*ಭಾರಿ ಸದ್ದು ಮಾಡುತ್ತಿದೆ "ರಾನಿ" ಟೀಸರ್* . *ಕಿರಣ್ ರಾಜ್ ಹುಟ್ಟುಹಬ್ಬಕ್ಕೆ "ರಾನಿ" ತಂಡದ ಭರ್ಜರಿ ಗಿಫ್ಟ್* ಕಿರುತೆರೆಯ ಜನಪ್ರಿಯ ನಟ ಕಿರಣ್ ರಾಜ್ ಈಗ ಹಿರಿತೆರೆಯಲ್ಲೂ ಬೇಡಿಕೆ ನಟ. ಪ್ರಸ್ತುತ ....
*ಸದ್ಯದಲ್ಲೇ ತೆರೆಗೆ ಬರಲಿದೆ ರಾಮ್ ದೀಪ್ ನಿರ್ದೇಶನದ "ಡೈಮಂಡ್ ಕ್ರಾಸ್* "... *ಮನೀಶ್ & ಮಿತ್ರ ಎಂಟರ್ಟೈನ್ಮೆಂಟ್ ಮೂಲಕ ಈ ಚಿತ್ರ ತೆರೆಗೆ* . ನಾಗತಿಹಳ್ಳಿ ಸಿನಿ ಕ್ರಿಯೇಷನ್ಸ್ ಮೂಲಕ ನಿರ್ಮಾಣವಾಗಿರುವ, ರಾಮ್ ದೀಪ್ ನಿರ್ದೇಶನದ " ಡೈಮಂಡ್ ಕ್ರಾಸ್" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಹೊಸಪೇಟೆ ಉದ್ಯಮಿ ಮನೀಶ್ ಹಾಗೂ ಖ್ಯಾತ ನಟ ಮಿತ್ರ ಹಾಗೂ ಅವರ ಸ್ನೇಹಿತರ ಮನೀಶ್ & ಮಿತ್ರ ಎಂಟರ್ಟೈನ್ಮೆಂಟ್ ಮೂಲಕ ಈ ಚಿತ್ರ ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಹಾಗೂ ಚಿತ್ರದ ಕೆಲವು ತುಣುಕುಗಳನ್ನು ಬಿಡುಗಡೆ ಮಾಡಲಾಯಿತು. ಜೇಡ್ರಳಿ ಕೃಷ್ಣಪ್ಪ ಹಾಗೂ ಜೈಕೃಷ್ಣ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಚಿತ್ರತಂಡದ ....
ಪ್ರಜ್ವಲ್ದೇವರಾಜ್ ಹುಟ್ಟುಹಬ್ಬಕ್ಕೆ ಗಣ ಟೀಸರ್
ಮೊನ್ನೆ ಪ್ರಜ್ವಲ್‌ದೇವರಾಜ್ ಹುಟ್ಟಹಬ್ಬದ ಪ್ರಯುಕ್ತ ‘ಗಣ’ ಚಿತ್ರದ ಟೀಸರ್‌ನ್ನು ಚಂದ್ರಲೇಖಾದೇವರಾಜ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ದೇವರಾಜ್, ರಾಗಿಣಿಪ್ರಜ್ವಲ್, ಪ್ರಣಾಮ್‌ದೇವರಾಜ್ ಹಾಜರಿದ್ದರು. ಐಟಿ ಉದ್ಯೋಗಿಯಾಗಿರುವ ಪಾರ್ಥು ನಿರ್ಮಾಣ ಮಾಡಿರುವುದು ಹೊಸ ಅನುಭವ. ಹರಿಪ್ರಸಾದ್ ಜಕ್ಕ ನಿರ್ದೇಶನ ಮಾಡಿದ್ದಾರೆ.
