*ಬಿಡುಗಡೆಯಾಯಿತು "ಬಿಗ್ ಬಾಸ್" ಖ್ಯಾತಿಯ ರಾಜೀವ್ ಅಭಿನಯದ* *"ಉಸಿರೇ ಉಸಿರೇ" ಚಿತ್ರದ ಮೊದಲ ಹಾಡು* . *ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ ಕಿಚ್ಚ ಸುದೀಪ್* . ಬಿಗ್ ಬಾಸ್ ಖ್ಯಾತಿಯ ನಟ ರಾಜೀವ್ ನಾಯಕರಾಗಿ ನಟಿಸಿರುವ "ಉಸಿರೇ ಉಸಿರೇ" ಚಿತ್ರಕ್ಕಾಗಿ ಪ್ರೇಮಕವಿ ಕೆ.ಕಲ್ಯಾಣ್ ಬರೆದಿರುವ "ಉಸಿರೇ ನನ್ನ ಉಸಿರೇ" ಎಂಬ ಚಿತ್ರದ ಮೊದಲ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ವಿವೇಕ್ ಚಕ್ರವರ್ತಿ ಸಂಗೀತ ನೀಡಿರುವ ಹಾಗೂ ವಾಸುಕಿ ವೈಭವ್ ಹಾಡಿರುವ ಈ ಹಾಡನ್ನು ಖ್ಯಾತ ಸಂಗೀತ ನಿರ್ದೇಶಕ, ಗಾಯಕ ಗುರುಕಿರಣ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ ಹರೀಶ್ ಹಾಗೂ ಭೀಮ ಜ್ಯುಯಲರ್ಸ್ ನ ಮಾಲೀಕರಾದ ವಿಷ್ಣು ಭಟ್ ಬಿಡುಗಡೆ ಮಾಡಿದರು. ....
*‘ಚಂದ್ರಮುಖಿ-2’ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದ ತಲೈವ…ವೆಟ್ಟೈಯನ್ ರಾಜನಾಗಿ ರಾಘವನ್ ಲಾರೆನ್ಸ್ ಲುಕ್…* ರಾಘವ್ ಲಾರೆನ್ಸ್ ಹಾಗೂ ಕಂಗನಾ ರಾಣಾವತ್ ನಟನೆಯ ಬಹುನಿರೀಕ್ಷಿತ ಚಂದ್ರಮುಖಿ-2 ಸಿನಿಮಾ ಬಿಡುಗಡೆಗೆ ಹೊಸ್ತಿಲಿನಲ್ಲಿ ನಿಂತಿದೆ. ಗಣೇಶ್ ಚತುರ್ಥಿಗೆ ಬೆಳ್ಳಿತೆರೆಗೆ ಎಂಟ್ರಿ ಕೊಡ್ತಿರುವ ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಫಸ್ಟ್ ಲುಕ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ರಾಘವ್ ಲಾರೆನ್ಸ್, ವೆಟ್ಟೈಯನ್ ರಾಜನ ಫಸ್ಟ್ ಲುಕ್ ಬಿಡುಗಡೆ ಮಾಡಿದ ತಲೈವರ್ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ನಿಮಗೆ ಧನ್ಯವಾದಗಳು. ನಿಮ್ಮ ಆಶೀರ್ವಾದ ನಮ್ಮ ....
*ವಾ...ವಾ...ವಾ...ವಾಮನ ಹಾಡು ಬಂತು....ಶೋಕ್ದಾರ್ ಧನ್ವೀರ್ ಮಾಸ್ ಎಂಟ್ರಿ* ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟನೆಯ ಬಹುನಿರೀಕ್ಷಿತ ವಾಮನ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದೆ. ವಾ..ವಾ..ವಾ..ವಾಮನ ಅಂತಾ ಬಜಾರ್ ಹುಡ್ಗ ಮಾಸ್ ಎಂಟ್ರಿ ಕೊಟ್ಟಿದ್ದಾರೆ. ನಿರ್ದೇಶಕ ಚೇತನ್ ಕುಮಾರ್ ಬರೆದಿರುವ ಸಾಹಿತ್ಯದ ಹಾಡಿಗೆ ಶಶಾಂಕ್ ಶೇಷಗಿರಿ ಧ್ವನಿಯಾಗಿದ್ದು, ಅಜನೀಶ್ ಲೋಕನಾಥ್ ಟ್ಯೂನ್ ಹಾಕಿದ್ದಾರೆ. ಭೂಷಣ್ ಮಾಸ್ಟರ್ ನೃತ್ಯ ಸಂಯೋಜನೆಯಲ್ಲಿ ಮೂಡಿಬಂದಿರುವ ನಾಯಕನ ಇಂಟ್ಯೂಡಕ್ಷನ್ ಹಾಡಿಗೆ ಧನ್ವೀರ್ ಜಬರ್ದಸ್ತ್ ಆಗಿ ಹೆಜ್ಜೆ ಹಾಕಿದ್ದಾರೆ. ಈಕ್ವಿನಾಕ್ಸ್ ಗ್ಲೋಬಲ್ ಎಂಟರ್‌ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ "ಚೇತನ್ ಗೌಡ" ಅದ್ಧೂರಿಯಾಗಿ ....
