ಭುವನಂ ಗಗನಂ ಕುಂಬಳಕಾಯಿ ಈ ಹಿಂದೆ ‘ರಾಜರು’ ಚಿತ್ರವನ್ನು ನಿರ್ದೇಶನ ಮಾಡಿದ್ದ ಗಿರೀಶ್‌ಮೂಲಿಮನಿ ಗ್ಯಾಪ್ ನಂತರ ‘ಭುವನಂ ಗಗನಂ’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಪುನೀತ್‌ರಾಜ್‌ಕುಮಾರ್ ಅಭಿನಯದ ‘ವಂಶಿ’ ಸಿನಿಮಾದ ಹಾಡಿನ ಸಾಲು ಶೀರ್ಷಿಕೆಯಾಗಿದೆ. ಎಸ್‌ವಿಸಿ ಬ್ಯಾನರ್ ಅಡಿಯಲ್ಲಿ ಎಂ.ಮುನೇಗೌಡ ಬಂಡವಾಳ ಹೂಡುತ್ತಿರುವುದು ಹೊಸ ಅನುಭವ. ಸಲಾರ್ ಖ್ಯಾತಿಯ ಪ್ರಮೋದ್ ಮತ್ತು ದಿಯಾ ಪೃಥ್ವಿಅಂಬರ್ ನಾಯಕರುಗಳು. ರೆಚಲ್‌ಡೇವಿಡ್, ಅಶ್ವಥಿ ನಾಯಕಿಯರು. ಇವರೊಂದಿಗೆ ಅಚ್ಯುತಕುಮಾರ್, ಶರತ್‌ಲೋಹಿತಾಶ್ವ, ಪ್ರಕಾಶ್‌ತುಮ್ಮಿನಾಡು, ಸಿದ್ಲಿಂಗುಶ್ರೀಧರ್, ಹರಿಣಿ, ಸ್ಪರ್ಶರೇಖಾ, ಪ್ರಜ್ವಲ್‌ಶೆಟ್ಟಿ, ....
ನಾಯಕನ ಹುಟ್ಟುಹಬ್ಬಕ್ಕೆ ಪೋಸ್ಟರ್ ಬಿಡುಗಡೆ
ಬಿಗ್ ಬಾಸ್ ಖ್ಯಾತಿ ಹಾಗೂ ಆಧುನಿಕ ರೈತ ಅಂಗ ಗುರುತಿಸಿಕೊಂಡಿರುವ ಶಶಿ ‘ಮೆಹಬೂಬ’ ಚಿತ್ರದಲ್ಲಿ ನಾಯಕನಾಗಿ ಪರಿಚಯವಾಗಿದ್ದಾರೆ. ಪ್ರಚಾರದ ಮೊದಲ ಹಂತವಾಗಿ ನಾಯಕನ ಹುಟ್ಟುಹಬ್ಬದಂದು ಕೃಷಿ ಸಚಿವ ಚೆಲುವರಾಜಸ್ವಾಮಿ ಆಗಮಿಸಿ ಪೋಸ್ಟರ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ನಂತರ ಮಾತನಾಡಿದ ಸಚಿವರು ಶಶಿ ನಿರ್ಮಾಪಕರಾಗಿದ್ದರಿಂದ ಲಾಭ-ನಷ್ಟ ಹಾಗೂ ಹಸರು ಅವರದ್ದೇ ಆಗಿದೆ. ರಾಜ್ಯದ ಜನ ಆಶೀರ್ವಾದ ಮಾಡಬೇಕಾಗಿದೆ. ನಾಯಕಿ ನನ್ನ ಗೆಳೆಯನ ಮಗಳು. ಹೀಗಾಗಿ ಇಬ್ಬರಿಗೂ ಯಶಸ್ಸು ಸಿಗಲಿ ಎಂದರು.