ನಮೋ ಭೂತಾತ್ಮ-೨ ಟೀಸರ್ ಬಿಡುಗಡೆ
‘ನಮೋ ಭೂತಾತ್ಮ’ ಚಿತ್ರವು ೯ ವರ್ಷಗಳ ಹಿಂದೆ ತೆರೆಕಂಡು ಹಿಟ್ ಆಗಿತ್ತು. ಈಗ ‘ನಮೋ ಭೂತಾತ್ಮ-೨’ ಸೀಕ್ವೆಲ್ ಸದ್ದಿಲ್ಲದೆ ಸಿದ್ದಗೊಂಡಿದೆ. ಜಾನರ್ ಅದೇ ಆಗಿದ್ದರೂ ಕಥೆ ಮತ್ತು ಪಾತ್ರಗಳು ಬೇರೆಯದೆ ಆಗಿರುತ್ತದೆ. ನೃತ್ಯ ಸಂಯೋಜಕ ಮುರಳಿ ಎರಡನೇ ಭಾಗಕ್ಕೂ ಅಕ್ಷನ್ ಕಟ್ ಹೇಳಿದ್ದಾರೆ. ಎಂ.ಎಸ್.ಗೋಲ್ಡನ್ ಪಿಕ್ಚರ‍್ಸ್ ಮೂಲಕ ನಿರ್ದೇಶಕರ ಅಕ್ಕನ ಮಗ ಸಂತೋಷ್‌ಶೇಖರ್ ಹಾಗೂ ಮುರಳಿ ಜಂಟಿಯಾಗಿ ನಿರ್ಮಿಸಿದ್ದಾರೆ. ಪ್ರಚಾರದ ಮೊದಲ ಹಂತವಾಗಿ ಟೀಸರ್‌ನ್ನು ಧ್ರುವಸರ್ಜಾ ಬಿಡುಗಡೆ ಮಾಡಿದರು.
ರಾಜ್.ಬಿ.ಶೆಟ್ಟಿಯ ಟೋಬಿ ‘ಒಂದು ಮೊಟ್ಟೆಯ ಕಥೆ’ ಚಿತ್ರದ ಮುಖಾಂತರ ನಿರ್ದೇಶಕ ಹಾಗೂ ನಟನಾಗಿ ಗುರುತಿಸಿಕೊಂಡಿರುವ ರಾಜ್.ಬಿ.ಶೆಟ್ಟಿ ಇಂದು ಸ್ಟಾರ್ ಆಗಿದ್ದಾರೆ. ಅವರ ಹೊಸ ಚಿತ್ರಗಳು ಎಂದರೆ ಕುತೂಹಲ ಹುಟ್ಟಿಸುತ್ತದೆ. ಅಂತಹುದೆ ‘ಟೋಬಿ’ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಲುಲು ಮಾಲ್‌ದಲ್ಲಿ ನಡೆಯಿತು. ಏಟು ಬಿದ್ದು ರಕ್ತಸಿಕ್ತವಾದ ಮುಖ, ಮೂಗಿಗೆ ಬಳೆಯಷ್ಟು ದೊಡ್ಡದಾದ ಮೂಗುತಿ, ಸಿಟ್ಟುಭರಿತ ಲುಕ್ ಕ್ರೋಧವನ್ನು ಎತ್ತಿ ತೋರಿಸುತ್ತಿದೆ. ಈಗಾಗಲೇ ದೊಡ್ಡ ಮೂಗುತಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ‘ಮಾರಿ ಮಾರಿ ಮಾರಿಗೆ ದಾರಿ’ ಎಂಬ ....
*ಬೆಂಗಳೂರಿನಲ್ಲಿ ‘ಸ್ಪೈ’ ಅದ್ಧೂರಿ ಪ್ರಮೋಷನ್..ಇದೇ 29ಕ್ಕೆ ನಿಖಿಲ್ ಸಿದ್ಧಾರ್ಥ್ ಸಿನಿಮಾ ರಿಲೀಸ್* ಕಾರ್ತಿಕೇಯ, ಕಾರ್ತಿಕೇಯ-2 ಬ್ಲಾಕ್ ಬಸ್ಟರ್ ಹಿಟ್ ಬಳಿಕ ನಿಖಿಲ್ ಸಿದ್ಧಾರ್ಥ್ ನಟಿಸುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಸ್ಪೈ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ 29ಕ್ಕೆ ವಿಶ್ವಾದ್ಯಂತ ರಿಲೀಸ್ ಆಗ್ತಿರುವ ಚಿತ್ರದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಮುಂಬೈನಲ್ಲಿ ಪ್ರಮೋಷನ್ ಮುಗಿಸಿ ನೇರವಾಗಿ ಬೆಂಗಳೂರಿಗೆ ಬಂದಿಳಿದ ಚಿತ್ರತಂಡವನ್ನು ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ,ಹರೀಶ್ ಸ್ವಾಗತಿಸಿ ಶುಭಕೋರಿದರು. ಬಳಿಕ ಚಿತ್ರತಂಡ ಮಾಧ್ಯಮದವರೊಂದಿಗೆ ತಮ್ಮ ಬಹುನಿರೀಕ್ಷಿತ ಸ್ಪೈ ಬಗ್ಗೆ ಸಾಕಷ್ಟು ವಿಷಯವನ್ನು ಹಂಚಿಕೊಂಡರು. ನಟ ನಿಖಿಲ್ ....
