*ಆರಂಭವಾಯಿತು "ಗನ್ಸ್ ಅಂಡ್ ರೋಸಸ್"* .. *ಕಥೆಗಾರ ಅಜಯ್ ಕುಮಾರ್ ಪುತ್ರ ಅರ್ಜುನ್ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶ* . ಸುಮಾರು ವರ್ಷಗಳಿಂದ ಕನ್ನಡದ ಹೆಸರಾಂತ ಚಿತ್ರಗಳಿಗೆ ಕಥೆ ಬರೆದಿರುವ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್ " ಗನ್ಸ್ ಅಂಡ್ ರೋಸಸ್" ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರರಂಗದ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ಮಾಪಕ ಹೆಚ್ ಆರ್ ನಟರಾಜ್, ನಾನು ರಾಜಕೀಯದಲ್ಲಿ ಸಕ್ರಿಯವಾಗಿದ್ದೇನೆ. ಬಿಲ್ಡರ್ ಕೂಡ. ....
*ಮರಿ ಟೈಗರ್ ವಿನೋದ್ ಪ್ರಭಾಕರ್ ಅಭಿನಯದ "ಫೈಟರ್" ಟೀಸರ್ ಗೆ ಫಿದಾ ಆದ ಅಭಿಮಾನಿಗಳು* . ಮರಿ ಟೈಗರ್ ವಿನೋದ್ ಪ್ರಭಾಕರ್ ಅಭಿನಯ, ನೂತನ್ ಉಮೇಶ್ ನಿರ್ದೇಶನದ ಹಾಗೂ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಿಸಿರುವ "ಫೈಟರ್" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ನಿರ್ಮಾಪಕ ಸೋಮಶೇಖರ್ ಅವರ ತಂದೆ ಕೃಷ್ಣಪ್ಪ ಟೀಸರ್ ಬಿಡುಗಡೆ ಮಾಡಿದರು. ಟೀಸರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ದೇಶಕ ನೂತನ್ ಉಮೇಶ್, ಈ ಚಿತ್ರದ ಶೀರ್ಷಿಕೆಯನ್ನು ವಿನೋದ್ ಪ್ರಭಾಕರ್ ಅವರ ಅಭಿಮಾನಿಗಳೇ ಅನಾವರಣ ಮಾಡಿದ್ದರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಹೂರ್ತಕ್ಕೆ ಆಗಮಿಸಿ ಚಿತ್ರಕ್ಕೆ ಚಾಲನೆ ನೀಡಿದ್ದರು. ಈಗ ಟೀಸರನ್ನು ನಿರ್ಮಾಪಕರ ತಂದೆಯವರು ಬಿಡುಗಡೆ ....
*"ಟ್ರೆಂಡಿಂಗಲ್ ಬರ್ಬೇಕಂದ್ರೆ ಏನ್ ಮಾಡ್ಬೇಕು" ಎಂದು ಹಾಡಿನ ಮೂಲಕ ಅಭಿಮಾನಿಗಳಿಗೆ ಸಲಹೆಕೊಟ್ಟ "ಸೂತ್ರಧಾರಿ"* *ನವರಸನ್ ನಿರ್ಮಾಣದ ಹಾಗೂ ಚಂದನ್ ಶೆಟ್ಟಿ ಅಭಿನಯದ ಚಿತ್ರ* . ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ " ಸೂತ್ರಧಾರಿ" ಚಿತ್ರದ "ಡ್ಯಾಶ್" ಸಾಂಗ್ ಈಗಾಗಲೇ ಹದಿನೇಳು ಮಿಲಿಯನ್ ವೀಕ್ಷಣೆಯಾಗಿ ಜನರ ಮನ ಗೆದ್ದಿದೆ. ಈಗ "ಸೂತ್ರಧಾರಿ" ಚಿತ್ರಕ್ಕಾಗಿ ವಿಜಯ್ ಈಶ್ವರ್ ಬರೆದಿರುವ "ಟ್ರೆಂಡಿಂಗಲ್ ಬರ್ಬೇಕಂದ್ರೆ ಏನ್ ಮಾಡ್ಬೇಕು" ಎಂಬ ಹಾಡು ಇತ್ತೀಚೆಗೆ A2 music ಮೂಲಕ ಬಿಡುಗಡೆಯಾಗಿದೆ. ಚಂದನ್ ಶೆಟ್ಟಿ ಈ ಹಾಡಿಗೆ ಸಂಗೀತ ನೀಡಿ, ಹಾಡಿದ್ದಾರೆ. ಮೋಹನ್ ಮಾಸ್ಟರ್ ನೃತ್ಯ ನಿರ್ದೇಶಿಸಿರುವ ಈ ಹಾಡಿಗೆ ....