*ಕುತೂಹಲ ಮೂಡಿಸಿದೆ ‘ಬ್ಯಾಂಗ್’ ಚಿತ್ರದ ಟ್ರೇಲರ್* . ಶಾನ್ವಿ ಶ್ರೀವಾತ್ಸವ್ ಹಾಗೂ ರಘು ದೀಕ್ಷಿತ್ ಪ್ರಮುಖಪಾತ್ರದಲ್ಲಿ ನಟಿಸಿರುವ "ಬ್ಯಾಂಗ್" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಹಿರಿಯ ನಟ ದತ್ತಣ್ಣ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ರಾಪರ್ ALL Ok ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. "ಬ್ಯಾಂಗ್" ಡಾರ್ಕ್ ಕಾಮಿಡಿ ಆಕ್ಷನ್ ಜಾನರ್ ನ ಚಿತ್ರ ಎಂದು ಮಾತು ಆರಂಭಿಸಿದ್ದ ನಿರ್ದೇಶಕ ಗಣೇಶ್ ಪರಶುರಾಮ್, ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಗಣ್ಯರಿಗೆ ಹಾಗೂ ಚಿತ್ರ ಉತ್ತಮವಾಗಿ ಬರಲು ಸಹಕಾರ ನೀಡಿದ ಚಿತ್ರತಂಡಕ್ಕೆ ಧನ್ಯವಾದ. ಟ್ರೇಲರ್ ಗೆ ಕಿಚ್ಚ ಸುದೀಪ್ ಧ್ವನಿ ನೀಡಿದ್ದಾರೆ. ಸುದೀಪ್ ಅವರಿಗೆ ವಿಶೇಷ ಧನ್ಯವಾದ. ....
*ಪ್ರಿಯಾಂಕ ಉಪೇಂದ್ರ ಅವರಿಂದ ಅನಾವರಣವಾಯಿತು "ಶೀಲ" ಚಿತ್ರದ ಟ್ರೇಲರ್* .
*ರಾಗಿಣಿ ದ್ವಿವೇದಿ ಅಭಿನಯದ ಈ ಚಿತ್ರ ಆಗಸ್ಟ್ 4 ತೆರೆಗೆ*
ನಟಿ ರಾಗಿಣಿ ದ್ವಿವೇದಿ ಪ್ರಮುಖಪಾತ್ರದಲ್ಲಿ ನಟಿಸಿರುವ "ಶೀಲ" ಚಿತ್ರ ಕನ್ನಡ ಹಾಗೂ ಮಲೆಯಾಳಂ ಭಾಷೆಗಳಲ್ಲಿ ನಿರ್ಮಾಣವಾಗಿದೆ. ಇತ್ತೀಚೆಗೆ "ಶೀಲ" ಚಿತ್ರದ(ಕನ್ನಡ) ಟ್ರೇಲರ್ ನಟಿ ಪ್ರಿಯಾಂಕ ಉಪೇಂದ್ರ ಅವರಿಂದ ಬಿಡುಗಡೆಯಾಯಿತು.
ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಪ್ರಿಯಾಂಕ ಉಪೇಂದ್ರ, ಟ್ರೇಲರ್ ತುಂಬಾ ಚೆನ್ನಾಗಿದೆ. ರಾಗಿಣಿ ಅವರ ಅಭಿನಯ ಕೂಡ ಅದ್ಭುತವಾಗಿದೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.
*ಪ್ರಿಯಾಂಕ ಉಪೇಂದ್ರ ಅವರಿಂದ ಅನಾವರಣವಾಯಿತು "ಶೀಲ" ಚಿತ್ರದ ಟ್ರೇಲರ್* .
*ರಾಗಿಣಿ ದ್ವಿವೇದಿ ಅಭಿನಯದ ಈ ಚಿತ್ರ ಆಗಸ್ಟ್ 4 ತೆರೆಗೆ*
ನಟಿ ರಾಗಿಣಿ ದ್ವಿವೇದಿ ಪ್ರಮುಖಪಾತ್ರದಲ್ಲಿ ನಟಿಸಿರುವ "ಶೀಲ" ಚಿತ್ರ ಕನ್ನಡ ಹಾಗೂ ಮಲೆಯಾಳಂ ಭಾಷೆಗಳಲ್ಲಿ ನಿರ್ಮಾಣವಾಗಿದೆ. ಇತ್ತೀಚೆಗೆ "ಶೀಲ" ಚಿತ್ರದ(ಕನ್ನಡ) ಟ್ರೇಲರ್ ನಟಿ ಪ್ರಿಯಾಂಕ ಉಪೇಂದ್ರ ಅವರಿಂದ ಬಿಡುಗಡೆಯಾಯಿತು.
ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಪ್ರಿಯಾಂಕ ಉಪೇಂದ್ರ, ಟ್ರೇಲರ್ ತುಂಬಾ ಚೆನ್ನಾಗಿದೆ. ರಾಗಿಣಿ ಅವರ ಅಭಿನಯ ಕೂಡ ಅದ್ಭುತವಾಗಿದೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.
*"ಈ ಪಟ್ಟಣಕ್ಕೆ ಏನಾಗಿದೆ". ಆಗಸ್ಟ್ ನಲ್ಲಿ ಬಿಡುಗಡೆಯಾಗುತ್ತಿದೆ* .
ರವಿ ಸುಬ್ಬರಾವ್, ತಮ್ಮ ಸ್ನೇಹಿತ ರಿತೇಶ್ ಜೋಶಿ ಅವರೊಂದಿಗೆ; ಸೇರಿ ನಿರ್ಮಿಸಿರುವ ಹಾಗೂ ರವಿ ಸುಬ್ಬರಾವ್ ಅವರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿ ನಾಯಕನಾಗಿ ನಟಿಸಿರುವ "ಈ ಪಟ್ಟಣಕ್ಕೆ ಏನಾಗಿದೆ" (ಭಾಗ ೧) ಚಿತ್ರ ಆಗಸ್ಟ್ ನಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು.
ನನ್ನ ಜೀವನದಲ್ಲಿ ನಡೆದಿರುವ ಕೆಲವು ಘಟನೆಗಳು ಹಾಗೂ ನಾನು ನೈಜವಾಗಿ ಕಂಡಿರುವ ಕೆಲವು ಸನ್ನಿವೇಶಗಳು ಈ ಚಿತ್ರ ನಿರ್ಮಾಣಕ್ಕೆ ಸ್ಪೂರ್ತಿ ಎಂದು ಮಾತು ಪ್ರಾರಂಭಿಸಿದ ರವಿ ಸುಬ್ಬರಾವ್, ಇದೊಂದು ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ.
*ಮೋಹನ್ ಲಾಲ್ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ* *"ವೃಷಭ" ಪ್ರಾರಂಭ* *ನಂದಕಿಶೋರ್ ನಿರ್ದೇಶನದ ಈ ಚಿತ್ರ 2024ರಲ್ಲಿ ನಾಲ್ಕು ಭಾಷೆಗಳಲ್ಲಿ ಜಗತ್ತಿನಾದ್ಯಂತ 4500* *ಚಿತ್ರಮಂದಿರಗಳಲ್ಲಿ ಬಿಡುಗಡೆ* ಭಾರತದ ಬೃಹತ್ ಆಕ್ಷನ್ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಖ್ಯಾತ ನಟ ಮೋಹನ್ ಲಾಲ್ ಅಭಿನಯದ ’ವೃಷಭ’ ಎಂಬ ಪ್ಯಾನ್ ಇಂಡಿಯಾ ಚಿತ್ರದ ಚಿತ್ರೀಕರಣ ಕಳೆದ ಭಾನುವಾರದಿಂದ ಪ್ರಾರಂಭವಾಗಿದೆ. ‘ವೃಷಭ’ ಚಿತ್ರದಲ್ಲಿ ಮೈ ಜುಂ ಎನಿಸುವಂತಹ ಆಕ್ಷನ್ ಮತ್ತು ರೋಚಕ ದೃಶ್ಯಗಳು ಇರಲಿದ್ದು, ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಜೊತೆಗೆ ರೋಶನ್ ಮೇಕಾ, ಶನಾಯ ಕಪೂರ್, ಝಾರಾ ಖಾನ್, ಶ್ರೀಕಾಂತ್ ಮೇಕಾ ಮುಂತಾದವರು ನಟಿಸುತ್ತಿದ್ದಾರೆ. ಕನ್ನಡದ ರಾಗಿಣಿ ....