*ಕುತೂಹಲ ಮೂಡಿಸಿದೆ "ಮಾಂಕ್ ದಿ ಯಂಗ್" ಚಿತ್ರದ ಟೀಸರ್* ಕನ್ನಡ ಚಿತ್ರರಂಗದಲ್ಲೀಗ ಹೊಸಬರ ಹೊಸಪ್ರಯತ್ನಕ್ಕೆ ನೋಡುಗರ ಬೆಂಬಲ ಸಿಗುತ್ತಿದೆ. "ಮಾಂಕ್ ದಿ ಯಂಗ್" ಚಿತ್ರ ಕೂಡ ಹೊಸಕಥೆಯೊಂದಿಗೆ ಕನ್ನಡ ಸೇರಿದಂತೆ ಆರುಭಾಷೆಗಳಲ್ಲಿ ಬರುತ್ತಿದೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಟೀಸರ್ ಬಿಡುಗಡೆ ಮಾಡಿದರು. ನಟ ಪ್ರಥಮ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಚಿತ್ರದಲ್ಲಿ ನಟಿಸಿರುವ ಪ್ರಣಯಮೂರ್ತಿ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. "ಮಾಂಕ್ ದಿ ಯಂಗ್" ವಿಂಟೇಜ್ ಫ್ಯಾಮಿಲಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. ಇಂದು ಚಿತ್ರದ ಟೀಸರ್ ಬಿಡುಗಡೆ ....
ಮಹಾಗುರು ಮೂಕಿ ಸಿನಿಮಾ
೮೦ರ ದಶಕದಲ್ಲಿ ‘ಪುಷ್ಪಕ ವಿಮಾನ’ ಮೂಕಿ ಚಿತ್ರದಲ್ಲಿ ಕಮಲಹಾಸನ್, ಅಮಲಾ ನಟಿಸಿದ್ದು ಸೂಪರ್ ಹಿಟ್ ಆಗಿತ್ತು. ಬರೋಬ್ಬರಿ ೩೬ ವರ್ಷಗಳ ನಂತರ ‘ಮಹಾಗುರು’ಂಬ ಇಂತಹುದೇ ಚಿತ್ರವೊಂದು ಸೆಟ್ಟೇರಿದೆ. ಕಸ್ತೂರಿ ಜಗನ್ನಾಥ್ ರಚನೆ,ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದರೆ, ಕೇರಳ ಮೂಲದ ಎಡಕ್ಕಾವಿಲ್ ಫಿರೋಸ್,ಜಸ್ಸಿನಾ, ಅಶೋಕ್‌ಕುಮಾರ್ ಬಂಡವಾಳ ಹೂಡುತ್ತಿದ್ದಾರೆ.