ಹೊಸತನದ ಲೈಫ್ ಖಿoಜಚಿಥಿ ಸದುಭಿರುಚಿಯ ಚಿತ್ರ ‘ಇರುವುದೆಲ್ಲವ ಬಿಟ್ಟು’ ನಿರ್ದೇಶನ ಮಾಡಿದ್ದ ಕಾಂತ ಕನ್ನಲ್ಲಿ ಗ್ಯಾಪ್ ನಂತರ ಈಗ ‘ಲೈಫ್ ಖಿoಜಚಿಥಿ’ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮೇಘನಾ ಪ್ರೊಡಕ್ಷನ್ ಅಡಿಯಲ್ಲಿ ಮೇಘನಾಪ್ರದೀಪ್ ಬಂಡವಾಳ ಹೂಡುತ್ತಿರುವುದು ಹೊಸ ಅನುಭವ. ಶ್ರೀ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ಹಿರಿಯ ನಿರ್ದೇಶಕ ಮಹೇಂದ್ರ ಕ್ಲಾಪ್ ಮಾಡಿದರೆ, ಧ್ರುವಸರ್ಜಾ ಟೈಟಲ್ ಹಾಗೂ ಫಸ್ಟ್‌ಲುಕ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ನಂತರ ಮಾತನಾಡುತ್ತಾ ಶೀರ್ಷಿಕೆ ಕೇಳಿದರೆ ನೋಡಬೇಕು ಅನಿಸುತ್ತದೆ. ....
ಮಿಸ್ ಕಾಲ್ ಪ್ರೇಮಕಥೆ "ಜೊತೆಯಾಗಿರು" ಟ್ರೈಲರ್ ಬಿಡುಗಡೆ ರೇಣು ಮೂವೀಸ್ ಮೂಲಕ ಒಂದಷ್ಟು ಸ್ನೇಹಿತರೇ ಸೇರಿ ನಿರ್ಮಿಸಿರುವ ಚಿತ್ರ ಜೊತೆಯಾಗಿರು. ಅಜರಾಮರ, ನಾನೊಬ್ನೆ ಒಳ್ಳೇವ್ನು ಸೇರಿದಂತೆ ಹಲವಾರು ಸಿನಿಮಾಗಳಿಗೆ ಸಹಾಯಕ ನಿರ್ದೇಶಕ, ಸಹ ನಿರ್ದೇಶಕನಾಗಿಯೂ ಕೆಲಸ ಮಾಡಿದ ಸತೀಶ್ ಕುಮಾರ್ ಅವರ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಹಾಗೂ ೩ ಹಾಡುಗಳ ಪ್ರದರ್ಶನ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ೨೦೦೯ರಲ್ಲಿ ನಡೆದ ನೈಜ ಘಟನೆಯಿಂದ ಪ್ರೇರಿತವಾದ ಕಥೆ ಈ ಚಿತ್ರದಲ್ಲಿದೆ. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಸತೀಶ್ ಕುಮಾರ್, ಆಗ ನನ್ನ ಸ್ನೇಹಿತನ ಜೀವನದಲ್ಲಿ ನಡೆದ ಘಟನೆಯನ್ನಿಟ್ಟುಕೊಂಡು ಈ ....
*ರಾಘವೇಂದ್ರ ರಾಜಕುಮಾರ್ ಅವರಿಂದ ಬಿಡುಗಡೆಯಾಯಿತು "ರಂಗ ಸಮುದ್ರ" ಚಿತ್ರದ ಟ್ರೇಲರ್* *ರಂಗಾಯಣ ರಘು ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ ಜನಪದ ಸೊಗಡಿನ ಈ ಚಿತ್ರ ಜನವರಿ 12ರಂದು ತೆರೆಗೆ* . ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ನಟ ರಂಗಾಯಣ ರಘು ಪ್ರಮುಖಪಾತ್ರದಲ್ಲಿ ನಟಿಸಿರುವ ಬಹು ನಿರೀಕ್ಷಿತ "ರಂಗ ಸಮುದ್ರ" ಚಿತ್ರದ ಟ್ರೇಲರ್ ಅನ್ನು ರಾಘವೇಂದ್ರ ರಾಜಕುಮಾರ್ ಅವರು ಬಿಡುಗಡೆ ಮಾಡಿ ಶುಭ ಕೋರಿದರು. ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ರಾಘವೇಂದ್ರ ರಾಜಕುಮಾರ್, ಇಂತಹ ಕಥಾವಸ್ತು ಆಯ್ಕೆ ಮಾಡಿಕೊಂಡಿರುವ ನಿರ್ದೇಶಕರಿಗೆ ಮೊದಲ ಸೆಲ್ಯೂಟ್. ಇನ್ನು ರಂಗಾಯಣ ರಘು ಅವರ ಅಭಿನಯ ನಿಜಕ್ಕೂ ಅದ್ಭುತ. ಇಂತಹ ಚಿತ್ರದಲ್ಲಿ ನಾನು ....