*"ಟ್ರೆಂಡಿಂಗಲ್ ಬರ್ಬೇಕಂದ್ರೆ ಏನ್ ಮಾಡ್ಬೇಕು" ಎಂದು ಹಾಡಿನ ಮೂಲಕ ಅಭಿಮಾನಿಗಳಿಗೆ ಸಲಹೆಕೊಟ್ಟ "ಸೂತ್ರಧಾರಿ"* *ನವರಸನ್ ನಿರ್ಮಾಣದ ಹಾಗೂ ಚಂದನ್ ಶೆಟ್ಟಿ ಅಭಿನಯದ ಚಿತ್ರ* . ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ " ಸೂತ್ರಧಾರಿ" ಚಿತ್ರದ "ಡ್ಯಾಶ್" ಸಾಂಗ್ ಈಗಾಗಲೇ ಹದಿನೇಳು ಮಿಲಿಯನ್ ವೀಕ್ಷಣೆಯಾಗಿ ಜನರ ಮನ ಗೆದ್ದಿದೆ. ಈಗ "ಸೂತ್ರಧಾರಿ" ಚಿತ್ರಕ್ಕಾಗಿ ವಿಜಯ್ ಈಶ್ವರ್ ಬರೆದಿರುವ "ಟ್ರೆಂಡಿಂಗಲ್ ಬರ್ಬೇಕಂದ್ರೆ ಏನ್ ಮಾಡ್ಬೇಕು" ಎಂಬ ಹಾಡು ಇತ್ತೀಚೆಗೆ A2 music ಮೂಲಕ ಬಿಡುಗಡೆಯಾಗಿದೆ. ಚಂದನ್ ಶೆಟ್ಟಿ ಈ ಹಾಡಿಗೆ ಸಂಗೀತ ನೀಡಿ, ಹಾಡಿದ್ದಾರೆ. ಮೋಹನ್ ಮಾಸ್ಟರ್ ನೃತ್ಯ ನಿರ್ದೇಶಿಸಿರುವ ಈ ಹಾಡಿಗೆ ....
*ಕುತೂಹಲ ಮೂಡಿಸಿದೆ ಮೇಘನರಾಜ್ ಸರ್ಜಾ - ಪ್ರಜ್ವಲ್ ದೇವರಾಜ್ ಅಭಿನಯದ "ತತ್ಸಮ ತದ್ಭವ" ಚಿತ್ರದ ಟ್ರೇಲರ್* . *ಸ್ನೇಹಕ್ಕೆ ಸಾತ್ ಕೊಡುವ ಧನಂಜಯ್, ಕುಟುಂಬದವರಿಗಾಗಿ ಬಂದು ನಿಂತ ಧ್ರುವ ಸರ್ಜಾ* ಮೇಘನರಾಜ್ ಸರ್ಜಾ ಹಲವು ವರ್ಷಗಳ ನಂತರ ನಟಿಸಿರುವ "ತತ್ಸಮ ತದ್ಭವ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಧ್ರುವ ಸರ್ಜಾ ಹಾಗೂ ಡಾಲಿ ಧನಂಜಯ ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಯಶಸ್ಸನ್ನು ಹಾರೈಸಿದರು. ಹಿರಿಯ ನಟ ಸುಂದರರಾಜ್ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಆನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು. ನಾನು ಸಿನಿಮಾದಲ್ಲಿ ನಟಿಸಬಾರದು ಎಂದು ನಿರ್ಧರಿಸಿದಾಗ ಬಂದ ....
