸ್ ಆಸ್ಪತ್ರೆ ಮುಖ್ಯಸ್ಥರಾದ ನಾರಾಯಣ ಸ್ವಾಮಿ , ಸಿರಿ ಮ್ಯೂಸಿಕ್ ನ ಸುರೇಶ್ ಚಿಕ್ಕಣ್ಣ, ಆರ್ ವಿ ಚೌಡಪ್ಪ(ACP) ಹಾಗೂ ನಿರ್ಮಾಪಕ ಆಂತರ್ಯ ಸತೀಶ್ ಅವರು ಮುಖ್ಯ ....
*ಸೆ.28 ರಾಮ್ ಪೋತಿನೇನಿ ಹಾಗೂ ಶ್ರೀಲೀಲಾ ನಟನೆಯ ‘ಸ್ಕಂದ’ ಸಿನಿಮಾ ರಿಲೀಸ್* ರಾಮ್ ಪೋತಿನೇನಿ ಹಾಗೂ ಶ್ರೀಲೀಲಾ ನಟನೆಯ ‘ಸ್ಕಂದ’ ಸಿನಿಮಾ ಸೆಪ್ಟೆಂಬರ್ 15ಕ್ಕೆ ಬಿಡುಗಡೆ ಆಗಬೇಕಿತ್ತು. ಆದರೆ, ಈಗ ತಂಡ ಸಿನಿಮಾ ರಿಲೀಸ್ ದಿನಾಂಕವನ್ನು ಎರಡು ವಾರ ಮುಂದಕ್ಕೆ ಹಾಕಿದೆ. ಅರ್ಥಾತ್, ಸೆಪ್ಟೆಂಬರ್ 28ರಂದು ಚಿತ್ರ ರಿಲೀಸ್ ಮಾಡಲು ಪ್ಲ್ಯಾನ್ ರೂಪಿಸಿಕೊಂಡಿದೆ. ಬೋಯಪಾಟಿ ಶ್ರೀನು ಆಕ್ಷನ್ ಕಟ್ ಹೇಳಿರುವ ಆಕ್ಷನ್ ಎಂಟರ್ ಟೈನರ್ ಸ್ಕಂದ ಸಿನಿಮಾದ ಟ್ರೇಲರ್ ಹಾಗೂ ಹಾಡುಗಳು ಭಾರೀ ಸದ್ದು ಮಾಡಿವೆ. ಪ್ರೀ ರಿಲೀಸ್ ವ್ಯವಹಾರದಲ್ಲಿಯೂ ದಾಖಲೆ ಬರೆದಿರುವ ಈ ಚಿತ್ರವನ್ನು ಶ್ರೀನಿವಾಸ್ ಸಿಲ್ವರ್ ಸ್ಕ್ರೀನ್ ಬ್ಯಾನರ್ ಅಡಿ ಶ್ರೀನಿವಾಸ್ ಚಿತ್ತೂರಿ ನಿರ್ಮಾಣ ....
*ಟೈಗರ್ ನಾಗೇಶ್ವರ್ ಸಿನಿಮಾದ ಮೊದಲ ಹಾಡು ರಿಲೀಸ್..ನೂಪುರ್ ಸನೋನ್ ಜೊತೆ ಹೆಜ್ಜೆ ಹಾಕಿದ ಮಾಸ್ ಮಹಾರಾಜ ರವಿತೇಜ*
ತೆಲುಗಿನ ಮಾಸ್ ಮಹಾರಾಜ ರವಿತೇಜ ನಟನೆಯ ಬಹುನಿರೀಕ್ಷಿತ ಟೈಗರ್ ನಾಗೇಶ್ವರ್ ರಾವ್ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ಏಕ್ ದಮ್ ಏಕ್ ದಮ್ ಎಂಬ ಸಿಂಗಿಂಗ್ ಮಸ್ತಿ 5 ಭಾಷೆಯಲ್ಲಿ ಅನಾವರಣಗೊಂಡಿದ್ದು, ಕನ್ನಡದಲ್ಲಿ ಸಂತೋಷ್ ವಿಶ್ವರತ್ನ ಸಾಹಿತ್ಯ ಬರೆದಿದ್ದು, ಅನಿರುದ್ಧ್ ಶಾಸ್ತ್ರೀ ಹಾಡಿಗೆ ಧ್ವನಿಯಾಗಿದ್ದಾರೆ. ರವಿತೇಜ ಮತ್ತು ನೂಪುರ್ ಸನೋನ್ ಏಕ್ ದಮ್ ಏಕ್ ದಮ್ ಪೆಪ್ಪಿಯೆಸ್ಟ್ ಸಾಂಗ್ ಗೆ ಹೆಜ್ಜೆ ಹಾಕಿದ್ದು, ಜಿವಿ ಪ್ರಕಾಶ್ ಟ್ಯೂನ್ ಹಾಕಿದ್ದಾರೆ.