*ಶತಮಾನಕೊಬ್ಬ ಹಾಸ್ಯಚಕ್ರವರ್ತಿಯ ಶತಮಾನೋತ್ಸವ" ಎಂಬ ಹೆಸರಿನಿಂದ ವರ್ಷಪೂರ್ತಿ ನಟ T R ನರಸಿಂಹರಾಜು ಅವರ ಜನ್ಮ ಶತಮಾನೋತ್ಸವ ಆಚರಣೆ* . ಜುಲೈ 24, ಕರುನಾಡ ಕಂಡ ಹೆಮ್ಮೆಯ ಹಾಸ್ಯನಟ ದಿ.ಟಿ.ಆರ್ ನರಸಿಂಹರಾಜು ಅವರ ಹುಟ್ಟುಹಬ್ಬ. ಈ ಬಾರಿ ವಿಶೇಷವೆಂದರೆ, ಇದು ನರಸಿಂಹರಾಜು ಅವರ ನೂರನೇ ಹುಟ್ಟುಹಬ್ಬ. ಈ ಸಂಭ್ರಮವನ್ನು "ಶತಮಾನಕೊಬ್ಬ ಹಾಸ್ಯಚಕ್ರವರ್ತಿಯ ಶತಮಾನೋತ್ಸವ" ಎಂಬ ಹೆಸರಿನಿಂದ ವಿವಿಧ ಕಾರ್ಯಕ್ರಮಗಳ ಜೊತೆಗೆ ವರ್ಷಪೂರ್ತಿ ಆಚರಿಸಲು ನರಸಿಂಹರಾಜು ಅವರ ಕುಟುಂಬದವರು ಹಾಗೂ ಅಭಿಮಾನಿಗಳು ನಿಶ್ಚಯಿಸಿದ್ದಾರೆ. ನರಸಿಂಹರಾಜು ಅವರ ಹುಟ್ಟುಹಬ್ಬದಂದೇ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ....
ರಾಜ್‌ಶ್ರೀ ಪ್ರೊಡಕ್ಷನ್ಸ್‌ದಲ್ಲಿ ದೋನೊ
75 ವರ್ಷ ಇತಿಹಾಸ ಇರುವ ಬಾಲಿವುಡ್‌ನ ರಾಜ್‌ಶ್ರೀ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಹಲವು ಕಲಾವಿದರು ಪಾದಾರ್ಪಣೆ ಮಾಡಿ, ಖ್ಯಾತರಾಗಿದ್ದಾರೆ. ಸೂರಜ್.ಆರ್.ಬರ್ಜಾತ್ಯ ನಿರ್ದೇಶನದ ’ಮೈನೆ ಪ್ಯಾರ್ ಕಿಯಾ’ ಚಿತ್ರದಲ್ಲಿ ಸಲ್ಮಾನ್‌ಖಾನ್ ಮತ್ತು ಭಾಗ್ಯಶ್ರೀ ನಟಿಸಿದ್ದು, 1989ರಲ್ಲಿ ಬಿಡುಗಡೆಗೊಂಡು ಸೂಪರ್ ಹಿಟ್ ಆಗಿತ್ತು. ಬರೋಬ್ಬರಿ 3 ದಶಕದ ನಂತರ ಇವರ ಪುತ್ರ ಅವ್ನಿಶ್.ಎಸ್.ಬರ್ಜಾತ್ಯ ಆಕ್ಷನ್ ಕಟ್ ಹೇಳಿರುವ ’ದೋನೊ’ ಸಿನಿಮಾವು ನವಿರಾದ ಪ್ರೇಮಕಥೆಯನ್ನು ಹೊಂದಿದೆ. ಇಬ್ಬರು ಅಪರಿಚಿತರು, ಒಂದು ಗುರಿ ಅಂತ ಇಂಗ್ಲೀಷ್‌ನಲ್ಲಿ ಅಡಿಬರಹವಿದೆ.
*ಈ ಪಟ್ಟಣಕ್ಕೆ ಏನಾಗಿದೆ(ಭಾಗ 1 ) ? ಚಿತ್ರದ ಟೀಸರ್ ಮೂಲಕ ಪ್ರೇಕ್ಷಕರಿಗೆ ಐದು ಗ್ಯಾರೆಂಟಿಗಳನ್ನು ಕೊಡುತ್ತಿದೆ ಚಿತ್ರತಂಡ* . ಈಗ ಜನರಿಗೆ ಗ್ಯಾರೆಂಟಿ ಹಾಗೂ ಭಾಗ್ಯಗಳ ಬಗ್ಗೆ ಹೆಚ್ಚು ಆಸಕ್ತಿ. ಪ್ರಸ್ತುತ ತಮ್ಮ ಸಿನಿಮಾ ಟೀಸರ್ ಮೂಲಕ ಐದು ಗ್ಯಾರೆಂಟಿಗಳನ್ನು ನೀಡಲಿದೆ "ಈ ಪಟ್ಟಣಕ್ಕೆ ಏನಾಗಿದೆ ?" ಚಿತ್ರತಂಡ. ನೀವು ಯಾವುದೇ ಚಿತ್ರಮಂದಿರಕ್ಕೆ ಹೋದರೂ, ಚಿತ್ರ ಪ್ರಾರಂಭಕ್ಕೆ ಮೊದಲು ಬರುವ ಜಾಹಿರಾತಿನಲ್ಲಿ ಕೇಳುವ ಪದವೇ "ಈ ಪಟ್ಟಣಕ್ಕೆ ಏನಾಗಿದೆ?". ಈಗ ಇದೇ ಪದ ಚಿತ್ರದ ಶೀರ್ಷಿಕೆಯಾಗಿದೆ. ಶೀರ್ಷಿಕೆಯ ಮೂಲಕವೇ ಸಾಕಷ್ಟು ಕತೂಹಲ ಮೂಡಿಸಿರುವ ಈ ಚಿತ್ರ ರವಿತೇಜೊ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗಿದೆ. ಬಿಡುಗಡೆಗೂ ಸಿದ್ದವಾಗಿದೆ. ಸದ್ಯದಲ್ಲೇ ....