*ಗಿರೀಶ್ ಕಾಸರವಳ್ಳಿ - ಜೋಗಿ ಅವರಿಂದ ಬಿಡುಗಡೆಯಾಯಿತು "ಕೋಳಿ ಎಸ್ರು" ಹಾಗೂ "ಹದಿನೇಳೆಂಟು" ಚಿತ್ರಗಳ ಟ್ರೇಲರ್* . *ಪ್ರಶಸ್ತಿ ವಿಜೇತ ಈ ಎರಡು ಚಿತ್ರಗಳು ಜನವರಿ 26 ರಂದು ತೆರೆಗೆ* ಚಂಪಾ.ಪಿ. ಶೆಟ್ಟಿ ನಿರ್ದೇಶನದ "ಕೋಳಿ ಎಸ್ರು" ಹಾಗೂ ಪೃಥ್ವಿ ಕೊಣನೂರು ನಿರ್ದೇಶಿಸಿರುವ "ಹದಿನೇಳೆಂಟು" ಚಿತ್ರಗಳ ಟ್ರೇಲರ್ ಬಿಡುಗಡೆಯಾಗಿದೆ. ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರು "ಕೋಳಿ ಎಸ್ರು" ಚಿತ್ರದ ಟ್ರೇಲರ್ ಅನ್ನು ಹಾಗೂ ಜನಪ್ರಿಯ ಲೇಖಕ & ಪತ್ರಕರ್ತ ಜೋಗಿ ಅವರು "ಹದಿನೇಳೆಂಟು" ಚಿತ್ರದ ಟ್ರೇಲರ್ ಅನ್ನು ಬಿಡುಗಡೆ ಮಾಡಿ ಶುಭ ಕೋರಿದರು. ಚಂಪಾ ಶೆಟ್ಟಿ ಅವರು ಹಿಂದೆ “ಅಮ್ಮಚ್ಚಿಯೆಂಬ ನೆನಪು” ಚಿತ್ರವನ್ನು, ಪೃಥ್ವಿ ....
ನಾನು ಮಾಡುವುದು ಕಮರ್ಷಿಯಲ್ ಚಿತ್ರ ಪ್ರಶಸ್ತಿಗಲ್ಲ – ದರ್ಶನ್
ಮೊನ್ನೆಯಷ್ಟೇ ಬಿಡುಗಡೆಯಾಗಿ ಸದ್ದು ಮಾಡುತ್ತಿರುವ ‘ಕಾಟೇರ’ ಚಿತ್ರತಂಡವು ಮಾಧ್ಯಮದವರನ್ನು ಭೇಟಿ ಮಾಡಿ ಒಂದಷ್ಟು ಪ್ರಶ್ನೆಗಳಿಗೆ ಉತ್ತರವಾದರು. ಅತಿ ಹೆಚ್ಚು ಉತ್ತರಗಳನ್ನು ನೀಡಿದ್ದು ದರ್ಶನ್. ಅವರ ಮಾತುಗಳಲ್ಲಿ ಹೇಳುವುದಾದರೆ, ಯಾವುದೇ ಸಿನಿಮಾ ಒಪ್ಪಲು ೩ ಪ್ರಮುಖ ಅಂಶಗಳನ್ನು ನೋಡುತ್ತೇನೆ. ಹೆಣ್ಣನ್ನು ತುಚ್ಚವಾಗಿ ನೋಡಬಾರದು. ನಮ್ಮ ನೆಲ, ಕನ್ನಡದ ಬಗ್ಗೆ ಕೇವಲವಾದ ಸಂಭಾಷಣೆ ಇರಬಾರದು. ನಿರ್ಮಾಪಕರಿಗೆ ಲಾಭ ತಂದುಕೊಡಬೇಕು. ಈ ಮೂರನ್ನು ಇಟ್ಟುಕೊಂಡು ಕಾಲ್‌ಶೀಟ್ ಕೊಡುತ್ತೇನೆ.