ಅವಳು ಲೈಲಾ ಅಲ್ಲ, ನಾನು ಮಜ್ನು ಅಲ್ಲ 'ನೀನು ಹೋಗೋ ದಾರೀಲಿ’ ಪ್ರೇಮಗೀತೆ ಬಿಡುಗಡೆ ಯಲ್ಲು ಪುಣ್ಯಕೋಟಿ ಅವರ ನಿರ್ದೇಶನದ ಅವಳ್ ಲೈಲಾ ಅಲ್ಲ ನಾನ್ ಮಜ್ನು ಅಲ್ಲ ಚಿತ್ರದ ಡ್ಯುಯೆಟ್ ಹಾಡಿನ ಬಿಡುಗಡೆ ಕಾರ್ಯಕ್ರಮ ನಡೆಯಿತು. ಫಿಲಂ ಚೇಂಬರ್ ಅಧ್ಯಕ್ಷ ಭಾ.ಮ. ಹರೀಶ್ ಸಾಂಗ್ ರಿಲೂಸ್ ಮಾಡಿ ಶುಭ ಹಾರೈಸಿದರು. ಅಜಯ್ ಈ ಚಿತ್ರದ ನಾಯಕನಾಗಿದ್ದು, ನಿಹಾರಿಕಾ, ಅಶ್ವಿನಿ ನಾಯಕಿಯರಾಗಿ ಅಭಿನಯಿಸಿದ್ದಾರೆ. ಡಿಂಗ್ರಿ ನರೇಶ್ ನಾಯಕನ ಸ್ನೇಹಿತನಾಗಿ ಕಾಣಿಸಿಕೊಂಡಿದ್ದಾರೆ. ಮೊದಲಿಗೆ ಚಿತ್ರದ ನಾಯಕ ಹಾಗೂ ನಿರ್ಮಾಪಕರೂ ಆದ ಅಜಯ್ ಮಾತನಾಡಿ, ನನ್ನ ತಂದೆಯೂ ಒಬ್ಬ ರಂಗಭೂಮಿ ಕಲಾವಿದರು, ಅವರನ್ನು ನೋಡಿ ಬೆಳೆದ ನನಗೆ ನಟನೆ ಅಂದ್ರೆ ಮೊದಲಿಂದಲೂ ಬಹಳ ಇಷ್ಟ, ....
*ವರಮಹಾಲಕ್ಷ್ಮೀ ಹಬ್ಬದಂದು ಬಿಡುಗಡೆಯಾಯಿತು "ಯಥಾಭವ" ಚಿತ್ರದ ಟೀಸರ್* . ಗೌತಮ್ ಬಸವರಾಜು ನಿರ್ಮಿಸಿ, ನಿರ್ದೇಶಿಸಿರುವ "ಯಥಾಭವ" ಚಿತ್ರದ ಟೀಸರ್ ವರಮಹಾಲಕ್ಷ್ಮೀ ಹಬ್ಬದ ಶುಭದಿನ ಬಿಡುಗಡೆಯಾಯಿತು. ನಂತರ ಚಿತ್ರತಂಡದ ಸದಸ್ಯರು "ಯಥಾಭವ" ಚಿತ್ರದ ಕುರಿತು ಮಾಹಿತಿ ನೀಡಿದರು. ನಾನು ಕಳೆದವರ್ಷ ಹೈದರಾಬಾದ್ ನಲ್ಲಿ ಈ ಚಿತ್ರದ ಕಥೆ ಸಿದ್ದ ಮಾಡಿದೆ. ನಂತರ ಚಿತ್ರೀಕರಣ ಆರಂಭವಾಯಿತು. ಇಪ್ಪತ್ತೊಂದು ದಿನಗಳಲ್ಲಿ ಚಿತ್ರೀಕರಣ ಪೂರ್ಣ ಮಾಡಿದ್ದೇವೆ. "ಯಥಾಭವ" ಕೋರ್ಟ್ ರೂಮ್ ಜಾನರ್ ನ ಚಿತ್ರವಾಗಿದ್ದು, ಶೇಕಡಾ 70 ರಷ್ಟು ಭಾಗದ ಚಿತ್ರೀಕರಣ ಕೋರ್ಟ್ ನಲ್ಲೇ ನಡೆಯುತ್ತದೆ. ನ್ಯಾಯಾಧೀಶರಾಗಿ ಹಿರಿಯ ನಟ ದತ್ತಣ್ಣ ಅಭಿನಯಿಸಿದ್ದಾರೆ . ಗೋಪಾಲಕೃಷ್ಣ ....