ಮಧುರಕಾವ್ಯ ಆಡಿಯೋ ಬಿಡುಗಡೆ ಆಯುರ್ವೇದ ಚಿಕಿತ್ಸಾ ಪದ್ದತಿಗೆ ಅದರದೇ ಆದ ಮಹತ್ವವಿದೆ. ಇತ್ತೀಚಿನ ಕಾಲಮಾನದಲ್ಲಿ ಬಂದಿರುವ ಅಲೋಪತಿಗೆ ಈಗ ಹೆಚ್ಚು ಜನ ಮೊರೆ ಹೋಗುತ್ತಿದ್ದಾರೆ. ಹಾಗಾಗಿ ಆಯುರ್ವೇದದ ಪ್ರಾಮುಖ್ಯತೆಯನ್ನು ಜನರಿಗೆ ತಿಳಿಸಲೆಂದೇ, ಸ್ವತಃ ಆಯುರ್ವೇದ ವೈದ್ಯರಾದ ಮಧುಸೂದನ್ ಅವರು ಮಧುರಕಾವ್ಯ ಎಂಬ ಚಲನಚಿತ್ರವನ್ನು ನಿರ್ದೇಶಿಸಿ ತೆರೆಗೆ ತರುತ್ತಿದ್ದಾರೆ, ಜೊತೆಗೆ ಪ್ರಮುಖ ಪಾತ್ರದಲ್ಲೂ ಸಹ ಅಭಿನಯಿಸಿದ್ದಾರೆ, ಈ ಚಿತ್ರದ ನಾಲ್ಕು ಹಾಡುಗಳ ಪ್ರದರ್ಶನ ಹಾಗೂ ಆಡಿಯೋ ಬಿಡುಗಡೆ ಸಮಾರಂಭ ಎಸ್‌ಆರ್‌ವಿ ಥಿಯೇಟರಿನಲ್ಲಿ ನೆರವೇರಿತು. ಸತೀಶ್ ಮೌರ್ಯ ಅವರ ಸಂಗೀತ ಸಂಯೋಜನೆಯ ೪ ಹಾಡುಗಳು ಚಿತ್ರದಲ್ಲಿದ್ದು, ಹಿರಿಯ ಸಂಗೀತ ನಿರ್ದೇಶಕ ....
ಚಿತ್ರರಂಗಕ್ಕೆ ಸುದೀಪ್ ಸಂಬಂಧಿ ಚಂದನವನಕ್ಕೆ ಸುದೀಪ್ ಕುಟುಂಬದಿಂದ ಮತ್ತೋಂದು ಹೊಸ ಪ್ರತಿಭೆ ಸೇರ್ಪಡೆಯಾಗಿದೆ. ಅಕ್ಕನ ಮಗ ಸಂಚಿತ್‌ಸಂಜೀವ್ ‘ಜಿಮ್ಮಿ’ ಚಿತ್ರದ ಮೂಲಕ ನಾಯಕನಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಪಂಚತಾರ ಹೋಟೆಲ್‌ದಲ್ಲಿ ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ನಡೆಯಿತು. ಕಿಚ್ಚ ಜ್ಯೂನಿಯರ್ ಎಂದೇ ಪರಿಚಯಿಸಿಕೊಂಡಿರುವ ಯುವನಟನನ್ನು ಶಿವರಾಜ್‌ಕುಮಾರ್ ಮತ್ತು ರವಿಚಂದ್ರನ್ ವೇದಿಕೆಗೆ ಕರೆತರುವ ಮೂಲಕ ಅಧಿಕೃತವಾಗಿ ಸಿನಿಮಾರಂಗಕ್ಕೆ ಬರಮಾಡಿಕೊಳ್ಳಲಾಯಿತು. ಇನ್ನು ಸಂಚಿತ್‌ಸಂಜೀವ್ ಅವರು ಮೊದಲ ಪ್ರಯತ್ನದಲ್ಲೇ ನಿರ್ದೇಶನ ಅಲ್ಲದೆ ನಟನೆಯ ಜವಬ್ದಾರಿಯನ್ನು ಹೊತ್ತುಕೊಂಡಿರುವುದು ....
ಅಗ್ರಸೇನಾ ಈವಾರ ತೆರೆಗೆ
ಮುರುಗೇಶ್ ಕಣ್ಣಪ್ಪ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಅಗ್ರಸೇನಾ ಚಿತ್ರ ಇದೇ ಶುಕ್ರವಾರ ರಾಜ್ಯಾದ್ಯಂತ ತೆರೆಕಾಣಲಿದೆ. ಶ್ರೀಮತಿ ಮಮತಾ ಜಯರಾಮರೆಡ್ಡಿ ಹಾಗೂ ಜಯರಾಮರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ಹಳ್ಳಿ ಹಾಗೂ ನಗರದಲ್ಲಿ ಡಬಲ್ ಟ್ರ್ಯಾಕ್ ನಲ್ಲಿ ಸಾಗುವ ಕಥಾಹಂದರ ಈ ಚಿತ್ರದಲ್ಲಿದ್ದು, ತಂದೆ-ಮಗನ ಸಂಬಂಧದ ಕಥೆ ಒಂದು ಕಡೆಯಾದರೆ, ನಾಯಕ ತನ್ನ ಪ್ರೀತಿಯನ್ನು ಉಳಿಸಿಕೊಳ್ಳಲು ಹೇಗೆ ಹೋರಾಡುತ್ತಾನೆ ಎನ್ನುವುದು ಮತ್ತೊಂದು ಟ್ರಾಕ್‌ನಲ್ಲಿ ಸಾಗುತ್ತದೆ.