*ನ್ಯೂ ಇಯರ್ ಗೆ ಬಂತು "ಮ್ಯಾಟ್ನಿ" ಚಿತ್ರದ ಮಾಸ್ ಹಾಡು* . *ನೀನಾಸಂ ಸತೀಶ್ - ರಚಿತಾರಾಮ್ ಜೋಡಿಯ ಈ ಚಿತ್ರದ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದ ಡಾಲಿ ಧನಂಜಯ* . ನೀನಾಸಂ ಸತೀಶ್ ಹಾಗೂ ರಚಿತಾರಾಮ್ "ಅಯೋಗ್ಯ" ಚಿತ್ರದ ನಂತರ ನಟಿಸಿರುವ ಚಿತ್ರ "ಮ್ಯಾಟ್ನಿ". ಬಹು ನಿರೀಕ್ಷಿತ ಈ ಚಿತ್ರದ " ಬಾರೋ ಬಾರೋ ಬಾಟಲ್ ತಾರೋ" ಎಂಬ ಹಾಡು ನ್ಯೂ ಇಯರ್ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ನಟ ಡಾಲಿ ಧನಂಜಯ ಈ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಬರೆದು ಸಂಗೀತ ನೀಡಿರುವ ಈ ಹಾಡನ್ನು ಪೂರ್ಣಚಂದ್ರ ತೇಜಸ್ವಿ, ನೀನಾಸಂ ಸತೀಶ್ ಹಾಗೂ ರೀಲ್ ರೀನಾ ಹಾಡಿದ್ದಾರೆ. ಯುವಪೀಳಿಗೆಗೆ ಹೇಳಿಮಾಡಿಸಿದಂತಿರುವ ಈ ಹಾಡಿಗೆ ನೀನಾಸಂ ಸತೀಶ್, ನಾಗಾಭೂಷಣ್ ....
*ಹೊಸವರ್ಷಕ್ಕೆ ಘೋಷಣೆಯಾಯಿತು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹೊಸಚಿತ್ರ* .
*ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ದಿನಕರ್ ತೂಗುದೀಪ ನಿರ್ದೇಶನ* .
ಉತ್ಸಾಹದ ಚಿಲುಮೆಯಂತಿರುವ ಖ್ಯಾತ ನಟ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರ ಹೊಸವರ್ಷಕ್ಕೆ ಘೋಷಣೆಯಾಗಿದೆ. ಹೆಸರಾಂತ ನಿರ್ದೇಶಕ ದಿನಕರ್ ತೂಗುದೀಪ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.
ಸಸ್ಪೆನ್ಸ್, ಥ್ರಿಲ್ಲರ್ "ರಣಾಕ್ಷ" ಫಸ್ಟ್ ಲುಕ್, ಕಾಮಿಡಿಯಿಂದ ಥ್ರಿಲ್ಲರ್ ನತ್ತ ಸೀರುಂಡೆ ರಘು ಈ ಹಿಂದೆ ಮರೆಯದೆ ಕ್ಷಮಿಸು ಎಂಬ ಚಿತ್ರ ನಿರ್ದೇಶಿಸಿದ್ದ ಕೆ.ರಾಘವ ಅವರ ನಿರ್ದೇಶನದ ಮತ್ತೊಂದು ಚಿತ್ರ ರಣಾಕ್ಷ. ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಚಲನಚಿತ್ರ ವಾಣಿಜ್ಯಮಂಡಳಿ ಅಧ್ಯಕ್ಷ ಎನ್.ಎಂ.ಸುರೇಶ್ ಮೊದಲನೋಟಕ್ಕೆ ಚಾಲನೆ ನೀಡಿದರು. ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಿರುತೆರೆಯ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೀರುಂಡೆ ರಘು, ರಕ್ಷಾ ಹನುಮಂತು ಹಾಗೂ ರೋಹಿ ಪ್ರಮುಖ ಪಾತ್ರಗಳಲ್ಲಿ ....