*ಕೆ ಆರ್ ಜಿ ಸ್ಟುಡಿಯೋಸ್ - ಟಿವಿಎಫ್ ಮೋಷನ್ ಪಿಕ್ಚರ್ಸ್ ಸಂಸ್ಥೆಯ ಮೊದಲ ಚಿತ್ರ "ಪೌಡರ್" ಪ್ರಾರಂಭ* *ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್* ಕನ್ನಡ ಚಿತ್ರರಂಗದ ಜನಪ್ರಿಯ ನಿರ್ಮಾಣ ಸಂಸ್ಥೆಯಾದ ಕೆ ಆರ್ ಜಿ ಸ್ಟುಡಿಯೋಸ್, ಟಿವಿಎಫ್ ಮೋಷನ್ ಪಿಕ್ಚರ್ಸ್ ಸಂಸ್ಥೆಯ ಜೊತೆಗೆ ಕೈಜೋಡಿಸಿ ಜಂಟಿಯಾಗಿ ಚಿತ್ರ ನಿರ್ಮಾಣ ಮಾಡುವುದಾಗಿ ಘೋಷಿಸಿತ್ತು. ಅದರ ಮೊದಲ ಹಂತವಾಗಿ ಇಂದು ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಈ ಎರಡೂ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸುತ್ತಿರುವ ಮೊದಲ ಚಿತ್ರ ಪ್ರಾರಂಭವಾಗಿದೆ. ಅದೇ "ಪೌಡರ್". "ಪೌಡರ್" ಚಿತ್ರದ ಮುಹೂರ್ತ ಸಮಾರಂಭವು ವರಮಹಾಲಕ್ಷ್ಮೀ ಹಬ್ಬದಂದು ನಡೆದಿದ್ದು, ಕಿಚ್ಚ ಸುದೀಪ್ ....
*ನಿಖಿಲ್ ಕುಮಾರ್ ಅಭಿನಯದ ನೂತನ ಚಿತ್ರ ಆರಂಭ* . *ದಕ್ಷಿಣ ಭಾರತದ ಪ್ರತಿಷ್ಠಿತ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣ* . ನಿಖಿಲ್ ಕುಮಾರ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್ ಡಿ ದೇವೇಗೌಡ ಅವರು ಕಾರ್ಯಕ್ರಮಕ್ಕೆ ಆಗಮಿಸಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿ ನೂತನ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ದಕ್ಷಿಣ ಭಾರತದ ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆ ಈಗ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ಈ ಚಿತ್ರದ ನಾಯಕನಾಗಿ ನಾನು ....
*"ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್" ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಸಚಿವ ಹೆಚ್ ಸಿ ಮಹದೇವಪ್ಪ* . ವುಡ್ ಕ್ರೀಪರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ತಿಲಕ್ ಶೇಖರ್(ಉಗ್ರಂ ಖ್ಯಾತಿ) ನಾಯಕರಾಗಿ ನಟಿಸಿರುವ "ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಸಚಿವ ಹೆಚ್ ಸಿ ಮಹದೇವಪ್ಪ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಹಿರಿಯ ನಿರ್ದೇಶಕ ಎಸ್ ನಾರಾಯಣ್ ಹಾಗೂ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಪ್ರಭಾಕರ್, ಆನಂದ್ ಆಡಿಯೋ ಶ್ಯಾಮ್ ಅವರು ಸಹ ಸಮಾರಂಭಕ್ಕೆ ಆಗಮಿಸಿ ಯಶಸ್ಸನ್ನು ಹಾರೈಸಿದರು. ಈ ಹಿಂದೆ ನಾನು "ಭಾವಚಿತ್ರ" ಎಂಬ ಚಿತ್ರವನ್ನು ನಿರ್ದೇಶಿಸಿದ್ದೆ. ....
*ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಸೆಟ್ಟೇರಿತು ರೂಪೇಶ್ ಶೆಟ್ಟಿ-ಜಾಹ್ನವಿ ‘ಅಧಿಪತ್ರ’ ಸಿನಿಮಾ* ಬಿಗ್ ಬಾಸ್ ಖ್ಯಾತಿಯ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಟನೆಯ ಅಧಿಪತ್ರ ಸಿನಿಮಾ ಇಂದು ಸೆಟ್ಟೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಮುಹೂರ್ತ ನೆರವೇರಿದೆ. ಈಗಾಗಲೇ ತುಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ರೂಪೇಶ್ ಸ್ಯಾಂಡಲ್ವುಡ್ನಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. ನಟ ರೂಪೇಶ್ ಶೆಟ್ಟಿ ಮಾತನಾಡಿ, ಬಿಗ್ ಬಾಸ್ ಆದ್ಮೇಲೆ ಕನ್ನಡ ಸಿನಿಮಾ ಯಾವಾಗ ಎಂದು ಎಲ್ಲರೂ ಕೇಳುತ್ತಿದ್ದರು. ಬಿಗ್ ಬಾಸ್ ಗೂ ಮುಂಚೆ ಸರ್ಕಸ್ ಎಂಬ ತುಳು ಸಿನಿಮಾ ನಿರ್ದೇಶನ ಮಾಡಿ ನಟಿಸಿದ್ದೆ. ಆ ಚಿತ್ರದ ಕೆಲಸ ತುಂಬಾ ಇತ್ತು. ಈ ಚಿತ್ರದ ಕೆಲಸ ಮುಗಿಸಿ ಬೇರೆ ಸಿನಿಮಾದ ....
*ಶಿವಣ್ಣ - ಪ್ರಭುದೇವ ನಟನೆಯ "ಕರಟಕ ದಮನಕ" ಚಿತ್ರದ ಚಿತ್ರೀಕರಣ ಮುಕ್ತಾಯ ಹಂತದಲ್ಲಿ* . ಕರನಾಡ ಚಕ್ರವರ್ತಿ ಶಿವರಾಜಕುಮಾರ್ , ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಅಭಿನಯದ, ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ "ಕರಟಕ ದಮನಕ" ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಇಂದಿಗೆ ಈ ಚಿತ್ರ ಪ್ರಾರಂಭವಾಗಿ ಒಂದು ವರ್ಷಗಳಾಗಿದೆ ಎಂದು ಮಾತು ಆರಂಭಿಸಿದ ನಿರ್ದೇಶಕ ಯೋಗರಾಜ್ ಭಟ್, "ಕರಟಕ ದಮನಕ" ಎಂದರೆ ಎರಡು ಕುತಂತ್ರಿ ನರಿಗಳ ಹೆಸರು. ಸಾಮಾನ್ಯವಾಗಿ ಇಬ್ಬರನ್ನು ಹೆಚ್ಚು ಸಲ ಒಟ್ಟಾಗಿ ನೋಡಿದಾಗ "ಕರಟಕ ದಮನಕ" ಎನ್ನುವುದು ಉಂಟು. ನಮ್ಮ ....
*ಬಿಡದಿ ಸಮೀಪ ಪ್ರಾರಂಭವಾಯಿತು "ಜಾಲಿವುಡ್"* ವೇಲ್ಸ್ ಗ್ರೂಪ್‌ನ ಸಂಸ್ಥಾಪಕರಾದ ಐಶರಿ ಕೆ ಗಣೇಶ್ ಅವರ ಸಾರಥ್ಯದ "ಜಾಲಿವುಡ್" ಸ್ಟುಡಿಯೋಸ್ ಮತ್ತು ಅಡ್ವೆಂಚರ್ಸ್ ಇತ್ತೀಚೆಗೆ ಉದ್ಘಾಟನೆಯಾಯಿತು. ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಸಂಸದರಾದ ಡಿ.ಕೆ.ಸುರೇಶ್ ಹಾಗೂ ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ "ಜಾಲಿವುಡ್" ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಸಂಸ್ಥಾಪಕರಾದ ಐಶರಿ ಕೆ ಗಣೇಶ್, ಬಹಳ ವರ್ಷಗಳ ಒಂದು ಕನಸು ಇಂದು ನನಸಾಗಿದೆ. ಕಳೆದ 30 ವರ್ಷಗಳಿಂದ ಶಿಕ್ಷಣ, ಆರೋಗ್ಯ, ಸಿನಿಮಾ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದೇವೆ. ಮನೆಮಂದಿಯಲ್ಲಾ ....