*ವಿಕ್ಕಿ ವರುಣ್ - ಧನ್ಯಾ ರಾಮಕುಮಾರ್ ಅಭಿನಯದ "ಕಾಲಾಪತ್ಥರ್" ಚಿತ್ರದಲ್ಲಿ ಹಾಡುಗಳ ದಿಬ್ಬಣ್ಣ* . " *ಸೌಂಡ್ಸ್ ಆಫ್ ಕಾಲಾಪತ್ಥರ್" ಹೆಸರಿನಲ್ಲಿ ಚಿತ್ರದ ಅಷ್ಟು ಹಾಡುಗಳನ್ನು ಪರಿಚಯಿಸಿದ ಚಿತ್ರತಂಡ* . ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, ವಿಕ್ಕಿ ವರುಣ್ ನಿರ್ದೇಶಿಸಿ ನಾಯಕನಾಗೂ ನಟಿಸಿರುವ "ಕಾಲಾಪತ್ಥರ್" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಚಿತ್ರದ ಐದು ಹಾಡುಗಳನ್ನು ಸೇರಿಸಿ "ಸೌಂಡ್ಸ್ ಆಫ್ ಕಾಲಾಪತ್ಥರ್" ಎಂಬ ಹಾಡುಗಳ ಗುಚ್ಛವನ್ನು ಕೆಲವೇ ನಿಮಿಷಗಳಲ್ಲಿ ತೋರಿಸುವ ವಿಭಿನ್ನ ಪ್ರಯತ್ನಕ್ಕೆ ಚಿತ್ರತಂಡ ಮುಂದಾಯಿತು. ಸಮಾರಂಭದ ....
ಸೂರ್ಯನ ಹೋರಾಟಕ್ಕೆ ಟೀಸರ್ ಬಲ ಈಗಿನ ಕಾಲದ ಯುವಕ, ಯುವತಿಯರು ಪ್ರೀತಿಗಾಗಿ ಏನೆಲ್ಲ ಸಾಹಸಗಳನ್ನು ಮಾಡಬಹುದು ಎಂದು ಈಗಾಗಲೇ ಸಾಕಷ್ಟು ಚಲನಚಿತ್ರಗಳ ಮೂಲಕ ನಮ್ಮ ನಿರ್ದೇಶಕರುಗಳು ಹೇಳಿದ್ದಾರೆ. ಅದೆಲ್ಲಕ್ಕಿಂತ ವಿಭಿನ್ನವಾದ, ಹೊಸ ಥರದ ಕಥೆಯೊಂದನ್ನು ಯುವ ನಿರ್ದೇಶಕ ಸಾಗರ್ ಅವರು ಸೂರ್ಯ ಎನ್ನುವ ಚಿತ್ರದ ಮೂಲಕ ಹೇಳಹೊರಟಿದ್ದಾರೆ. ಬಿ.ಸುರೇಶ್ ಅವರ ಜೊತೆ ಸಹನಿರ್ದೇಶಕರಾಗಿ ಕೆಲಸ ಮಾಡಿದ್ದ ಸಾಗರ್, ಮಾಸ್ ಲವ್ಸ್ಟೋರಿ ಇಟ್ಟುಕೊಂಡು ಸೂರ್ಯ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಚಿತ್ರೀಕರಣದ ಕೊನೇಹಂತ ತಲುಪಿರುವ ಈ ಸಿನಿಮಾದಲ್ಲಿ ಯುವನಟ ಪ್ರಶಾಂತ್ ನಾಯಕನಾಗಿ ನಟಿಸಿದ್ದು, ಹರ್ಷಿತಾ ನಾಯಕಿ ಪಾತ್ರದಲ್ಲಿ ....