*ಸದ್ಯದಲ್ಲೇ ತೆರೆಗೆ ಬರಲಿದೆ "90 ಬಿಡಿ ಮನೀಗ್ ನಡಿ"* . *ಹಿರಿಯ ನಟ ಬಿರಾದರ್ ಅಭಿನಯದ 500ನೇ ಚಿತ್ರವಿದು* . ರಾಷ್ಟ್ರಪ್ರಶಸ್ತಿ ವಿಜೇತ ನಟ ವೈಜನಾಥ್ ಅಭಿನಯದ 500ನೇ ಚಿತ್ರ "90 ಬಿಡಿ ಮನೀಗ್ ನಡಿ". ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಮೊದಲು ನಮ್ಮ ಚಿತ್ರದ ಟೈಟಲ್ "90 ಹೊಡಿ ಮನೀಗ್ ನಡಿ" ಎಂದು ಇಡಲಾಗಿತ್ತು. ಆದರೆ ಸೆನ್ಸಾರ್ ಮಂಡಳಿ ಈ ಟೈಟಲ್ ಗೆ ಒಪ್ಪಲಿಲ್ಲ. ಹಾಗಾಗಿ, ಚಿತ್ರದ ಶೀರ್ಷಿಕೆಯನ್ನು "90 ಬಿಡಿ ಮನೀಗ್ ನಡಿ" ಎಂದು ಬದಲಿಸಲಾಯಿತು. ಚಿತ್ರದ ಟ್ರೇಲರ್ ಹಾಗೂ ಹಾಡು ಈಗಾಗಲೇ ಜನರ ಮನ ಗೆದ್ದಿದೆ. ರಾಷ್ಟ್ರಪ್ರಶಸ್ತಿ ವಿಜೇತ ನಟ ಬಿರಾದಾರ್ ಈ ಚಿತ್ರದಲ್ಲಿ ವಿಭಿನ್ನ ಲುಕ್ ನಲ್ಲಿ ....
ಗಿನ್ನಿಸ್ ದಾಖಲೆ ಮಾಡುವತ್ತ "ದೇವರ ಆಟ ಬಲವರಾರು " ಕನ್ನಡದಲ್ಲಿ ಮತ್ತೊಂದು ಹೊಸ ಪ್ರಯತ್ನ . ಸಾಕಷ್ಟು ಹೊಸ ಪ್ರಯೋಗಗಳಿಗೆ ಕನ್ನಡ ಚಿತ್ರರಂಗ ಸಾಕ್ಷಿಯಾಗಿದೆ. ಅಂತಹ ಮತ್ತೊಂದು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ "ದೇವರ ಆಟ ಬಲವರಾರು" ಚಿತ್ರತಂಡ. ಈ ಹಿಂದೆ ಸಂಚಾರಿ ವಿಜಯ್ ಅವರ "ಫಿರಂಗಿ ಪುರ" ಚಿತ್ರವನ್ನು ಕೈಗೆತ್ತಿಕೊಂಡಿದ್ದ ಜನಾರ್ದನ್ ಪಿ ಜಾನಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಮೂವತ್ತು ದಿನಗಳಲ್ಲಿ ಚಿತ್ರದ ಎಲ್ಲಾ ಪ್ರಕ್ರಿಯೆ ಮುಗಿಸಿ ಬಿಡುಗಡೆ ಮಾಡಿ ಗಿನ್ನಿಸ್ ರೆಕಾರ್ಡ್ ಮಾಡಲು ಹೊರಟಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ನಾನು ಈ ಹಿಂದೆ "ಫಿರಂಗಿ ಪುರ" ....