*"GST" ಕಟ್ಟಲು ಮುಂದಾದ ಸೃಜನ್ ಲೋಕೇಶ್* .. *ಸೃಜನ್ ಲೋಕೇಶ್ ಮೊದಲ ನಿರ್ದೇಶನದ ಚಿತ್ರಕ್ಕೆ ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣ* . ಖ್ಯಾತ ನಟ ಸೃಜನ್ ಲೋಕೇಶ್ ನಟನಾಗಿ, ನಿರ್ಮಾಪಕನಾಗಿ ಜನಪ್ರಿಯ. ಈಗ "G S T" ಚಿತ್ರದ ಮೂಲಕ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ಈ ಚಿತ್ರವನ್ನು ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ಸಂದೇಶ್ ಎನ್ ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಶ್ರೀಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ದೃಶ್ಯಕ್ಕೆ ಸಂದೇಶ್ ನಾಗರಾಜ್ ಆರಂಭ ಫಲಕ ತೋರಿದರು. ಗಿರಿಜಾ ಲೋಕೇಶ್ ಕ್ಯಾಮೆರಾ ಚಾಲನೆ ಮಾಡಿದರು. ಟಿ.ಎಸ್.ನಾಗಾಭರಣ, ಪಿ.ಶೇಷಾದ್ರಿ, ಸುಂದರರಾಜ್, ತಾರಾ, ಶೃತಿ, ನಿರೂಪ್ ....
*ಮನಮೋಹಕವಾಗಿದೆ "ಮಾರಕಾಸ್ತ್ರ" ಚಿತ್ರದ "ಗ್ಲಾಮರು ಗಾಡಿ" ಹಾಡು.* . ನಟರಾಜ್ ಅವರು ಅರ್ಪಿಸುವ, ಕೋಮಲ ನಟರಾಜ್ ನಿರ್ಮಿಸಿರುವ "ಮಾರಕಾಸ್ತ್ರ" ಚಿತ್ರಕ್ಕಾಗಿ ಮಂಜು ಕವಿ ಬರೆದು, ಸಂಗೀತ ಸಂಯೋಜಿಸಿರುವ "ಗ್ಲಾಮರು ಗಾಡಿ" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಅನನ್ಯ ಭಟ್ ಹಾಡಿರುವ ಈ ಹಾಡು A2 music ಮೂಲಕ ಬಿಡುಗಡೆಯಾಗಿ ಎಲ್ಲರ ಮನ ಗೆಲ್ಲುತ್ತಿದೆ. ಹೀನಾ ಎಂ ಪಂಚಾಲ್ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಇತ್ತೀಚೆಗೆ ಈ ಹಾಡು ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ನಾನು ಸಿನಿಮಾ ಮಾಡುತ್ತೇನೆ ಎಂದಾಗ, ಬೇಡ ಅಂದವರೆ ಹೆಚ್ಚು. ಆದರೆ ಅವರುಗಳು ಹೇಳಿದ ತರಹ ಅನುಭವ ನನಗೆ ಈ ಚಿತ್ರದಲ್ಲಿ ಆಗಿಲ್ಲ. ಏಕೆಂದರೆ ಒಳ್ಳೆಯ ತಂಡದ ಸಹಕಾರ. ಆಕ್ಷನ್ ....