*"ಬಾನ ದಾರಿಯಲಿ" ಚಿತ್ರದ ಟ್ರೇಲರ್ ಗೆ ಪ್ರಶಂಸೆಯ ಮಹಾಪೂರ* .. ಗೋಲ್ಡನ್ ಸ್ಟಾರ್ ಗಣೇಶ್ ನಾಯಕನಾಗಿ ನಟಿಸಿರುವ, ಪ್ರೀತಂ ಗುಬ್ಬಿ ನಿರ್ದೇಶನದ ಹಾಗೂ ಶ್ರೀವಾರಿ ಟಾಕೀಸ್ ನಿರ್ಮಾಣದ "ಬಾನ ದಾರಿಯಲಿ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಟ್ರೇಲರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೆ ಹರಿದು ಬರುತ್ತಿದೆ. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಹೆಚ್ಚಿನ ಮಾಹಿತಿ ನೀಡಿದರು. ಇದು ನಾನು ಈವರೆಗೂ ಮಾಡಿರದ ಪಾತ್ರ ಎಂದು ಮಾತು ಆರಂಭಿಸಿದ ನಾಯಕ ಗಣೇಶ್, "ಬಾನ ದಾರಿಯಲಿ" ಪ್ರೀತಿಯ ಬಗೆಗಿನ ಚಿತ್ರ. ಪುನೀತ್ ರಾಜಕುಮಾರ್ ಅವರು ಅಭಿನಯಿಸಿದ್ದ ಈ ....
*ವಿಭಿನ್ನ ಕಥಾಹಂದರ ಹೊಂದಿರುವ "ಟೇಲ್ಸ್ ಆಫ್ ಮಹಾನಗರ" ಸೆಪ್ಟೆಂಬರ್ 15 ರಂದು ತೆರೆಗೆ* . ಹೆಸರಾಂತ ನಿರ್ದೇಶಕ "ಗೆಜ್ಜೆನಾದ" ವಿಜಯ್ ಕುಮಾರ್ ಪುತ್ರ ಅಥರ್ವ್ ನಾಯಕನಾಗಿ ನಟಿಸಿರುವ "ಟೇಲ್ಸ್ ಆಫ್ ಮಹಾನಗರ" ಚಿತ್ರ ಸೆಪ್ಟೆಂಬರ್ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಧ್ಯಮಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು. ನನ್ನ ಮಗ ಅಥರ್ವ್ ಹಾಗೂ ನಿರ್ದೇಶಕ ಕಿರಣ್ ಈ ಚಿತ್ರದ ಕಥೆ ಸಿದ್ದ ಮಾಡಿಕೊಂಡು ನಿರ್ಮಾಪಕರ ಹುಡುಕಾಟದಲ್ಲಿದ್ದರು. ಆನಂತರ ಕಥೆ ಇಷ್ಟವಾಗಿ ನಾನೇ ನಿರ್ಮಾಣಕ್ಕೆ ಮುಂದಾದೆ. ಕಿಚ್ಚ ಸುದೀಪ್ ಈ ಚಿತ್ರದ ಟೀಸರ್ ಗೆ ಧ್ವನಿ ನೀಡಿ ಪ್ರೋತ್ಸಾಹಿಸಿದ್ದಾರೆ. ಮಾಮ ಫೀಸ್ಟ್ ಅವರು ನಮ್ಮೊಟ್ಟಿಗಿದ್ದಾರೆ. ....