ಸ್ವಿಟ್ಜರ್ ಲ್ಯಾಂಡ್ ನಲ್ಲಿ ಸಂಜು ವೆಡ್ಸ್ ಗೀತಾ-2 ನಾಲ್ಕು ತಿಂಗಳ ಹಿಂದೆ ಪ್ರಾರಂಭವಾಗಿದ್ದ ನಾಗಶೇಖರ್ ಅವರ ನಿರ್ದೇಶನದ ಸಂಜು ವೆಡ್ಸ್ ಗೀತಾ ೨’ ಚಿತ್ರದ ಚಿತ್ರೀಕರಣ ಪ್ರಮುಖ ಘಟ್ಟಕ್ಕೆ ಬಂದಿದೆ. ಇದೇ ತಿಂಗಳು ಚಿತ್ರತಂಡ ಸ್ವಿಟ್ಜರ್ ಲ್ಯಾಂಡ್ ಗೆ ಹೋಗಿ 2 ಹಾಡುಗಳನ್ನು ಚಿತ್ರೀಕರಿಸಿಕೊಂಡು ಬಂದಿದೆ. ಈವರೆಗೆ ನಡೆಸಿದ ಚಿತ್ರೀಕರಣದ ಅನುಭವಗಳನ್ನು ಹಂಚಿಕೊಳ್ಳಲೆಂದು ನಿರ್ದೇಶಕ ನಾಗಶೇಖರ್ ಹಾಗೂ ತಂಡ ಮಾದ್ಯಮಗಳ ಮುಂದೆ ಬಂದಿತ್ತು. ಅಶೋಕ ಹೋಟೆಲ್ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸ್ವಿಟ್ಜರ್ ಲ್ಯಾಂಡ್ ಶೂಟಿಂಗ್ ದೃಶ್ಯಗಳ ಪ್ರದರ್ಶನದ ನಂತರ ಮಾತನಾಡಿದ ನಿರ್ದೇಶಕ ನಾಗಶೇಖರ್ ಹಿಂದೆ ಸಂಜು ವೆಡ್ಸ್ ಗೀತಾ ಸಿನಿಮಾ ಮಾಡುವಾಗ ಆದ ....
ಶೀರ್ಷಿಕೆ ಹಳೇದು ಕಥೆ ಹೊಸತು 60ರ ದಶಕದಲ್ಲಿ ’ಗಂಗೆ ಗೌರಿ’ ಚಿತ್ರದಲ್ಲಿ ಡಾ.ರಾಜ್ಕುಮಾರ್, ಲೀಲಾವತಿ, ಭಾರತಿ ಅಭಿನಯಿಸಿದ್ದು, ಆ ಕಾಲಕ್ಕೆ ದೊಡ್ಡ ಹಿಟ್ ಆಗಿತ್ತು. ಕಟ್ ಮಾಡಿದರೆ ಈಗ ಅದೇ ಹೆಸರಿನಲ್ಲಿ ಭಕ್ತಿ ಪ್ರಧಾನ ಸಿನಿಮಾವು ಸೆಟ್ಟೇರಿದೆ. ಬೆಂಗಳೂರಿನ ತಿಂಡ್ಲು ಸ್ಥಳದಲ್ಲಿರುವ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ನಡೆದ ಅದ್ದೂರಿ ಮುಹೂರ್ತ ಸಮಾರಂಭಕ್ಕೆ ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಮತ್ತು KTVA ಅಧ್ಯಕ್ಷರಾದ ರವಿ.ಆರ್.ಗರಣಿ ಆಗಮಿಸಿ ತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಹಿರಿಯ ಸಮಾಜ ಸೇವಕ ಶಿವಾನಂದ ದೊಡ್ಮನಿ, ಲಯನ್ ಮನೋಜ್ಕುಮಾರ್, ನಿರ್ದೇಶಕರ ಸಂಘದ ಅಧ್ಯಕ್ಷ ಎನ್‌ಆರ್ಕೆ.ವಿಶ್ವನಾಥ್ ಮುಂತಾದವರು ಉಪಸ್ತಿತರಿದ್ದರು. ....