*ರಿಷಿ ’ರಾಮನ ಅವತಾರ’ ಸಿನಿಮಾದ ಮೆಲೋಡಿ ಹಾಡು ಬಿಡುಗಡೆ...* ವಿಭಿನ್ನ ಹಾಗೂ ಹೊಸತನ ಸಿನಿಮಾಗಳ ಮೂಲಕ ಸಿನಿಮಾ ಪ್ರೇಮಿಗಳನ್ನು ರಂಜಿಸುತ್ತಿರುವ ಕನ್ನಡದ ಪ್ರತಿಭಾನ್ವಿತ ನಟ ರಿಷಿ. ಕಾಮಿಡಿ, ಸಸ್ಪೆನ್ಸ್ ಹಾಗೂ ಪ್ರೇಮಕಥೆ ಯಾವುದೇ ಇರಲಿ ಅದಕ್ಕೆ ರಿಷಿ ಸರಿಹೊಂದುತ್ತಾರೆ. ಬರೀ ಸಿನಿಮಾ ಮಾತ್ರವಲ್ಲ ವೆಬ್ ಸೀರಿಸ್ ಮೂಲಕವೂ ತಮ್ಮ ಖ್ಯಾತಿಯನ್ನು ಹೆಚ್ಚಿಸಿಕೊಂಡಿದ್ದಾರೆ. ತೆಲುಗಿನ ಜನಪ್ರಿಯ ನಿರ್ದೇಶಕ ಮಹಿ ರಾಘವ್ ಆಕ್ಷನ್ ಕಟ್ ಹೇಳಿರುವ ಕ್ರೈಮ್ ಡ್ರಾಮಾ ’ಶೈತಾನ್’ನಲ್ಲಿ ರಿಷಿ ರಗಡ್ ಆಗಿ ಮಾಸ್ ಅವತಾರದಲ್ಲಿ ಅಮೋಘವಾಗಿ ಅಭಿನಯಿಸಿ ಮೆಚ್ಚುಗೆ ಪಡೆದಿದ್ದಾರೆ. ಈಗ ರಾಮನ ಅವತಾರ ಸಿನಿಮಾ ಮೂಲಕ ಲವರ್ ಬಾಯ್ ಆಗಿ ಪ್ರತ್ಯಕ್ಷರಾಗಿದ್ದಾರೆ. ರಿಷಿ ....
*"ಸಪ್ತ ಸಾಗರದಾಚೆ ಎಲ್ಲೋ" ಕೇಳುತ್ತಿದೆ "ಹೋರಾಟ"ದ ಹಾಡು* .
ರಕ್ಷಿತ್ ಶೆಟ್ಟಿ ನಾಯಕರಾಗಿ ನಟಿಸಿ, ನಿರ್ಮಾಣ ಮಾಡಿರುವ " ಸಪ್ತ ಸಾಗರದಾಚೆ ಎಲ್ಲೋ" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸೈಡ್ 1 ಸೆಪ್ಟೆಂಬರ್ 1 ರಂದು ಬಿಡುಗಡೆಯಾದರೆ, ಸೈಡ್ 2 ಅಕ್ಟೋಬರ್ 20ಕ್ಕೆ ತೆರೆಗೆ ಬರಲಿದೆ.
ಹೇಮಂತ್ ಎಂ ರಾವ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ರಕ್ಷಿತ್ ಶೆಟ್ಟಿ ಹಾಗೂ ಹೇಮಂತ್ ಎಂ ರಾವ್ ಕಾಂಬಿನೇಶನ್ ನಲ್ಲಿ ಬರುತ್ತಿರುವ ಈ ಚಿತ್ರದ ಬಿಡುಗಡೆಗೆ ಅಭಿಮಾನಿ ವಲಯ ಕಾತುರದಿಂದ ಕಾಯುತ್ತಿದೆ.