*ಸೆ.15ಕ್ಕೆ ಭಾವೈಕ್ಯತೆಯ ಸುತ್ತ "13"ರ ಚಿತ್ತ....* ಹಿರಿಯ ಕಲಾವಿದರಾದ ರಾಘವೇದ್ರ ರಾಜ್ಕುಮಾರ್, ಶೃತಿ ಹಾಗೂ ಪ್ರಮೋದ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಭಾವೈಕ್ಯತೆಯ ಸಂದೇಶ ಸಾರುವ, ಕುತೂಹಲಕಾರಿ ಕಥಾಹಂದರ ಹೊಂದಿರುವ ಚಿತ್ರ "13". ಇದೇ ತಿಂಗಳ 15ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ತೆರೆ ಕಾಣುತ್ತಿರುವ ಈ ಚಿತ್ರದಲ್ಲಿ ರಾಘಣ್ಣ ಅವರು ಮೋಹನ್ ಕುಮಾರ್ ಎಂಬ ಹಿಂದೂ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದರೆ, ನಟಿ ಶೃತಿ ಅವರು ಸಾಹಿರಾಭಾನು ಎಂಬ ಮುಸ್ಲಿಂ ಮಹಿಳೆಯ ಪಾತ್ರ ನಿರ್ವಹಿಸಿದ್ದಾರೆ. ಚಿತ್ರದ ಬಿಡುಗಡೆಯ ಕುರಿತಂತೆ ಮಾಹಿತಿ ಹಂಚಿಕೊಳ್ಳಲು ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದ ....
ಕಾಲ್ಗೆಜ್ಜೆ ನಿರ್ದೇಶಕರ ಮಡಕೇರಿ
‘ಕಾಲ್ಗೆಜ್ಜೆ’ ಚಿತ್ರಕ್ಕಾಗಿ ರಾಜ್ಯ ಪ್ರಶಸ್ತಿ ಪಡೆದಿರುವ ಎ.ಬಂಗಾರು ನಿರ್ದೇಶನದ ಎರಡನೇ ಚಿತ್ರ ‘ಮಡಕೇರಿ’ ಸಿನಿಮಾದ ಶೀರ್ಷಿಕೆ ಅನಾವರಣ ಕಾಯಾಕ್ರಮ ಇತ್ತೀಚೆಗೆ ಶ್ರೀ ಶ್ರೀ ಶ್ರೀ ಷ.ಬ್ರ.ರೇವಣ ಸಿದ್ದೇಶ್ವರ ಶಿವಚಾರ್ಯ ಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. ಮಂಜು ಕರಗುವ ಮುನ್ನ’ ಎಂಬ ಅಡಿಬರಹವಿದೆ. ನಿರ್ದೇಶಕರ ಗುರು ಎಸ್.ಮಹೇಂದರ್ ಟೈಟಲ್ ಲಾಂಚ್ ಮಾಡುವ ಮೂಲಕ ವಾತಾವರಣಕ್ಕೆ ಕಳೆ ತಂದರು.
*"ಕ್ರೇಜಿ ಕೀರ್ತಿ" ಚಿತ್ರದ ಟ್ರೇಲರ್ ಬಿಡುಗಡೆ* : *ಯುವಕರಿಗೊಂದು ಸ್ಪೆಷಲ್ ಸಿನಿಮಾ* ಕನ್ನಡದಲ್ಲಿ ಈಗಾಗಲೇ ವಿಭಿನ್ನ ಶೀರ್ಷಿಕೆ ಇರುವ ಸಿನಿಮಾಗಳು ಬಂದಿವೆ. ಆ ಸಾಲಿಗೆ ಈಗ ’ಕ್ರೇಜಿ ಕೀರ್ತಿ’ ಎಂಬ ಸಿನಿಮಾ ಕೂಡ ಸೇರಿದೆ. ಚಿತ್ರರಂಗದಲ್ಲಿ ಹೊಸ ಕ್ರೇಜ್ ಹುಟ್ಟು ಹಾಕುವ ಉತ್ಸುಕದಲ್ಲಿದೆ. ಪ್ರಿಯ ಬಾಲಾಜಿ ಪ್ರೊಡಕ್ಷನ್ಸ್ ಮೂಲಕ ತಯಾರಾಗಿರುವ ಈ ಚಿತ್ರಕ್ಕೆ ಬಾಲಾಜಿ ಮಾಧವ ಶೆಟ್ಟಿ ನಿರ್ದೇಶಕರು. ಚಿತ್ರದ ನಿರ್ಮಾಪಕರು ಕೂಡ ಅವರೆ. ಟ್ರೇಲರ್ ಬಿಡುಗಡೆಯಾಗಿದ್ದು, ಮೆಚ್ಚುಗೆ ಪಡೆದಿದೆ. ಇನ್ನು, ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿರುವ ಚಿತ್ರತಂಡ, ಮಾಧ್ಯಮ ಮುಂದೆ ಸಿನಿಮಾ ಕುರಿತು ಮಾಹಿತಿ ಹಂಚಿಕೊಂಡಿತು. ನಿರ್ದೇಶಕ, ....