*ಬಿಗ್ ಬಾಸ್ ಖ್ಯಾತಿಯ ಶೃತಿ ಪ್ರಕಾಶ್ ಅಭಿನಯದ "ಫ್ರೈಡೆ" ಚಿತ್ರ ಆರಂಭ* . *ಇದು "ಹೊಸ ದಿನಚರಿ" ನಿರ್ದೇಶಕರ ಹೊಸ ಸಿನಿಮಾ* . ಬಿಗ್ ಬಾಸ್ ಖ್ಯಾತಿಯ ಶೃತಿ ಪ್ರಕಾಶ್ ಹಾಗೂ "ಮೇಡ್ ಇನ್ ಬೆಂಗಳೂರು" ಚಿತ್ರದ ನಾಯಕ ಮಧುಸೂದನ್ ಗೋವಿಂದ್ ನಾಯಕ - ನಾಯಕಿಯಾಗಿ ನಟಿಸುತ್ತಿರುವ "ಫ್ರೈಡೆ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಧರ್ಮಗಿರಿ ಶ್ರೀಮಂಜುನಾಥ ದೇವಸ್ಥಾನದಲ್ಲಿ ನೆರವೇರಿತು. Dees films ಸಂಸ್ಥೆ Shoolin media ಸಂಸ್ಥೆ ಸಹಯೋಗದೊಂದಿಗೆ ಈ ಚಿತ್ರ ನಿರ್ಮಾಣವಾಗುತ್ತಿದೆ. ಈ ಹಿಂದೆ "ಹೊಸ ದಿನಚರಿ" ಚಿತ್ರವನ್ನು ನಿರ್ದೇಶಿಸಿದ್ದ ಕೀರ್ತಿ ಶೇಖರ್ ಹಾಗೂ ವೈಶಾಖ್ ಪುಷ್ಪಲತ ಜಂಟಿಯಾಗಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಮುಹೂರ್ತ ಸಮಾರಂಭದ ....
ಆತ್ಮತಲ್ಲಣ ಹಾರರ್ ರಿವೆಂಜ್ ಕಥೆ ಯುವನಟ ಆದಿಕೇಶವ ರೆಡ್ಡಿ ನಟನೆಯ ಹಾರರ್, ಥ್ರಿಲ್ಲರ್ ಕಥಾಹಂದರ ಹೊಂದಿದ ಆತ್ಮ ತಲ್ಲಣ ಚಿತ್ರವು ಇದೇ ಶುಕ್ರವಾರ ಡಿ.೨೯ರಂದು ರಾಜ್ಯಾದ್ಯಂತ ತೆರೆಕಾಣುತ್ತಿದೆ. ಇತ್ತೀಚೆಗೆ ಚಿತ್ರದ ಟ್ರೈಲರ್ ಕೂಡ ಬಿಡುಗಡೆಯಾಯಿತು. ಎಸ್.ಪಿ. ಕೃಷ್ಣ ಅವರು ಈ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನದ ಜೊತೆ ಶ್ರೀ ಯೋಗಮಾತಾ ಹುಲಿಯಮ್ಮದೇವಿ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಸಹ ಮಾಡಿದ್ದಾರೆ. ಆದಿಕೇಶವರೆಡ್ಡಿ ಚಿತ್ರದ ನಾಯಕನಾಗಿದ್ದು, ನಾಯಕಿಯಾಗಿ ಲಾವಣ್ಯ ಅಭಿನಯಿಸಿದ್ದಾರೆ, ಈ ಸಂದರ್ಭದಲ್ಲಿ ಮಾತನಾಡಿದ ನಿರ್ಮಾಪಕ, ನಿರ್ದೇಶಕ ಕೃಷ್ಣಪ್ಪ ನಾವು ಈ ಚಿತ್ರವನ್ನು ಶುರು ಮಾಡಿ ೩ ವರ್ಷಗಳಾಯಿತು, ....
ಆನ್‌ಲೈನ್ ಮದುವೆ ಆಫ್ ಲೈನ್ ಶೋಭನ ಟ್ರೈಲರ್ ಬಿಡುಗಡೆ ಕಿರುತೆರೆ ಖ್ಯಾತಿಯ ಯುವಜೋಡಿ ಜಗ್ಗಪ್ಪ, ಸುಶ್ಮಿತಾ ಅಭಿನಯದ, ವೇಂಪಲ್ಲಿ ಬಾವಾಜಿ ಅವರ ನಿರ್ದೇಶನದ ಆನ್‌ಲೈನ್ ಮದುವೆ, ಆïಲೈನ್ ಶೋಭನ ಚಿತ್ರದ ಟ್ರೈಲರ್ ಹಾಗೂ ೨ ಹಾಡುಗಳ ಪ್ರದರ್ಶನ ಇತ್ತೀಚೆಗೆ ನಡೆಯಿತು, ಆನ್ ಲೈನ್ ಆಪ್ ಮೂಲಕ ಜೊತೆಯಾದ ಯುವಜೋಡಿಯ ಸುತ್ತ ನಡೆಯುವ ಹಾಸ್ಯಪ್ರದಾನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಅಪ್ಸರ ಮೂವೀಸ್ ಬ್ಯಾನರ್ ಅಡಿಯಲ್ಲಿ ವೇಂಪಲ್ಲಿ ಬಾವಾಜಿ ಅವರೇ ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಸೆನ್ಸಾರ್ ಮಂಡಳಿಯಿಂದ ಯು/ಎ ಸರ್ಟಿಫಿಕೇಟ್ ಪಡೆದೊರುವ ಈ ಚಿತ್ರವನ್ನು ಮುಂದಿನ ತಿಂಗಳು ತೆರೆಗೆ ತರುವ ಯೋಜನೆ ನಿರ್ಮಾಪಕರದ್ದು. ಜಗಪ್ಪ, ಸುಶ್ಮಿತ, ಸೀರುಂಡೆ ರಘು ....