*ಪ್ರಾರಂಭವಾಯ್ತು ಪ್ಯಾನ್ ಇಂಡಿಯಾ ಸಿನಿಮಾ ‘ಜಂಟಲ್ ಮ್ಯಾನ್ 2’* *ಚೆನ್ನೈನಲ್ಲಿ ನಡೆದ ಅದ್ದೂರಿ ಮುಹೂರ್ತ ಸಮಾರಂಭದಲ್ಲಿ* *ಎಂ.ಎಂ. ಕೀರವಾಣಿ ಅವರಿಗೆ ಆತ್ಮೀಯ ಸನ್ಮಾನ* ತಮಿಳಿನಲ್ಲಿ ‘ಜಂಟಲ್ ಮ್ಯಾನ್’, ‘ಕಾದಲನ್’, ‘ಕಾದಲ್ ದೇಶಂ’ ಸೇರಿದಂತೆ ದೊಡ್ಡ ಬಜೆಟ್ ನ ಮತ್ತು ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ್ದ ಹಿರಿಯ ನಿರ್ಮಾಪಕ ಕೆ.ಟಿ. ಕುಂಜುಮೋನ್ ನಿರ್ಮಿಸುತ್ತಿರುವ ‘ಜಂಟಲ್ ಮ್ಯಾನ್ 2’ ಚಿತ್ರವು ಶನಿವಾರ, ಚೆನ್ನೈನಲ್ಲಿ ಅದ್ದೂರಿಯಾಗಿ ಪ್ರಾರಂಭವಾಗಿದೆ. ಚೆನ್ನೈನ ರಾಜ ಮುತ್ತಯ್ಯ ಸಭಾಂಗಣದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ನಿರ್ದೇಶಕ ಗೋಕುಲ್ ಕೃಷ್ಣ ಅವರಿಗೆ ನಿರ್ಮಾಪಕ ಕುಂಜುಮೋನ್, ಚಿತ್ರದ ಸ್ಕ್ರಿಪ್ಟ್ ಹಸ್ತಾಂತರಿಸುವ ....
*ಶ್ರೀಯಾ ಶರಣ್ ಸಮ್ಮುಖದಲ್ಲಿ ಸಂಪನ್ನವಾಯ್ತು ಪ್ರೈಡ್ ಇಂಡಿಯಾ ಅವಾರ್ಡ್ ಇವೆಂಟ್!* ಭಾರತೀಯ ಉದ್ಯಮ ಕ್ಷೇತ್ರದಲ್ಲಿನ ಸಾಧಕರನ್ನು ಗುರುತಿಸಿ, ಪ್ರಶಸ್ತಿ ಕೊಡಮಾಡಿ ಪ್ರೋತ್ಸಾಹಿಸುವಲ್ಲಿ `ಪ್ರೈಡ್ ಇಂಡಿಯಾ ಅವಾರ್ಡ್’ ಮಹತ್ವದ್ದೆನ್ನಿಸಿಕೊಂಡಿದೆ. ಇತ್ತೀಚೆಗೆ ಬೆಂಗಳೂರಿನ ಯಶವಂತಪುರ ತಾಜ್‍ನಲ್ಲಿ ಈ ಪ್ರಶಸ್ತಿ ಪ್ರಧಾನ ಸಮಾರಂಭ ಅಚ್ಚುಕಟ್ಟಾಗಿ ನೆರವೇರಿದೆ. ಉದ್ಯಮ ರಂಗದ ದಿಗ್ಗಜರು, ಸಾಧಕರು ನೆರೆದಿದ್ದ ಈ ಕಾರ್ಯಕ್ರಮಕ್ಕೆ ಭಾರತೀಯ ಚಿತ್ರರಂಗದ ಖ್ಯಾತ ನಟಿ ಶ್ರೀಯಾ ಶರಣ್ ವಿಶೇಷ ಅತಿಥಿಯಾಗಿ ಆಗಮಿಸಿದ್ದರು. ಉದ್ಯಮ ಜಗತ್ತೆಂಬುದು ಸಾಗರವಿದ್ದಂತೆ. ಅದರಲ್ಲಿನ ನಾನಾ ವಿಭಾಗಗಳಲ್ಲಿ ಗೇಮ್ ಚೇಂಜರ್ ಅನ್ನಿಸಿಕೊಂಡು, ಹೊಸತನಗಳ ಮೂಲಕ ಸಾಧನೆ ತೋರಿದ ತೊರೆಗಳೆಲ್ಲ ....
ಸಪ್ತ ಸಾಗರದಾಚೆ ಎಲ್ಲೋ ಟ್ರೇಲರ್ ಲೋಕಾರ್ಪಣೆ
‘ಗೋದಿ ಬಣ್ಣ ಸಾಧಾರಣ ಮೈ ಕಟ್ಟು’ ನಿರ್ದೇಶಕ ಹೇಮಂತ್‌ರಾವ್ ರಚನೆ,ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಶಂಕರ್‌ನಾಗ್ ಚಿತ್ರಮಂದಿರದಲ್ಲಿ ನಡೆಯಿತು. ರುಕ್ಮಿಣಿವಸಂತ್ ನಾಯಕಿಯಾಗಿ ಅಭಿನಯಿಸಿದ್ದಾರೆ.