*ಅನಿರುದ್ಧ್ ಜತ್ಕರ್ ಅಭಿನಯದ ನೂತನ ಚಿತ್ರಕ್ಕೆ ಮೈಸೂರಿನ ಡಾ|| ವಿಷ್ಣುವರ್ಧನ್ ಸ್ಮಾರಕದಲ್ಲಿ ಭಾರತಿ ವಿಷ್ಣುವರ್ಧನ್ ಅವರಿಂದ ಚಾಲನೆ* . *"ರಾಘು" ಚಿತ್ರದ ಖ್ಯಾತಿಯ ಎಂ.ಆನಂದರಾಜ್ ನಿರ್ದೇಶನದಲ್ಲಿ ಮೂಡಿ ಬರಲಿದೆ ಡಾರ್ಕ್ ಕಾಮಿಡಿ ಥ್ರಿಲ್ಲರ್ ಕಥಾಹಂದರದ ಈ ಚಿತ್ರ* . ತಮ್ಮ ಸಹಜ ಅಭಿನಯದ ಮೂಲಕ ಹಿರಿತೆರೆ ಹಾಗೂ ಕಿರುತೆರೆಯಲ್ಲಿ ಅಪಾರ ಅಭಿಮಾನಿಗಳನ್ನು ಗಳಿಸಿರುವ ನಟ ಅನಿರುದ್ಧ್ ಜತ್ಕರ್ ನೂತನ ಚಿತ್ರವೊಂದರ ನಾಯಕನಾಗಿ ನಟಿಸುತ್ತಿದ್ದಾರೆ. ಎಂ.ಆನಂದರಾಜ್ ನಿರ್ದೇಶಿಸುತ್ತಿರುವ ಈ ಚಿತ್ರದ ಸ್ಕ್ರಿಪ್ಟ್ ಪೂಜೆಯನ್ನು ಇತ್ತೀಚೆಗೆ ಮೈಸೂರಿನ ಡಾ||ವಿಷ್ಣುವರ್ಧನ್ ಸ್ಮಾರಕದಲ್ಲಿ ನೆರವೇರಿಸಲಾಯಿತು. ಭಾರತಿ ವಿಷ್ಣುವರ್ಧನ್ ಅವರು ಈ ಸಮಾರಂಭಕ್ಕೆ ....
*'ಸಂಜು’ ಗಾಗಿ ಹಾಡಿದ ವಾಸುಕಿ ವೈಭವ್ ಮತ್ತು ಐಶ್ವರ್ಯ ರಂಗ ರಾಜನ್* *ಮತ್ತೊಂದು ಗೀತೆಗೆ ನವೀನ್ ಸಜ್ಜು ಗಾಯನ* ಪತ್ರಕರ್ತನಾಗಿ, ನಟನಾಗಿ ಇದೀಗ ನಿರ್ದೇಶಕನಾಗಿಯೂ ಗುರುತಿಸಿಕೊಂಡಿರುವ ಯತಿರಾಜ್ ನಿರ್ದೇಶಿಸಿರುವ "ಸಂಜು" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಪ್ರೀತಿ ಮತ್ತು ಭಾವನೆಗಳ ಸುತ್ತ ಈ ಚಿತ್ರದ ಕಥೆ ಹೆಣೆಯಲಾಗಿದೆ. ಯತಿರಾಜ್ ಅವರೆ ಕಥೆ ಹಾಗೂ ಚಿತ್ರಕಥೆ ಬರೆದಿದ್ದಾರೆ. ವಿಜಯ್ ಹರಿತ್ಸ ಸಂಗೀತ ನಿರ್ದೇಶಿಸಿರುವ ಎರಡು ಹಾಡುಗಳು ಈ ಚಿತ್ರದಲ್ಲಿದ್ದು, ಎರಡೂ ಹಾಡುಗಳನ್ನು ಆಕಾಶ್ ಹಾಸನ್ ಬರೆದಿದ್ದಾರೆ. ಡ್ಯುಯೆಟ್ ಹಾಡನ್ನು ಖ್ಯಾತ ಗಾಯಕ ವಾಸುಕಿ ವೈಭವ್ ಹಾಗೂ ಗಾಯಕಿ ಐಶ್ವರ್ಯ ರಂಗರಾಜನ್ ಹಾಡಿದ್ದಾರೆ. ಮತ್ತೊಂದು ವಿಭಿನ್ನ ....