ಮರ್ಡರ್ ಮಿಸ್ಟ್ರಿ ಕಥನ ’ಇತ್ಯಾದಿ’ ಚಿತ್ರವು ಸೆನ್ಸಾರ್‌ಗೆ ಹೋಗಲು ಅಣಿಯಾಗುತ್ತಿದೆ. ಪ್ರಚಾರದ ಮೊದಲ ಹಂತವಾಗಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮವು ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಚರಣ್‌ದೇವ್ ಕ್ರಿಯೇಶನ್ಸ್-ಅದ್ವೈತ ಫಿಲಿಂಸ್-ನೀಲಕಂಠ ಫಿಲಂಸ್ ಬ್ಯಾನರ್ ಅಡಿಯಲ್ಲಿ ಮಹೇಂದ್ರನ್, ಶ್ರೀನಿವಾಸ್ ಮತ್ತು ನೀಲಕಂಠನ್ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವುದು ಹೊಸ ಅನುಭವ. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬಿಗ್ ಬಾಸ್ ವಿಜೇತ, ನಟ,ನಿರ್ದೇಶಕ ಪ್ರಥಮ್ ಮಾತನಾಡಿ, ತುಣುಕುಗಳು ತುಂಬಾ ಚೆನ್ನಾಗಿ ಮೂಡಿಬಂದಿದೆ. ಡಿ.ಯೋಗರಾಜ್ ಅವರಿಗೆ ಯೋಗ ಹುಡುಕಿಕೊಂಡು ಬರಲಿ. ನಿನ್ನೆಯಷ್ಟೇ ವಿಕಟಕವಿ ಯೋಗರಾಜಭಟ್ ಅವರ ಚಿತ್ರದ ....
. *ಜೂನ್ 23 ರಂದು ಬರುತ್ತಿದ್ದಾನೆ "ರೋಡ್ ಕಿಂಗ್"* *ಇದು ಸ್ಕೈಪ್ ನಲ್ಲಿ ನಿರ್ದೇಶನವಾದ ಮೊದಲ ಚಿತ್ರ* ಕೊರೋನ ನಂತರ ಇಂಟರ್ ನೆಟ್ ಬಳಕೆ ಬಹಳ ಹೆಚ್ಚಾಗಿದೆ. ಈಗ ಹೆಚ್ಚಾಗಿ ಎಲ್ಲಾ ಆನಲೈನ್ ನಲ್ಲೇ ನಡೆಯುತ್ತಿದೆ. ಆದರೆ ಕೊರೋನ ಪೂರ್ವದಲೇ ಹಾಲಿವುಡ್ ನಿರ್ದೇಶಕ ರಾಂಡಿ ಕೆಂಟ್ " ರೋಡ್ ಕಿಂಗ್" ಚಿತ್ರವನ್ನು ಸ್ಕೈಪ್ ಮೂಲಕ ನಿರ್ದೇಶಿಸಿದ್ದಾರೆ. ಆಗಿನ ಪ್ರಕಾರ ಈ ರೀತಿ ಸ್ಕೈಪ್ ಮೂಲಕ ನಿರ್ದೇಶನ ಮಾಡಿರುವುದು ಇದೇ ಮೊದಲು. ಈ ಚಿತ್ರ ಇದೇ 23 ರಂದು ಬಿಡುಗಡೆಯಾಗುತ್ತಿದೆ. ಹಾಲಿವುಡ್ ನ ರಾಂಡಿ ಕೆಂಟ್ ಅವರ ಬಳಿ ಈ ಚಿತ್ರವನ್ನು ನಿರ್ದೇಶನ ಮಾಡಿಸಬೇಕೆಂದುಕೊಂಡು ಎಲ್ಲಾ ತಯಾರಿ ಮಾಡಿಕೊಳ್ಳಲಾಗಿತ್ತು. ಆದರೆ ಕೊನೆ ಗಳಿಗೆಯಲ್ಲಿ ವೀಸಾ ಸಮಸ್ಯೆಯಿಂದ ....