*ಮೈಸೂರಿನಲ್ಲಿ "ವಾಮನ" ಚಿತ್ರದ ಆಕ್ಷನ್ ಟೀಸರ್ ಬಿಡುಗಡೆ* ಧನ್ವೀರ್ ಮತ್ತು ರೀಷ್ಮಾ ನಾಣಯ್ಯ ಅಭಿನಯದ "ವಾಮನ" ಚಿತ್ರ ಸೆಪ್ಟೆಂಬರ್ ನಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ಚಿತ್ರದ ಆಕ್ಷನ್ ಟೀಸರ್ ಗುರುವಾರ ಮೈಸೂರಿನಲ್ಲಿ ಬಿಡುಗಡೆಯಾಗಿದೆ. ಈ ಸಮಾರಂಭದಲ್ಲಿ ಹುಣಸೂರು ಶಾಸಕ ಹರೀಶ್ ಗೌಡ ಸೇರಿದಂತೆ ಹಲವಾರು ರಾಜಕೀಯ ಮುಖಂಡರು ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಈ ಸಂದರಭದಲ್ಲಿ ಮಾತನಾಡಿದ, ನಿರ್ದೇಶಕ ಶಂಕರ್ ರಾಮನ್, ಈಗಾಗಲೇ ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿದ್ದು, ಜನರಿಂದ ಮೆಚ್ಚುಗೆ ಪಡೆದಿದೆ. ಇದೊಂದು ಆಕ್ಷನ್ ಚಿತ್ರ. ಚಿತ್ರದಲ್ಲಿ ಆಕ್ಷನ್ ಹೇಗಿರುತ್ತದೆ ಎಂದು ತೋರಿಸುವುದಕ್ಕೆ ಈ ಟೀಸರ್ ....
'ಸಂಜು ವೆಡ್ಸ್ ಗೀತಾ -2' ಗ್ರ್ಯಾಂಡ್ ಲಾಂಚ್ ೧೨ ವರ್ಷಗಳ ಹಿಂದೆ ತೆರೆಕಂಡಿದ್ದ ಸಂಜು ವೆಡ್ಸ್ ಗೀತಾ ಚಿತ್ರ ತನ್ನ ಹಾಡುಗಳು ಹಾಗೂ ಕಂಟೆಂಟ್ ಮೂಲಕ ಜನರ ಮನ ಗೆದ್ದಿತ್ತು. ಈಗ ಆ ಚಿತ್ರದ ಸೀಕ್ವೇಲ್ ಆಗಿ ಸಂಜು ವೆಡ್ಸ್ ಗೀತಾ-೨ ಮೂಡಿಬರುತ್ತಿದೆ. ನಾಗಶೇಖರ್ ಅವರೇ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಬಹುತೇಕ ಮೊದಲ ಭಾಗದಲ್ಲಿದ್ದ ಕಲಾವಿದರೇ ಈ ಚಿತ್ರದಲ್ಲೂ ಇರುತ್ತಾರೆ. ಫಾರ್ ಎ ಛೇಂಜ್ ರಮ್ಯಾ ಬದಲು ಇಲ್ಲಿ ರಕ್ಷಿತಾ ರಾಮ್ ನಾಯಕಿಯಾಗಿದ್ದಾರೆ. ಅದಕ್ಕೆ ನಾಗಶೇಖರ್ ಕಾರಣವನ್ನೂ ನೀಡಿದರು. ಬೆಂಗಳೂರಿನ ಅಶೋಕಾ ಹೋಟೆಲ್ ನಲ್ಲಿ ಸಂಜು ವೆಡ್ಸ್ ಗೀತಾ-೨ ಚಿತ್ರದ ಮುಹೂರ್ತ ಹಾಗೂ ಟೀಸರ್ ಬಿಡುಗಡೆ ಸಮಾರಂಭ ನೆರವೇರಿತು. ....