*ಆಕೆ ಬಿರುಗಾಳಿಗೂ ಮುಂಚೆ ಬರುವ ಗುಡುಗು* *‘ಜವಾನ್’ ಚಿತ್ರದಲ್ಲಿನ ನಯನತಾರಾ ಪೋಸ್ಟರ್ ಬಿಡುಗಡೆ ಮಾಡಿದ ಶಾರುಖ್ ಖಾನ್* ಇತ್ತೀಚೆಗಷ್ಟೇ ಬಿಡುಗಡೆಯಾದ ಶಾರುಖ್ ಖಾನ್ ಅಭಿನಯದ ‘ಜವಾನ್’ ಚಿತ್ರದ ಪ್ರಿವ್ಯೂ, ಪ್ರೇಕ್ಷಕರ ವಲಯದಲ್ಲಿ ಸಾಕಷ್ಟು ನಿರೀಕ್ಷೆ ಮತ್ತು ಕುತೂಹಲವನ್ನು ಹುಟ್ಟುಹಾಕಿದೆ. ಈಗ ಚಿತ್ರದಲ್ಲಿನ ನಯನತಾರಾ ಅವರ ಪಾತ್ರದ ಪೋಸ್ಟರನ್ನು ನಾಯಕ ನಟ ಶಾರುಖ್ ಖಾನ್ ಬಿಡುಗಡೆ ಮಾಡಿದ್ದು, ಈ ಪೋಸ್ಟರ್ ಇಂಟರ್ನೆಟ್ ನಲ್ಲಿ ಸಾಕಷ್ಟು ವೈರಲ್ ಆಗಿದೆ. ಪ್ರಿವ್ಯೂನಲ್ಲಿ ನಯನತಾರಾ ಅವರನ್ನು ಆಕ್ಷನ್ ದೃಶ್ಯಗಳಲ್ಲಿ ಪ್ರೇಕ್ಷಕರು ನೋಡಿ ಅವಕ್ಕಾಗಿದ್ದರು. ಆಕೆಯನ್ನು ಇನ್ನಷ್ಟು ನೋಡಬಯಸಿದ್ದರು. ಈಗ ನಯನತಾರಾ ಪೋಸ್ಟರ್ ಗೆ ಸಾಕಷ್ಟು ಮೆಚ್ಚುಗೆ ....
*"ಋತು" ಮುಟ್ಟಿನ ಬಗ್ಗೆ ಒಂದು ಮನಮುಟ್ಟುವ ಕಿರುಚಿತ್ರ* . ಕಾಲ ಎಷ್ಟೇ ಮುಂದುವರೆದರೂ ಇನ್ನೂ ಕೆಲವು ಆಚರಣೆ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆಯಿದೆ. ಅದರಲ್ಲಿ ಸ್ತ್ರೀಯರ ದೇಹದಲ್ಲಿ ತಿಂಗಳಿಗೊಮ್ಮೆ ಆಗುವ ಪಕೃತಿ ಸಹಜವಾದ ಮುಟ್ಟು ಕೂಡ ಒಂದು. ಈ ಮುಟ್ಟಿನ ಸಮಸ್ಯೆ ಬಗ್ಗೆ ಟೆಂಟ್ ಸಿನಿಮಾದ ಸಮರ್ಥ್ ನಾಗರಾಜ್ ಮನಮುಟ್ಟುವ "ಖುತು" ಎಂಬ 22 ನಿಮಿಷಗಳ ಕಿರುಚಿತ್ರ ಮಾಡಿದ್ದಾರೆ. "" ಋತು" ವಿಗೆ ಬದಲಾಗಬೇಕು ಎಂಬ ಅಡಿಬರಹ ಕೂಡಯಿದೆ. ಇತ್ತೀಚೆಗೆ ಈ ಕಿರುಚಿತ್ರದ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ನಟಿ ಮಯೂರಿ ಖ್ಯಾತರಿ ಹಾಗೂ ನಿರ್ದೇಶಕ ಶೂನ್ಯ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಮೊದಲು ....