ವಿನೂತನ ರೀತಿಯಲ್ಲಿ ಶೀರ್ಷಿಕೆ ಅನಾವರಣ ಪಝಲ್ ಆಟದಂತೆ ಕಲಾವಿದರು ಎಲ್ಲವನ್ನು ಜೋಡಿಸಿದಾಗ ಪವರ್ ಸ್ಟಾರ್ ಪುನೀತ್‌ರಾಜ್‌ಕುಮಾರ್ ಭಾವಚಿತ್ರ ಮೂಡಿಬಂತು. ನಂತರ ಅದನ್ನು ತಿರುಗಿಸಿದಾಗ ‘ದಂಡತೀರ್ಥ’ ಚಿತ್ರದ ಶೀರ್ಷಿಕೆ ಅನಾವರಣಗೊಂಡಿತು. ವೈಕುಂಠ ಏಕಾದಶಿ ಶುಭದಿನದಂದು ಸದರಿ ಕಾರ್ಯಕ್ರಮವು ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ಸುಮಾರು ೭೮ ಚಿತ್ರಗಳಿಗೆ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ ಹರಿಪ್ರಾಣ ಮೊದಲ ಅನುಭವ ಎನ್ನುವಂತೆ ‘ಪ್ರಾಣ ಪ್ರೊಡಕ್ಷನ್’ ಸಂಸ್ಥೆ ಹುಟ್ಟುಹಾಕಿ ಹೊಸ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡುತ್ತಿದ್ದಾರೆ. ಇದರ ಸಲುವಾಗಿ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ....
ಕಣ್ಣಾ ಮುಚ್ಚೆ ಪ್ರೀತಿಯ ಸಂಕೇತ ’ಕಣ್ಣಾ ಮುಚ್ಚೆ’ ಚಿತ್ರದ ಆರು ಹಾಡುಗಳ ಪೈಕಿ, ಮೂರು ಗೀತೆಗಳ ಲಿರಿಕಲ್ ವಿಡಿಯೋ ಬಿಡುಗಡೆ ಕಾರ್ಯಕ್ರಮ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ನಿರ್ಮಾಪಕರ ಮಾತೃಶ್ರೀರವರು ಸಾಂಗ್ನ್ನು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಹಿರಿಯ ನಟ ಸ್ವಸ್ತಿಕ್ಶಂಕರ್ ಉಪಸ್ತಿತರಿದ್ದರು. Krishi ಸ್ಟುಡಿಯೋಸ್ ಮತ್ತು ಸಚಿತ್ ಫಿಲಿಂಸ್ ಹಾಗೂ ಶಿವ ಸಿನಿಮಾಸ್ ಬ್ಯಾನರ್ನಡಿಯಲ್ಲಿ ಖ್ಯಾತ ವಿತರಕ ವೆಂಕಟ್ಗೌಡ ಪತ್ನಿ ಮೀನಾವೆಂಕಟ್ ನಿರ್ಮಾಣ ಮಾಡಿದ್ದಾರೆ. ಜಿ.ವಿ.ವೆಂಕಟೇಶ್ಬಾಬು-ಲೋಕೇಶ್.ಎನ್.ಬಿ ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಸಾಕಷ್ಟು ಚಿತ್ರಗಳಿಗೆ ಗೀತೆಗಳನ್ನು ಬರೆದಿರುವ ಲೋಕಲ್ ಲೋಕಿ ....