*ಆಕ್ಷನ್ ಕ್ವೀನ್ ಮಾಲಾಶ್ರೀ ಪ್ರಮುಖಪಾತ್ರದಲ್ಲಿ ನಟಿಸಿರುವ "ಮಾರಕಾಸ್ತ್ರ" ಚಿತ್ರದ ಟೀಸರ್ ಬಿಡುಗಡೆ* . ಆಕ್ಷನ್ ಕ್ವೀನ್ ಮಾಲಾಶ್ರೀ ಪ್ರಮುಖಪಾತ್ರದಲ್ಲಿ ನಟಿಸಿರುವ "ಮಾರಕಾಸ್ತ್ರ" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಮಾಲಾಶ್ರೀ ಅವರೆ ಟೀಸರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ನನಗೆ ಧನಕುಮಾರ್ ಮಾಸ್ಟರ್ ಮೂಲಕ ಈ ತಂಡದ ಪರಿಚಯವಾಯಿತು. ನಿರ್ದೇಶಕ ಗುರುಮೂರ್ತಿ ಸುನಾಮಿ ಅವರು ಹೇಳಿದ ಕಥೆ ಇಷ್ಟವಾಯಿತು. ನಾನು ಈ ಚಿತ್ರ ಒಪ್ಪಕೊಳ್ಳಲು ನಿರ್ದೇಶಕರೆ ಕಾರಣ. ಏಕೆಂದರೆ ಅವರು ವಿಕಲ ಚೇತನರಾಗಿದ್ದರು ಕೂಡ, ಅವರಲ್ಲಿರುವ ಸಿನಿಮಾ ಪ್ರೀತಿ ಕಂಡು ಸಂತೋಷವಾಯಿತು. ಮೊದಲು ಹನ್ನೊಂದು ದಿನಗಳ ಕಾಲ ನನ್ನ ಚಿತ್ರೀಕರಣ ಎಂದು ....
*ಪಸಂದಾಗಿದೆ "ಗರಡಿ" ಚಿತ್ರದ ಮೊದಲ ಹಾಡು* . *"ಹೊಡಿರೆಲೆ ಹಲಗಿ" ಎಂದ ಯೋಗರಾಜ್ ಭಟ್* . ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ವನಜಾ ಪಾಟೀಲ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ "ಗರಡಿ" ಚಿತ್ರದ ಮೊದಲ ಹಾಡು "ಹೊಡಿರೆಲೆ ಹಲಗಿ" ಲಿರಿಕಲ್ ವಿಡಿಯೋ ಇತ್ತೀಚಿಗೆ ಬಿಡುಗಡೆಯಾಯಿತು. ವಿ.ಹರಿಕೃಷ್ಣ ಸಂಗೀತ ನೀಡಿರುವ, ಯೋಗರಾಜ್ ಭಟ್ ಬರೆದಿರುವ ಈ ಹಾಡನ್ನು ಉತ್ತರ ಕರ್ನಾಟಕದ ಪ್ರತಿಭೆ ಮೇಘನಾ ಹಳಿಯಾಳ್ ಹಾಡಿದ್ದಾರೆ. ಜನಸಾಮಾನ್ಯವಾಗಿ ಮಾತನಾಡಬೇಕಾದರೆ ಇವರು, ಅವರ "ಗರಡಿ" ಯಲ್ಲಿ ಪಳಗಿದವರು ಅಂತ ಹೇಳುತ್ತಾರೆ. "ಗರಡಿ" ಎಂದರೆ ಅದೊಂದು ಸಮರ ಕಲೆ. ವ್ಯಾಯಾಮ ಶಾಲೆ ..ಹೀಗೆ.. ಈ "ಗರಡಿ" ಮನೆಯ ಮುಖ್ಯಸ್ಥ ರಂಗಪ್ಪ. ಆ ಪಾತ್ರದಲ್ಲಿ ....
ಜೂ. 30ಕ್ಕೆ ‘ನಾನು ಕುಸುಮ’ ತೆರೆಗೆ ಕೃಷ್ಣೇಗೌಡ ನಿರ್ಮಾಣ, ನಿರ್ದೇಶನದ ಮಹಿಳಾ ಪ್ರಧಾನ ಚಿತ್ರ ಹಿರಿಯ ಲೇಖಕ ಬೆಸಗರಹಳ್ಳಿ ರಾಮಣ್ಣ ಅವರ ಕಥೆಯನ್ನು ಆಧರಿಸಿ ತಯಾರಾಗಿರುವ, ಕೃಷ್ಣೇಗೌಡ ನಿರ್ಮಿಸಿ, ನಿರ್ದೇಶಿಸಿರುವ ‘ನಾನು ಕುಸುಮ’ ಸಿನಿಮಾ, ಇದೇ ಜೂನ್ 30ರಂದು ಥಿಯೇಟರ್ ನಲ್ಲಿ ಬಿಡುಗಡೆಯಾಗಿ, ಪ್ರೇಕ್ಷಕರ ಮುಂದೆ ಬರುತ್ತಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುವ ಹುಡುಗಿಯೊಬ್ಬಳು ಅಲ್ಲಿ ಏನೇನು ಶೋಷಣೆಗಳನ್ನು ಅನುಭವಿಸುತ್ತಾಳೆ ಎನ್ನುವುದರ ಸುತ್ತ ‘ನಾನು ಕುಸುಮ’ ಸಿನಿಮಾದ ಕಥಾಹಂದರ ಸಾಗುತ್ತದೆ. ಗ್ರೀಷ್ಮಾ ಶ್ರೀಧರ್, ಸನಾತನಿ ಜೋಶಿ, ಕಾವ್ಯಾ ಶ್ರೀಧರ್, ಕೃಷ್ಣೇಗೌಡ, ಸೌಮ್ಯ ಭಾಗವತ್, ಪ್ರತಿಭ ಸಂಶಿಮಠ್, ವಿಜಯ್ ಮೊದಲಾದವರು ....