ಹುಲಿನಾಯಕ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ ಕಿಚ್ಚಸುದೀಪ್ ಪತ್ರಕರ್ತ, ನಟ ಚಕ್ರವರ್ತಿಚಂದ್ರಚೂಡ್ ನಿರ್ದೇಶನ ಮಾಡುತ್ತಿರುವ ‘ಹುಲಿನಾಯಕ’ ಚಿತ್ರದ ಮೋಷನ್ ಪೋಸ್ಟರ್ನ್ನು ಕಿಚ್ಚಸುದೀಪ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಮಯೂರ ಪಿಕ್ಚರ್ಸ್ ಲಾಂಛನದಲ್ಲಿ ಮಂಜುನಾಥ್.ಡಿ ನಿರ್ಮಾಣ ಮಾಡುತ್ತಿದ್ದಾರೆ. ಮಿಲಂದ್ಗೋವಿಂದ್ ನಾಯಕನಾಗಿ ಮೂರನೇ ಅವಕಾಶ. ಸ್ವಾತಂತ್ರಕ್ಕಾಗಿ ಹೋರಾಡಿದ ಸಿಂಧೂರ ವೀರ ಲಕ್ಷಣ ಕುರಿತಾದ ಕಥೆಯಾಗಿದೆ. ಸಮಾರಂಭದಲ್ಲಿ ಡಾಲಿ ಧನಂಜಯ, ನೆನಪಿರಲಿ ಪ್ರೇಮ್, ವಸಿಷ್ಟಸಿಂಹ, ಪೂಜಾಗಾಂಧಿ, ಸಂಜನಾಗಲ್ರಾಣಿ ಶಾಸಕ ರಾಜುಗೌಡನಾಯಕ, ವೀರಕಪುತ್ರ ಶ್ರೀನಿವಾಸ್ ....
ಲಂಕೇಶ್ ಮೊಮ್ಮಗನ ಚಿತ್ರಕ್ಕೆ ಮುಹೂರ್ತ ಲಂಕೇಶ್ ಪುತ್ರ ಇಂದ್ರಜಿತ್ಲಂಕೇಶ್ ನಟ, ನಿರ್ದೇಶಕನಾಗಿ ಹೆಸರು ಮಾಡಿದವರು. ಈಗ ಇವರ ಹಿರಿಯ ಮಗ ಸಮರ್ಜಿತ್ಲಂಕೇಶ್ ನಾಯಕನಾಗಿ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಮೊನ್ನೆ ನಡೆದ ಮುಹೂರ್ತ ಸಮಾರಂಭದಲ್ಲಿ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಗಮಿಸಿ ಚಿತ್ರಕ್ಕೆ ಚಾಲನೆ ನೀಡಿದರು. ಲಾಫಿಂಗ್ ಬುದ್ದ ಫಿಲಂಸ್ ನಿರ್ಮಾಣದ ಜವಬ್ದಾರಿಯನ್ನು ಹೊತ್ತುಕೊಂಡಿದೆ. ನಂತರ ಮಾತನಾಡಿದ ಇಂದ್ರಜಿತ್ಲಂಕೇಶ್ ಇದೊಂದು ನೈಜ ಘಟನೆಯಿಂದ ಪ್ರೇರಣೆ ಪಡೆದುಕೊಂಡು ಕಥೆಯನ್ನು ಸಿದ್ದಪಡಿಸಲಾಗಿದೆ. ನಾವು ಯಾರಿಗೂ ಕಮ್ಮಿಯಿಲ್ಲ ಎಂದು ಬಯಸುವ ....