ಛಾಯಾ ಚಿತ್ರದಲ್ಲಿ ಹಾರರ್ ನೆರಳು ! ನ್ಯೂ ಗ್ಲೋಬಲ್ ಕ್ರಿಯೇಶನ್ಸ್ ಅಡಿಯಲ್ಲಿ ಶ್ರೀಮತಿ ನಂದ ಎಂ.ಆರ್. ಅವರು ನಿರ್ಮಿಸಿರುವ ಹಾರರ್ ಹಿನ್ನೆಲೆಯ ಚಿತ್ರ ಛಾಯ ತೆರೆಗೆ ಬರಲು ರೆಡಿಯಾಗಿದೆ. ನಾಲ್ಕು ಜನ ಯುವಕರು ಒಂದು ಮನೆಗೆ ಅತಿಥಿಗಳಾಗಿ ಹೋದಾಗ ಅಲ್ಲಿ ಅನೇಕ ಚಿತ್ರವಿಚಿತ್ರ ಘಟನೆಗಳು ನಡೆಯುತ್ತವೆ. ಆ ಎಲ್ಲಾ ಅನಾಹುತಗಳಿಗೆ ಕಾರಣವೇನು ಎನ್ನುವುದೇ ಛಾಯ ಚಿತ್ರದ ಪ್ರಮುಖ ಕಥಾವಸ್ತು. ನೃತ್ಯನಿರ್ದೇಶಕ ಜಗ್ಗು ಕಥೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ಮಾರಕಾಸ್ತ್ರ ಖ್ಯಾತಿಯ ಆನಂದ್ ಆರ್ಯ, ತೇಜುರಾಜ್ ಹಾಗೂ ಅನನ್ಯ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರದ ಹಾಡೊಂದರ ಬಿಡುಗಡೆ ಕಾರ್ಯಕ್ರಮ ಸೋಮವಾರ ನಡೆಯಿತು. ನಾಲ್ವರು ಸ್ನೇಹಿತರ ಸುತ್ತ ....
*‘ಸಲಾರ್ ಪಾರ್ಟ್ 1: ಸೀಸ್‍ಫೈರ್’ ಚಿತ್ರದ ‘ಆಕಾಶ ಗಾಡಿಯ’ ಹಾಡು ಬಿಡುಗಡೆ* ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರವೆಂದರೆ ಅದು ಹೊಂಬಾಳೆ ಫಿಲಂಸ್‍ನ ‘ಸಲಾರ್ ಪಾರ್ಟ್ 1: ಸೀಸ್‍ಫೈರ್’. ಪ್ರಶಾಂತ್ ನೀಲ್ ನಿರ್ದೇಶನದ, ಪ್ರಭಾಸ್ ಅಭಿನಯದ ಈ ಚಿತ್ರವು ಅಭಿಮಾನಿಗಳಲ್ಲಿ ಬೆಟ್ಟದಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿವೆ. ಈ ಚಿತ್ರವು ಡಿ.22ರಂದು ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದ್ದು, ಈ ಚಿತ್ರದ ಬಿಡುಗಡೆಗೆ ಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದಾರೆ. ಭಾರತದ ಬೃಹತ್ ಆ್ಯಕ್ಷನ್ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಚಿತ್ರದ ‘ಆಕಾಶ ಗಾಡಿಯ’ ಎಂಬ ಮೊದಲ ....
*ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ "ಕದನ ವಿರಾಮ" ಚಿತ್ರಕ್ಕೆ ಚಾಲನೆ*
. ಶ್ರೀಬ್ರಹ್ಮಲಿಂಗೇಶ್ವರ ಫಿಲಂಸ್ ಲಾಂಛನದಲ್ಲಿ ಕೆ.ಭಾಸ್ಕರ್ ನಾಯ್ಕ್ (ಮಾರಣಕಟ್ಟೆ) ಹಾಗೂ ಸಾಮ್ರಾಟ್ ಮಂಜುನಾಥ್.ವಿ(ಗರುಡಾಚಾರ್ ಪಾಳ್ಯ) ನಿರ್ಮಿಸುತ್ತಿರುವ ಹಾಗೂ ಮುರಳಿ ಎಸ್ ವೈ ನಿರ್ದೇಶನದ "ಕದನ ವಿರಾಮ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಬಿಲ್ಡರ್ ಸುರೇಶ್ ಆರಂಭ ಫಲಕ ತೋರಿದರು. ಉದ್ಯಮಿ ಚಿಕ್ಕಣ್ಣ ಕ್ಯಾಮೆರಾ ಚಾಲನೆ ಮಾಡಿದರು. ಅನೇಕ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.