*ಹೊರಬಂತು ‘ನಸಾಬ್’ ಶೀರ್ಷಿಕೆ* *ಜೀವನಾಧಾರಿತ ಕೃತಿಗೆ ಸಿನಿಮಾ ರೂಪ* ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ ‘ನಸಾಬ್’ ಸಿನಿಮಾದ ಶೀರ್ಷಿಕೆ ಇತ್ತೀಚೆಗೆ ಬಿಡುಗಡೆಯಾಯಿತು. ಬೆಂಗಳೂರಿನ ಮಹಾರಾಣಿ ಕಾಲೇಜು ಆವರಣದ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಕೊಂಡಜ್ಜಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಶ್ರೀಜಂಬುನಾಥ ಸ್ವಾಮಿ ಎಸ್. ಮಳಿಮಠ, ಬಂಜಾರ ಶಕ್ತಿಪೀಠದ ಶ್ರೀ ಕುಮಾರ ಮಹಾರಾಜ ಸ್ವಾಮೀಜಿ, ಮಾಜಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ವಿಷ್ಣುವರ್ಧನ್ ಅಭಿಮಾನಿಗಳ ಸಂಘದ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್, ಬುಕ್ ಬ್ರಹ್ಮ ಸಂಪಾದಕ ದೇವು ಪತ್ತಾರ್, ಬೆಂಗಳೂರು ನಗರ ಜಿಲ್ಲ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ. ಪ್ರಕಾಶ ಮೂರ್ತಿ ಸೇರಿದಂತೆ ....
*"ಬಿಸಿಲು ಕುದುರೆ" ಗೆ ಐವತ್ತನೇ ದಿನದ ಸಂಭ್ರಮ* . ಕನ್ನಡದ ಸೂಪರ್ ಹಿಟ್ ಚಿತ್ರಗಳಿಗೆ ಸೂಪರ್ ಹಿಟ್ ಹಾಡುಗಳನ್ನು ಬರೆದಿರುವ ಹೃದಯ ಶಿವ ನಿರ್ದೇಶನದ "ಬಿಸಿಲು ಕುದುರೆ" ಚಿತ್ರ ಕಳೆದ ಏಪ್ರಿಲ್ 21ರಂದು ಬಿಡುಗಡೆಯಾಗಿತ್ತು. ಚಿತ್ರ ಈಗ ಐವತ್ತು ದಿನಗಳನ್ನು ಪೂರೈಸಿದೆ. ಈ ಸಂತಸವನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡರು. ಅರುಣ್ಯದಂಚಿನಲ್ಲಿ ತುಂಡುಭೂಮಿ ಹೊಂದಿರುವ ರೈತನ ಬವಣೆಯ ಕುರಿತಾದ ಈ ಚಿತ್ರವನ್ನು ಜನರು ನೋಡಿ ಮೆಚ್ಚಿಕೊಂಡಿದ್ದಾರೆ. ಚಿತ್ರ ಒಂದೇ ಚಿತ್ರಮಂದಿರದಲ್ಲಿ ಐವತ್ತು ದಿನ ಪೂರೈಸಿಲ್ಲ. ರಾಜ್ಯದ ವಿವಿಧ ಕಡೆ ಬಿಡುಗಡೆಯಾಗಿ ಪ್ರದರ್ಶನ ಕಂಡು ಈಗ ಐವತ್ತನೇ ದಿನ ಪೂರೈಸಿದೆ. ಸದ್ಯದಲ್ಲೇ "ಬಿಸಿಲು ಕುದುರೆ" ....