ಚಿತ್ರಮಂದಿರದಲ್ಲಿ ಪರಂವ ಹೊಸಬರ ‘ಪರಂವ’ ಸಿನಿಮಾವು ಸದ್ದಿಲ್ಲದೆ ಚಿತ್ರೀಕರಣ ಮುಗಿಸಿ ಈಗ ಪ್ರಚಾರಕಾರ್ಯವನ್ನು ಶುರು ಮಾಡಿಕೊಂಡಿದೆ. ನಿರ್ದೇಶಕ ಸಂತೋಷ್ ಹೇಳುವಂತೆ ನಾಟಕ, ಸಿನಿಮಾ ನೋಡುತ್ತಾ ಬೆಳೆದವನು. ಆರ್ಯನ್ ಚಿತ್ರದ ಮೂಲಕ ತಂತ್ರಜ್ಘನಾಗಿ ಪಾದಾರ್ಪಣೆ ಮಾಡಿದೆ. ಗೆಳಯ ಪ್ರೇಮ್ ಅವರೊಂದಿಗೆ ಸೇರಿಕೊಂಡು ಒಳ್ಳೆಯ ಕಥೆ ಮಾಡಿಕೊಂಡೆವು. ಸುಮಾರು ೨೦೦ ಜನ ಹಣ ಹಾಕಿದ್ದಾರೆ. ಒಂಥರ ಕ್ರೌಡ್ ಫಂಡಿಂಗ್ ಎನ್ನಬಹದು. ತುಮಕೂರು ಸುತ್ತಮುತ್ತ ಶೂಟಿಂಗ್ ನಡೆಸಲಾಗಿದೆ. ವೀರಗಾಸೆಯನ್ನೆ ವೃತ್ತಿಯನ್ನಾಗಿ ಬಳಸಿಕೊಂಡ ಕುಟುಂಬದ ಕಥೆಯು ಇಂದಿನ ಯುವ ಜನಾಂಗದ ಜೀವನ ಶೈಲಿಯನ್ನು ತೋರಿಸುವ ಪ್ರಯತ್ನ ಮಾಡಲಾಗಿದೆ. ನಮ್ಮ ಪ್ರಯತ್ನಕ್ಕೆ ಗುರುದೇಶಪಾಂಡೆ ....
ಅಯುಕ್ತ ಹಾಡು ಬಿಡುಗಡೆ
ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ’ಅಯುಕ್ತ’ ಚಿತ್ರದ ಹಾಡು ಬಿಡುಗಡೆ ಕಾರ್ಯಕ್ರಮವು ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. ರಚನೆ,ಚಿತ್ರಕಥೆ ಮತ್ತು ನಿರ್ದೇಶನ ಮಾಡಿರುವ ಕನಸುರಮೇಶ್ ಹೇಳುವಂತೆ ಈ ಹಿಂದೆ ಸುಮಾರು ೨೫೦ ನಾಟಕಗಳನ್ನು ನಿರ್ದೇಶಿಸಿದ ಅನುಭವವಿದೆ. ಅದರಿಂದಲೇ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲು ಸುಲಭವಾಯಿತು. ಬಾಲಾಜಿ ಕ್ರಿಯೇಶನ್ಸ್ ಅಡಿಯಲ್ಲಿ ವಿಶ್ವಾಸ್.ಆರ್.ಗಂಗಡ್ಕರ್ ಬಂಡವಾಳ ಹೂಡಿದ್ದಾರೆ. ಮಹೇಶ್‌ಆಲದಹಳ್ಳಿ ಮತ್ತು ಗಿರಿರಾಜ್‌ಕಲ್ಲೂರು ಸಹ ನಿರ್ಮಾಪಕರುಗಳಾಗಿ ಗುರುತಿಸಿಕೊಂಡಿದ್ದಾರೆ.
*ಜುಲೈ 21 ರಂದು ಬಿಡುಗಡೆಯಾಗಲಿದೆ ಶ್ರೇಯಸ್ ಚಿಂಗಾ ನಟಿಸಿ, ನಿರ್ದೇಶಿಸಿರುವ "ಡೇವಿಡ್"* ನೂತನ ಪ್ರತಿಭೆ ಶ್ರೇಯಸ್ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ " ಡೇವಿಡ್ " ಚಿತ್ರ ಜುಲೈ 21ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತದೆ. ಬಿ.ವೈ.ವಿಜಯೇಂದ್ರ ಅವರ ಪ್ರೋತ್ಸಾಹದಿಂದ ಧನರಾಜ ಬಾಬು ಜಿ ಅರ್ಪಿಸಿರುವ ಈ ಚಿತ್ರವನ್ನು ಪ್ರಸಾದ್ ರುದ್ರಮುನಿ ನಿರಘಂಟಿ ನಿರ್ಮಿಸಿದ್ದಾರೆ. ಧನರಾಜ ಬಾಬು ಅವರು ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳಿಗೆ ಸಾಕಷ್ಟು ಸಹಾಯ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಕುರುತು ನಾಯಕ ಶ್ರೇಯಸ್ ಚಿಂಗಾ ಅವರು, ಧನರಾಜ ಬಾಬು ಅವರ ಬಳಿ ಹೇಳಿದಾಗ, ಹೊಸತಂಡದ ಹೊಸಪ್ರಯತ್ನಕ್ಕೆ ಧನರಾಜ ಬಾಬು ಅವರು ಪ್ರೋತ್ಸಾಹ ನೀಡಲು ಮುಂದಾದರು.. ಈ ....